ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಹರಿಯಾಣ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬಿ ಕೆ ಹರಿಪ್ರಸಾದ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 26 ನಕ್ಸಲರು ಬಲಿ

ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಪೊಲೀಸ್ ಕಾರ್ಯಾಚರಣೆ ಬಿರುಸುಗೊಂಡಿದೆ. ಸೇನೆ ಹಾಗೂ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ 26 ನಕ್ಸಲರು ಮೃತಪಟ್ಟಿದ್ದಾರೆ. ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಇಂದು ಪೊಲೀಸ್ ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿಯಲ್ಲಿ ಪೊಲೀಸ್ ಮಾಹಿತಿದಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯಪುರ ಬಳಿ ಸರಣಿ ಅಪಘಾತ; ಆರು ಮಂದಿ ದುರ್ಮರಣ

ವಿಜಯಪುರ: ವಿಜಯಪುರ ಜಿಲ್ಲೆ ಮನಗೂಳಿ ಬಳಿ ಬಸ್ಸು-ಕಾರು- ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಅಪಘಾತ ಸಂಭವಿಸಿದೆ. ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿಗೂ ಅಪ್ಪಳಿಸಿದೆ. ಈ ಅಪಘಾತದಲ್ಲಿ ಮಹಿಂದ್ರಾ ಸ್ಕಾರ್ಪಿಯೋ ವಾಹನ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ತೆಲಂಗಾಣ ಮೂಲದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಮಣಿಕಂಠನ್, ಪತ್ನಿ ಪವಿತ್ರ, ಪುತ್ರ ಅಭಿರಾಮ್, ಪುತ್ರಿ ಜ್ಯೋತ್ಸ್ನಾ, ವಿಜಯಪುರ ಮೂಲದ ಚಾಲಕ ವಿಕಾಸ್ ಮಕಾನಿ ಮತ್ತು ಬಸ್ ಚಾಲಕ ಬಸವರಾಜ ರಾಠೋರ್ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.