BMTCಯಲ್ಲಿ ಸಾರಿಗೆ ಆಶಾಕಿರಣ ; 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ.. ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್..

ಬೆಂಗಳೂರು: ಬಿಎಂಟಿಸಿ‌ಯಲ್ಲಿ ಸಾರಿಗೆ ಆಶಾಕಿರಣ ಯೋಜನೆಯಡಿ 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್ ವಿತರಣೆ ಮಾಡಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ಬಿಎಂಟಿಸಿ ತಿಳಿಸಿದೆ. BMTCಯು ಸಿ-ಕ್ಯಾಂಪ್ ಸಹಯೋಗದಲ್ಲಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ 50 ಘಟಕಗಳಲ್ಲಿ ಹಾಗೂ 4 ಕಾರ್ಯಾಗಾರಗಳಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಿದ್ದು, ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಪಾಸಣೆಗೆ ಒಳಪಡುವ ನೌಕರರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ 50 ಲಕ್ಷ ರೂ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದಾಗಿ ಅಕಾಲಿಕ ಮರಣ ಹೊಂದಿದ ನೌಕರರ ಅವಲಂಬಿತರಿಗೆ 10 ಲಕ್ಷ ರೂ ನೀಡಲಾಗುತ್ತಿದೆ ಎಂದರು. 2024ರ ಫೆಬ್ರವರಿ–2025ರ ಏಪ್ರಿಲ್ ವರೆಗೆ 107…

ಭಾರತೀಯ ಮಹಿಳೆಯರ ಕುಂಕುಮ ಅಳಿಸಿದ್ದ ಪಾಕ್ ಪಾತಕಿಗಳಿಗೆ ‘ಸಿಂಧೂರ ಸ್ಟ್ರೈಕ್’..!

ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. Pakistan pic.twitter.com/XuGFEMYjat — Mossad Commentary (@MOSSADil) May 6, 2025 ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಹಲವು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್ ‘ ಎಂದು ಹೆಸರಿಸಲಾಗಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್ ‘ ಎಂದು ಹೆಸರಿಸಲು ಒಂದು ಕಾರಣವೂ ಇದೆ. ಪಹಲ್ಲಾಮ್ ದಾಳಿ ಸಂದರ್ಭದಲ್ಲಿ ಹಿಂದೂಗಳನ್ನೂ ಹುಡುಕಾಡಿ ಉಗ್ರರು ನರಮೇಧ ನಡೆಸಿದ್ದಾರೆ. ಕೇವಲ ಪುರುಷರನ್ನೇ ಗುಂಡಿಟ್ಟು ಕೊಂಡು ಮಹಿಳೆಯರ ಕುಂಕುಮ ಅಳಿಸಿದ್ದಾರೆ. ಈ ಕಾರಣದಿಂದಲೇ ಪಾಕ್ ಉಗ್ರರನ್ನು ಅಳಿಸಿಹಾಕುವ ಕಾರ್ಯಾಚರಣೆಯನ್ನು ಮೋದಿ ಸರ್ಕಾರ ಆರಂಭಿಸಿದೆ. 🚨 MASSIVE NEWS…

ದಾವಣಗೆರೆ: ರೌಡಿಶೀಟರ್​ ಸಂತೋಷ್​ ಕೊಲೆ ಕೇಸ್: 10 ಮಂದಿ ಆರೋಪಿಗಳು ಕಾಕಿ ಎದುರು ಶರಣು

ದಾವಣಗೆರೆ: ರೌಡಿಶೀಟರ್​ ಸಂತೋಷ್​ ಕುಮಾರ್​ ಹತ್ಯೆ ಪ್ರಕರಣದ 10 ಮಂದಿ ಆರೋಪಿಗಳು ಹೊಳಲ್ಕೆರೆ ಠಾಣೆ ಪೊಲೀಸರ ಎದುರು ಶರಣಾಗಿದ್ದಾರೆ. ಸೋಮವಾರ ದಾವಣಗೆರೆಯ ಸೋಮೇಶ್ವರ ಆಸ್ಪತ್ರೆ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಸಂತೋಷ್​ ಕುಮಾರ್​ನನ್ನು ಆರೋಪಿಗಳು ಹತ್ಯೆಗೈದಿದ್ದರು. ಮೃತ ಸಂತೋಷ್​ ಕುಮಾರ್ ಪತ್ನಿ ಶ್ರುತಿ ದೂರಿನ ಮೇರೆಗೆ 12 ಜನರ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ಈ ನಡುವೆ ಆರೋಪಿಗಳಾದ ಕಾರ್ತಿಕ್, ಚವಳಿ ಸಂತು, ನವೀನ್, ಗುಂಡಪ್ಪ, ಬಸವರಾಜ್, ಹನುಮಂತಪ್ಪ, ಗಿಡ್ಡ ವಿಜಿ, ಶಿವು, ಕಡ್ಡಿ ರಾಘು, ಪ್ರಶಾಂತ್ ಮತ್ತು ಗಣಿ ಸೇರಿದಂತೆ ಎಂಬವರು ಪೊಲೀಸರ ಎದುರು ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗಣಿ ಕೇಸಿನಲ್ಲಿ 7 ವರ್ಷ ಶಿಕ್ಷೆಗೊಳಗಾಗಿರುವ ಜನಾರ್ಧನ ರೆಡ್ಡಿ ಶಾಸಕ ಸ್ಥಾನಕ್ಕೂ ಸಂಚಕಾರ

ಬೆಂಗಳೂರು: ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಮತ್ತೆ ಜೈಲು ಸೇರಿದ್ದಾರೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿಯಾಗು ಶಿಕ್ಷೆಗೆ ಗುರಿಯಾಗಿರುವ ಶಾಸಕ ಜನಾರ್ಧನ ರೆಡ್ಡಿ ಅವರ ಶಾಸಕ ಸ್ಥಾನಕ್ಕೂ ಕಂಟಕ ಎದುರಾಗಿದೆ. 884 ಕೋಟಿ ರೂಪಾಯಿ ಅಕ್ರಮಆರೋಪದಲ್ಲಿ ಸಿಬಿಐ ಕೋರ್ಟ್‌, ಮಾಜಿ ಸಚಿವರೂ ಆದ ಜನಾರ್ಧನ ರೆಡ್ಡಿಯನ್ನುದೋಷಿ ಎಂದು ಮಂಗಳವಾರ ತೀರ್ಪು ನೀಡಿದೆ. 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದ್ದು ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜನಾರ್ದನ ರೆಡ್ಡಿ ಅವರು ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾರೆ. ಈ ಬಗ್ಗೆ ರೆಡ್ಡಿ ಪರ ವಕೀಲರು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದ್ದಾರೆ. ಸಿಬಿಐ ಈ ಮನವಿಯನ್ನು ತಿರಸ್ಕರಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಈ ನಡುವೆ, ಸಿಬಿಐ ಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಜನಾರ್ದನ ರೆಡ್ಡಿ ಅವರ ಶಾಸಕ…

ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. Pakistan pic.twitter.com/XuGFEMYjat — Mossad Commentary (@MOSSADil) May 6, 2025 ಪಹಲ್ಲಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಆತಂಕ ಕವಿದಿದೆ. ಪಾಕಿಸ್ತಾನಕ್ಕೆ ಹಲವು ರೀತಿಯಲ್ಲಿ ಹೊಡೆತ ನೀಡಿರುವ ಭಾರತ ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದೆ. ‘ಆಪರೇಷನ್ ಸಿಂಧೂರ್ ‘: ವರ್ಷಗಳ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದ ಭಾರತ ಈ ಬಾರಿ ಅದಕ್ಕಿಂತಲೂ ಭೀಕರ ಕಾರ್ಯಾಚರಣೆ ನಡೆಸಿದೆ. ಕೋಟ್ಲಿ,…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ; ಯು.ಟಿ.ಖಾದರ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ವಿಚಾರದಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ಪೊಲೀಸರು ತನಿಖೆ ಆರಂಭಿಸುವ ಮುನ್ನವೆ ಫಾಜಿಲ್ ಕುಟುಂಬದವರಿಗೆ ಕ್ಲೀನ್ ಚಿಟ್ ಕೊಡಲು ಯು.ಟಿ.ಖಾದರ್ ಅವರು ಏನು ಗೃಹ ಸಚಿವರೇ..?? ಈ ಹಿಂದೆ ಫಾಜಿಲ್ ಮೃತನಾದ ಸಂದರ್ಭದಲ್ಲಿ ಇದೇ ಯು.ಟಿ.ಖಾದರ್ ಅವರು ಸಿದ್ದರಾಮಯ್ಯ ಅವರಿಂದ ಫಾಜಿಲ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಕೊಡಿಸಿದ್ದರು. ಬಹುಶಃ ಆ ಹಣದಿಂದಲೇ ಫಾಜಿಲ್ ಕುಟುಂಬ ಸುಹಾಸ್ ಶೆಟ್ಟಿ… pic.twitter.com/30McfqCE6t — BJP Karnataka (@BJP4Karnataka) May 4, 2025 ಪೊಲೀಸರು ತನಿಖೆ ಆರಂಭಿಸುವ ಮುನ್ನವೆ ಫಾಜಿಲ್ ಕುಟುಂಬದವರಿಗೆ ಕ್ಲೀನ್ ಚಿಟ್ ಕೊಡಲು ಯು.ಟಿ.ಖಾದರ್ ಅವರು ಏನು ಗೃಹ ಸಚಿವರೇ..? ಎಂದು ಬಿಜೆಪಿ ಪ್ರಶ್ನಿಸಿದೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘ಈ ಹಿಂದೆ ಫಾಜಿಲ್ ಮೃತನಾದ ಸಂದರ್ಭದಲ್ಲಿ ಇದೇ ಯು.ಟಿ.ಖಾದರ್ ಅವರು ಸಿದ್ದರಾಮಯ್ಯ…

ಹತ್ಯೆಗೀಡಾದವರ ಮನೆಯವರಿಗಿಲ್ಲ ಸಾಂತ್ವನ, ಮುಸ್ಲಿಂ ನಿಯೋಗಕ್ಕೆ ಮಣಿಯಿತೇ ಸರ್ಕಾರ?

ಬೆಂಗಳೂರು: ಮಂಗಳೂರಿನಲ್ಲಿ ಮತಾಂಧರಿಂದ ಹತ್ಯೆಯಾದ ಸುಹಾಸ್ ಶೆಟ್ಟಿಯವರಿಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ಮೊದಲೇ ತಿಳಿದಿತ್ತು. ಆದರೆ ಜೀವ ರಕ್ಷಣೆಗೆ ಅಗತ್ಯ ವ್ಯವಸ್ಥೆ ಕೂಡಾ ಕಲ್ಪಿಸಲಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆ. ಇಷ್ಟು ಭೀಕರ ಹತ್ಯೆ ಬಳಿಕ ಮತ್ತಿಬ್ಬರು ಹಿಂದೂ ನಾಯಕರಿಗೆ ಜೀವಹತ್ಯೆಯ ಬೆದರಿಕೆ ಒಡ್ಡಲಾಗಿದ್ದರೂ ಪೊಲೀಸ್ ಇಲಾಖೆ ಆ ದುರುಳರನ್ನು ಹಿಡಿಯುವಲ್ಲಿ ವಿಫಲವಾಗಿದೆ ಎಂದು ದೂರಿದರು. ಹತ್ಯೆಗೀಡಾದವರ ಮನೆಗೆ ಹೋಗಿ ತಂದೆ ತಾಯಿಗಳಿಗೆ ಧೈರ್ಯ ತುಂಬುವುದು ಬಿಟ್ಟು ಹತ್ಯೆಗೈದವರ ಪರವಾಗಿದ್ದ ಮುಸ್ಲಿಂ ನಿಯೋಗದೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. ಮಂಗಳೂರಿನಲ್ಲಿ ಮತಾಂಧರಿಂದ ಹತ್ಯೆಯಾದ ಸುಹಾಸ್ ಶೆಟ್ಟಿಯವರಿಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ಮೊದಲೇ ತಿಳಿದಿತ್ತು. ಆದರೆ ಜೀವ ರಕ್ಷಣೆಗೆ ಅಗತ್ಯ ವ್ಯವಸ್ಥೆ ಕೂಡಾ…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಮಂಗಳೂರಿನ ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂಬ ಬಿಜೆಪಿ ನಾಯಕರ ಆಗ್ರಹ ಕುರಿತಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪರಮೇಶ್ವರ್, ನಮ್ಮ ಪೋಲೀಸರು ತಮ್ಮ ಕೆಲಸವನ್ನು ಚೆನ್ನಾಗಿ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಪ್ರಕರಣ ಈ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿರುವುದರಿಂದ ಈ ಹಂತದಲ್ಲಿ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುವ ಅಗತ್ಯವಿಲ್ಲ ಎಂದರು.

ಮತ್ತೆರಡು ಅಣೆಕಟ್ಟೆಗಳ ನೀರು ಸ್ಥಗಿತ: ಪಾಕಿಸ್ತಾನಕ್ಕೆ ಭಾರತದಿಂದ ಮತ್ತೆ ಶಾಕ್

ನವದೆಹಲಿ: ಉಗ್ರಪೋಷಿತ ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಹೊಡೆತ ನೀಡಿದೆ. ಪಹಲ್ಗಾಮ್ ಉಗ್ರ ದಾಳಿ ಬಳಿಕ ಸಿಂಧೂ ನದಿಯ ನೀರು ಸ್ಥಗಿತ ಮಾಡಿರುವ ಭಾರತ ಇದೀಗ ಬಾಗ್ಲಿಹಾರ್ ಅಣೆಕಟ್ಟು ಸೇರಿದಂತೆ 2 ಅಣೆಕಟ್ಟುಗಳ ನೀರಿನ ಹರಿವನ್ನೂ ನಿಲ್ಲಿಸಿದೆ. ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಸ್ಥಗಿತಗೊಳಿಸಿದೆ. ಜೊತೆಗೆ ಝೀಲಂ ನದಿಯ ಕಿಶನ್‌ಗಂಗಾ ಅಣೆಕಟ್ಟಿನಲ್ಲೂ ನೀರಿನ ಹರಿವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸುಹಾಸ್ ಶೆಟ್ಟಿ ಹಂತಕರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ BSY ಆಗ್ರಹ

ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಆಘಾತವನ್ನುಂಟು ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ದುಷ್ಕರ್ಮಿಗಳಿಗೆ ಕಾನೂನಿನ ಕಿಂಚತ್ ಭಯವೂ ಇಲ್ಲದಂತಾಗಿದ್ದು, ಇಂತಹ ಅಮಾನುಷ ಅಪರಾಧಗಳು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆಗೆ ಕನ್ನಡಿ ಹಿಡಿದಿದೆ. ರಾಜ್ಯ ಸರ್ಕಾರ ಕೂಡಲೇ ಅಪರಾಧಿಗಳನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಆಘಾತವನ್ನುಂಟು ಮಾಡಿದೆ. ದುಷ್ಕರ್ಮಿಗಳಿಗೆ ಕಾನೂನಿನ ಕಿಂಚತ್ ಭಯವೂ ಇಲ್ಲದಂತಾಗಿದ್ದು, ಇಂತಹ ಅಮಾನುಷ ಅಪರಾಧಗಳು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆಗೆ… — B.S.Yediyurappa (@BSYBJP) May 2, 2025