ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್​ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. 1996 ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಕ್ಷಿಪ್ರ ಕಾರ್ಯಾಚರಣೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಟ್ರಬಲ್ ಶೂಟರ್ ಎಂದೇ ಗುರುತಾಗಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ಆದಾಗ ಮೊದಲ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದ ಸೀಮಂತ್ ಕುಮಾರ್ ಸಿಂಗ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿ, ಎಸಿಬಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸಕ್ತ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಎಡಿಜಿಪಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಅವರನ್ನು ಇದೀಗ ಬೆಂಗಳೂರಿನ ನೂತನ ಕಮಿಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

ಬೆಂಗಳೂರು: RCB ವಿಜಯೋತ್ಸವ ಸಂದರ್ಭದ ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ, ಈ ದುರ್ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಏಕೆ ಎಫ್‌ಐಆರ್ ಹಾಕಬಾರದು? ಎಂದು ಪ್ರಶ್ನಿಸಿದೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಕಾಂಗ್ರೆಸ್ ಪೊಲೀಸರನ್ನು ತಮ್ಮ ಪಕ್ಷದ ಇಂಟರ್ನ್‌ಗಳಾಗಿ ಬಳಸುವುದನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ಹೇಳಿದೆ. ಸಿಎಂ ಮತ್ತು ಡಿಸಿಎಂ ಅಭಿಮಾನಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎಂಬುದಕ್ಕೆ ಸ್ಪಷ್ಟ ಪುರಾವೆಗಳಿವೆ, ಆದರೆ ಬೆಂಗಳೂರು ಪೊಲೀಸರು ಆರ್‌ಸಿಬಿ, ಈವೆಂಟ್ ಮ್ಯಾನೇಜರ್‌ಗಳು ಮತ್ತು ಕೆಎಸ್‌ಸಿಎ ವಿರುದ್ಧ ಮಾತ್ರ ಎಫ್‌ಐಆರ್ ದಾಖಲಿಸುತ್ತಾರೆ ಎಂದು ಬಿಜೆಪಿ ಹೇಳಿದೆ. ಇದು ಮರೆಮಾಚುವಿಕೆಗಿಂತ ಬೇರೇನೂ ಅಲ್ಲ. ಬಲಿಪಶುಗಳನ್ನು ಮಾತ್ರವಲ್ಲ, ಎಲ್ಲರನ್ನೂ ಹೊಣೆಗಾರರನ್ನಾಗಿ ಮಾಡಿ ಎಂದು ಬಿಜೆಪಿ ಸವಾಲು ಹಾಕಿದೆ. Why no FIR against the CM @siddaramaiah…

ಜಮ್ಮು-ಕಾಶ್ಮೀರದಲ್ಲಿ NIA ಭರ್ಜರಿ ಬೇಟೆ; 32 ಕಡೆ ಶಂಕಿತ ಉಗ್ರರ ಅಡ್ಡೆಗಳ ಮೇಲೆ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರವನ್ನು ಅಸ್ಥಿರಗೊಳಿಸಲು ಪಾಕಿಸ್ತಾನ ಬೆಂಬಲಿತ ನಿಷೇಧಿತ ಭಯೋತ್ಪಾದಕ ಸಂಘಟನೆಗಳು ಮತ್ತು ಅವುಗಳ ಶಾಖೆಗಳು ನಡೆಸುತ್ತಿರುವ ಭಯೋತ್ಪಾದಕ ಪಿತೂರಿಯ ವಿರುದ್ಧ ಭರ್ಜರಿ ಬೇಟೆಯಾಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕಾಶ್ಮೀರ ಕಣಿವೆಯಾದ್ಯಂತ ಸರಣಿ ಶೋಧಗಳನ್ನು ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮೂವತ್ತೆರಡು ಸ್ಥಳಗಳನ್ನು ಶೋಧಿಸಲಾಗಿದೆ. ಈ ಸ್ಥಳಗಳು ಪಾಕಿಸ್ತಾನ ಮೂಲದ ಈ ಶಾಖೆಗಳಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF), ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಮತ್ತು ಕಾಶ್ಮೀರ (ULFJ&K), ಮುಜಾಹಿದ್ದೀನ್ ಗಜ್ವತ್-ಉಲ್-ಹಿಂದ್ (MGH), ಜಮ್ಮು ಮತ್ತು ಕಾಶ್ಮೀರ ಸ್ವಾತಂತ್ರ್ಯ ಹೋರಾಟಗಾರರು (JKFF), ಕಾಶ್ಮೀರ ಟೈಗರ್ಸ್, PAAF ಮತ್ತು ಇತರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಹೈಬ್ರಿಡ್ ಭಯೋತ್ಪಾದಕರು ಮತ್ತು ಭೂಗತ ಕಾರ್ಮಿಕರ ವಸತಿ ಆವರಣಗಳಾಗಿದ್ದವು, ಇವು ಲಷ್ಕರ್-ಎ-ತೋಯ್ಬಾ (LeT), ಜೈಶ್-ಎ-ಮೊಹಮ್ಮದ್ (JeM), ಅಲ್-ಬದರ್ ಮುಂತಾದ ನಿಷೇಧಿತ ಭಯೋತ್ಪಾದಕ…

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ; RCB, KSCA ವಿರುದ್ಧ FIR

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ IPL ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು ಇದಕ್ಕೆ ಸರ್ಕಾರವೇ ಹೊಣೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಅಷ್ಟೇ ಅಲ್ಲ, ದುರಂತ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲೂ ವ್ಯಕ್ತವಾಗಿದೆ. ಈ ನಡುವೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಗುರುವಾರ FIR ದಾಖಲಾಗಿದೆ. ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್‌, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ ಸಿಎ) ​​ಮತ್ತು ಇತರರ ವಿರುದ್ಧ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಕಾರಣ. ಈ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದ ಎಸ್‌ಐಟಿಯಿಂದ ತನಿಖೆ ನಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ತನಿಖೆಗೆ ನಾವು ಒಪ್ಪುವುದಿಲ್ಲ. ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಬಳಿಗೆ ಪಿಐಎಲ್‌ ಹೋಗುತ್ತಿದೆ. ಹೈಕೋರ್ಟ್‌ ನ್ಯಾಯಾಧೀಶರ ಸುಪರ್ದಿಯಲ್ಲೇ ಇದರ ತನಿಖೆ ನಡೆಯಬೇಕಿದೆ. ಇದಕ್ಕಾಗಿ ಎಸ್‌ಐಟಿ ರಚಿಸಬೇಕು. ಇದರ ವರದಿ ನೇರವಾಗಿ ಹೈಕೋರ್ಟ್‌ಗೆ ಸಲ್ಲಿಕೆಯಾಗಬೇಕು. ಈ ಎಲ್ಲ ಸಾವುಗಳಿಗೆ ನ್ಯಾಯ ನೀಡಬೇಕು. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು. ಇದು ಕ್ರಿಕೆಟ್‌ ಅಸೋಸಿಯೇಶನ್‌ ಕಾರ್ಯಕ್ರಮ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಜವಾಬ್ದಾರಿ ಮರೆತಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿಹಾಕಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ನೋಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನೈತಿಕ ಹೊಣೆ ಹೊತ್ತು ರಾಜೀನಾಮೆ…

‘ಮೆಟ್ರೋ…ಇನ್ ಡಿನೋ’ ಬಗ್ಗೆ ಕುತೂಹಲಕಾರಿ ಸುಳಿವು ನೀಡಿದ ಸಾರಾ ಅಲಿ ಖಾನ್

ಮುಂಬೈ: ತಮ್ಮ “ಮೆಟ್ರೋ…ಇನ್ ಡಿನೋ” ಚಿತ್ರದ ಬಿಡುಗಡೆಗೆ ಸಜ್ಜಾಗುತ್ತಿರುವ ಬಾಲಿವುಡ್ ನಟಿ ಸಾರಾ ಅಲಿ ಖಾನ್, ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಾವ್ಯಾತ್ಮಕ ಮುಖವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ, ‘ಅತ್ರಂಗಿ ರೇ’ ನಟಿ ಆಫ್-ಶೋಲ್ಡರ್ ಬಿಳಿ ಉಡುಪಿನಲ್ಲಿ ಪೋಸ್ ನೀಡುತ್ತಿರುವ ಅದ್ಭುತ ಫೋಟೋಗಳ ಸರಣಿಯನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ, ಖಾನ್ ತಮ್ಮ ಹೆಚ್ಚು ಕಲಾತ್ಮಕ ಮತ್ತು ಅಭಿವ್ಯಕ್ತಿಶೀಲ ಮುಖವನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಪ್ರಾಮಾಣಿಕ ಫೋಟೋವನ್ನು ಹಂಚಿಕೊಂಡ ಅವರು, “ಹರ್ ಉಮರ್ ಕಾ ಇಷ್ಕ್ ಹೈ ಇನ್ ಡಿನೋ ಮೊಹಬ್ಬತ್ ಕಾ ಹರ್ ಮೌಸಮ್ ಹೈ ಮೆಟ್ರೋ ಇನ್ ಡಿನೋ… ಕಭಿ ಕಾಲ್ಪನಿಕ ಕಥೆಯು #1 ಕಾ ಫನ್ ಹೈ ಮೆಟ್ರೋ ಇನ್ ಡಿನೋ ಟ್ರೆಂಡಿಂಗ್‌ನಲ್ಲಿ ಕಭಿ ಸರಸ್ ಸಿಲ್ಲಿ ರೀಲ್ಸ್ ಕಾ ಮನ್ ಹೈ” ಎಂದು ಬರೆದುಕೊಂಡಿದ್ದಾರೆ. View this post on Instagram A post shared by Sara…

KSRTC ಚಾಲಕ-ಕಂ-ನಿರ್ವಾಹಕ ಹುದ್ದೆಯ ನೇಮಕಾತಿ; ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು,: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ ಸಂಬಂಧ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಜಾಹೀರಾತು ಸಂಖ್ಯೆ 1/2020 ದಿನಾಂಕ 14.02.2020ರನ್ವಯ KSRTCಗೆ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ KSRTC ಕೇಂದ್ರ ಕಚೇರಿಯಲ್ಲಿ ಹಾಗೂ ನಿಗಮದ ವೆಬ್ ಸೈಟ್ ನಲ್ಲಿ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಈ ಸಂಭವನೀಯ ಆಯ್ಕೆಪಟ್ಟಿ ಬಗ್ಗೆ ಆಕ್ಷೇಪಣೆ ಇದ್ದಲ್ಲಿ 11.06.2025ರ ಸಂಜೆ 5.30ರೊಳಗಾಗಿ ಕರಾರಸಾ ನಿಗಮದ ಕೇಂದ್ರ ಕಚೇರಿಯಲ್ಲಿರುವ ನೇಮಕಾತಿ ಶಾಖೆಗೆ ಖುದ್ದಾಗಿ ಅಥವಾ ನಿಗಮದ ಅಧಿಕೃತ ಇ-ಮೇಲ್ dycpmrct@ksrtc.org ಮುಖಾಂತರ ಸಲ್ಲಿಸಬಹುದು.ಜೂನ್ 11ರ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ನಿಗಮದ ನಿರ್ದೇಶಕರು (ಸಿ&ಜಾ) ತಿಳಿಸಿದ್ದಾರೆ. ಈ ನೇಮಕಾತಿಯು ಪಾರದರ್ಶಕವಾಗಿದ್ದು…

ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

ಬೆಂಗಳೂರು: RCB ಸಂಭ್ರಮಾಚರಣೆ ವೇಳೆ ಸಂಭವಿಸಿರುವ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಈ ಭೀಕರ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ. ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡುತ್ತಿರುವ ಹೇಳಿಕೆ ಬಗ್ಗೆ ಸಿ.ಟಿ.ರವಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿನ ಗೆಲುವಿನ ‘ಕ್ರೆಡಿಟ್’ ತೆಗೆದುಕೊಳ್ಳುವ ಹಪಾಹಪಿಯಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಘಟನೆಯ ಕುರಿತು 18 ಪ್ರಶ್ನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿಟ್ಟಿರುವ ಸಿ.ಟಿ.ರವಿ, ಕೇವಲ ಒಂದು ಫ್ರಾಂಚೈಸಿ ಗೆಲುವುವನ್ನು ರಾಜ್ಯ ಸರ್ಕಾರವೇ ಸಂಭ್ರಮಿಸುವ ಅಗತ್ಯ ಏನಿತ್ತು? ಇದು ಸರ್ಕಾರದ ಆದ್ಯತೆಯಾಗಬೇಕಿತ್ತೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿ.ಟಿ.ರವಿ ಅವರು ಸಿಎಂ ಅವರಲ್ಲಿ ಕೇಳಿರುವ 18 ಪ್ರಶ್ನೆಗಳು ಹೀಗಿವೆ: ಸಾವಿರಾರು…

ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

ಬೆಂಗಳೂರು: RCB ಸಂಭ್ರಮಾಚರಣೆ ವೇಳೆ ಸಂಭವಿಸಿರುವ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಈ ಭೀಕರ ದುರಂತ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ದುರಂತದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಡಾ.ಸುಧಾಕರ್, ಬೆಂಗಳೂರಿನಲ್ಲಿ ಬುಧವಾರ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಆದೇಶಿಸಿರುವುದು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಅನಾಹುತದಲ್ಲಿ ಬಲಿಯಾದ ಅಮಾಯಕ ಯುವಕರಿಗೆ ನ್ಯಾಯ ಸಿಗಬೇಕಾದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಲೇಬೇಕು. ಇದು ನಮ್ಮ ಆಗ್ರಹ ಎಂದು ಡಾ.ಸುಧಾಕರ್ ಸಾಮಾಜಿಕ ಮಾಧ್ಯಮ ‘X’ನಲ್ಲಿ ಬರೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಆದೇಶಿಸಿರುವುದು ಯಾವುದೇ…

ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

ಬೆಂಗಳೂರು: ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿರುವ ಭೀಕರ ಕಾಲ್ತುಳಿತ ಘಟನೆ ಬಗ್ಗೆ FIR ದಾಖಲಿಸಿಕೊಳ್ಳಲಾಗಿದೆಯೇ ಎಂಬ ಬಗ್ಗೆ ಪೊಲೀಸರು ಸೂಕ್ತ ಮಾಹಿತಿ ಒದಗಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬುಧವಾರ ಆರ್​ಸಿಬಿ ಐಪಿಎಲ್ ವಿಜಯೋತ್ಸವ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಯೋಸಿದೆ. ಈ ದುರ್ಘಟನೆಯಲ್ಲಿ 11 ಮಂದಿ ಮೃತಪತ್ತಿದ್ದು, ಹತ್ತಾರು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನಲ್ಲಿ ಸಂಭವಿಸಿರುವ ಈ ಭೀಕರ ದುರ್ಘಟನೆ ಬಗ್ಗೆ ದೇಶವ್ಯಾಪಿ ಶೋಕ ವ್ಯಕ್ತವಾದರೆ ಕರ್ನಾಟಕ ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದಂತಿಲ್ಲ. ಈ ಘಟನೆಯನ್ನು ಮುಚ್ಚಿಹಾಕಲು ಸರ್ಕಾರ ಮುಂದಾಗುತ್ತಿದೆಯೇ? ಎಂಬ ಅನುಮಾನ ಮೂಡುವಂತಾಗಿದೆ. ಈ ದುರ್ಘಟನೆಯನ್ನು ಅಸಹಜ ಸಾವು (UDR) ಎಂದು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಭೀಕರ ದುರಂತ ಮರಣಹೋಮವನ್ನೇ ಸೃಷ್ಟಿಸಿದ್ದರೂ ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ ಎಂದು ಸುದ್ದಿಸಂಸ್ಥೆಗಳು ವರದಿ…