ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ.ಟಿ.ರವಿ, ಶಾಸಕರಾದ ವೇದವ್ಯಾಸ್ ಕಾಮತ್, ನಾಯಕರಾದ ಎಸ್. ಹರೀಶ್, ಸಪ್ತಗಿರಿ ಗೌಡ, ಜಗದೀಶ್ ಹಿರೇಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ @CTRavi_BJP… pic.twitter.com/gGB5alNcKI — BJP Karnataka (@BJP4Karnataka) April 23, 2025
Month: April 2025
ಪಹಲ್ಗಮ್ ದಾಳಿ: ಗುಪ್ತಚರ ಮಾಹಿತಿಯ ವೈಫಲ್ಯ ಎಂದ ಸಿದ್ದರಾಮಯ್ಯ
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ… pic.twitter.com/KuRmMStw9X — Siddaramaiah (@siddaramaiah) April 23, 2025 ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ ಎಂದು ಸಿಎಂ ಹೇಳಿದ್ದಾರೆ.…
ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ
ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅಭಿವೃದ್ಧಿಗೆ ದಾರಿ ಮಾಡಿದ್ದರು. ನಾನು ಕೂಡ ಎರಡು ವರ್ಷಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ವ್ಯಾಪಾರ ವಹಿವಾಟು ಉತ್ತಮವಾಗಿ ನಡೆಯುತ್ತಿತ್ತು. ಬಹುಸಂಖ್ಯಾತ ಮುಸ್ಲಿಮರು ಪ್ರತಿ ದಿನ 10,000 ರೂ. ಸಂಪಾದನೆ ಮಾಡುತ್ತಿದ್ದೇವೆ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಈಗ ಪಾಕಿಸ್ತಾನ ಪ್ರೇರಿತವಾದ ಭಯೋತ್ಪಾದಕ ಸಂಘಟನೆ ಈ ಕೆಲಸ ಮಾಡಿರುವುದು ಖಂಡನೀಯ ಎಂದರು. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಸ್ಲೀಪರ್ ಸೆಲ್‌ಗಳನ್ನು ಪತ್ತೆ ಮಾಡಬೇಕು. ಜಾಮೀನು ಪಡೆದು ಹೊರಗೆ ಬಂದ ಭಯೋತ್ಪಾದಕರ…
ಉಗ್ರರ ಧಮನ ಮಾಡಿ; ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ ಎಂದ ಡಿಕೆಶಿ
ಬೆಂಗಳೂರು: “ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ…
ಪಹಲ್ಗಾಮ್ ದಾಳಿ: ಶಂಕಿತ ಉಗ್ರರ ರೇಖಾ ಚಿತ್ರ ಬಿಡುಗಡೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಗುಂಡಿನ ದಾಳಿ ನಡೆಸಿರುವ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಮಂಗಳವಾರ ಪಹಲ್ಗಮ್ ಬಳಿ ಉಗ್ರರು ಹಿಂದೂಗಳನ್ನು ಗುರಿಯಾಗಿಸಿ ಪೈಶಾಚಿಕತೆ ಮೆರೆದಿದ್ದರು. 26 ಮಂದಿಯನ್ನು ಪತ್ನಿ-ಮಕ್ಕಳೆದುರೇ ಹತ್ಯೆ ಮಾಡಿದ್ದಾರೆ. ಮೂವರು ಶಾಸ್ತ್ರಧಾರಿ ಭಯೋತ್ಪಾದಕರ ಬಗ್ಗೆ ಸುಳಿವು ಸಿಕ್ಕಿದೆ ಎನ್ನಲಾಗಿದ್ದು ಅವರ ರೇಖಾ ಚಿತ್ರವನ್ನು ಸೇನಾ ಮೂಲಗಳು ಬಿಡುಗಡೆ ಮಾಡಿವೆ. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂಬ ಹೆಸರಿನ ವ್ಯಕ್ತಿಗಳು ಈ ಕೃತ್ಯ ನಡೆಸಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು ಸೇನಾ ಪದೇ ಭಯೋತ್ಪಾದಕರಿಗಾಗಿ ಬೇಟೆ ಕೈಗೊಂಡಿದೆ. ಅರಣ್ಯ ಪ್ರದೇಶ ಪ್ರವೇಶಿಸಿ ದಾಳಿಕೋರರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದ್ದು ಶೋಧಕಾರ್ಯ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಉಗ್ರರ ದಾಳಿ ವೇಳೆ ಬದುಕುಳಿದವರ ಮಾಹಿತಿ ಹಾಗೂ ಪ್ರಾಥಮಿಕ ವಿಧಿವಿಜ್ಞಾನ ವಿಶ್ಲೇಷಣೆ ಆಧರಿಸಿ ಶಂಕಿತರ ರೇಖಾ ಚಿತ್ರವನ್ನು…
ಪೈಶಾಚಿಕತೆ ಮೆರೆದವರಿಗೆ ಸೂಕ್ತ ಉತ್ತರ: ಅಮಿತ್ ಶಾ ಗುಡುಗು
ಶ್ರೀನಗರ: ಉಗ್ರರು ಪೈಶಾಚಿಕ ಕೃತ್ಯದಿಂದ ನಲುಗಿರುವ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. पहलगाम के आतंकी हमले में अपनों को खोने का दर्द हर भारतीय को है। इस दुःख को शब्दों में व्यक्त नहीं किया जा सकता। मैं अपने इन सभी परिवारों और पूरे देश को विश्वास दिलाता हूँ कि बेगुनाह मासूम लोगों को मारने वाले इन आतंकियों को बिल्कुल बख्शा नहीं जाएगा। pic.twitter.com/Dwkt6Hhj7P — Amit Shah (@AmitShah) April 23, 2025 ಭಯೋತ್ಪಾದಕರ ದಾಳಿ…
ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್
ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್’ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಈ ನಡುವೆ ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಿಗರಿಗೆ ಸರ್ಕಾರದ ವತಿಯಿಂದ ನೆರವಾಗಲು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಅಧಿಕಾರಿಗಳನ್ನೊಳಗೊಂಡ ತಂಡ ಕಾಶ್ಮೀರಕ್ಕೆ ತೆರಳಿದೆ. ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಚರ್ಚಿಸಿರುವ ಸಚಿವ ಸಂತೋಷ್ ಲಾಡ್, ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಭೀಕರ ದಾಳಿಗೆ ತುತ್ತಾಗಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗಾಗಿ ಮಾನ್ಯ @CMofKarnataka ಶ್ರೀ @siddaramaiah ಅವರ ಸೂಚನೆಯಂತೆ ನಾನು ಮತ್ತು ವಿಶೇಷ ಅಧಿಕಾರಿಗಳ ತಂಡ ಕಾಶ್ಮೀರದ ಪಹಲ್ಗಾಮ್ ತಲುಪಿದ್ದೇವೆ. ಸಂತ್ರಸ್ತರಾಗಿರುವ ರಾಜ್ಯದ ಪ್ರವಾಸಿಗರ ಸಂಪೂರ್ಣ ಮಾಹಿತಿ…
ಪಹಲ್ಗಾಮ್ ದಾಳಿ ಹಿನ್ನೆಲೆ; ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್’ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ. ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿಯಯನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ ನೀಡಬೇಕೆಂದು ಸರ್ಕಾರ ತಿಳಿಸಿದೆ. ಪ್ರವಾಸಿಗರ ಸಂಬಂಧಿಕರು ಅಥವಾ ಸಾರ್ವಜನಿಕರು ಪ್ರವಾಸಿಗರ ವಿವರಗಳನ್ನು ಸಹಾಯವಾಣಿ ಸಂಖ್ಯೆಗಳಾದ 080-43344334, 080-43344335, 080-43344336, 080-43344342 ಗೆ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ.
ಹಿಂದೂಗಳೇ ಟೆರರ್ ಟರ್ಗೆಟ್.. ಪುರುಷರನ್ನೇ ಹತ್ಯೆ ಮಾಡಿದ ಉಗ್ರರು
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಹಿಂದೀಗಳನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ. ಪ್ರವಾಸಿಗರ ಗುಂಪಿನತ್ತ ಲಗ್ಗೆ ಹಾಕಿ ಧರ್ಮದ ಯಾವುದೆಂದು ತಿಳಿದು, ಹಿಂದೂಗಳಾಗಿದ್ದಲ್ಲಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕುಟುಂಬ ಸಮೇತರಾಗಿ ತೆರಳಿದ್ದವರಲ್ಲಿ ಗಂಡಸರನ್ನು ಮಾತ್ರ ಕೊಲೆ ಮಾಡಿ ಪತ್ನಿ, ಮಕ್ಕಳನ್ನು ಅನಾಥರಾಗಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ಭೀಕರ ಕೃತ್ಯ ಇದಾಗಿದೆ. ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ನುಸುಳಿ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕರ್ನಾಟಕ, ಆಂಧ್ರ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28 ಮಂದಿ ಬಲಿಯಾಗಿದ್ದಾರೆ. ಇಬ್ಬರು ವಿದೇಶಿಗರೂ ಉಗ್ರರ ದಾಳಿಗೆ ಬಲಿಯಾಗಿದ್ದಾರೆ.
ಪಹಲ್ಗಾಂ ಉಗ್ರರ ದಾಳಿಯಲ್ಲಿ 26 ಮಂದಿ ಬಲಿ
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಹಿಂದೀಗಳನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ. ಪ್ರವಾಸಿಗರ ಗುಂಪಿನತ್ತ ಲಗ್ಗೆ ಹಾಕಿ ಧರ್ಮದ ಯಾವುದೆಂದು ತಿಳಿದು, ಹಿಂದೂಗಳಾಗಿದ್ದಲ್ಲಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕುಟುಂಬ ಸಮೇತರಾಗಿ ತೆರಳಿದ್ದವರಲ್ಲಿ ಗಂಡಸರನ್ನು ಮಾತ್ರ ಕೊಲೆ ಮಾಡಿ ಪತ್ನಿ, ಮಕ್ಕಳನ್ನು ಅನಾಥರಾಗಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ಭೀಕರ ಕೃತ್ಯ ಇದಾಗಿದೆ. ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ನುಸುಳಿ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕರ್ನಾಟಕ, ಆಂಧ್ರ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28 ಮಂದಿ ಬಲಿಯಾಗಿದ್ದಾರೆ. ಇಬ್ಬರು ವಿದೇಶಿಗರೂ ಉಗ್ರರ ದಾಳಿಗೆ ಬಲಿಯಾಗಿದ್ದಾರೆ.
