‘ಜಾತಿ ಜನಗಣತಿ ವಿಚಾರದಲ್ಲಿ ಎಲ್ಲಾ ಲಿಂಗಾಯತ ಮಂತ್ರಿಗಳು ಒಗ್ಗಟ್ಟಾಗಿದ್ದೇವೆ’: ಎಂ.ಬಿ. ಪಾಟೀಲ್

ವಿಜಯಪುರ: ಜಾತಿ ಜನಗಣತಿ ವರದಿಯ ವಿಷಯದಲ್ಲಿ ಲಿಂಗಾಯತ ಸಮುದಾಯದ ಎಲ್ಲಾ ಏಳು ಮಂತ್ರಿಗಳು ಒಗ್ಗಟ್ಟಿನಿಂದ ಇದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಾಟೀಲ್, ‘ಲಿಂಗಾಯತ ಸಮುದಾಯದ ಎಲ್ಲಾ ಏಳು ಮಂತ್ರಿಗಳು – ಈಶ್ವರ್ ಖಂಡ್ರೆ, ಶರಣ್ ಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಶರಣಬಸಪ್ಪ ದರ್ಶನಾಪುರ, ಶಿವಾನಂದ್ ಪಾಟೀಲ್, ಎಚ್.ಕೆ. ಪಾಟೀಲ್ ಮತ್ತು ನಾನು – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದೇವೆ. ನಂತರ ಏಪ್ರಿಲ್ 17 ರಂದು ಜಾತಿ ಜನಗಣತಿ ವರದಿಯ ಕುರಿತು ಚರ್ಚಿಸಲು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದೆವು’ ಎಂದು ತಿಳಿಸಿದರು. ‘ನಾವು ಮತ್ತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಜಾತಿ ಜನಗಣತಿಗೆ ಸಂಬಂಧಿಸಿದಂತೆ ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಒಗ್ಗಟ್ಟಾಗಿದ್ದೇವೆ’…

PMFBY ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಂಗಳೂರು: 2023-24 ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿದೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇದೇ ವೇಳೆ ಪ್ರಥಮ ಸ್ಥಾನ ಪಡೆದ ರಾಜ್ಯ ಕೃಷಿ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ…

ನಿಂದನೆ, ಅಪಮಾನ ಸಹಿಸುವುದಿಲ್ಲ; ಬ್ರಾಹ್ಮಣ ಮಹಾಸಭಾ ರಣಕಹಳೆ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿರುವ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಾಸಭಾ ಮುಖ್ಯಸ್ಥರು, ಇಂತಹ ಕಹಿ ಘಟನೆಗಳು ವಿಪ್ರ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದು ಆಕ್ರೋಶ ಹೊರಹಾಕಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್.ರಘುನಾಥ್, ಹಿರಿಯ ಉಪಾಧ್ಯಕ್ಷರಾದ ಆರ್.ಲಕ್ಷ್ಮಿಕಾಂತ್, ವಿಪ್ರ ಮುಖಂಡರಾದ ರವಿಶಂಕರ, ಶಂಕರನಾರಾಯಣ್ ಶಾಸ್ತ್ರಿ, ಶ್ರೀನಿವಾಸಮೂರ್ತಿ ಜೋಯಿಸ್ ಮೊದಲಾದವರು ಸುದ್ದಿಗೋಷ್ಠಿ ನಡೆಸಿದರು. ಎಸ್.ರಘುನಾಥ್ ಮಾತನಾಡಿ ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಸಾಮಾನ್ಯವಾಗಿದೆ. ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಕಹಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ. ಶಿಕ್ಷಣ ಸಚಿವರು ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ…

IPL ದ್ವಿತೀಯಾರ್ಧ ಹಂತ.. RCBಗೆ ಮುಂದಿನ 4 ಗೆಲುವು ಅನಿವಾರ್ಯ

ಬೆಂಗಳೂರು : ತೀವ್ರ ಜಿದ್ದಾಜಿದ್ದಿನ ಐಪಿಎಲ್ ಅಖಾಡಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡಾ ಕ್ರಿಕೆಟ್ ಅಭಿಮಾನಿಗಳ ಫೆವರೇಟ್ ತಂಡವಾಗಿದೆ. ಆದರೆ ತವರು ನೆಲದಲ್ಲೇ ಸತತ ಸೋಲುಂಡಿರುವ RCB ಇದೀಗ ನಾಲ್ಕು ಪಂದ್ಯಗಲ್ಲಷ್ಟೇ ಗೆಲುವು ಸಾಧಿಸಿದ್ದು ಪ್ಲೇಆಫ್​ಗೇರುವ ಸಾಧ್ಯತೆಗಳಿವೆಯೇ ಎಂಬ ಚಿಂತೆ ಅಭಿಮಾನಿಗಳನ್ನು ಕಾಡತೊಡಗಿದೆ. ಈ ಬಾರಿಯ ಐಪಿಎಲ್ ಸೆಣಸಾಟದ ಮೊದಲಾರ್ಧ ಪೂರ್ಣಗೊಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇನ್ನು ಮುಂದೆ ದ್ವಿತೀಯಾರ್ಧವನ್ನು ಕ್ರಮಿಸಲಿದೆ. ಶುಕ್ರವಾರ ತನ್ನ ವಿರುದ್ಧ ಗೆದ್ದು ಬೀಗಿದ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ತಿಂಗಳ 20 ರಂದು ದ್ವಿತೀಯಾರ್ಧವನ್ನು ಆರಂಭಿಸಲಿದೆ. ಆರ್​ಸಿಬಿ ತಂಡಕ್ಕೆ ದ್ವಿತೀಯಾರ್ಧದಲ್ಲಿ 7 ಪಂದ್ಯಗಳ ಸವಾಲು ಇದ್ದು ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳ ಅವಶ್ಯಕತೆಯಿದೆ. ಸದ್ಯ 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡ ಈ ದ್ವಿತೀಯಾರ್ಧದಲ್ಲಿ 4 ಪಂದ್ಯಗಳನ್ನು…

ಕಾಂಗೋ ಗಣರಾಜ್ಯದಲ್ಲಿದೋಣಿ ದುರಂತ: 148 ಮಂದಿ ಸಾವು

ಕಾಂಗೋ: ಕಾಂಗೋ ಗಣರಾಜ್ಯದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 148 ಕ್ಕೆ ಏರಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ. ದೇಶದ ವಾಯುವ್ಯದಲ್ಲಿರುವ ಕಾಂಗೋ ನದಿಯಲ್ಲಿ ಮಂಗಳವಾರ ಬೆಂಕಿ ಹೊತ್ತಿಕೊಂಡ ನಂತರ ದೋಣಿ ಮಗುಚಿ ಬಿದ್ದು ದುರಂತಕ್ಕೀಡಾಗಿದೆ. ಆ ದೋಣಿಯಲ್ಲಿ ಸುಮಾರು 500 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಪ್ರಯಾಣಿಕ ದೋಣಿಯಲ್ಲಿ ಒಬ್ಬ ವ್ಯಕ್ತಿ ಅಡುಗೆ ಮಾಡುತ್ತಿದ್ದಾಗ ಕಾಣಿಸಿಕೊಂಡ ಬೆಂಕಿ ದೈತ್ಯ ದೋಣಿಯನ್ನು ಆವರಿಸಿಕೊಂಡಿತು ಎನ್ನಲಾಗಿದೆ. ಆ ವೇಳೆ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರಯಾಣಿಕರು ನೀರಿಗೆ ಹಾರಿದ್ದಾರೆ. ಆದರೆ ಈಜಲು ಸಾಧ್ಯವಾಗದೆ ಜಲಸಮಾಧಿಯಾಗಿದ್ದಾರೆ. ಎಂಬಂಡಕ ಪಟ್ಟಣದ ಬಳಿ ಮೋಟಾರು ಚಾಲಿತ ಮರದ ದೋಣಿ ಬೆಂಕಿಗೆ ಆಹುತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಲವನ್ನು ರಕ್ಷಿಸಿದೆ.

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಸಮೀಪ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಶೂಟೌಟ್ ನಡೆದ್ದಾರೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಮಧ್ಯರಾತ್ರಿ ರಿಕ್ಕಿ ರೈ ತೆರಳುತ್ತಿದ್ದ ಕಾರಿನ ಮೇಲೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ ಎನ್ನಲಾಗುತ್ತಿದ್ದು, ಈ ಘಟನೆಯಲ್ಲಿ ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಗುಲಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ವಿದೇಶದಲ್ಲಿದ್ದ ರಿಕ್ಕಿ…

ತವರಿನಲ್ಲಿ ಮೂರನೇ ಸೋಲುಂಡ RCB.. IPLಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನಲ್ಲಿ ಮೂರನೇ ಬಾರಿಗೆ ಸೋಲು ಉಂಟಾಗಿದೆ. ಐಪಿಎಲ್ ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ ವಿಳಂಬವಾಯಿತು. ತಡವಾಗಿ ಆರಂಭವಾದ ಪಂದ್ಯವನ್ನು 14 ಓವರ್ ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ದು ಕೊಂಡಿತು. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಓವರುಗಳಲ್ಲಿ 9 ವಿಕೆಟ್‌ಗೆ 95 ರನ್ ಗಳಿಸಿತು. 26 ಎಸೆತಗಳಲ್ಲಿ 50 ರನ್ ಗಳಿಸಿದ ಡೇವಿಡ್ ಅರ್ಧಶತಕ ಬಾರಿಸಿ ಆರ್‌ಸಿಬಿ ತಂಡವನ್ನು 95 ರನ್ ಮೊತ್ತಕ್ಕೆ ಕೊಂಡೊಯ್ದರು. 96 ರನ್ ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 13 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಭಾರಿಸಿತು.…