ಬೆಂಗಳೂರು: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನ್ಯವು ನಡೆಸಿದ ಯಶಸ್ವಿ ದಾಳಿಯ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು. ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ ಎಂದ ಅವರು,…
Day: May 7, 2025
‘ಆಪರೇಷನ್ ಸಿಂಧೂರ್ ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ’: ಕಿಚ್ಚ ಸುದೀಪ್
ಬೆಂಗಳೂರು: ಆಪರೇಷನ್ ಸಿಂಧೂರ್: ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ ಎಂದು ನಟ ಕಿಚ್ಚ ಸುದೀಪ್ ಬಣ್ಣಿಸಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ‘ಒಬ್ಬ ಭಾರತೀಯನಾಗಿ, ಈ ಪವಿತ್ರ ಮಣ್ಣಿನ ಮಗನಾಗಿ, ಪಹಲ್ಗಾಮ್‌ನಲ್ಲಿ ನೋವಿನ ನಡುಕವನ್ನು ಅನುಭವಿಸಿದೆ. ಇಂದು, ನಾನು ನ್ಯಾಯದ ಗುಡುಗನ್ನು ಅನುಭವಿಸುತ್ತೇನೆ’ ಎಂದು ಹೇಳಿದ್ದಾರೆ. ‘ಭಾರತದ ಸಿಂಧೂರವು ಕಲೆ ಹಾಕಲ್ಪಟ್ಟಿತು. ನಮ್ಮ ಧೈರ್ಯಶಾಲಿ ಹೃದಯಗಳು ಬೆಂಕಿ ಮತ್ತು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿದವು’ ಎಂದು ಸುದೀಪ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಸಶಸ್ತ್ರ ಪಡೆಗಳಿಗೆ, ನನ್ನ ಅಂತ್ಯವಿಲ್ಲದ ವಂದನೆ. ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ನಾಯಕತ್ವವು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ತೀಕ್ಷ್ಣವಾದ, ಗೌರವಯುತ ಮಾಹಿತಿ ನೀಡಿದ್ದಾರೆ ಎಂದಿರುವ…
‘ಆಪರೇಷನ್ ಸಿಂಧೂರ್’ ಸ್ವಾಗತಿಸಿದ ಓವೈಸಿ; ಇದು ಪಾಕಿಸ್ತಾನಕ್ಕೆ ಪಾಠ ಎಂದ AIMIM ನಾಯಕ
ಹೈದರಾಬಾದ್: ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಅಡಗುತಾಣಗಳ ಮೇಲಿನ ದಾಳಿಯನ್ನು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸ್ವಾಗತಿಸಿದ್ದಾರೆ. ರಕ್ಷಣಾ ಪಡೆಗಳ ಕ್ರಮವನ್ನು ಸ್ವಾಗತಿಸಲು ಓವೈಸಿ ‘X’ ನಲ್ಲಿ ಪ್ರತಿಕ್ರಿಯಿಸಿರುವ ಅಸಾದುದ್ದೀನ್ ಓವೈಸಿ ‘ಇದು ಪಾಕಿಸ್ತಾನಕ್ಕೆ ಪಾಠ’ ಎಂದು ಪ್ರತಿಪಾದಿಸಿದ್ದಾರೆ. “ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಅಡಗುತಾಣಗಳ ಮೇಲೆ ನಮ್ಮ ರಕ್ಷಣಾ ಪಡೆಗಳು ನಡೆಸಿದ ಗುರಿ ದಾಳಿಗಳನ್ನು ಸ್ವಾಗತಿಸುತ್ತೇನೆ. ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು, ಇದರಿಂದ ಬೇರೆ ಯಾವುದೇ ಪಹಲ್ಗಾಮ್ ಘಟನೆ ನಡೆಯದು. ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯ ನಾಶವಾಗಬೇಕು” ಎಂದು ಓವೈಸಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ. ಎಸ್. ಜಗನ್ ಮೋಹನ್ ರೆಡ್ಡಿ ಕೂಡ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಶ್ಲಾಘಿಸಿದ್ದಾರೆ. “ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ನಿರ್ಣಾಯಕ ಪ್ರತಿಕ್ರಿಯೆಯಾಗಿ ಭಾರತೀಯ ರಕ್ಷಣಾ…
‘ಆಪರೇಷನ್ ಸಿಂಧೂರ್’ ಬಗ್ಗೆ ಪಾಕ್ ಪ್ರತಿಕ್ರಿಯೆ ಹೀಗಿದೆ..
ನವದೆಹಲಿ: ಕೆಲವು ವರ್ಷಗಳ ಹಿಂದೆ ಭಾರತ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅಪಹಾಸ್ಯ ಮಾಡಿದ್ದ ಪಾಕಿಸ್ತಾನಕ್ಕೆ ಈ ಬಾರಿ ಭಾರತೀಯ ಸೇನೆ ಭಯಾನಕ ಉತ್ತರ ನೀಡಿದೆ. ಅಂದು ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಈ ಬಾರಿ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆದಿರುವುದನ್ನು ಒಪ್ಪಿಕೊಂಡಿದೆ. ಪಾಕಿಸ್ತಾನಿ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಕೂಡ ತಮ್ಮ ದೇಶದ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದಾರೆ. “ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿ ದಾಳಿಯ ನಂತರ ಉಭಯ ದೇಶಗಳ ನಡುವಿನ ತೀವ್ರ ಉದ್ವಿಗ್ನತೆಯ ನಡುವೆ ಭಾರತವು ಕೋಟ್ಲಿ, ಬಹ್ವಲ್ಪುರ್ ಮತ್ತು ಮುಜಫರಾಬಾದ್ ಮೇಲೆ ಕ್ಷಿಪಣಿ ದಾಳಿ ನಡೆಸಿತು” ಎಂದು ಪಾಕಿಸ್ತಾನ ಸೇನೆ ದೃಢಪಡಿಸಿದೆ. ಇದೇ ವೇಳೆ, ಭಾರತ ಹೊಸ ಇತಿಹಾಸ ಬರೆದಿದೆ ಎಂದು ಪ್ರಧಾನಿಯವರ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ಮಿಲಿಟರಿ ವೀಡಿಯೋವೊಂದನ್ನು ಅವರು…
“ನ್ಯಾಯ ಅಜೀವ..!’: ಆಪರೇಷನ್ ಸಿಂಧೂರ್ ಬಗ್ಗೆ ಸೇನೆ ಸಮರ್ಥನೆ
ನವದೆಹಲಿ: ಪಾಕಿಸ್ತಾನ ವಿರುದ್ದದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿರುವ ಭಾರತೀಯ ಸೇನೆ, ‘ನ್ಯಾಯ ಜೀವಂತವಾಗಿದೆ ಎಂದಿದೆ. ‘Justice is served’ ಎಂದು ಪಾಕಿಸ್ತಾನದ ಒಳಗಿನ 9 ನೆಲೆಗಳ ಮೇಲೆ ದಾಳಿ ನಂತರ ಭಾರತೀಯ ಸೇನೆ ಹೇಳಿಕೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಒಳಗಿನ ಒಂಬತ್ತು ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಬುಧವಾರ ತಿಳಿಸಿದೆ. "प्रहाराय सन्निहिताः, जयाय प्रशिक्षिताः"Ready to Strike, Trained to Win.#IndianArmy pic.twitter.com/M9CA9dv1Xx — ADG PI – INDIAN ARMY (@adgpi) May 6, 2025 “ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಯಿತು, ಅಲ್ಲಿಂದ ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸಲಾಗಿದೆ…
‘ಆಪರೇಷನ್ ಸಿಂಧೂರ’: ಸೇನಾ ಧೈರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ‘ಆಪರೇಷನ್ ಸಿಂಧೂರ’ವನ್ನು ಸ್ವಾಗತಿಸಿರುವ ಕಾಂಗ್ರೆಸ್, ಸೇನೆಯ ದೃಢನಿಶ್ಚಯ ಮತ್ತು ಧೈರ್ಯವನ್ನು ಶ್ಲಾಘಿಸಿದೆ. ‘ಆಪರೇಷನ್ ಸಿಂಧೂರ’ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಪಾಕಿಸ್ತಾನ ಮತ್ತು ಪಿಒಕೆಯಿಂದ ಹೊರಹೊಮ್ಮುವ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಭಾರತವು ದೃಢವಾದ ರಾಷ್ಟ್ರೀಯ ನೀತಿಯನ್ನು ಹೊಂದಿದೆ ಎಂದಿದ್ದಾರೆ. ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಮುಚ್ಚಿಹಾಕಿರುವ ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ. ಅವರ ದೃಢನಿಶ್ಚಯ ಮತ್ತು ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ ಎಂದು…
‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ’ ಎಂದು ಹೆಸರಿಸಲಾಗಿದ್ದು, ಸೇನಾ ಶಕ್ತಿ ಪ್ರದರ್ಶನಕ್ಕೆ ದೇಶಾದ್ಯಂತ ಅಭಿನಂದನೆ ವ್ಯಕ್ತವಾಗಿದೆ. ಹಲವೆಡೆ ವಿಜಯೋತ್ಸವ ಆಚರಿಸಲಾಗುತ್ತಿದೆ. ಭಾರತವು ಪಾಕಿಸ್ತಾನದ ಮೇಲೆ ಯುದ್ಧ ಸರಿದರೆ ಸ್ವಾಗತಿಸುತ್ತೇವೆ ಎನ್ನುತ್ತಿರುವ ದೇಶದ ಜನ, ಇದೀಗ ನಡೆದಿರುವ ‘ಆಪರೇಷನ್ ಸಿಂಧೂರ್’ ಬೆಂಬಲಿಸಿ ವಿಜಯೋತ್ಸವ ಆಚರಿಸುತ್ತಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸುತ್ತಿರುವ ಜನತೆ, ಭಾರತ ಮಾತೆಗೆ ಜೈಕಾರ ಹಾಕುತ್ತಿದ್ದಾರೆ.
ಭಾರತದ ದಾಳಿಗೆ ಅಕ್ಷರಶಃ ಬೆಚ್ಚಿದ ಪಾಕಿಸ್ತಾನ: ವಿಮಾನ ನಿಲ್ದಾಣಗಳಲ್ಲಿ ತುರ್ತು ಪರಿಸ್ಥಿತಿ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿ ಮೂಲಕ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದ್ದ ಉಗ್ರರನ್ನು ‘ಸಿಂಧೂರ ಆಪರೇಷನ್’ ಮೂಲಕವೇ ಭಾರತೀಯ ಸೇನೆ ಧಮನ ಮಾಡಿದೆ. ಅಷ್ಟೇ ಅಲ್ಲ, ತನ್ನನ್ನು ಮುಟ್ಟಿದರೆ ಸುತ್ತು ಹೋಗುವಿರೆಂಬ ಸಂದೇಶವನ್ನೂ ಭಾರತವು ಜಗತ್ತಿಗೆ ರವಾನಿಸಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ಸೇನೆ ಮಧ್ಯ ರಾತ್ರಿಯೇ ‘ಸಿಂಧೂರ ಆಪರೇಷನ್’ ಹೆಸರಲ್ಲಿ ವಾಯುದಾಳಿ ನಡೆಸಿದ್ದು, ಇನ್ನೂ ಬೆಳಕು ಹರಿಯುವಷ್ಟರಲ್ಲೇ ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಲಾಗಿದೆ. ಯಾವ್ಯಾವ ಸ್ಥಳಗಳ ಮೇಲೆ ಭಾರತ ದಾಳಿ? ಪಾಕ್ ಆಕ್ರಮಿತ ಕಾಶ್ಮೀರ ಮಾತ್ರವಲ್ಲ ಪಾಕಿಸ್ತಾನ ನೆಲಕ್ಕೂ ನುಗ್ಗಿ ಹೊಡೆಯಲಾಗಿದೆ. ಬಹವಾಲ್ಪುರ್, ಕೋಟ್ಲಿ, ಮುರಿಡ್ಕೆ, ಬಾಗ್ ಮತ್ತು ಮುಜಫರಾಬಾದ್‌ಗಳ ಮೇಲೆ ಭಯಾನಕ ದಾಳಿ ನಡೆಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಉಗ್ರರು ಮಸೀದಿಯಲ್ಲಿ ಅಡಗಿದ್ದರೂ ದಾಳಿಯಿಂದ ಹಿಂದೆ ಸರಿಯದ ಸೇನೆ ಪ್ರಬಲ ದಾಳಿ ನಡೆಸಿದೆ. ಭಾರತದ ಈ ಮಿಲಿಟರಿ ದಾಳಿಗೆ ಬೆಚ್ಚಿರುವ ಪಾಕಿಸ್ತಾನ…
BMTCಯಲ್ಲಿ ಸಾರಿಗೆ ಆಶಾಕಿರಣ ; 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ.. ಮೃತ ನೌಕರರ ಅವಲಂಬಿತರಿಗೆ ಪರಿಹಾರದ ಚೆಕ್..
ಬೆಂಗಳೂರು: ಬಿಎಂಟಿಸಿಯಲ್ಲಿ ಸಾರಿಗೆ ಆಶಾಕಿರಣ ಯೋಜನೆಯಡಿ 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಮೃತ ನೌಕರರ ಅವಲಂಬಿತರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ಬಿಎಂಟಿಸಿ ತಿಳಿಸಿದೆ. BMTCಯು ಸಿ-ಕ್ಯಾಂಪ್ ಸಹಯೋಗದಲ್ಲಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ 50 ಘಟಕಗಳಲ್ಲಿ ಹಾಗೂ 4 ಕಾರ್ಯಾಗಾರಗಳಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಿದ್ದು, ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಪಾಸಣೆಗೆ ಒಳಪಡುವ ನೌಕರರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ 50 ಲಕ್ಷ ರೂ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದಾಗಿ ಅಕಾಲಿಕ ಮರಣ ಹೊಂದಿದ ನೌಕರರ ಅವಲಂಬಿತರಿಗೆ 10 ಲಕ್ಷ ರೂ ನೀಡಲಾಗುತ್ತಿದೆ ಎಂದರು. 2024ರ ಫೆಬ್ರವರಿ–2025ರ ಏಪ್ರಿಲ್ ವರೆಗೆ 107…
ಭಾರತೀಯ ಮಹಿಳೆಯರ ಕುಂಕುಮ ಅಳಿಸಿದ್ದ ಪಾಕ್ ಪಾತಕಿಗಳಿಗೆ ‘ಸಿಂಧೂರ ಸ್ಟ್ರೈಕ್’..!
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. Pakistan pic.twitter.com/XuGFEMYjat — Mossad Commentary (@MOSSADil) May 6, 2025 ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಹಲವು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್ ‘ ಎಂದು ಹೆಸರಿಸಲಾಗಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್ ‘ ಎಂದು ಹೆಸರಿಸಲು ಒಂದು ಕಾರಣವೂ ಇದೆ. ಪಹಲ್ಲಾಮ್ ದಾಳಿ ಸಂದರ್ಭದಲ್ಲಿ ಹಿಂದೂಗಳನ್ನೂ ಹುಡುಕಾಡಿ ಉಗ್ರರು ನರಮೇಧ ನಡೆಸಿದ್ದಾರೆ. ಕೇವಲ ಪುರುಷರನ್ನೇ ಗುಂಡಿಟ್ಟು ಕೊಂಡು ಮಹಿಳೆಯರ ಕುಂಕುಮ ಅಳಿಸಿದ್ದಾರೆ. ಈ ಕಾರಣದಿಂದಲೇ ಪಾಕ್ ಉಗ್ರರನ್ನು ಅಳಿಸಿಹಾಕುವ ಕಾರ್ಯಾಚರಣೆಯನ್ನು ಮೋದಿ ಸರ್ಕಾರ ಆರಂಭಿಸಿದೆ. 🚨 MASSIVE NEWS…