ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಾಡಿಯಲ್ಲಿ ಭಾರತ-ಪಾಕ್ ಸೇನೆಯ ನಡುವೆ ಗುಂಡಿನ ಚಕಮಕಿಯಾಗಿದೆ. ಗಡಿ ನಿಯಂತ್ರಣ ರೇಖೆ, ಪರ್ಗ್ವಾಲ್ ವಲಯ ಮತ್ತು ರಾಜೌರಿ ಜಿಲ್ಲೆಯ ಸುಂದರ್‌ಬನಿ ಮತ್ತು ನೌಶೇರಾ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಜಮ್ಮು ಮತ್ತು ಕಾಶ್ಮೀರದ ನಾಲ್ಕು ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತರರಾಷ್ಟ್ರೀಯ ಗಡಿ (ಐಬಿ) ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಪ್ರತಿದಾಳಿ ನಡೆಸಿ ಉತ್ತರ ನೀಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Day: April 30, 2025
ಕೊಲ್ಕತ್ತಾದ ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ:14 ಮಂದಿ ಸಾವು
ಕೊಲ್ಕತ್ತಾ: ಪಶ್ಚಿಮ ಬಂಗಾಲ ರಾಜಧಾನಿ ಕೊಲ್ಕತ್ತಾದ ಹೋಟೆಲ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಫಲಪತ್ತಿ ಮಚ್ಚುವಾ ಬಳಿ ಈ ದುರ್ಘಟನೆ ಸಂಭವಿಸಿದೆ. ಕಳೆದ ರಾತ್ರಿ 8.15ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, 14 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿರುವ ಕೊಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ, ರಕ್ಷಣಾ ತಂಡಗಳು ಹಲವು ಮಂದಿಯನ್ನು ರಕ್ಷಿಸಿವೆ ಎಂದು ತಿಳಿಸಿದ್ದಾರೆ.
ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ: ಕೆ.ವಿ ಪ್ರಭಾಕರ್’ಗೆ KSDMF ಸನ್ಮಾನ
ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ತಿಳಿಸಿದ್ದಾರೆ. KSDMF ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹಾಗೂ ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಡಿಜಿಟಲ್ ಮಾಧ್ಯಮ ನೀತಿಯಿಂದಾಗಿ ಬೇರೆ ಪತ್ರಿಕೆ, ಟಿವಿಯಂತೆ ಡಿಜಿಟಲ್ ಮಾಧ್ಯಮವು ಪತ್ರಿಕೋದ್ಯಮದ ಭಾಗವೆಂದು ಅಧಿಕೃತವಾಗಿದೆ. ದೇಶದಲ್ಲಿ ಡಿಜಿಟಲ್ ಪಾಲಿಸಿ ಕೆಲವು ರಾಜ್ಯಗಳಲ್ಲಿ ಇದೆಯಾದರೂ ನಮ್ಮ ರಾಜ್ಯದಲ್ಲಿ ಈ ನೀತಿ ಸಮಗ್ರವಾಗಿದ್ದು, ವೃತ್ತಿಪರವಾಗಿ ರಚನೆಯಾಗಿದೆ ಎಂದರು.…