ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಹಿಂದೂ ಸಮುದಾಯದಲ್ಲಿ ಅವರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸುಹಾಸ್ ಶೆಟ್ಟಿ ಅವರ ಕ್ರೂರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವರ್ಗಾಯಿಸಿ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ನಾವು ಬಲವಾಗಿ ಒತ್ತಾಯಿಸುತ್ತೇವೆ ಎಂದಿದ್ದಾರೆ. Since the Congress government under Chief Minister @siddaramaiah assumed office in Karnataka, there has been growing concern among the Hindu community regarding their safety. We strongly urge that the investigation into the brutal killing of Suhas Shetty be transferred to the……
Month: May 2025
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಭಾರತದಿಂದ ಗುಂಡಿನ ಉತ್ತರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಾಡಿಯಲ್ಲಿ ಭಾರತ-ಪಾಕ್ ಸೇನೆಯ ನಡುವೆ ಗುಂಡಿನ ಚಕಮಕಿಯಾಗಿದೆ. ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ೯ನೇ ದಿನವೂ ಭಾರತ ಪಾಕ್ ಗಡಿಪ್ರದೇಶ ಗುಂಡಿನ ಕಾಳಗಕ್ಕೆ ಸಾಕ್ಷಿಯಾಗಿದೆ. ಕುಪ್ವಾರಾ, ಉರಿ ಮತ್ತು ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಪ್ರತಿದಾಳಿ ನಡೆಸಿ ಉತ್ತರ ನೀಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕ್ ಜೊತೆ ಯುದ್ಧಕ್ಕೆ ಸಿದ್ದ ಎಂದ ಜಮೀರ್ ಅಹ್ಮದ್; ‘ನಡೀರಿ ಹೋಗಿ ಬಿಡೋಣ’ ಎಂದ ಸಚಿವ
ಬೆಂಗಳೂರು: ಪಾಕಿಸ್ತಾನ ಎಂದಿಗೂ ನಮ್ಮ ಶತ್ರು. ಕೇಂದ್ರ ಸರ್ಕಾರ ಅವಕಾಶ ಕೊಟ್ಟರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧ ಎಂದು ಸಿದ್ದರಾಮಯ್ಯ ಆಪ್ತ, ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ. #WATCH | Karnataka Minister BZ Zameer Ahmed Khan says, "…We are Indians, we are Hindustanis. Pakistan never had any relations with us. Pakistan has always been our enemy…If Modi, Amit Shah and the Central government let me, I am ready to go to battle. (02.05.2025) pic.twitter.com/HdYiZcYBIC — ANI (@ANI) May 3, 2025 ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಪಾಕಿಸ್ತಾನ ನಡುವಿನ ಬಿಗುವಿನ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಸಿದರು.…
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಬಿಜೆಪಿ ನಾಯಕರ ನಡೆಗೆ ಸಿಎಂ ಆಕ್ಷೇಪ
ಬೆಂಗಳೂರು: ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಕುರಿತಂತೆ ಬಿಜೆಪಿ ನಾಯಕರ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ಸದಾಕಾಲ ಸಾವಿನಲ್ಲಿ ರಾಜಕಾರಣ ಮಾಡುತ್ತಾರೆ. ಇಂದು ಅವರು ಮಂಗಳೂರಿಗೆ ಹೊರಟಿದ್ದಾರೆ, ಕಳೆದ ವಾರ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ 26 ಜನರು ಸಾವಿಗೀಡಾದರು, ಅಲ್ಲಿಗೆ ಇವರು ಹೋಗಿದ್ರಾ? ಪ್ರಧಾನಿಗಳು ಹೋದ್ರಾ? ಯಾಕೆ ಅದು ಕೂಡ ಭದ್ರತಾ ವೈಫಲ್ಯವಲ್ಲವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಜೆಪಿಯವರು ಸದಾಕಾಲ ಸಾವಿನಲ್ಲಿ ರಾಜಕಾರಣ ಮಾಡುತ್ತಾರೆ. ಇಂದು ಅವರು ಮಂಗಳೂರಿಗೆ ಹೊರಟಿದ್ದಾರೆ, ಕಳೆದ ವಾರ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ 26 ಜನರು ಸಾವಿಗೀಡಾದರು, ಅಲ್ಲಿಗೆ ಇವರು ಹೋಗಿದ್ರಾ? ಪ್ರಧಾನಿಗಳು ಹೋದ್ರಾ? ಯಾಕೆ ಅದು ಕೂಡ ಭದ್ರತಾ ವೈಫಲ್ಯವಲ್ಲವಾ? #Mangaluru pic.twitter.com/ELyWSrx3IC — Siddaramaiah (@siddaramaiah) May 2, 2025
ಯತ್ನಾಳ್ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ್ ಪಾಟೀಲ್; ಶಾಸಕ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು: ಭರ್ಜರಿ ರಾಜಕೀಯ ವಿದ್ಯಮಾನಗಳ ನಡುವೆ ಸಚಿವ ಶಿವಾನಂದ್ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ. ತನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿರುವ ಹಿನ್ನೆಲೆಯಲ್ಲಿ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಶಿವಾನಂದ್ ಪಾಟೀಲ್ ತಿಳಿಸಿದ್ದಾರೆ. ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ತಮ್ಮ ರಾಜೀನಾಮೆಯನ್ನೂ ಅಂಗೀಕರಿಸುವಂತೆ…
ಸುಹಾಸ್ ಕೊಲೆ ಮಾಡಿದವರು ಇವರೇ? ಅಶೋಕ್ ಹಂಚಿಕೊಂಡ ವೀಡಿಯೋದಲ್ಲಿ ಶಂಕಿತರು?
ಮಂಗಳೂರು: ಮಂಗಳೂರು ಹೊರವಲಯದಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಿದವರು ಯಾರು? ಎಂಬ ಚರ್ಚೆ ನಡೆದಿದೆ. ಹಂತಕರಿಗಾಗಿ ಪೊಲೀಸರು ಬೇಟೆ ಕೈಗೊಂಡಿರುವಾಗಲೇ ಕೊಲೆ ಘಟನಾ ಸ್ಥಳದ ವೀಡಿಯೊವನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಂಚಿಕೊಂಡಿದ್ದಾರೆ. ಹಿಂದೂ ಕಾರ್ಯಕರ್ಯ ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿರುವ ಆರ್.ಅಶೋಕ್, ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿ ರಾಜ್ಯ ಹಿಂದೂಗಳಿಗೆ ಸುರಕ್ಷಿತವೇ ಎಂದು ಪ್ರಶ್ನಿಸಿದ್ದಾರೆ. ಈ ಪೋಸ್ಟ್’ನಲ್ಲಿ ಎರಡು ವೀಡಿಯೋಗಳನ್ನೂ ಹಂಚಿಕೊಂಡಿದ್ದಾರೆ. ಒಂದು ವೀಡಿಯೋದಲ್ಲಿ ಭಯಾನಕ ದಾಳಿಯ ಸನ್ನಿವೇಶ ಕಂಡು ಬಂದರೆ, ಮತ್ತೊಂದು ವೀಡಿಯೋದಲ್ಲಿ ಯುವಕರ ಗುಂಪು ತರಾತುರಿಯಲ್ಲಿ ನಿರ್ಗಮಿಸುವ ದೃಶ್ಯ ಇದೆ. ಯುವಕರನ್ನು ಸ್ಥಳದಿಂದ ಅತ್ಯಂತ ಸುರಕ್ಷಿತವಾಗಿ ಕಳುಹಿಸಿಕೊಡುವ ದೃಶ್ಯವೂ ಇದೆ. Karnataka Files! Karnataka, under the Congress, is no place for Hindus. Just like in Kashmir and in West Bengal’s Murshidabad,…
‘ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ’; ಸುಹಾಸ್ ಹತ್ಯೆಗೆ ಶಾಸಕ ಸಿ.ಟಿ.ರವಿ ಖಂಡನೆ
ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಘಟನೆಯನ್ನು ಬಿಜೆಪಿ ಶಾಸಕರು ಖಂಡಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಇದೇ ವೇಳೆ, ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗುಡುಗಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಸಿ.ಟಿ.ರವಿ, ‘ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ. ಮೊನ್ನೆ “ಪಾಕಿಸ್ತಾನ್ ಜಿಂದಾಬಾದ್” ಎಂದವನ ಹತ್ಯೆ. ಇಂದು ಭಾರತ ಮಾತೆಗೆ ತನ್ನ ಬದುಕನ್ನು ಮುಡಿಪಿಟ್ಟವನ ಹತ್ಯೆ. ಕಾನೂನಿನ ದೃಷ್ಟಿಯಲ್ಲಿ ರಾಷ್ಟ್ರ ಭಕ್ತನೂ -ದೇಶದ್ರೋಹಿಯೂ ಸಮಾನರೇ? ಹೌದೆಂದಾದರೆ ಆ ಕಾನೂನನ್ನೇ ಬದಲಾಯಿಸಬೇಕು’ ಎಂದು ಪ್ರತಿಪಾದಿಸಿದ್ದಾರೆ. ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ. ಮೊನ್ನೆ “ಪಾಕಿಸ್ತಾನ್ ಜಿಂದಾಬಾದ್” ಎಂದವನ ಹತ್ಯೆ. ಇಂದು ಭಾರತ ಮಾತೆಗೆ ತನ್ನ ಬದುಕನ್ನು ಮುಡಿಪಿಟ್ಟವನ ಹತ್ಯೆ. ಕಾನೂನಿನ ದೃಷ್ಟಿಯಲ್ಲಿ ರಾಷ್ಟ್ರ ಭಕ್ತನೂ -ದೇಶದ್ರೋಹಿಯೂ ಸಮಾನರೇ?…
ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಸುಹಾಸ್ ಕೊಲೆ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ ಎಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದವರು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ.ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ.@siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. 1/2 pic.twitter.com/vRJpiElUid — Sunil Kumar Karkala (@karkalasunil) May 1, 2025
ಅಂದು ಪ್ರವೀಣ್.. ಇದೀಗ ಸುಹಾಸ್.. ಹಿಂದೂ ಕಾರ್ಯಕರ್ತನ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಬಂದ್
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮುಖಂಡರು ದಕ್ಷಿಣ ಕನ್ನಡ ಬಂದ್’ಗೆ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿರುವ ಹಿಂದೂ ಸಂಘಟಮನೆಗಳ ಮುಖಂಡರು, ಇದು ಮತಾಂಧರ, ಭಯೋತ್ಪಾದಕರ ಕೃತ್ಯ ಎಂದು ಆರೋಪಿಸಿದ್ದಾರೆ. ಈ ನಡುವೆ ಸುಹಾಸ್ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದ್ ಆಚರಿಸುವಂತೆ ವಿಶ್ವ ಹಿಂದೂ ಪರಿಷತ್ ಮುಖಂಡರು ಕರೆ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ…
ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕಗ್ಗೊಲೆ: ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ
ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆ ನಡೆದಿದ್ದು, ಕರಾವಳಿ ಜಿಲ್ಲೆ ಬೆಚ್ಚಿ ಬಿದ್ದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಬಿಜೆಪಿ ಕಾರ್ಯಕರ್ತ ನೆಟ್ಟಾರು ನೆತ್ತರು ಹತ್ಯೆ ನಡೆದಿತ್ತು. ಇದೀಗ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕೊಲೆ ನಡೆದಿದೆ. ಸುರತ್ಕಲ್‌ನಲ್ಲಿ 2022 ರಲ್ಲಿ ನಡೆಡಿದ್ದ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು. ಬಜರಂಗದಳದ ಕಾರ್ಯಕರ್ತರಾಗಿದ್ದ ಸುಹಾಸ್ ಶೆಟ್ಟಿ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು ಎಂದು ವಿಶ್ವಹಿಂದೂ ಪರಿಷತ್ ಮುಖಂಡರು ತಿಳಿಸಿದ್ದಾರೆ. ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು. ಸುಹಾಸ್ ಶೆಟ್ಟಿ…
