ಬೆಂಗಳೂರು: ಪೊಲೀಸ್ ಅಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು… pic.twitter.com/8xiwMbHjqV — Vijayendra Yediyurappa (@BYVijayendra) April 28, 2025 ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.…
Month: April 2025
ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲೆಂದೇ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ ಎಂದ ಡಿಕೆಶಿ
ಬೆಳಗಾವಿ: “ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ನಮ್ಮ ದೇಶದ ಸಂವಿಧಾನ, ಏಕತೆ, ಸಮಗ್ರತೆ, ಶಾಂತಿ ರಕ್ಷಿಸಿಕೊಂಡು ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರನ್ನು ಕಾಪಾಡಲು ನಾವು ಈ ಹೋರಾಟ ಮಾಡುತ್ತಿದ್ದೇವೆ. ಬೆಳಗಾವಿ ಪುಣ್ಯಭೂಮಿ. ಇತ್ತೀಚೆಗಷ್ಟೇ ನಾವು ಮಹಾತ್ಮಾ ಗಾಂಧಿ ಅವರ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಆಚರಿಸಿದ್ದೆವು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.…
“ಪರೀಕ್ಷೆಗಾಗಿ ಮಾಂಗಲ್ಯ, ಜನಿವಾರ ಕಿತ್ತುಹಾಕಿ ಹಿಂದೂ ಸಂಸ್ಕೃತಿಗೆ ಧಕ್ಕೆತರುವುದು ಸರಿಯಲ್ಲ”: ಕೇಂದ್ರಕ್ಕೆ ಪದ್ಮರಾಜ್ ತರಾಟೆ
ಮಂಗಳೂರು: ‘ಪರೀಕ್ಷೆ ನೆಪದಲ್ಲಿ ಮುತ್ತೈದೆಯರ ಮಾಂಗಲ್ಯ, ಆಸ್ತಿಕರ ಜನಿವಾರವನ್ನು ಕಿತ್ತುಹಾಕಿ ಹಿಂದೂ ಸಂಸ್ಕೃತಿಗೆ ಧಕ್ಕೆತರುವ ರೀತಿ ನಡೆದುಕೊಳ್ಳುವುದು ಸರಿಯಲ್ಲ’ ಎಂದು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಪ್ರತಿಪಾದಿಸಿದ್ದಾರೆ. ರೈಲ್ವೇ ಇಲಾಖೆ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಆಕ್ಷೇಪಾರ್ಹ ನಿಯಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಸೋಮಣ್ಣ ಅವರಿಗೆ ಬಹಿರಂಗ ಪತ್ರ ಬರೆದಿರುವ ಪದ್ಮರಾಜ್, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಿಸಿಟಿವಿ ಕ್ಯಾಮೆರಾ ಕಣ್ಗಾವಲಲ್ಲಿ ನಡೆಸಲಾಗುತ್ತದೆ. ಹಾಗಿರುವಾಗ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವ ನಿಯಮ ಯಾಕೆ ಎಂದು ಪ್ರಶ್ನಿಸಿದ್ದಾರೆ. ವಕೀಲರೂ ಆಗಿರುವ ಪದ್ಮರಾಜ್ ಆರ್.ಪೂಜಾರಿ ಅವರು ಮಂಗಳೂರಿನ ದಸರಾ ಖ್ಯಾತಿಯ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೋಶಾಧಿಕಾರಿಯೂ ಆಗಿದ್ದಾರೆ. ರೈಲ್ವೇ ಇಲಾಖೆ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಆಕ್ಷೇಪಾರ್ಹ ನಿಯಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಸೋಮಣ್ಣ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು ದೇಶದಲ್ಲಿನ ಧಾರ್ಮಿಕ…
ರೈಲ್ವೆ ಇಲಾಖೆ ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯಕ್ಕೆ ನಿರ್ಬಂಧ: VHP ನಾಯಕರರು ಪ್ರತಿಭಟಿಸಿಲ್ಲವೇಕೆ? ಎಂದು ರಾಮಲಿಂಗ ರೆಡ್ಡಿ ಪ್ರಶ್ನೆ
ಬೆಂಗಳೂರು: ರೈಲ್ವೆ ಇಲಾಖೆ ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ನಾಯಕರು ಖಂಡಿಸಿಲ್ಲವೇಕೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ರವರೇ ಖಂಡಿಸಿರುವುದನ್ನು ಪತ್ರಿಕೆಯಲ್ಲಿ ಓದಿದೆ. ಈ ಬಗ್ಗೆ ಬಿ.ಜೆ.ಪಿ ಅವರು ಮೋದಿ ಜೀ ಅವರನ್ನು ದೂಷಿಸಿಸುತ್ತಾರೆಯೇ? ಅಥವಾ ಮೋದಿಜೀ ಅವರಿಗೆ ಪತ್ರ ಬರೆದು ಮಾರ್ಪಾಡಿಗೆ ಕೇಳುತ್ತಾರೆಯೇ? ಇಲ್ಲ ರಾಜ್ಯದ್ಯಾಂತ ಮೋದಿ ಜೀ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಚಳುವಳಿ/ ಜಾಥಾ/ ಮೆರವಣಿಗೆ ನಡೆಸುತ್ತಾರೆಯೇ ಎಂಬುದನ್ನು ಕೂತೂಹಲದಿಂದ ಎದುರು ನೋಡುತ್ತಿದ್ದೇವೆ ಎಂದು ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಸಚಿವರು, ‘ನಾನು ಈ ಹಿಂದೆ ನಮ್ಮ…
ಜನಿವಾರ, ಮಾಂಗಲ್ಯಕ್ಕೆ ಕೇಂದ್ರದಿಂದಲೂ ನಿರ್ಬಂಧ? ಅಖಾಡಕ್ಕಿಳಿದ ಸಚಿವ ಸೋಮಣ್ಣ
ನವದೆಹಲಿ: ಪರೀಕ್ಷೆಯ ನೆಪದಲ್ಲಿ ಹಿಂದೂ ಸಂಸ್ಕೃತಿ, ಸಂಪ್ರದಾಯಗಳಿಗೆ ಸಿದ್ದರಾಮಯ್ಯ ಸರ್ಕಾರ ಅಪಚಾರ ಎಸಗಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ಕೇಂದ್ರ ಸರ್ಕಾರವೂ ಅದೇ ರೀತಿಯ ನಡೆ ಅನುಸರಿಸಿದೆಯೇ ಎಂಬ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ಕ್ಷಿಪ್ರ ಕ್ರಮಕ್ಕೆ ಸೂಚಿಸಿರುವ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ವಿವಾದಕ್ಕೆ ತೆರೆ ಎಳೆತುವ ಪ್ರಯತ್ನ ಮಾಡಿದ್ದಾರೆ ಈ ತಿಂಗಳ 28, 29 ಮತ್ತು 30 ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ಸಚಿವ ಸೋಮಣ್ಣ ಅವರಿಗೆ ಬಂದಿವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸೋಮಣ್ಣ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ಗಮನವನ್ನು…
ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು.. ನಗರ ತುಂಬೆಲ್ಲಾ ಧೂಳು.. ಸರ್ಕಾರದ ಕಾಲೆಳೆದ ತೇಜಸ್ವಿ ಸೂರ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಎಲ್ಲೆಲ್ಲೂ ಗುಂಡಿಗಳು.. ನಗರ ತುಂಬೆಲ್ಲಾ ಧೂಳು.. ಜನ ಬದುಕುವುದೇ ಕಷ್ಟ.. ಈ ದುಸ್ಥಿತಿ ಬಗ್ಗೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಬಹಿರಂಗ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ಸಾರ್ವಜನಿಕರ ದೂರುಗಳನ್ನಾಧರಿಸಿ ಬೆಂಗಳೂರು ನಗರದ ಅವ್ಯವಸ್ಥೆ ಬಗ್ಗೆ ಗಮನಸೆಳೆದಿದ್ದಾರೆ. ‘ಭಾನುವಾರ ಬೆಳಿಗ್ಗೆ ಟಿಸಿಎಸ್ ವರ್ಲ್ಡ್ 10K ಕಾರ್ಯಕ್ರಮದಲ್ಲಿ ನೀವಿಬ್ಬರೂ ಭಾಗವಹಿಸಿರುವುದು ನೋಡಿ ಸಂತಸವಾಯಿತು. ಈ ತರಹದ ಕಾರ್ಯಕ್ರಮಗಳು ನಮ್ಮ ಬೆಂಗಳೂರಿನ ಬ್ರ್ಯಾಂಡ್ ಮೌಲ್ಯ ಹೆಚ್ಚಿಸುವುದಕ್ಕೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಉತ್ತೇಜಿಸಲು ತೊಡಗಿಸಿಕೊಂಡಿರುವುದು ಗಮನಾರ್ಹ’ ಎಂದು ಹೊಗಳುತ್ತಲೇ, ‘ನಾನು ಬೆಂಗಳೂರು ಸಂಸದನಾಗಿ ಮಾತ್ರವಲ್ಲ, ಒಬ್ಬ ಓಟಗಾರನಾಗಿ, ನಾಗರಿಕನಾಗಿ, ಅತ್ಯಂತ ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ’ ಎಂದು ಅಸಮಾಧಾನವನ್ನೂ ಹೊರಹಾಕಿದ್ದಾರೆ. ಭಾನುವಾರದ ಓಟದಲ್ಲಿ…
ಪಹಲ್ಗಾಮ್ ದಾಳಿಗೆ ಅಮೇರಿಕ ಖಂಡನೆ: ಭಾರತಕ್ಕೆ ತನಿಖಾ ನೆರವು ಘೋಷಿಸಿದ FBI
ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ನಿರ್ದೇಶಕ ಕಾಶ್ ಪಟೇಲ್ ಖಂಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ಸರ್ಕಾರಕ್ಕೆ ನಿರಂತರ ಬೆಂಬಲ ನೀಡಲಾಗುವುದು ಎಂದು ಅವರು ಭಾನುವಾರ ಭರವಸೆ ನೀಡಿದ್ದಾರೆ. ಈ ಮಾರಕ ದಾಳಿಯನ್ನು “ಭಯೋತ್ಪಾದನೆಯ ದುಷ್ಕೃತ್ಯಗಳಿಂದ ನಮ್ಮ ಜಗತ್ತು ಎದುರಿಸುತ್ತಿರುವ ನಿರಂತರ ಬೆದರಿಕೆಗಳ ಜ್ಞಾಪನ” ಎಂದು ಪಟೇಲ್ ಬಣ್ಣಿಸಿದ್ದಾರೆ. ಏಪ್ರಿಲ್ 22 ರಂದು ನಡೆದ ಈ ಕ್ರೂರ ದಾಳಿಯಲ್ಲಿ 26 ಜೀವಗಳನ್ನು ಬಲಿ ತೆಗೆದುಕೊಂಡ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ನ ಪ್ರತಿನಿಧಿ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ನಡೆಸಿದೆ. ಇದು ಭಾರತ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ರಾಜತಾಂತ್ರಿಕ ಮತ್ತು ಸಾರ್ವಜನಿಕ ಆಕ್ರೋಶವನ್ನು ಹುಟ್ಟುಹಾಕಿದೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯಿಸಿರುವ ಪಟೇಲ್, ‘ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಎಲ್ಲಾ…
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಗ್ಗೆ NIAಯಿಂದ ತನಿಖೆ
ನವದೆಹಲಿ: ನೇಪಾಳಿ ಪ್ರಜೆ ಸೇರಿದಂತೆ 26 ಜನರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಹಿಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಲ್ಲಿಯವರೆಗೆ ತನಿಖೆ ನಡೆಸುತ್ತಿದ್ದರು ಮತ್ತು ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ NIA ಪ್ರಕರಣವನ್ನು ವಹಿಸಿಕೊಂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾಳಿಯ ಒಂದು ದಿನದ ನಂತರ ಬುಧವಾರ (ಏಪ್ರಿಲ್ 23) ರಿಂದ NIA ತಂಡಗಳು ಭಯೋತ್ಪಾದಕ ದಾಳಿ ಸ್ಥಳದಲ್ಲಿ ಮೊಕ್ಕಾಂ ಹೂಡಿವೆ. ತನಿಖಾ ಸಂಸ್ಥೆ ಸಾಕ್ಷ್ಯಗಳ ಹುಡುಕಾಟವನ್ನು ತೀವ್ರಗೊಳಿಸಿದೆ. ಇನ್ಸ್ಪೆಕ್ಟರ್ ಜನರಲ್ (ಐಜಿ), ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ (ಡಿಐಜಿ) ಮತ್ತು ಭಯೋತ್ಪಾದನಾ ನಿಗ್ರಹ ಸಂಸ್ಥೆಯ ಎಸ್ಪಿ ಅವರ ಮೇಲ್ವಿಚಾರಣೆಯಲ್ಲಿರುವ ತಂಡಗಳು, ಶಾಂತಿಯುತ ಮತ್ತು ಸುಂದರವಾದ ಬೈಸರನ್ ಕಣಿವೆಯಲ್ಲಿ ತಮ್ಮ ಕಣ್ಣ ಮುಂದೆಯೇ ಭಯಾನಕ ದಾಳಿ ನಡೆದಿರುವುದನ್ನು ಕಂಡ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಪಡೆಯುತ್ತಿವೆ. ಭಯೋತ್ಪಾದಕರ ಕಾರ್ಯಾಚರಣೆಯ…
ಮುಂಗಾರು ಪೂರ್ವ ಮಳೆ ಹಿನ್ನೆಲೆ; ಬೆಂಗಳೂರಿಗೆ ಡೆಂಗ್ಯೂ ಸವಾಲು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಹಾವಳಿ ಮತ್ತೆ ಭೀತಿಯ ಏಲ್ ಎಬ್ಬಿಡಿದೆ. ಅಕಾಲಿಕ ಮಳೆಮಳೆಯಿಂದಾಗಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು ಡೆಂಗ್ಯೂ ಸೋಂಕಿನ ಪ್ರಮಾಣವೂ ಹೆಚ್ಚಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ನಡುವೆ ಈ ವರ್ಷಾರಂಭದ ಕೆಲವು ತಿಂಗಳಲ್ಲೇ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಬೇಸಿಗೆ ಹಾಗೂ ಮುಂಗಾರು ಪೂರ್ವ ಮಳೆ ಹಿನ್ನೆಲೆಯಲ್ಲಿ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಮಾರು 2,300ಕ್ಕೂ ಹೆಚ್ಚು ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಚೆನ್ನಾಗಿ ನಿದ್ರೆ ಮಾಡಿ, ‘ಲಿವರ್’ ಆರೋಗ್ಯಕ್ಕಾಗಿ ಜಂಕ್ ಫುಡ್ ಬಿಟ್ಟುಬಿಡಿ
ಯಕೃತ್ತನ್ನು ಆರೋಗ್ಯವಾಗಿಡಲು ರಾತ್ರಿ ಚೆನ್ನಾಗಿ ನಿದ್ರೆ ಮಾಡುವುದು ಮತ್ತು ಜಂಕ್ ಫುಡ್ ಅನ್ನು ತಪ್ಪಿಸುವುದು ಅತ್ಯಗತ್ಯ ಎಂದು ಲಿವರ್ ಮತ್ತು ಪಿತ್ತರಸ ವಿಜ್ಞಾನ ಸಂಸ್ಥೆಯ (ILBS) ನಿರ್ದೇಶಕ ಡಾ. ಎಸ್.ಕೆ. ಸರಿನ್ ಪ್ರತಿಪಾದಿಸಿದ್ದಾರೆ. ಹೆಸರೇ ಸೂಚಿಸುವಂತೆ ಜಂಕ್ ಫುಡ್ ಅನ್ನು ಕಸದ ಬುಟ್ಟಿಗಳಲ್ಲಿ ಹಾಕಬೇಕು. ಏಕೆಂದರೆ ಅದರ ನಿಯಮಿತ ಸೇವನೆಯು ಯಕೃತ್ತಿನ ಆರೋಗ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. “ಜಂಕ್ ಫುಡ್ ಎಂಬ ಪದದ ಅರ್ಥ ಅದು ಜಂಕ್. ಅದನ್ನು ಕಸದ ಬುಟ್ಟಿಯಲ್ಲಿ ಹಾಕಬೇಕು. ಆದರೆ ನಿಮ್ಮ ಹೊಟ್ಟೆ ಮತ್ತು ಕರುಳುಗಳು ಕಸದ ಬುಟ್ಟಿಗಳು ಎಂದು ನೀವು ಭಾವಿಸಿದರೆ, ಆ ಆಹಾರವನ್ನು ಒಳಗೆ ಇರಿಸಿ. ಇಲ್ಲದಿದ್ದರೆ, ತಪ್ಪಿಸಿ, ಅದನ್ನು ಬಳಸಬೇಡಿ,” ಎಂದು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಅವರು ಪೋಸ್ಟ್ ಹಾಕಿದ್ದಾರೆ. ಅನಾರೋಗ್ಯಕರ ಕೊಬ್ಬುಗಳು, ಸಕ್ಕರೆಗಳು ಮತ್ತು ಸಂಸ್ಕರಿಸಿದ ಪದಾರ್ಥಗಳಿಂದ ಸಮೃದ್ಧವಾಗಿರುವ ಜಂಕ್ ಆಹಾರವು ಬೊಜ್ಜು,…