ಶ್ರೀನಗರ: ಪಹಲ್ಲಾಮ್ ದಾಳಿ ನಂತರ ಜಮ್ಮು ಕಾಶ್ಮೀರದಲ್ಲಿ ಉಗ್ರರ ಬೇಟೆನ್ನು ಬಿರುಸುಗೊಳಿಸಿರುವ ಸೇನೆ, ಭರ್ಜರಿ ಕಾರ್ಯಾಚರಣೆ ನಡೆಸಿ, ಲಷ್ಕರ್ ಇ ತೊಯ್ದಾದ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹತ್ಯೆಮಾಡಿದೆ. ಭಯೋತ್ಪಾದಕರನ್ನು ಹುಡುಕಿ ಸದೆಬಡಿಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದರು. ಅದರ ಮರುದಿನವೇ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆ ವೇಳೆ ಎನ್ ಕೌಂಟರ್ ನಡೆದಿದೆ. ಈ ವೇಳೆ ಲಷ್ಕರ್ ಇ ತೊಯ್ದಾದ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಮೂಲಗಳು ತಿಳಿಸಿದೆ.
Day: April 25, 2025
ಅಂತರಿಕ್ಷ ವಿಜ್ಞಾನಿ ಡಾ. ಕಸ್ತೂರಿರಂಗನ್ ವಿಧಿವಶ; ಆರೆಸ್ಸೆಸ್ ಸಂತಾಪ
ಸುಪ್ರಸಿದ್ಧ ಅಂತರಿಕ್ಷ ವಿಜ್ಞಾನಿ ಡಾ. ಕಸ್ತೂರಿರಂಗನ್ ಅವರ ದೇಹಾವಸಾನದಿಂದ ಭಾರತದ ರಾಷ್ಟ್ರಜೀವನದಲ್ಲಿ ಒಂದು ದೇದೀಪ್ಯಮಾನ ನಕ್ಷತ್ರದ ಅಸ್ತಂಗತವಾಗಿದೆ. ಡಾ. ರಂಗನ್ ಅವರು ಈಗ ನೆನಪು ಮಾತ್ರ. ಪದ್ಮವಿಭೂಷಣ ಸಮ್ಮಾನಿತ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದರ ಮಾಜಿ ಅಧ್ಯಕ್ಷರಾದ ಡಾ.ರಂಗನ್ ಅವರು ವೈಜ್ಞಾನಿಕ ಕ್ಷೇತ್ರದಲ್ಲಿ ವೈಶ್ವಿಕ ಸ್ತರದ ದಿಗ್ಗಜರಾಗಿದ್ದರು.ಅದರ ಜೊತೆಗೆ ರಾಜ್ಯಸಭಾ, ಯೋಜನಾ ಆಯೋಗದಂತಹ ವಿವಿಧ ಕ್ಷೇತ್ರಗಳಲ್ಲಿ ಅವರು ರಾಷ್ಟ್ರದ ಸೇವೆಗೈದಿದ್ದಾರೆ. ಅವರು ಬಾಹ್ಯಕಾಶ ಕ್ಷೇತ್ರಕ್ಕೆ ನೀಡಿದ ಸೇವೆಗೆ ಸಮಾನವಾಗಿ ಭಾರತದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ನಿರ್ಮಿಸುವುದರಲ್ಲಿ ಹಾಗೂ ಅನುಷ್ಠಾನಗೊಳಿಸುವುದರಲ್ಲಿ ಕೊಡುಗೆ ನೀಡಿರುವುದು ಒಂದು ಐತಿಹಾಸಿಕ ಸಾಧನೆಯಾಗಿದೆ. ವಿಜ್ಞಾನಿ, ನೀತಿ ನಿರ್ಮಾತೃ, ಶಿಕ್ಷಣತಜ್ಞ, ಪರಿಸರತಜ್ಞ ಹೀಗೆ ಹಲವು ಭೂಮಿಕೆಗಳಲ್ಲಿ ಪ್ರಭಾವಿಯಾಗಿ ಕಾರ್ಯನಿರ್ವಹಿಸಿದ ಡಾ. ಕಸ್ತೂರಿರಂಗನ್ ಅವರು ಉದಾತ್ತ ಮಾನವತಾವಾದಿ ಮತ್ತು ಸಂವೇದನಾಶೀಲ ವ್ಯಕ್ತಿಯಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರವಾಗಿ, ಡಾ. ಕಸ್ತೂರಿರಂಗನ್ ಅವರ ಕುಟುಂಬ ಮತ್ತು…
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ: ಅಶೋಕ್
ಬೆಂಗಳೂರು, ಕಾಂಗ್ರೆಸ್ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು. ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ ಎಂದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾದಾಗ ಯಾರು ವಿಫಲರಾಗಿದ್ದರು? ಕುಕ್ಕರ್ ಬಾಂಬ್ ಸ್ಪೋಟಗೊಂಡಾಗ ಯಾರು ವಿಫಲರಾಗಿದ್ದರು? ಸಚಿವರ ವಿರುದ್ಧ ಹನಿಟ್ರ್ಯಾಪ್ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ? ಇಂತಹ ಕಾಂಗ್ರೆಸ್ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದರು. ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಬೇಲ್ ಕೊಡಿಸುವುದು, ಕಾನೂನು ಸಹಾಯ ಮಾಡುವುದು…
ಬೆಲೆ ಏರಿಕೆ ವಿರುದ್ಧ BJPಯಿಂದ ಮೂರು ದಿನ ಹೋರಾಟ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್ 28 ರಿಂದ ಮೂರು ದಿನಗಳ ಕಾಲ ಹೋರಾಟ ಮಾಡಲಾಗುತ್ತದೆ. ಹಾಲು, ವಿದ್ಯುತ್ ಹಾಗೂ ಆಸ್ತಿ ತೆರಿಗೆ ಹಾಗೂ ಪಾರ್ಕಿಂಗ್ ಶುಲ್ಕದ ಬಗ್ಗೆ ಹೋರಾಟ ಮಾಡಲಾಗುವುದು. ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಈ ಬಗ್ಗೆ ಕೂಡ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಸ್ಪೀಕರ್ ಜೊತೆ ಚರ್ಚಿಸಲಾಗಿದೆ. ಈ ಅಮಾನತು ಆ ಒಂದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಬಿಟ್ಟು ಹೊರಗೆ ಭತ್ಯೆ ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಇದು…