ʼಆಪರೇಷನ್ ಸಿಂದೂರ್ʼ ಹಿನ್ನೆಲೆ ದೇಶದ ಜನತೆಗೆ ಆರೆಸ್ಸೆಸ್ ವಿಶೇಷ ಕರೆ

ನವದೆಹಲಿ: ಪಹಲ್‌ಗಾಮ್‌ನಲ್ಲಿ ನಿಃಶಸ್ತ್ರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರ ಮೇಲೆ ಮತ್ತು ಅವರ ಬೆಂಬಲಿಗರ ವ್ಯವಸ್ಥೆಯ ಮೇಲೆ ನಿರ್ಣಾಯಕವಾದ ʼಆಪರೇಷನ್ ಸಿಂದೂರ್ʼ ಮೂಲಕ ಪ್ರತ್ಯುತ್ತರ ನೀಡುತ್ತಿರುವ ಭಾರತ ಸರ್ಕಾರದ ನಾಯಕತ್ವ ಮತ್ತು ಸೇನಾಪಡೆಗಳಗಳನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಭಿನಂಧಿಸಿದೆ. ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸರಸಂಘಚಾಲಕ ಡಾ.ಮೋಹನ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಹಿಂದೂ ಯಾತ್ರಿಗಳ ಕ್ರೂರ ಕಗ್ಗೊಲೆಯಿಂದ ಆಘಾತಕ್ಕೊಳಗಾದ ಕುಟುಂಬಗಳಿಗೆ ಮತ್ತು ಇಡೀ ದೇಶಕ್ಕೆ ನ್ಯಾಯ ಒದಗಿಸುವ ಈ ಕಾರ್ಯಾಚರಣೆಯು ಇಡೀ ದೇಶದ ಸ್ವಾಭಿಮಾನ ಮತ್ತು ಧೈರ್ಯವನ್ನು ಹೆಚ್ಚಿಸಿದೆ ಎಂದಿದ್ದಾರೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು, ಅವರ ಸೌಲಭ್ಯಗಳು ಮತ್ತು ಪೂರಕ ವ್ಯವಸ್ಥೆಯ ಮೇಲೆ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯು ಭಾರತ ದೇಶದ ಭದ್ರತೆಗೆ ಅಗತ್ಯ ಮತ್ತು ಅನಿವಾರ್ಯ ಕ್ರಮವಾಗಿದೆ ಎಂದು ನಾವು ಭಾವಿಸುತ್ತೇವೆ. ರಾಷ್ಟ್ರೀಯ ಸಂಕಷ್ಟದ ಈ…

4 ರಾಜ್ಯಗಳನ್ನು ಗುರಿಯಾಗಿಸಿ ಡ್ರೋನ್ ದಾಳಿಗೆ ಯತ್ನಿಸಿರುವ ಪಾಕಿಸ್ತಾನಕ್ಕೆ ಭಾರತದ ಸೇನೆ ಪ್ರತ್ಯುತ್ತರ

ಜಮ್ಮು: ಉಗ್ರರ ಪೋಷಕ ದೇಶಬ್ ಪಾಕಿಸ್ತಾನ ಮತ್ತೆ ತನ್ನ ಕಿತಾಪತಿ ಮಿಂದುವರಿಸಿದೆ. ನಾಲ್ಕು ರಾಜ್ಯಗಳನ್ನು ಗುರಿಯಾಗಿಸಿ ಶುಕ್ರವಾರ ರಾತ್ರಿ ಡ್ರೋನ್ ದಾಳಿಗೆ ಯತ್ನಿಸಿರುವ ಪಾಕಿಸ್ತಾನಕ್ಕೆ ಭಾರತದ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಜಮ್ಮು-ಕಶ್ಮೀರ, ರಾಜಸ್ತಾನ, ಪಂಜಾಬ್ ರಾಜ್ಯಗಳ ಹಲವು ನಗರಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್ ದಾಳಿ ಕೈಗೊಂಡಿದೆ. ಆದರೆ ಭಾರತದ ಸೇನೆ ಪಾಕಿಸ್ತಾನದ ನೂರಾರು ಡ್ರೋನ್ ಗಳನ್ನೂ ಹೊಡೆದುರುಳಿಸಿದೆ. ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣ ಮತ್ತು ಆವಂತಿಪೋರಾ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯನ್ನು ವಿಫಲಗೊಳಿಸಲಾಯಿತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. चार पाकिस्तानी हेलीकाप्टरभारत क़े भुज में बरसा रहे थे बम… भारत ने एक ही हमले में चारों को किया स्वाहा 🔥 भारतीय सेना जिंदाबाद #IndianArmy✊ pic.twitter.com/0IW9IbUAk9 — Deepak…

ಮೇ 11 ರಂದು ಮಂಗಳೂರಿಗೆ ಜೆ.ಪಿ.ನಡ್ಡಾ; ಸುಹಾಸ್ ಶೆಟ್ಟಿ ನಿವಾಸಕ್ಕೂ ಭೇಟಿ

ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ಜೆ.ಪಿ.ನಡ್ಡಾ ಅವರು ಮೇ 11 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಸುಹಾಸ್ ಶೆಟ್ಟಿ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುವ ಜೆ. ಪಿ. ನಡ್ಡಾ ಅವರು ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ ಭೇಟಿ ನೀಡಲಿದ್ದಾರೆ ಎಂದು ನಾಯಕರು ತಿಳಿಸಿದ್ದಾರೆ.

ಯುದ್ಧ ಕಾರ್ಮೋಡ: ದೇಶದ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ 24 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಜಮ್ಮು, ಪಂಜಾಬ್, ಗುಜರಾತ್ ಮತ್ತು ರಾಜಸ್ಥಾನದ ಭಾರತೀಯ ನಗರಗಳ ಮೇಲೆ ಪಾಕಿಸ್ತಾನದ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಉದ್ವಿಗ್ನತೆ ಹೆಚ್ಚಾಯಿತು. ಈ ಹಿನ್ನೆಲೆಯಲ್ಲಿ 24 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಭದ್ರತಾ ಕ್ರಮಗಳನ್ನು ಬಲಪಡಿಸಲು ಸೂಚಿಸಿದೆ. ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಎಲ್ಲಾ ಪ್ರಯಾಣಿಕರು ಸೆಕೆಂಡರಿ ಲ್ಯಾಡರ್ ಪಾಯಿಂಟ್ ಚೆಕ್ (SLPC) ಮೂಲಕ ಹೋಗುತ್ತಾರೆ, ಇದನ್ನು ಸಾಮಾನ್ಯವಾಗಿ ಪ್ರಿ-ಬೋರ್ಡಿಂಗ್ ತಪಾಸಣೆ ಎಂದು ಕರೆಯಲಾಗುತ್ತದೆ. ಎಲ್ಲಾ ವಿಮಾನ ನಿಲ್ದಾಣದ ಟರ್ಮಿನಲ್‌ಗಳಲ್ಲಿ ವಾಹನಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗುತ್ತದೆ. ಪ್ರವೇಶದ ಮೊದಲು ಐಡಿಗಳನ್ನು ಪರಿಶೀಲಿಸಲಾಗುತ್ತದೆ ಮತ್ತು ಪ್ರಯಾಣಿಕರ ಸಾಮಾನುಗಳನ್ನು…

ಪಾಕಿಸ್ತಾನ ವಾಯುಪಡೆಯ F-16 ಮತ್ತು ಎರಡು JF-17 ವಿಮಾನಗಳನ್ನು ಭಾರತ ಹೊಡೆದುರುಳಿಸಿದ್ದೇ ರೋಚಕ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಪಾಕಿಸ್ತಾನ ಜಮ್ಮು ಮತ್ತು ಪಂಜಾಬ್‌ನಲ್ಲಿ ಅನೇಕ ಸ್ಥಳಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದಪಾಕಿಸ್ತಾನಕ್ಕೆ ಭಾರತ ಟಾಕಾ ಉತ್ತರ ನೀಡಿದೆ. ಭಾರತವು ಪಾಕಿಸ್ತಾನ ವಾಯುಪಡೆಯ F-16 ಮತ್ತು ಎರಡು JF-17 ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಗುರುವಾರದಂದು ಪಾಕಿಸ್ತಾನವು ಭಾರತದ ಹಲವಾರು ಸ್ಥಳಗಳನ್ನು ಗುರಿಯಾಗಿಸಲು ಪ್ರಯತ್ನಿಸಿತು. ಆದಾಗ್ಯೂ, ಭಾರತೀಯ ವಾಯು ರಕ್ಷಣಾ ಬಂದೂಕುಗಳು ಒಳನುಗ್ಗುವ ಡ್ರೋನ್‌ಗಳನ್ನು ಹೊಡೆದುರುಳಿಸಿದವು. ಭಾರತವು ತನ್ನ ಪಂಜಾಬ್ ಪ್ರಾಂತ್ಯದೊಳಗೆ ಪಾಕಿಸ್ತಾನದ ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆಯನ್ನು (AWACS) ಹೊಡೆದುರುಳಿಸಿತು ಎಂದು ಮೂಲಗಳು ತಿಳಿಸಿವೆ, ಅದು ಅವರ ಬದಿಯಲ್ಲಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಉಧಂಪುರ ಮತ್ತು ರಾಜಸ್ಥಾನದ ಜೈಸಲ್ಮೇರ್‌ನಲ್ಲಿಯೂ ಡ್ರೋನ್ ದಾಳಿಗಳನ್ನು ವಿಫಲಗೊಳಿಸಲಾಗಿದೆ ಮತ್ತು ಅಖ್ನೂರ್‌ನಲ್ಲಿ ಒಂದು ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ. ಪೂಂಚ್‌ನಲ್ಲಿ…

ಜಮ್ಮು ಕಾಶ್ಮೀರ ಗಡಿಯಲ್ಲಿ ಪಾಕ್ ಕಿತಾಪತಿ: ಶೆಲ್ ದಾಳಿಗೆ ಮಹಿಳೆ ಬಲಿ

ಶ್ರೀನಗರ: ಭಾರತದ ದಾಳಿಗೆ ಬೆಚ್ಚಿ ಬೀಳಿಸಿರುವ ಪಾಕಿಸ್ತಾನ ಇದೀಗ ಸೇಡು ತೀರಿಸಿಕೊಳ್ಳಲು ಇನ್ನಿಲ್ಲದ ತಂತ್ರ ನಡೆಸುತ್ತಿದೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿ ನಡೆಸಿದೆ. ನಾಗರಿಕರನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವಾರು ಗಾಯಗೊಂಡಿದ್ದಾರೆ. VIDEO | Jammu and Kashmir: Morning visuals from Baramulla town. Sirens and numerous explosions were reported in Akhnoor, Samba, Baramulla and Kupwara and several other places as the Indian military carried out a massive night aerial vigil along the border with Pakistan.… pic.twitter.com/JBswXiznYQ — Press Trust of India (@PTI_News) May 9, 2025 ಕೆಲವು ದಿನಗಳಿಂದ ಪಾಕಿಸ್ತಾನವು…

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತಿರುವ ಭಾರತ ಸೇನೆ; ಹಲವೆಡೆ ದಾಳಿ

ಕರಾಚಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಪ್ರೇರಿತ ಉಗ್ರರ ವಿರುದ್ದದ ಭಾರತದ ‘ಆಪರೇಷನ್ ಸಿಂಧೂರ್’ ಬಿರುಸುಗೊಂಡಿದೆ. ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಪಡೆಗಳ ನಡುವೆ ಸಮರ ಸನ್ನಿವೇಶ ಸೃಷ್ಟಿಯಾಗಿದ್ದು, ಭಾರತದ ಮೇಲೆ ದಾಳಿ ನಡೆಸುವ ಗುರುವಾರ ನಡೆದ ಕಾರ್ಯಾಚರಣೆ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 🚨BIG : India’s Sudarshan Chakra S-400 in action in Jalandhar 🔥#IndiaPakistanWar #Jalandhar #S400 pic.twitter.com/2wc7yKksBD — Amitabh Chaudhary (@MithilaWaala) May 8, 2025 ಭಾರತೀಯ ಸೇನಾ ನೆಲೆಯನ್ನೇ ಪಾಕಿಸ್ತಾನ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಕ್ಷಿಪ್ರ ಪ್ರತಿರೋಧ ತಾಳಿದ ಭಾರತವು ಪಾಕ್ ಸೇನೆಯ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಭಾರತಕ್ಕೆ ಪಾಕಿಸ್ತಾನ ಸೇನೆ ಲಗ್ಗೆ ಹಾಕಲು ಮುಂದಾಗುತ್ತಿದ್ದಂತೆಯೇ, ಭಾರತ ಸೇನೆ, ಪಾಕಿಸ್ತಾನಕ್ಕೆ ನುಗ್ಗಿ ಹೊಡೆದಿದೆ. ಇಸ್ಲಾಮಾಬಾದ್, ಕರಾಚಿ, ಲಾಹೋರ್ ನಗರಗಳನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಪಾಕಿಸ್ತಾನ ಅಕ್ಷರಶಃ ಬೆಚ್ಚಿ…

ವಿಕ್ರಾಂತ್ ಪರಾಕ್ರಮ: ಪಾಕಿಸ್ತಾನದ ಕರಾಚಿ ಬಂದರು ಧ್ವಂಸ

ಕರಾಚಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಪ್ರೇರಿತ ಉಗ್ರರ ವಿರುದ್ದದ ಕಾರ್ಯಾಚರಣೆ ಇದೀಗ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸನ್ನಿವೇಶಕ್ಕೆ ತಿರುಗಿದೆ. ಕಳೆದೆರಡು ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಪಡೆಗಳ ನಡುವೆ ಸಮರ ನಡೆಯುತ್ತಿದ್ದು, ಗುರುವಾರ ನಡೆದ ಕಾರ್ಯಾಚರಣೆ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಭಾರತೀಯ ಸೇನಾ ನೆಲೆಯನ್ನೇ ಪಾಕಿಸ್ತಾನ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಕ್ಷಿಪ್ರ ಪ್ರತಿರೋಧ ತಾಳಿದ ಭಾರತವು ಪಾಕ್ ಸೇನೆಯ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ ಮೊದಲ ಟಾರ್ಗೆಟ್ ಆಗಿತ್ತಾದರೂ ಅನಂತರದಲ್ಲಿ ರಾಜೌರಿ, ಪಠಾಣ್‌ಕೋಟ್‌, ಪೂಂಚ್‌, ಅಖ್ನೂರ್‌, ಜೈಸಲ್ಮೇರ್‌, ತಂಗಹಾರ್‌ ಸುತ್ತಮುತ್ತಲ ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆಯು ಡ್ರೋನ್‌ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆ ಅದನ್ನು ವಿಫಲಗೊಳಿಸಿದೆ. ಇದರ ಜೊತೆಗೆ ಭಾರತಕ್ಕೆ ಪಾಕಿಸ್ತಾನ ಸೇನೆ ಲಗ್ಗೆ ಹಾಕಲು ಮುಂದಾಗುತ್ತಿದ್ದಂತೆಯೇ, ಭಾರತ ಸೇನೆ, ಪಾಕಿಸ್ತಾನಕ್ಕೆ ನುಗ್ಗಿ ಹೊಡೆದಿದೆ. ಇಸ್ಲಾಮಾಬಾದ್, ಕರಾಚಿ, ಲಾಹೋರ್…

ಭಾರತ-ಪಾಕ್ ಯುದ್ಧ ಆರಂಭ; ಪಾಕಿಸ್ತಾನದ ಎಲ್ಲಾ ಪ್ರಯತ್ನಗಳಿಗೂ ಬ್ರೇಕ್

ಕರಾಚಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಪ್ರೇರಿತ ಉಗ್ರರ ವಿರುದ್ದದ ಕಾರ್ಯಾಚರಣೆ ಇದೀಗ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸನ್ನಿವೇಶಕ್ಕೆ ತಿರುಗಿದೆ. ಕಳೆದೆರಡು ದಿನಗಲ್ಲಿ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಪಡೆಗಳ ನಡುವೆ ಸಮರ ನಡೆಟೈತ್ತಿದ್ದು, ಗುರುವಾರ ನಡೆದ ಕಾರ್ಯಾಚರಣೆ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಭಾರತೀಯ ಸೇನಾ ನೆಲೆಯನ್ನೇ ಪಾಕಿಸ್ತಾನ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಕ್ಷಿಪ್ರ ಪ್ರತಿರೋಧ ತಾಳಿದ ಭಾರತವು ಪಾಕ್ ಸೇನೆಯ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದ​ ಫೈಟರ್​ ಜೆಟ್​ ಎಫ್‌-16 ಅನ್ನೂ ಭಾರತ ಧ್ವಂಸಗೊಳಿಸಿದೆ. ಜಮ್ಮು ವಾಯುನೆಲೆ ಮೊದಲ ಟಾರ್ಗೆಟ್ ಆಗಿತ್ತಾದರೂ ಅನಂತರದಲ್ಲಿ ರಾಜೌರಿ, ಪಠಾಣ್‌ಕೋಟ್‌, ಪೂಂಚ್‌, ಅಖ್ನೂರ್‌, ಜೈಸಲ್ಮೇರ್‌, ತಂಗಹಾರ್‌ ಸುತ್ತಮುತ್ತಲ ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆಯು ಡ್ರೋನ್‌ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆ ಅದನ್ನು ವಿಫಲಗೊಳಿಸಿದೆ. Direct Hit to Karachi 🎯🤩 pic.twitter.com/zaaGo2aDKU — Nitin Thorat…

ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅನರ್ಹ: ವಿಧಾನಸಭೆಯ ಕಾರ್ಯದರ್ಶಿ ಆದೇಶ

ಬೆಂಗಳೂರು: ಗಣಿ ಅಕ್ರಮದಲ್ಲಿ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಸಿಬಿಐ ಕೋರ್ಟ್‌ ಶಿಕ್ಷೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗಿದ್ದಾರೆ. ಅದೇ ಸಂದರ್ಭದಲ್ಲಿ ಜನಪ್ರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಾರ್ಧನ ರೆಡ್ಡಿ ಅವರ ಶಾಸನ ಸಭೆಯ ಸದಸ್ಯತ್ವ ರದ್ದಾಗಿದೆ. . ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅವರ ಶಿಕ್ಷೆಗೆ ಹೈಕೋರ್ಟ್ ತಾನೇ ನೀಡದ ಹೊರತು, ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.