ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ. ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಮುಂದಿಟ್ಟು ಸುದ್ದಿ ಬಿತ್ತರಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ. Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we focus on security measures in Kashmir instead of…
Month: April 2025
ವಿವಾದದ ಬಿರುಗಾಳಿ ಎಬ್ಬಿಸಿದ ಸಿದ್ದರಾಮಯ್ಯ ಹೇಳಿಕೆ: ಭಾರತ ಬಗ್ಗೆ ಪಾಕ್ ಗೇಲಿ
ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ. ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಬಗೆ ಬಗೆಯಲ್ಲಿ ವಿಶ್ಲೇಷಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿರುದ್ದದ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ. ಈ ಬೆಳೆವಣಿಗೆ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we…
ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಭಾರಿ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ
ಟೆಹ್ರಾನ್: ಹಾರ್ಮೋಜ್ಗನ್‌ನಲ್ಲಿರುವ ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. 750 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 🚨 HAPPENING NOW The explosion at Bandar Abbas in Iran has caused the fire to spread. The Islamic Republic has no way to contain the spread and it looks like the entire port is about to burn down.pic.twitter.com/kJL5a9Lmf4 — Kosher🎗🧡 (@koshercockney) April 26, 2025 ಬಂದರ್ ಅಬ್ಬಾಸ್‌ನಲ್ಲಿರುವ ಚೀನಾದ ಕಾನ್ಸುಲೇಟ್ ಜನರಲ್ ಪ್ರಕಾರ, ಸ್ಫೋಟದಲ್ಲಿ ಮೂವರು ಚೀನೀ ನಾಗರಿಕರು ಸಣ್ಣಪುಟ್ಟ ಗಾಯಗಳನ್ನು ಹೊಂದಿದ್ದಾರೆ. ವೈದ್ಯಕೀಯ ಚಿಕಿತ್ಸೆ ಪಡೆದ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಕ್ಷಣಾ…
40 ವರ್ಷಗಳ ರಾಜಕೀಯ ಅನುಭವಿಗೆ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ?
ಬೆಂಗಳೂರು: 40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ ದಾಳಿ ಆಗಿದೆ. ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆಗೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು. ಇದಕ್ಕಾಗಿಯೇ ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ನಡೆಸಿ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದೆ. ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲ ಪಕ್ಷಗಳೂ ಸರ್ವಾನುಮತದಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನ ಬೆಂಬಲಿಸುತ್ತೇವೆ…
ಭಾರತ ದಾಳಿ ನಡೆಸಿದರೆ ದಿಟ್ಟ ಉತ್ತರ ನೀಡುತ್ತೇವೆ ಎಂದ ಪಾಕಿಸ್ತಾನ
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತನ್ನ ಪಾತ್ರ ಇಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಪಹಲ್ಗಾಮ್ ನರಮೇಧದಲ್ಲಿ ಪಾಕಿಸ್ತಾನ ಕೈವಾಡ ಬಗ್ಗೆ ಭಾರತ ಆರೋಪ ಮಾಡಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್, ಪಹಲ್ಗಮ್ ದಾಳಿಯಲ್ಲಿ ತನ್ನ ದೇಶದ ಪಾತ್ರವನ್ನು ನಿರಾಕರಿಸಿದ್ದಾರೆ. ಪಹಲ್ಗಾಮ್ ದಾಳಿ ಬಗ್ಗೆ ಅಂತಾರಾಷ್ಟ್ರೀಯ ತನಿಖೆ ಅಗತ್ಯ ಇದೆ ಎಂದು ಪ್ರತಿಪಾದಿಸಿರುವ ಪಾಕಿಸ್ತಾನದ ರಕ್ಷಣಾ ಸಚಿವರು, ಅಂತರಾಷ್ಟ್ರೀಯ ತನಿಖೆಗೆ ತಮ್ಮ ದೇಶ ಸಜಕರಿಷ್ಯಾಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಭಾರತಕ್ಕೆ ನಾವು ಹೆದರುತ್ತಿಲ್ಲ, ಒಂದು ವೇಳೆ ಅವರು ದಾಳಿ ನಡೆಸಿದರೆ, ದಿಟ್ಟ ಉತ್ತರ ನೀಡುತ್ತೇವೆ ಪಾಕಿಸ್ತಾನದ ರಕ್ಷಣಾ ಸಚಿವರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ KSRTC ಸಿಬ್ಬಂದಿಗೆ 25 ಲಕ್ಷ, ಮೃತರ ಬಂಧುಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಿದ ಸಾರಿಗೆ ಸಚಿವ
ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ KSRTC ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ರೂ.25 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ಮೃತಪಟ್ಟ ಸಿಬ್ಬಂದಿ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಲಾಗಿದೆ. ಇದೇ ವೇಳೆ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಯ ಅವಲಂಬಿತರಿಗೆ ತಲಾ ರೂ.10 ಲಕ್ಷ ರೂ) ರೂ.3.10 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕರಾರಸಾ ನಿಗಮ ದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ವರು ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಅವಲಂಭಿತರಿಗೆ ಪರಿಹಾರ ಮೊತ್ತದ ಚೆಕ್’ಗಳನ್ನು ವಿತರಿಸಿದರು. ಅಪಘಾತದಿಂದ ಮೃತಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವಾನ ಹೇಳಿದ ಸಚಿವ ರಾಮಲಿಂಗ ರೆಡ್ಡಿ, ಸಿಬ್ಬಂದಿಯ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ, ಆದರೆ ಅವರ ಅವಲಂಬಿತರ ಮುಂದಿನ…
ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿ 5.02 ಲಕ್ಷ ಜನರಿಗೆ ಉದ್ಯೋಗಾವಕಾಶ
ಪ್ರಧಾನಮಂತ್ರಿಯವರ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಇಂಟರ್ನಶಿಪ್ ಯೋಜನೆಗಳಿಂದ ಸುಮಾರು 4.10 ಕೋಟಿ ಯುವಜನರಿಗೆ ಪ್ರಯೋಜನವಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾದ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿಯಲ್ಲಿ 2014 ರಿಂದ 2024 ರವರೆಗೆ 5.02 ಲಕ್ಷ ಯುವಜನರಿಗೆ ಉದ್ಯೋಗಾವಕಾಶ ನೀಡಿದೆ ಎಂದು ತಿಳಿಸಿದರು. ಪ್ರಧಾನಮಂತ್ರಿಯವರ ಆಶಯದಂತೆ ಉದ್ಯೋಗ ಸೃಷ್ಟಿಯ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲು ರೈಲ್ವೆ ಇಲಾಖೆಯು ವಾರ್ಷಿಕ ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2024ರ ಜನವರಿಯಿಂದ ಇದುವರೆಗೆ ರೈಲ್ವೆ ಇಲಾಖೆಯಲ್ಲಿ ಸುಮಾರು 71,000 ಹುದ್ದೆಗಳನ್ನು ಸೃಷ್ಟಿಸಿದ್ದು ಇವುಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅವರು ಹೇಳಿದರು. 2047ರಲ್ಲಿ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಕ್ರಮಗಳನ್ನು…
ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದು ತಿಳಿಸಿದರು. ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ? ಎಂದರು. ಉಗ್ರರ ದಾಳಿಗೆ ಸಂಬಂಧಿಸಿದಂತೆ…
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತನ್ನ ಪಾತ್ರ ಇಲ್ಲ ಎಂದ ಪಾಕಿಸ್ತಾನ
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತನ್ನ ಪಾತ್ರ ಇಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಪಹಲ್ಗಾಮ್ ನರಮೇಧದಲ್ಲಿ ಪಾಕಿಸ್ತಾನ ಕೈವಾಡ ಬಗ್ಗೆ ಭಾರತ ಆರೋಪ ಮಾಡಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್, ಪಹಲ್ಗಮ್ ದಾಳಿಯಲ್ಲಿ ತನ್ನ ದೇಶದ ಪಾತ್ರವನ್ನು ನಿರಾಕರಿಸಿದ್ದಾರೆ. ಪಹಲ್ಗಾಮ್ ದಾಳಿ ಬಗ್ಗೆ ಅಂತಾರಾಷ್ಟ್ರೀಯ ತನಿಖೆ ಅಗತ್ಯ ಇದೆ ಎಂದು ಪ್ರತಿಪಾದಿಸಿರುವ ಪಾಕಿಸ್ತಾನದ ರಕ್ಷಣಾ ಸಚಿವರು, ಅಂತರಾಷ್ಟ್ರೀಯ ತನಿಖೆಗೆ ತಮ್ಮ ದೇಶ ಸಜಕರಿಷ್ಯಾಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಭಾರತಕ್ಕೆ ನಾವು ಹೆದರುತ್ತಿಲ್ಲ, ಒಂದು ವೇಳೆ ಅವರು ದಾಳಿ ನಡೆಸಿದರೆ, ದಿಟ್ಟ ಉತ್ತರ ನೀಡುತ್ತೇವೆ ಪಾಕಿಸ್ತಾನದ ರಕ್ಷಣಾ ಸಚಿವರು ತಿಳಿಸಿದ್ದಾರೆ.
ಪಹಲ್ಗಾಮ್ ದಾಳಿ ಹಿನ್ನೆಲೆ: ಸಂಸತ್ ವಿಶೇಷ ಅಧಿವೇಶನಕ್ಕೆ ಚಿಂತನೆ
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಸಂಸತ್‌ನ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಯೋತ್ಪಾದನೆ ವಿರುದ್ಧ ಪರಿಣಾಮಕಾರ ಸಮರ ನಡೆಸುವ ಅನಿವಾರ್ಯತೆ ಇದ್ದು, ಈ ಸಂಬಂಧ ಸರ್ವಪಕ್ಷ ಸಭೆ ಕರೆದಿದ್ದ ಕೇಂದ್ರ ಸರ್ಕಾರ ಇದೀಗ ಸಂಸತ್ ವಿಶೇಷ ಅಧಿವೇಶನ ಕರೆದು ಮಹತ್ವದ ಕ್ರಮಗಳನ್ನು ಕೈಗೊಳ್ಳಲು ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಸಂಸತ್ತಿನ ಅಧಿವೇಶನವನ್ನು ಕರೆಯಬೇಕಿದೆ ಎಂಬುದು ತಜ್ಞರ ಸಲಹೆಯಾಗಿದೆ. ಈ ಅಧಿವೇಶನದಲ್ಲಿ ಅತ್ಯಂತ ಮಹತ್ವದ ನಿರ್ಣಯ ಅಂಗೀಕರಿಸಲು ಪ್ರಧಾನಿ ಮೋದಿ ಕೂಡಾ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.