ಚಂಡೀಗಢ: ಐಪಿಎಲ್ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಭಾರಿಸಿದೆ. ಚಂಡೀಗಡದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ RCB 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರದ ಪಂದ್ಯ ರೋಚಕತೆಯಿಂದ ಕೂಡಿತ್ತು. ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಗುರಿ ಸಾಧಿಸಿತು. ಕೇವಲ 3 ವಿಕೆಟ್ ಕಳೆದುಕೊಂಡ RCB ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ಶತಕದಾಟದ ನೆರವಿನೊಂದಿಗೆ 159 ರನ್ ಗಳಿಸಿ ಜಯಭೇರಿ ಭಾರಿಸಿತು. ವಿರಾಟ್ ಕೊಹ್ಲಿ ಅಜೇಯ 73 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 61 ರನ್ ಕಲೆಹಾಕಿದ್ದಾರೆ. ರಜತ್ ಪಟಿದಾರ್ 12 ರನ್ ಗಳಿಸಿದ್ದರೆ, ಜಿತೇಶ್…
Day: April 20, 2025
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ..
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ಮೃತದೇಹವು ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತದೇಹವನ್ನು ಪರಿಶೀಲಿಸಿರುವ ಪೊಲೀಸರು ಇದು ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ರಾಜ್ಯದ 38ನೇ ಡಿಜಿ-ಐಜಿ ಆಗಿದ್ದ ಓಂಪ್ರಕಾಶ್ ಅವರಿಗೆ 68 ವರ್ಷ ವುಸ್ಸಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಜನಿವಾರ ಕತ್ತರಿಸಿ ಬಿಸಾಡಲಾಗಿದೆ, ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ; ಅಶೋಕ್ ಆಕ್ರೋಶ
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು. ಹಿಂದೂಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಸರ್ಕಾರ ಹಿಂದೂಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದರು.
ಜಾತಿ ಗಣತಿ: ಈಗ ಇರುವುದು ಮೂಲ ವರದಿ ಅಲ್ಲ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ
ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸದೆ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಒಂದು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಚಿಂತಿಸುತ್ತಿದೆ. ಕಾಂಗ್ರೆಸ್‌ನ ಸಚಿವರು ಇದನ್ನು ವೈಜ್ಞಾನಿಕ ಹಾಗೂ ಅಸಲಿ ಎಂದು ಹೇಳುತ್ತಿದ್ದಾರೆ. ಜಯಪ್ರಕಾಶ್ ಹೆಗ್ಡೆ ವರದಿ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 26-08-2021 ರಂದು ಸೀಲ್ ಮಾಡಿದ ಬಾಕ್ಸ್ ತೆರೆದಾಗ ವರದಿಯಲ್ಲಿ ಆಯೋಗದ ಹಿಂದಿನ ಅಧ್ಯಕ್ಷರ ಸಹಿ ಇಲ್ಲ ಎಂಬುದನ್ನು ಗಮನಿಸಲಾಗಿದೆ. ಹಸ್ತಪ್ರತಿ ಅಥವಾ ಮೂಲ…
ಕೃಷಿಕರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ.. ಎನ್ ಚಲುವರಾಯಸ್ವಾಮಿ
ಬೆಳಗಾವಿ: ರೈತರು ಯಂತ್ರೋಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ತಪ್ಪಿಸಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಪಾದಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದ ಸಚಿವರು, ಹಾರ್ವೆಸ್ಟರ್ ಹಬ್ ಕಟಾವ್ ಯಂತ್ರ ಬಳಕೆ ಮಾಡುವುದರಿಂದ 20 ರಿಂದ 30 ಟನ್ ಇಳುವರಿ ಹೆಚ್ಚಿಸಬಹುದು ಎಂದು ತಿಳಿಸಿದರು. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಕೃಷಿ ಸಚಿವರು ಹೇಳಿದರು. ಬೆಳಗಾವಿ ವಿಭಾಗ ಮಟ್ಟದಲ್ಲಿ ಸುಮಾರು 2150…
ಧನುಷ್ ನಟನೆಯ ‘ಕುಬೇರ’ ಚಿತ್ರದ ಮೊದಲ ಹಾಡು ಬಿಡುಗಡೆ
ತಮಿಳು ಸೂಪರ್‌ಸ್ಟಾರ್ ಧನುಷ್ ಅಭಿನಯದ ‘ಕುಬೇರ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ತಮಿಳಿನಲ್ಲಿ ಪೊಯಿವಾ ನನ್ಬಾ ಹಾಡು ಗಮನಸೆಳೆದಿದೆ. ತೆಲುಗಿನಲ್ಲಿ ಪೊಯಿರಾ ಮಾಮಾ ಎಂದು ಹೆಸರಿಸಲಾದ ಈ ಹಾಡನ್ನು ಧನುಷ್ ಹಾಡಿದ್ದಾರೆ.
ಶಾಲೆಗಳಲ್ಲಿ ಹೆಣ್ಮಕ್ಕಳಿಗೆ ಶೇ. 50ರಷ್ಟು ಸೀಟು ಮೀಸಲು ಕಡ್ಡಾಯ.
ಬೆಂಗಳೂರು: ರಾಜ್ಯದ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಪೂರ್ವ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ನಡೆಸುವ ಶಾಲಾ ಪ್ರವೇಶ ಪ್ರಕ್ರಿಯೆಯಲ್ಲಿ ಶೇ. 50ರಷ್ಟು ಸೀಟುಗಳನ್ನು ಹೆಣ್ಣುಮಕ್ಕಳಿಗೆ ಮೀಸಲಿಡುವುದು ಇನ್ನು ಮುಂದೆ ಕಡ್ಡಾಯ. ರಾಜ್ಯ ಪಠ್ಯಕ್ರಮ ಹಾಗೂ ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ, ಸಹ ಶಿಕ್ಷಣ ಹೊಂದಿರುವ ಎಲ್ಲ ಖಾಸಗಿ ಶಾಲೆಗಳು ಎಲ್‌ಕೆಜಿ, ಯುಕೆಜಿ, ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ನೀಡುವಾಗ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಪ್ರತಿ ತರಗತಿಯಲ್ಲೂ ಲಭ್ಯವಿರುವ ಸೀಟುಗಳಲ್ಲಿ ಶೇ 50ರಷ್ಟು ಹೆಣ್ಣು ಮಕ್ಕಳಿಗೆ ಮೀಸಲಿಡಬೇಕು. ಒಂದು ವೇಳೆ ನಿರೀಕ್ಷಿತ ಅರ್ಜಿಗಳು ಲಭ್ಯವಿಲ್ಲದೇ ಇದ್ದಾಗ ಉಳಿಕೆ ಸೀಟುಗಳನ್ನು ಬಾಲಕರಿಗೆ ನೀಡಬಹುದು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಆಡಳಿತ ಪಕ್ಷ ಕಾಂಗ್ರೆಸ್ ತನ್ನ ‘X’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.…
ಕಾಂಗ್ರೆಸ್ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖ’ ಎಂದ ಬಿಜೆಪಿ
ಬೆಂಗಳೂರು: ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ ಅದರೊಂದಿಗೆ ವ್ಯವಹರಿಸಿ ಕೊನೆಗೆ ಸುಳ್ಳು ದಾಖಲೆ ಒದಗಿಸಿ ದೇಶದ ಸಂಪತ್ತನ್ನು ಲೂಟಿ ಹೊಡೆಯುವ ಸರಣಿ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಲೇ ಬಂದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪರಿವಾರ ₹2 ಸಾವಿರ ಕೋಟಿ ಲೂಟಿ ಹೊಡೆಯಲು ಸಂಚು ರೂಪಿಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖವಾಗಿದೆ ಎಂದು ಬಣ್ಣಿಸಿರಿವ ಬಿಜೆಪಿ ಸಾಮಾಜಿಕ ಮಾಧ್ಯಮ’X’ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರವನ್ನು ಬಿಡುವುದಿಲ್ಲ, ಭ್ರಷ್ಟಾಚಾರವು ಕಾಂಗ್ರೆಸ್ ಪಕ್ಷವನ್ನು ಬಿಡುತ್ತಿಲ್ಲ. ಅಧಿಕಾರ ದುರುಪಯೋಗದ ಕಾರಣದಿಂದಾಗಿ ಸೋನಿಯಾ ಕುಟುಂಬದ ಭ್ರಷ್ಟಾಚಾರಗಳು ಹೊರಬರುತ್ತಿರಲಿಲ್ಲ. ಕಾಂಗ್ರೆಸ್ಸಿನ ಸೋನಿಯಾ ಮೇನಿಯಾದ ವ್ಯಾಲಿಡಿಟಿ ಮುಗಿದ ಕಾರಣ ಈಗ ಎಲ್ಲವೂ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ತನಿಖಾ ಸಂಸ್ಥೆಗಳು ದಾಖಲೆಗಳ ಆಧಾರದಲ್ಲಿ ತನಿಖೆ ನಡೆಸಿ, ಚಾರ್ಜ್ ಶೀಟ್ ಸಲ್ಲಿದರೆ ಅದಕ್ಕೂ ಕಾಂಗ್ರೆಸ್…