ಇಂಡಿಯನ್ ಪ್ರೀಮಿಯರ್ ಲೀಗ್ನ ಸೋಮವಾರದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ಆಟಗಾರರು ರಣಾಂಗಣದಲ್ಲೇ ಜಗಳಕ್ಕಿಳಿದ ಪ್ರಸಂಗ ಗೊಂದಲ ಸೃಷ್ಟಿಸಿತು. Lit Abhishek Sharma 🗿🥵🔥 pic.twitter.com/zyBhiQxByJ — Antara (@AntaraonX) May 19, 2025 ಲಕ್ನೋದಲ್ಲಿನ ಏಕಾನ ಸ್ಡೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಮಹತ್ವದ ಪಂದ್ಯ ನಡೆಯಿತು. ಸನ್ರೈಸರ್ಸ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಔಟಾದ ಸಂದರ್ಭದಲ್ಲಿ ಲಕ್ನೋ ಸ್ಪಿನ್ನರ್ ದಿಗ್ವೇಶ್ ರಾಥಿ, ತಮಾಷೆಯ ಮಾತುಗಳಿಂದ ಕೆಣಕಿದರು. ‘ಹೋಯ್ತಾ ಇರು’ ಎಂಬ ದಿಗ್ವೇಶ್ ರಾಥಿ ಅವರ ಕೈ ಸನ್ನೆ ಅಭಿಷೇಕ್ ಶರ್ಮಾ ಅವರನ್ನು ಕೆರಳಿಸಿತು. ಈ ಆಸಂದರ್ಭದಲ್ಲಿ ಇಬ್ಬರ ನಡುವೆ ಜಗಳ ಏರ್ಪಟ್ಟಿತು. ಇಬ್ಬರ ಜಗಳವು ತಾರಕ್ಕೇರುತ್ತಿದ್ದಂತೆ ಅಂಪೈರ್ ಹಾಗೂ ಇತರ ಆಟಗಾರರು ಮಧ್ಯ ಪ್ರವೇಶಿಸಿ ಕುಪಿತ ಇಬ್ಬರು ಆಟಗಾರರನ್ನೂ ದೂರ ಸರಿಯುವಂತೆ…
Month: May 2025
ರೋಚಕ ಘಟ್ಟದಲ್ಲಿ ಐಪಿಎಲ್: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ LSG
ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಸೋಮವಾರ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಸೋಲುಂಡ ಲಕ್ನೋ ಸೂಪರ್ ಜೈಂಟ್ಸ್ (LSG) ಈ ಬಾರಿಯ ಐಪಿಎಲ್ ಕದನದಿಂದ ಹೊರಬಿದ್ದಿದೆ. When Abhishek Sharma decided to make the ball fly 🚀 🎥 A glimpse of his onslaught during a blistering 59(20) 🔥 Updates ▶ https://t.co/GNnZh911Xr#TATAIPL | #LSGvSRH | @SunRisers pic.twitter.com/92w8j21Niw — IndianPremierLeague (@IPL) May 19, 2025 ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೋಮವಾರದ ಪಂದ್ಯದಲ್ಲಿನ ಗೆಲುವು ಅನಿವಾರ್ಯವಾಗಿತ್ತು. ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ಬರೋಬ್ಬರಿ…
ಅನಾಹುತಗಳಿಗೆ ಸರ್ಕಾರದ ಬೇಜವಬ್ದಾರಿತನ ಕಾರಣ: ಆರ್.ಅಶೋಕ್ ಆಕ್ರೋಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ…
ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ. ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು. ಬಹುತೇಕ ಕಡೆ ಸರ್ಕಾರದ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಮಳೆ ನೀರು ಸುಗಮವಾಗಿ ಹರಿದು ಹೋಗದೆ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೇವಲ ಒಂದೆರಡು ದಿನಗಳ…
ಬೆಂಗಳೂರಿನಲ್ಲಿ ಭಾರೀ ಮಳೆ; ಜನ ಜೀವನ ಏರುಪೇರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ. ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು. ಬಹುತೇಕ ಕಡೆ ಸರ್ಕಾರದ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಮಳೆ ನೀರು ಸುಗಮವಾಗಿ ಹರಿದು ಹೋಗದೆ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೇವಲ ಒಂದೆರಡು ದಿನಗಳ…
ಕ್ರಿಕೆಟ್’ನಲ್ಲೂ ಪಾಕಿಸ್ತಾನಕ್ಕೆ ಹೊಡೆತ ಕೊಟ್ಟ ಭಾರತ; ಏಷ್ಯಾಕಪ್ ಟೂರ್ನಿಯಿಂದ ದೂರ?
ನವದೆಹಲಿ: ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಬರುವ ಏಷ್ಯಾಕಪ್ ಟೂರ್ನಿಯಿಂದ ಟೀಮ್ ಇಂಡಿಯಾ ಹೊರಗುಳಿಯಲಿದೆ. ಈ ಕುರಿತಂತೆ ಏಷ್ಯಾನ್ ಕ್ರಿಕೆಟ್ ಕೌನ್ಸಿಲ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪತ್ರ ಬರೆದಿದೆ. ಭಾರತ-ಪಾಕಿಸ್ತಾನ ನಡುವಿನ ಘರ್ಷಣೆ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಡೆಸುವ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಶ್ರೀಲಂಕಾದಲ್ಲಿ ಮಹಿಳಾ ತಂಡಗಳ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಗೂ ಭಾರತ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ. ಏಷ್ಯಾನ್ ಕ್ರಿಕೆಟ್ ಕೌನ್ಸಿಲ್ಗೆ ಪಾಕಿಸ್ತಾನದ ಸಚಿವರು ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಎಸಿಸಿ ಆಯೋಜಿಸುವ ಪಂದ್ಯಾವಳಿಯಲ್ಲಿ ಭಾರತ ತಂಡ ಆಡಲು ಸಾಧ್ಯವಿಲ್ಲ ಎಂದು ಬಿಸಿಸಿಐ ಪ್ರತಿಪಾದಿಸಿದೆ. ಹಾಗಾಗಿ ಈ ವರ್ಷದ ಏಷ್ಯಾಕಪ್ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಭಾಗವಹಿಸಲ್ಲ. ಈ ನಡುವೆ, ಏಷ್ಯಾಕಪ್ ಟೂರ್ನಿಯ ಪ್ರಾಯೋಜಕತ್ವದಲ್ಲಿ ಭಾರತದ್ದೇ ಬಹುಪಾಲು. ಅಷ್ಟೇ ಅಲ್ಲ, ಈ ಬಾರಿಯ…
ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು
ನವದೆಹಲಿ: ಒಂದು ಅಧ್ಯಯನದ ಪ್ರಕಾರ, ಹೆಚ್ಚಿನ ಮಧ್ಯವಯಸ್ಸಿನ ಒತ್ತಡವು ಋತುಬಂಧದ ನಂತರ ಮಹಿಳೆಯರಲ್ಲಿ ಆಲ್ಝೈಮರ್ನ (Alzheimer) ಕಾಯಿಲೆಯ ಸಾಧ್ಯತೆಯನ್ನು ಹೆಚ್ಚಿಸಬಹುದು. ಅಮೆರಿಕದ ಸ್ಯಾನ್ ಆಂಟೋನಿಯೊದಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದ ಆರೋಗ್ಯ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ಮಧ್ಯವಯಸ್ಸಿನ ಮಹಿಳೆಯರಲ್ಲಿ (ಆಲ್ಝೈಮರ್ನ ಲಕ್ಷಣವಾಗಿದೆ – ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ) ಒತ್ತಡದ ಹಾರ್ಮೋನ್ ಕಾರ್ಟಿಸೋಲ್ನ ಹೆಚ್ಚಿನ ಮಟ್ಟವು ಅಮಿಲಾಯ್ಡ್ ಶೇಖರಣೆಯನ್ನು ಹೆಚ್ಚಿಸುತ್ತದೆ ಎಂಬ ಸಂಗತಿಯತ್ತ ಬೆಳಕು ಚೆಲ್ಲಿದ್ದಾರೆ. “ಬಯೋಮಾರ್ಕರ್‌ಗಳು ಪತ್ತೆಹಚ್ಚಬಹುದಾದರೂ ಅರಿವಿನ ದುರ್ಬಲತೆ ಇಲ್ಲದಿರುವಾಗ ಆರಂಭಿಕ ಅಪಾಯಕಾರಿ ಅಂಶಗಳನ್ನು ಗುರುತಿಸುವ ಪ್ರಾಮುಖ್ಯತೆಯನ್ನು ಫಲಿತಾಂಶಗಳು ಎತ್ತಿ ತೋರಿಸುತ್ತವೆ” ಎಂದು ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಅರಾಶ್ ಸಲಾರ್ಡಿನಿ ಹೇಳಿದ್ದಾರೆ. ಆಲ್ಝೈಮರ್ಸ್ & ಡಿಮೆನ್ಷಿಯಾ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ, ತಂಡವು ಯುಎಸ್‌ನ ಮ್ಯಾಸಚೂಸೆಟ್ಸ್‌ನಲ್ಲಿ 305 ಅರಿವಿನ ದುರ್ಬಲತೆಯಿಲ್ಲದ ಭಾಗವಹಿಸುವವರ ಡೇಟಾವನ್ನು ವಿಶ್ಲೇಷಿಸಿದೆ. 15 ವರ್ಷಗಳ ಅವಧಿಯ ಆರಂಭದಲ್ಲಿ ಮಧ್ಯವಯಸ್ಸಿನ ಕಾರ್ಟಿಸೋಲ್ ಮಟ್ಟವನ್ನು ಕೊನೆಯಲ್ಲಿ ರೋಗ ಸೂಚಕಗಳೊಂದಿಗೆ ಹೋಲಿಸುವ ಮೂಲಕ,…
ಸುಂಕ ರಾದ್ದಾಂತ: ಅಬಕಾರಿ ಉದ್ಯಮವನ್ನು ಸಂಕಷ್ಟಕ್ಕೆ ದೂಡಿತೇ ಸರ್ಕಾರ?
ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ. ಎಷ್ಟು ಸಲ ಹೆಚ್ಚಳ? ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಎರಡೂ –…
ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ISRO ತನ್ನ 101 ನೇ ಮಿಷನ್ ಆಗಿ ಪಿಎಸ್‌ಎಲ್‌ವಿ-ಸಿ61 ಉಡಾವಣೆ ಪ್ರಯತ್ನ ಮಾಡಿದೆ. ಆದರೆ ಈ ಪ್ರಯತ್ನ ವಿಫಲವಾಗಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C61) ರಾಕೆಟ್ ಮೂಲಕ ಇಸ್ರೋ ಭೂ ವೀಕ್ಷಣಾ ಉಪಗ್ರಹ EOS-09 ಅನ್ನು ಬಾಹ್ಯಾಕಾಶಕ್ಕೆ ಉಡಾಯಿಸಿತು. ಇದಾದ ನಂತರ, ಇಸ್ರೋ ಈ ಕಾರ್ಯಾಚರಣೆ ಪೂರ್ಣಗೊಂಡಿಲ್ಲ ಎಂದು ಹೇಳಲಾಗಿದೆ. ಉಡಾವಣೆಯಾದ ಇಸ್ರೋದ 101 ನೇ ಬಾಹ್ಯಾಕಾಶ ಯಾನವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಫಲವಾಗಿದೆ ಎಂದು ವಿ. ನಾರಾಯಣನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
ಹೈದರಾಬಾದ್ನ ಚಾರ್ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು
ಹೈದರಾಬಾದ್: ಹೈದರಾಬಾದ್ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಬೆಂಕಿ ಈ ಘಟನೆಸಂಭವಿಸಿದ್ದು11 ಅಗ್ನಿಶಾಮಕ ವಾಹನಗಳು ಸ್ಥಬೆಂಕಿ ನಂದಿಸಲು ಹರಸಾಹಸ ನಡೆಸಿವೆ. ನಾಲ್ವರು ಮಕ್ಕಳು ಸೇರಿ 17 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. A major fire broke out in a residence behind Ikram Jewellers near Gulzar Houz, Charminar. Several victims, including children, were affected. Emergency services and locals responded swiftly, shifting victims to nearby hospitals. Rescue operations are ongoing.#Hyderabad pic.twitter.com/sw1x7yJh45 — Habeeb Masood Al-Aidroos (@habeeb_masood) May 18, 2025 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
