ತಾಳಿ, ಆಭರಣ ಆಯಿತು ಇದೀಗ ಜನಿವಾರ ಕಿತ್ತೆಸೆದ ಸರ್ಕಾರ; ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಮೇಲೆ ಕ್ರೌರ್ಯ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪರೀಕ್ಷಾ ಅಕ್ರಮ ತಡೆಯಲಾಗದ ಸರ್ಕಾರ ಪರೀಕ್ಷಾರ್ಥಿಗಳ ತಾಳಿ, ಸರ, ಆಭರಣಗಳನ್ನೂ ತೆಗೆಸುತ್ತಿತ್ತು. ಇದೀಗ ಜನಿವಾರಕ್ಕೆ ಕೈ ಹಾಕಿದೆ ಎಂಬ ಆಕ್ರೋಶ ವ್ಯಕತವಾಗಿದೆ. ಸಿಸಿ ಕ್ಯಾಮೆರಾ ಅಡಿಯಲ್ಲಿ ಪರೀಕ್ಷೆ ಬರೆಯುವಾಗ ಜನಿವಾರ, ತಾಳಿ ಮೂಲಕ ಅಕ್ರಮ ನಡೆಯಲು ಸಾಧ್ಯವಿಲ್ಲ. ಆದರೂ ಹಿಂದೂ ಸಂಸ್ಕೃತಿ ಮೇಲೆ ಸವಾರಿ ಮಾಡುವ ಉದ್ದೇಶದಿಂದಲೇ ಈ ರೀತಿಯ ಕ್ರಮ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ನಡುವೆ ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಪ್ರಕರಣ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.…

ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನ; ಪ್ರಯಾಣಿಕನ ಗುಂಡಿಗೆ ಆಗಂತುಕ ಬಲಿ

ಬೆಲ್ಮೋಪನ್: ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನದ ಮತ್ತೊಂದು ಹೈಡ್ರಾಮಾ ನಡೆದಿದೆ. ಅಮೆರಿಕದ ಬೆಲೀಜ್‌ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಬೆಲೀಜ್‌ನಲ್ಲಿ ಅಮೆರಿಕದ ವ್ಯಕ್ತಿಯೊಬ್ಬ ಚಾಕು ತೋರಿಸಿ, ಕೆಲವರ ಮೇಲೆ ಹಲ್ಲೆ ನಡೆಸಿ ಸಣ್ಣ ಟ್ರಾಫಿಕ್ ಏರ್ ವಿಮಾನವನ್ನು ಅಪಹರಿಸಲು ಯತ್ನಿಸಿದ್ದಾನೆ. ಆ ವೇಳೆ, ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬ ಆ ಕಿಡಿಗೇಡಿಯ ಮೇಲೆ ಗುಂಡು ಹಾರಿಸಿದ್ದಾನೆ. ಆಗಂತುಕನನ್ನು ಸುಮಾರು 49 ವರ್ಷ ವಯಸ್ಸಿನ ಅಕಿನ್ಯೆಲಾ ಸಾವಾ ಟೇಲರ್ ಎಂದು ಗುರುತಿಸಲಾಗಿದೆ.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಪೂರಕ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು…

ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು? ಡಿಕೆಶಿ ಪ್ರಶ್ನೆ

ಬೆಂಗಳೂರು: ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಮಾತನಾಡಿದರು.ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿಯನ್ನು ನಾನಿನ್ನು ಬಿಚ್ಚಿಟ್ಟಿಲ್ಲ ಎಂದರು. “ಕುಮಾರಸ್ವಾಮಿ ನನ್ನ ವಿರುದ್ಧ ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿದ್ದಾರೆ. ಇದನ್ನು ಏಕೆ ಇಟ್ಟುಕೊಂಡಿದ್ದಾರೆ, ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಮಿಸ್ಟರ್ ಕುಮಾರಸ್ವಾಮಿ ಎಂದು ಪ್ರಶ್ನಿಸಿದರು, ಈ ಡಿ.ಕೆ. ಶಿವಕುಮಾರ್ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ. ನಮ್ಮ ಕಷ್ಟ, ನಮ್ಮ ಶ್ರಮ, ನಮ್ಮ ಬದುಕು. ನಾವು ಆಸ್ತಿ ಮಾಡಿಕೊಳ್ಳುತ್ತೇವೆ. ಅದರ ಸತ್ಯಾಸತ್ಯತೆ ಸರ್ಕಾರ ಪರಿಶೀಲನೆ ಮಾಡಲಿ. ನಾನು ನಿನ್ನ ಚರಿತ್ರೆಯನ್ನು ಇನ್ನು ಬಿಚ್ಚಿಲ್ಲ. ನಿಮ್ಮ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು…

ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಕೆಶಿ

ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ ಹೊರೆ ತಗ್ಗಿಸಲು ನಾವು ಗ್ಯಾರಂಟಿ ಯೋಜನೆ ಕೊಟ್ಟಿದ್ದು, ರೈತರ ಬದುಕು ಕಾಪಾಡಲು ಹಾಲಿನ ಬೆಲೆ ಏರಿಸಿದ್ದೇವೆ. ಹೀಗಾಗಿ ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಅವರು ಮಾತನಾಡಿದರು. ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಹೀಗಾಗಿ ಬಿಜೆಪಿ ನಾಯಕರ ಆಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ…

ಬಾಲಕಿ ಮೇಲೆ ಅತ್ಯಾಚಾರ; ಎನ್ಕೌಂಟರ್‌ನಲ್ಲಿ ಆರೋಪಿ ಸೆರೆ

ಲಖ್ನೋ: ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿರುವ ಆರೋಪಿಯನ್ನು ಪೊಲೀಸರು ಗುಂಡಿನ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿರುವ ಘಟನೆ ಉತ್ತರ ಪ್ರದೇಶದ ರಾಂಪುರ ಬಳಿ ನಡೆದಿದೆ. 11 ವರ್ಷದ ವಾಕ್ ಮತ್ತು ಶ್ರವಣದೋಷವುಳ್ಳ ಬಾಲಕಿ ಏಪ್ರಿಲ್ 15ರ ಸಂಜೆಯಿಂದ ನಾಪತ್ತೆಯಾಗಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಹೊಲವೊಂದರಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಪತ್ತೆಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದರು. ಪೊಲೀಸರು ಕಾಲಿಗೆ ಗುಂಡೇಟು ಹೊಡೆದು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರದ ಆಶಯ ಅರಿತು ಕೆಲಸ ಮಾಡಿ: ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ.

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿದ ಅವರು, ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದರು. ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಯನ್ನು…

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ದೋಷಾರೋಪ ಪಟ್ಟಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿಬುಧವಾರ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇ.ಡಿ ಯನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕೆ ನಾವು ಹೆದರಲ್ಲ.#NationalHerald pic.twitter.com/kZ5bzaYK5w — Siddaramaiah (@siddaramaiah) April 16, 2025

ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನಯಾನಕ್ಕೆ ಸಿಎಂ ಮರು ಚಾಲನೆ

ಬೀದರ್‌: ಬೀದರ್ – ಬೆಂಗಳೂರು ವಿಮಾನ ಸೇವೆ ಪುನರಾರಂಭವಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್ – ಬೆಂಗಳೂರು ವಿಮಾನ ಸೇವೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ಮರು ಚಾಲನೆ ನೀಡಿದರು. ಗುರುವಾರದಿಂದ ಬೀದರ್ – ಬೆಂಗಳೂರು ನಡುವೆ ಸ್ಟಾರ್‌ ಏರ್‌ಲೈನ್ಸ್‌ ವಿಮಾನ ಸೇವೆ ಆರಂಭಿಸಲಿದೆ. ಪ್ರತಿ ದಿನ ಬೆಳಗ್ಗೆ 7.30ಕ್ಕೆ ಬೆಂಗಳೂರಿನಿಂದ ಬೀದರ್‌ ಹಾಗೂ ಬೆಳಗ್ಗೆ 9.10ಕ್ಕೆ ಬೀದರ್‌ನಿಂದ ಬೆಂಗಳೂರಿಗೆ ವಿಮಾನ ಸೌಲಭ್ಯ ಸಿಗಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್​ ಬಿ. ಖಂಡ್ರೆ, ಸ್ಥಗಿತಗೊಂಡಿದ್ದ ಬೀದರ್- ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ರಾಜ್ಯ ಸರ್ಕಾರ ಪುನಾರಂಭಿಸಿದೆ. ಇದಕ್ಕಾಗಿ ಕೆಕೆಆರ್​ಡಿಬಿಯಿಂದ ಈ ವರ್ಷ 14 ಕೋಟಿ ರೊಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ED ಮುಟ್ಟುಗೋಲು ವಿಚಾರ; ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಕೆಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಯತ್ನಿಸುತ್ತಿದ್ದು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಆರೋಪ ಪಟ್ಟಿ ಸಲ್ಲಿಕೆಗೆ ಮುಂದಾಗಿದೆ. ಈ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ಬೆಂಗಳೂರಿನ ಶಾಂತಿನಗರದ ವಿಲ್ಸನ್ ಗಾರ್ಡನ್ ನಲ್ಲಿರುವ ಇಡಿ ಕಚೇರಿ ಎದುರು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಮಂಜುನಾಥ್ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕರಾದ…