ಬೆಂಗಳೂರು: ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತೆಲುಗು ನಟಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಎರಡು ವರ್ಷ 2 ದಿನಕ್ಕೆ ತಮ್ಮನ್ನಾ ಜೊತೆ ಬರೋಬ್ಬರಿ 6.20 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಉತ್ಪನ್ನಕ್ಕೆ ಕನ್ನಡ ನಟ ನಟಿಯರನ್ನೇ ಆಯ್ಕೆ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ. ಇದೇ ವೇಳೆ, ತಮ್ಮನ್ನಾ ಆಯ್ಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವರನ್ನೇ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ ಎಂದು ಪ್ರಶ್ನಿಸಿರುವ ನಾರಾಯಣ ಗೌಡ, ಮೈಸೂರು ಸ್ಯಾಂಡಲ್ ಸೋಪ್…
Day: May 23, 2025
ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ
ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಕರ್ನಾಟಕದಲ್ಲಿ ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಈ ತಿಂಗಳಲ್ಲಿ 33 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 16 ಸಕ್ರಿಯ ಪ್ರಕರಣಗಳಿವೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಭಾರತದಲ್ಲಿ ಸದ್ಯ ಸಕ್ರಿಯ ಕೊವಿಡ್ ಕೇಸ್‌ಗಳ ಸಂಖ್ಯೆ 257 ಇದೆ ಎನ್ನಲಾಗಿದ್ದು, ಆಸ್ಪತ್ರೆಗಳಲ್ಲಿ ಇನ್‌ಫ್ಲುಯೆಂಜಾ ಮಾದರಿ ಅನಾರೋಗ್ಯ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.