ಜೈಪುರ: ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಮತ್ತೊಂದು ಅಭಿಯಾನಕ್ಕೆ ತಯಾರಿ ನಡೆಸಿದೆ. ಏಪ್ರಿಲ್ 28 ರಂದು ಜೈಪುರದಲ್ಲಿ ‘ಸಂವಿಧಾನ ಉಳಿಸಿ’ ಅಭಿಯಾನದ ಭಾಗವಾಗಿ ಬೃಹತ್ ರಾಜ್ಯ ಮಟ್ಟದ ರ್ಯಾಲಿ ಆರಂಭವಾಗಲಿದೆ. ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಸಿಂಗ್ ದೋತಾಸ್ರಾ ಅವರು, ಮುಂಬರುವ ವಾರಗಳಲ್ಲಿ ಈ ಅಭಿಯಾನ ರಾಜ್ಯ ಮಟ್ಟದಿಂದ ಬೂತ್ ಮಟ್ಟದವರೆಗೆ ನಡೆಯಲಿದೆ ಎಂದು ಹೇಳಿದರು. ಜೈಪುರದಲ್ಲಿ ನಡೆಯುವ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸುಮಾರು 2,200 ವಿಭಾಗೀಯ ಅಧ್ಯಕ್ಷರ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ವ್ಯವಸ್ಥೆಗಳನ್ನು ಸುಗಮಗೊಳಿಸಲು ಏಪ್ರಿಲ್ 24 ರಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ದೋತಾಸ್ರಾ ಹೇಳಿದರು. ‘ಸಂವಿಧಾನ ಉಳಿಸಿ’ ಅಭಿಯಾನವು ಕೇಂದ್ರ ಸರ್ಕಾರವು…
Month: April 2025
ಸ್ಮಾರ್ಟ್ ಮೀಟರ್ ಕರ್ಮಕಾಂಡ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ದೂರು
ಬೆಂಗಳೂರು: ಸ್ಮಾರ್ಟ್ ಮೀಟರ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥ ನಾರಾಯಣ್ ನೇತೃತ್ವದ ಬೆಂಗಳೂರಿನ ಬಿಜೆಪಿ ಶಾಸಕರು ಸೋಮವಾರ ಕರ್ನಾಟಕ ಲೋಕಾಯುಕ್ತದಲ್ಲಿ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದಾರೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಕೂಡ ಪ್ರಕರಣದಲ್ಲಿ ದೂರುದಾರರು.ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್, ಇಂಧನ ಸಚಿವ ಜಾರ್ಜ್, ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಸ್ಕಾಂ ಎಂಡಿ ಮಹಾಂತೇಶ್, ತಾಂತ್ರಿಕ ನಿರ್ದೇಶಕರಾದ ರಮೇಶ್ ಮತ್ತು ಬಾಲಾಜಿ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಹೇಳಿದರು. ಪ್ಲಂಬಿಂಗ್ ಉಪಕರಣಗಳ ತಯಾರಕ ಕಂಪನಿಯಾದ ಮೆಸರ್ಸ್ ರಾಜಶ್ರೀ ಎಲೆಕ್ಟ್ರಿಕಲ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಒಪ್ಪಂದ ನೀಡಲು ಅವರು ಎಲ್ಲಾ ಕಾನೂನು ನಿಯಮಗಳನ್ನು ಉಲ್ಲಂಘಿಸಿದ್ದಾರೆ…
‘ಹಸು ಕಳ್ಳ ಸಾಗಾಟ ಮಾಡುವ ಕುಖ್ಯಾತರಿಗೆ ಜಾಮೀನು ನೀಡುವುದು ಸರಿಯಲ್ಲ’ ಎಂದ ಸುಪ್ರೀಂ ಕೋರ್ಟ್
ನವದೆಹಲಿ: ಹಸು ಕಳ್ಳಸಾಗಾಟ ಮಾಡುವ ಕುಖ್ಯಾತರಿಗೆ (habitual cow smuggler) ಜಾಮೀನು ಮಂಜೂರು ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ. ಈ ಅಭಿಪ್ರಾಯ ಆಧರಿಸಿ ಸುಪ್ರೀಂ ಕೋರ್ಟ್ ಗೋ ಕಳ್ಳಸಾಗಣೆ ಆರೋಪಿ ನಜೀಮ್ ಖಾನ್ ಎಂಬಾತನ ಜಾಮೀನು ಆದೇಶವನ್ನು ಸೋಮವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠವು ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿ, ಖಾನ್ ಪರವಾಗಿ ಈ ಹಿಂದೆ ನೀಡಲಾಗಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿತು. ಸುಮಾರು ಆರು ತಿಂಗಳ ಹಿಂದೆ, ಸುಪ್ರೀಂ ಕೋರ್ಟ್ ಖಾನ್‌ಗೆ ಜಾಮೀನು ನೀಡಿತ್ತು. ಆದಾಗ್ಯೂ, ರಾಜಸ್ಥಾನ ಸರ್ಕಾರವು ನಂತರ ಆರೋಪಿಯು ನಿಯಮಿತ ಅಪರಾಧಿ ಎಂದು ಉಲ್ಲೇಖಿಸಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ. ಅಧಿಕೃತ ದಾಖಲೆಗಳ ಪ್ರಕಾರ, ಉತ್ತರ ಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕನಿಷ್ಠ ಎಂಟು ಪ್ರಕರಣಗಳು – ಗೋಹತ್ಯೆ ಕಾಯ್ದೆ, ಗ್ಯಾಂಗ್‌ಸ್ಟರ್…
CET ವೇಳೆ ಜನಿವಾರ ತೆಗೆಸಿರುವ ಘಟನೆ ಖಂಡನೀಯ; ಪರೀಕ್ಷೆ ಮಾರ್ಗಸೂಚಿ ಬದಲಿಸಲು ಸಲಹೆ
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನಿವಾರ ತೆಗೆಸಿರುವ ಘಟನೆ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಕೃತ್ಯವನ್ನು ಖಂಡಿಸಿರುವ ಅವರು ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು, ಪರೀಕ್ಷಾ ಮಾರ್ಗಸೂಚಿಗಳಲ್ಲಿ ಕೆಲವೊಂದನ್ನು ಮಾರ್ಪಾಡು ಮಾಡಿ ಧಾರ್ಮಿಕ ಸ್ವಾತಂತ್ರ್ಯ ಕಾಪಾಡಲು ಅನುವು ಮಾಡಿಕೊಡಬೇಕೆಂದು ಸಲಹೆ ನೀಡಿದ್ದಾರೆ. CET ಪರೀಕ್ಷೆಯ ತಪಾಸಕರು, ವಿಧ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣವು ತೀವ್ರ ಆಘಾತ ಉಂಟು ಮಾಡಿದೆ. ಈ ಘಟನೆ ಆ ವಿದ್ಯಾರ್ಥಿಯ ಮನಸ್ಸನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದನ್ನು ಊಹಿಸಲಾಧ್ಯ. ಇದನ್ನು ಖಂಡಿಸುತ್ತೇನೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಗರು ವಿನಾಕಾರಣ ರಾಜಕಾರಣಮಾಡುತ್ತಾ ಸಿದ್ದರಾಮಯ್ಯ ಸರ್ಕಾರದ ಕುರಿತು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ ಎಂದೂ ಅವರು ಹೇಳಿದ್ದಾರೆ. ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು( ಕಳೆದ ಬಾರಿಯ ಕೆ ಎ ಎಸ್…
‘ನಾರಾಯಣಗುರುಗಳ ಸಂದೇಶ ಪ್ರಸ್ತುತ’ ಎಂದು ಪೋಪ್ ಫ್ರಾನ್ಸಿಸ್ ಪ್ರತಿಪಾದಿಸಿದ್ದರು
ಮಂಗಳೂರು: ‘ವಿಶ್ವಶಾಂತಿ’ಯೇ ಪೋಪ್ ಫ್ರಾನ್ಸಿಸ್ ಅವರ ಮಂತ್ರವಾಗಿತ್ತು. ಅವರು ‘ನಾರಾಯಣಗುರುಗಳ ಸಂದೇಶ ಪ್ರಸ್ತುತ’ ಎಂದು ಪ್ರತಿಪಾದಿಸಿದ್ದರು ಎಂದು ಬಿಲ್ಲವ ಸಮುದಾಯದ ಮುಖಂಡರೂ ಆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸ್ಮರಿಸಿದ್ದಾರೆ. ಪೋಪ್ ಫ್ರಾನ್ಸಿಸ್ ನಿಧನಕ್ಕೆ ಶೋಕ ವ್ಯಕ್ತ ಪಡಿಸಿರುವ ಪದ್ಮರಾಜ್, ಕ್ರೈಸ್ತ ಸಮುದಾಯದ ಪ್ರಭಾವಿ ಧರ್ಮಗುರು ಹಾಗೂ ರೋಮನ್ ಕೆಥೊಲಿಕ್ ಚರ್ಚ್ ಮುಖ್ಯಸ್ಥರೂ ಆಗಿರುವ ಪೋಪ್ ಫ್ರಾನ್ಸಿಸ್ ಅವರು ವಿಶ್ವ ಶಾಂತಿಗಾಗಿ ನೀಡಿರುವ ಕೊಡುಗೆ ಅಪಾರ ಎಂದು ಬಣ್ಣಿಸಿದ್ದಾರೆ. ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದ್ದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತ. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ಅಗ್ರಸ್ಥಾನದಲ್ಲಿ ಬರುತ್ತಾರೆ ಎಂದು…
ಪೋಪ್ ಫ್ರಾನ್ಸಿಸ್ ಅವರು ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ಸಂಕೇತವಾಗಿದ್ದರು: ಮೋದಿ ಸಂತಾಪ
ನವದೆಹಲಿ/ವ್ಯಾಟಿಕನ್ ಸಿಟಿ: ಈಸ್ಟರ್ ಸೋಮವಾರದಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ 88 ನೇ ವಯಸ್ಸಿನಲ್ಲಿ ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೀವ್ರ ನೋವುಂಟಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೋಮನ್ ಕ್ಯಾಥೋಲಿಕ್ ಚರ್ಚ್‌ನ ನಾಯಕನೊಂದಿಗಿನ ತಮ್ಮ ಭೇಟಿಗಳನ್ನು ಸ್ಮರಿಸಿದ ಪ್ರಧಾನಿ ಮೋದಿ, ಪೋಪ್ ಫ್ರಾನ್ಸಿಸ್ ಅವರನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಯಾವಾಗಲೂ ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ಸಂಕೇತವಾಗಿ ಸ್ಮರಿಸುತ್ತಾರೆ ಎಂಡಿದ್ದಾರೆ. “ಪವಿತ್ರ ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೀವ್ರ ನೋವುಂಟಾಗಿದೆ. ಈ ದುಃಖ ಮತ್ತು ಸ್ಮರಣೆಯ ಸಮಯದಲ್ಲಿ, ಜಾಗತಿಕ ಕ್ಯಾಥೋಲಿಕ್ ಸಮುದಾಯಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಪೋಪ್ ಫ್ರಾನ್ಸಿಸ್ ಅವರನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಯಾವಾಗಲೂ ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ಸಂಕೇತವಾಗಿ ಸ್ಮರಿಸುತ್ತಾರೆ” ಎಂದು ಪ್ರಧಾನಿ ಮೋದಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. “ಚಿಕ್ಕ ವಯಸ್ಸಿನಿಂದಲೂ…
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ; ಪತ್ನಿ ಪಲ್ಲವಿ ಬಂಧನ
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಓಂ ಪ್ರಕಾಶ್ ಅವರ ಕೊಲೆ ನಡೆದಿದ್ದು, ಅವರ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಪತ್ನಿ ಪಲ್ಲವಿ ಹಾಗೂ ಮಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದರು. ಬಳಿಕ ಹೇಳಿಕೆ ಪಡೆದು ಓಂ ಪ್ರಕಾಶ್ ಪಲ್ಲವಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ನಡುವೆ, ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್ ಸೇರಿದಂತೆ ಕುಟುಂಬದ ಹಲವರಿಂದ ಪೊಲೀಸರು ಹೇಳಿಕೆ ಪಡೆದಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹೇಳಿಕೆ ನೀಡಿರುವ ಪತ್ನಿ ಪಲ್ಲವಿ, ತಾನು ಆತ್ಮ ರಕ್ಷಣೆಗಾಗಿ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ
ಬೆಂಗಳೂರು: ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹೈಕೋರ್ಟ್’ಗಳ ಏಳು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಹಿನ್ನಲೆಯಲ್ಲಿ ಸೋಮವಾರ ಈ ವರ್ಗಾವಣೆ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೃಷ್ಣನ್ ನಟರಾಜ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಎನ್. ಶ್ರೀನಿವಾಸ ಸಂಜಯ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಪೆರುಗು ಶ್ರೀಸುಧ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೆ.ಸುರೇಂದರ್ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಡಾ.ಕೆ.ಮನ್ಮಧ ರಾವ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು…
ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶ
ನವದೆಹಲಿ: ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶರಾಗಿದ್ದಾರೆ. 88 ವರ್ಷ ವಯಸ್ಸಿನ ಪೋಪ್ ಫ್ರಾನ್ಸಿಸ್ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ನ್ಯುಮೋನಿಯಾ ಕಾರಣದಿಂದಾಗಿ (ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ವ್ಯಾಟಿಕನ್’ಗೆ ಮರಳಿದ್ದರು. ಪೋಪ್ ಫ್ರಾನ್ಸಿಸ್ ಕಳೆದೊಂದು ವಾರದಿಂದ ಶ್ವಾಸಕೋಶ ಸಂಬಂಧಿತ ಸೋಂಕಿನಿಂದ ಬಳಲುತ್ತಿದ್ದರು. ಕಳೆದ ವಾರ ಸೇಂಟ್ ಪೀಟರ್ಸ್ ಚೌಕ್ನಲ್ಲಿ ಕ್ಯಾಥೋಲಿಕ್ ಚರ್ಚ್‌ನ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪೋಪ್ ಫ್ರಾನ್ಸಿಸ್ ಭಾಗವಹಿಸಿರಲಿಲ್ಲ. ಸೋಮವಾರ ಬೆಳಿಗ್ಗೆ 7:35 ರ ಸುಮಾರಿಗೆ ಪೋಪ್ ಫ್ರಾನ್ಸಿಸ್ ಅವರು ಕೊನೆಯುಸಿರೆಳೆದರೆಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
IPL: ಪಂಜಾಬ್ ವಿರುದ್ದ ಸೇಡು ತೀರಿಸಿಕೊಂಡ RCB; ದ್ವಿತಿಯಾರ್ಧದಲ್ಲಿ ಗೆಲುವಿನ ಅಭಿಯಾನ ಆರಂಭ
ಚಂಡೀಗಢ: ಐಪಿಎಲ್ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಭಾರಿಸಿದೆ. ಚಂಡೀಗಡದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ RCB 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರದ ಪಂದ್ಯ ರೋಚಕತೆಯಿಂದ ಕೂಡಿತ್ತು. ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಗುರಿ ಸಾಧಿಸಿತು. ಕೇವಲ 3 ವಿಕೆಟ್ ಕಳೆದುಕೊಂಡ RCB ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ಶತಕದಾಟದ ನೆರವಿನೊಂದಿಗೆ 159 ರನ್ ಗಳಿಸಿ ಜಯಭೇರಿ ಭಾರಿಸಿತು. ವಿರಾಟ್ ಕೊಹ್ಲಿ ಅಜೇಯ 73 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 61 ರನ್ ಕಲೆಹಾಕಿದ್ದಾರೆ. ರಜತ್ ಪಟಿದಾರ್ 12 ರನ್ ಗಳಿಸಿದ್ದರೆ, ಜಿತೇಶ್…
