ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿರುವ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ. ಕಾಲ್ತುಳಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲದವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಸಂಭವಿಸಿದೆ. ಇಂತಹ ದೊಡ್ಡ ದುರಂತ ಸಂಭವಿಸಬಾರದಿತ್ತು. ಇದರಿಂದ ತುಂಬ ದುಃಖವಾಗುತ್ತಿದೆ ಎಂದರು. ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಿಎಂ ಪ್ರಕಟಿಸಿದರು. ಈ ಘಟನೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದರು.
Day: June 4, 2025
RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು
ಬೆಂಗಳೂರು: ಐಪಿಎಲ್ ನಲ್ಲಿ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಆದ ಸಂಭ್ರಮ ಒಂದೆಡೆಯಾದರೆ, ಅದೇ ಸಂಭ್ರಮ ಇಡೀ ರಾಜ್ಯವನ್ನು ಸೂತಕದ ಛಾಯೆಗೆ ತಳ್ಳಿದೆ. ಐಪಿಎಲ್ ಗೆದ್ದ RCB ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ಏವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಏರ್ಪಾಡಾಗಿತ್ತು. ಈ ಸಂಭ್ರಮಾಚರಣೆಯನ್ನು ಸಾಕ್ಷೀಕರಿಸಲು ಭಾರೀ ಸಂಖ್ಯೆಯಲ್ಲಿ RCB ಅಭಿಮಾನಿಗಳು ಜಮಾಯಿಸಿದ್ದರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಆ ವೇಳೆ ಕಾಲ್ತುಳಿತ ಸಂಭವಿಸಿ ಭಾರೀ ಸಾವು-ನೋವು ಉಂಟಾಗಿದೆ. ಕಾಲ್ತುಳಿತದಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. Humanity Lost today 💔Johns, mufa and Chokli PR won’t show you this. Shame on RCB for celebrating even after the official news of 11 people dead.#chinnaswamystadium #stampede #RCB#chinnaswamystadium #stampede #RCB pic.twitter.com/wG6Xp2t3k7 — 𝐧𝐨𝐛𝐛𝐢𝐞𝐬𝐪𝐮𝐞² (@RibelRana07)…
ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಅಸ್ವಸ್ಥರಾಗಿರುವ ಅನೇಕರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಗಳಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಗಾಯಾಳುಗಳ ಕ್ಷೇಮ ವಿಚಾರಿಸಿದರು. ಕಾಲ್ತುಳಿತ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿಜಯೇಂದ್ರ, ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದರು. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ ಎಂದು ದುಃಖ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ…
ಆರ್ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!
ನವದೆಹಲಿ: ಸಾಲ ಮಾಡಿ ಬ್ಯಾಂಕುಗಳಿಗೆ ವಂಚಿಸಿ ವಿದೇಶದಲ್ಲಿ ಅಡಗಿರುವ ಮದ್ಯ ದೊರೆ ವಿಜಯ್ ಮಲ್ಯ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. 18 ವರ್ಷಗಳ ನಂತರ ಆರ್ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್ ಆಗಿದೆ. 2025 ರ ಟೂರ್ನಮೆಂಟ್ನಾದ್ಯಂತ ಅದ್ಭುತ ಅಭಿಯಾನ ಎಂದವರು ಬಣ್ಣಿಸಿದ್ದಾರೆ. ಐಪಿಎಲ್ ಚಾಂಪಿಯನ್ ಆಗಿ ಆರ್ಸಿಬಿ ಬಿಂಬಿಸುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಉದ್ಯಮಿ ವಿಜಯ್ ಮಲ್ಯ, ‘ಅತ್ಯುತ್ತಮ ತರಬೇತಿ ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಧೈರ್ಯದಿಂದ ಆಡುತ್ತಿರುವ ಉತ್ತಮ ಸಮತೋಲನ ತಂಡ. ಅಭಿನಂದನೆಗಳು! ಈ ಸಲಾ ಕಪ್ ನಮ್ದೇ !!’ ಎಂದು ಸಂತಸ ಹಂಚಿಕೊಂಡಿದ್ದಾರೆ. ‘ನಾನು ಆರ್ಸಿಬಿಯನ್ನು ಸ್ಥಾಪಿಸಿದಾಗ ಐಪಿಎಲ್ ಟ್ರೋಫಿ ಬೆಂಗಳೂರಿಗೆ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದಾಗ ದಂತಕಥೆಯ ಕಿಂಗ್ ಕೊಹ್ಲಿಯನ್ನು ಆಯ್ಕೆ ಮಾಡುವ ಸೌಭಾಗ್ಯ ನನಗಿತ್ತು ಮತ್ತು ಅವರು 18 ವರ್ಷಗಳ ಕಾಲ ಆರ್ಸಿಬಿಯೊಂದಿಗೆ ಇದ್ದಾರೆ ಎಂಬುದು ಗಮನಾರ್ಹ. ಆರ್ಸಿಬಿ ಇತಿಹಾಸದ ಅಳಿಸಲಾಗದ…
‘ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ’ ಎಂದ ಸಿದ್ದರಾಮಯ್ಯ
ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ ಎಂದವರು ಬಣ್ಣಿಸಿದ್ದಾರೆ. Rrrrrrrrr…. Cccccccc…. Bbbbbbbbb…. ಎಂದು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ಆರ್ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ. ‘ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ’ ಎಂದವರು ಸಂತಸ ಹಂಚಿಕೊಂಡಿದ್ದಾರೆ. Rrrrrrrrr…. Cccccccc…. Bbbbbbbbb…. ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು…
IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ
ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ. Moments he will never forget 🏆Moments they will never forget 🤩 🎥 Virat Kohli 🤝 The #RCB faithful ❤#TATAIPL | #RCBvPBKS | #Final | #TheLastMile | @RCBTweets | @imVkohli pic.twitter.com/ObyJxRI0C0 — IndianPremierLeague (@IPL) June 3, 2025 ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ RCB ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಕಾದಾಟ ನಡೆಸಿ 6 ರನ್ಗಳ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಐಪಿಎಲ್…
ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ
ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ. RCB ಜಯಭೇರಿ ಭಾರಿಸುತ್ತಿದ್ದಂತೆಯೇ ಭಾವುಕರಾದ ವಿರಾಟ್ ಕೊಹ್ಲಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದರು. ‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ ಎಂದವರು ಸಂತಸದಿಂದ ಪ್ರತಿಕ್ರಿಯಿಸಿದರು. 🗣🗣 My heart is for Bangalore, my soul is for Bangalore…this is the team I will play for until the last day that I play the IPL. 🎥…
ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ರೋಚಕ ಗೆಲುವು; ತಂಡವನ್ನು ಅಭಿನಂದಿಸಿದ ಹೆಚ್ಡಿಕೆ
ನವದೆಹಲಿ: ಐಪಿಎಲ್ 2025 ಟೂರ್ನಿಯಲ್ಲಿ ರೋಚಕ ಗೆಲುವು ಸಾಧಿಸಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಸಲ ಕಪ್ ನಮ್ದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ತಂಡ ಸ್ಪೂರ್ತಿಯಿಂದ ಆಡಿದ ಪಟಿದಾರ್ ಪಡೆಯನ್ನು ಹಾಗೂ ವಿಶೇಷವಾಗಿ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್ ಸಿಬಿ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ. ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ
ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ RCB ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಕಾದಾಟ ನಡೆಸಿ 6 ರನ್ಗಳ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿತು. AAAAARRRRR CEEEEEEE BEEEEEE ❤🏆#TATAIPL | #RCBvPBKS | #Final | #TheLastMile | @RCBTweets pic.twitter.com/lp3AwgCVQl — IndianPremierLeague (@IPL) June 3, 2025 ಮೋಡಲ್ ಬ್ಯಾಟ್ ಮಾಡಿದ ಶ್ರೇಯಸ್ ನಾಯಕತ್ವದ RCB) ತಂಡ 190 ರನ್ ಗಳಿಸಿತು. ಈ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಪಂಜಾಬ್…