ಶಿಲ್ಲಾಂಗ್: ಮೇಘಾಲಯದ ಹನಿಮೂನ್ ಕೊಲೆ ಪ್ರಕರಣದ ಐವರು ಆರೋಪಿಗಳನ್ನು, ಮೃತನ ಪತ್ನಿ ಸೋನಮ್ ರಘುವಂಶಿ ಸೇರಿದಂತೆ ಮೇಘಾಲಯ ನ್ಯಾಯಾಲಯವು ಬುಧವಾರ ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಭಾರಿ ಭದ್ರತಾ ವ್ಯವಸ್ಥೆಗಳ ನಡುವೆ, ಸೋನಮ್ ಅವರ ಪತಿ ರಾಜಾ ರಘುವಂಶಿ ಅವರ ಶವ ಪತ್ತೆಯಾಗಿ 10 ದಿನಗಳ ನಂತರ, ಬುಧವಾರ ಶಿಲ್ಲಾಂಗ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಸಂಚಲನ ಮೂಡಿಸಿದ ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿವಿಧ ವೈದ್ಯಕೀಯ ಮತ್ತು ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ನಂತರ, ಪ್ರಕರಣದ ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಆರೋಪಿಗಳನ್ನು ಎಂಟು ದಿನಗಳ ಕಸ್ಟಡಿಗೆ ನೀಡುವಂತೆ ಕೋರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಪ್ರಮುಖ ಆರೋಪಿ ಸೋನಮ್ (24)ಳನ್ನು ಶಿಲ್ಲಾಂಗ್ಗೆ ಕರೆತರಲಾಯಿತು. ಪ್ರಕರಣದ ಇತರ ನಾಲ್ವರು ಆರೋಪಿಗಳಾದ ರಾಜ್ ಸಿಂಗ್ ಕುಶ್ವಾಹ (21), ಆಕೆಯ ಪ್ರಿಯಕರ ಮತ್ತು ಮಾಸ್ಟರ್ಮೈಂಡ್, ಆನಂದ್ ಸಿಂಗ್…
Day: June 11, 2025
ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗ ದ್ವಿಪಥೀಕರಣ; ಪ್ರಧಾನಿಗೆ ಸೋಮಣ್ಣ ಅಭಿನಂದನೆ
ನವದೆಹಲಿ: ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ ಅನುಮತಿ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಲ ಶಕ್ತಿ ಹಾಗೂ ರಾಜ್ಯ ರೈಲ್ವೆ ಖಾತೆ ಸಚಿವ ಬಿ ಸೋಮಣ್ಣ, ಬುಧವಾರ ನಡೆದ ಸಚಿವ ಸಂಪುಟದಲ್ಲಿ ಬಳ್ಳಾರಿ–ಚಿಕ್ಕಜಾಜೂರು ನಡುವಿನ 185 ಕಿ.ಮೀ ಉದ್ದದ ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಅನುಮತಿ ನೀಡಿ, 3,340 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಈ ಮಹತ್ವದ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಹಾಗೂ ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ. ಈ ರೈಲ್ವೆ ಮಾರ್ಗದ ದ್ವಿಪಥೀಕರಣದಿಂದ ಹೊಸಪೇಟೆ – ಬಳ್ಳಾರಿ ಕೈಗಾರಿಕಾ ಪ್ರದೇಶ, ಬಳ್ಳಾರಿ – ಚಿತ್ರದುರ್ಗ ಗಣಿಗಾರಿಕೆ ಪ್ರದೇಶ ಹಾಗೂ ಮಂಗಳೂರು ಬಂದರು ಮತ್ತು ಹೈದರಾಬಾದ್ ಪ್ರದೇಶಗಳ ನಡುವೆ ನೇರ ಸಂಪರ್ಕ, ಪ್ರವಾಸೋದ್ಯಮ, ಸರಕು ಸಾಗಣೆ ಸೇರಿದಂತೆ ಸಾರಿಗೆ…
ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಬಿರುಸುಗೊಂಡಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಏರುಪೇರಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುರುವಾರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮರು ಜಾತಿ ಗಣತಿ: ಕನ್ನಡಿಗರ ಪರವಾಗಿ ಸಿಎಂಗೆ ಅಶೋಕ ಪ್ರಶ್ನೆಗಳ ಸುರಿಮಳೆ
ಬೆಂಗಳೂರು: ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವ ತೀರ್ಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳಮೋಕ್ಷ ಮಾಡಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೋಲು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರು ಜಾತಿ ಸಮೀಕ್ಷೆಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖಭಂಗವಾಗಿ ಸೋಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಗೆಲುವಾಗಿದೆ. ಈ ವರದಿಯನ್ನು ನಾವೆಲ್ಲರೂ ವಿರೋಧಿಸಿದ್ದೆವು. ಕಾಂಗ್ರೆಸ್ ಹೈಕಮಾಂಡ್ ಗೆ ಈ ವರದಿ ಸರಿಯಿಲ್ಲ ಎನ್ನಿಸಿದೆ. ಹೈಕಮಾಂಡ್ ನಿಂದ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷವಾಗಿದೆ. ಯಾರು ಏನೇ ಮಾಡಿದರೂ ವರದಿ ಜಾರಿ ಮಾಡುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಅವರು ಹೇಳಿದಂತೆ ನಡೆದುಕೊಳ್ಳದೇ ಇರುವುದರಿಂದ ರಾಜೀನಾಮೆ ಕೊಡುವುದು ಸೂಕ್ತ. 160 ಕೋಟಿ ರೂ. ವ್ಯರ್ಥವಾಗಿದ್ದು, ಮರು ಸಮೀಕ್ಷೆ ನಡೆಸಲು ಇವರ ಬಳಿ ಹಣವಿಲ್ಲ. ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.…
ತುಮಕೂರಿನಲ್ಲಿ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನʼ
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಕೆರೆಗೋಡಿ ರಂಗಾಪುರ ಮಠದ ಶ್ರೀ ಗುರು ಪರದೇಶಿಕೇಂದ್ರ ಸ್ವಾಮಿ ಸಮುದಾಯ ಭವನದಲ್ಲಿ ಜರುಗಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನʼದಲ್ಲಿ ಪಾಲ್ಗೊಂಡು, ಕಾರ್ಯಕ್ರಮಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ.ಸೋಮಣ್ಣನವರು ಚಾಲನೆ ನೀಡಿದರು. ನೂತನ ತಂತ್ರಜ್ಞಾನ ಮತ್ತು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜೀಯವರ ನೇತೃತ್ವದ ನಮ್ಮ ಸರ್ಕಾರವು ಇದೇ ಮೇ 29 ರಿಂದ ಜೂನ್ 12ರ ವರೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದೆ. 700 ಜಿಲ್ಲೆಗಳಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚಿನ ತಂಡಗಳು ಭಾಗವಹಿಸಲಿವೆ. ಈ ಅಭಿಯಾನದಲ್ಲಿ ರೈತರ ಆವಿಷ್ಕಾರ ಹಾಗೂ ಪ್ರತಿಕ್ರಿಯೆಯನ್ನು ದಾಖಲೀಕರಣ ಮಾಡಲಾಗುತ್ತಿದೆ. ಈ ಸಮಾರಂಭದಲ್ಲಿ, ಜನಪ್ರತಿನಿಧಿಗಳು, ದಿಶಾ ಸಮಿತಿ ಸದಸ್ಯರು, ರೈತ ಮುಖಂಡರು, ಕೃಷಿ ತಂತ್ರಜ್ಞರು ಹಾಗೂ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ..! ‘ಎ’ ಗ್ರೇಡ್ ಮಾನ್ಯತೆ
ಹುಬ್ಬಳ್ಳಿ : ರಾಜ್ಯದ ವಿಶ್ವವಿದ್ಯಾಲಯ ‘KSLU’ ಪ್ರತಿಷ್ಠೆ ಮತ್ತಷ್ಟು ಹೆಚ್ಚಿದೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಅಭಿವೃದ್ಧಿಗೆ ಫುಲ್ ಮಾರ್ಕ್ಸ್ ನೀಡಿರುವ ನ್ಯಾಕ್ ತಂಡ ‘ಎ’ ಗ್ರೇಡ್ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ನ್ಯಾಕ್ ನಿಂದ ‘ಎ’ ಗ್ರೇಡ್ ದೊರೆತಿದ್ದು, ವಿಶ್ವವಿದ್ಯಾಲಯದ ಹೆಮ್ಮೆ ಹೆಚ್ಚಿಸಿದೆ ಎಂನು ಶಿಕ್ಷಣ ತಜ್ಞರು ಸಂತಸ ಹಂಚಿಕೊಂಡಿದ್ದಾರೆ. ಕಳೆದ 15 ವರ್ಷಗಳಿಂದ ವಿವಿಯು ಕಾನೂನು ಮೌಲ್ಯಾಧಾರಿತ ಶಿಕ್ಷಣವನ್ನು ಒದಗಿಸುತ್ತಿದ್ದು, 128 ಸಂಯೋಜಿತ ಕಾನೂನು ಕಾಲೇಜುಗಳನ್ನು ತನ್ನ ವ್ಯಾಪ್ತಿಯಲ್ಲಿ ಹೊಂದಿದೆ. ಈ ವಿಶ್ವವಿದ್ಯಾಲಯಕ್ಕೆ ಮೇ ತಿಂಗಳಲ್ಲಿ ನ್ಯಾಕ್ ಪೀರ್ ತಂಡ ಭೇಟಿ ನೀಡಿ ಪರಿಶೀಲಿಸಿತ್ತು. ಅಧ್ಯಕ್ಷೆ ಡಾ. ನಿಶಿತಾ ಜಾಲ, ಡಾ.ಕೆ. ಜಯಚಂದ್ರ ರೆಡ್ಡಿ, ಡಾ. ಜಯಶಂಕರ ಕೆ. ಐ., ಡಾ. ಸುಭೀರ್ ಕುಮಾರ ರಾಯ್, ಡಾ. ಧರಮೇಂದ್ರ ಕುಮಾರ ಮಿಶ್ರಾ, ಡಾ.…
‘ಬಾಲ್ಯದ ಆಘಾತ’ವು ಮೆದುಳಿನ ಮೇಲೆ ದೀರ್ಘಕಾಲೀನ ಪರಿಣಾಮಗಳನ್ನು ಬೀರಬಹುದು..!
ನವದೆಹಲಿ: ಬಾಲ್ಯದ ಪ್ರತಿಕೂಲತೆಯು ಮಾನಸಿಕ ಅಸ್ವಸ್ಥತೆಗಳು ಮತ್ತು ಇತರ ಮೆದುಳಿನ ಪರಿಣಾಮಗಳನ್ನು ಉಂಟುಮಾಡುವ ಜೀವಿತಾವಧಿಯ ದುರ್ಬಲತೆಯೊಂದಿಗೆ ಆಳವಾದ ಸಂಬಂಧವನ್ನು ಹೊಂದಿರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಆರಂಭಿಕ ಜೀವನದ ಅನುಭವಗಳು ಜೈವಿಕವಾಗಿ ಹುದುಗುತ್ತವೆ ಮತ್ತು ಮೆದುಳಿನ ರಚನೆ ಮತ್ತು ರೋಗನಿರೋಧಕ ಕಾರ್ಯದಲ್ಲಿ ಶಾಶ್ವತ ಬದಲಾವಣೆಗಳನ್ನು ಸೃಷ್ಟಿಸುತ್ತವೆ ಎಂದು ಅಧ್ಯಯನವು ತೋರಿಸಿದೆ. ‘ಪ್ರತಿರಕ್ಷಣಾ ವ್ಯವಸ್ಥೆಯು ಸೋಂಕುಗಳ ವಿರುದ್ಧ ಹೋರಾಡುವುದಲ್ಲದೆ – ಜೀವನದುದ್ದಕ್ಕೂ ನಮ್ಮ ಮಾನಸಿಕ ಆರೋಗ್ಯವನ್ನು ರೂಪಿಸುವಲ್ಲಿ ಇದು ನಿರ್ಣಾಯಕ ಪಾತ್ರ ವಹಿಸುತ್ತದೆ’ ಎಂದು ಇಟಲಿಯ IRCCS ಓಸ್ಪೆಡೇಲ್ ಸ್ಯಾನ್ ರಾಫೆಲ್ ಮಿಲನ್ನ ಹಿರಿಯ ಸಂಶೋಧಕಿ ಸಾರಾ ಪೊಲೆಟ್ಟಿ ಬೆಳಕುಚೆಲ್ಲಿದ್ದಾರೆ. “ಬಾಲ್ಯದ ಆಘಾತವು ಈ ರೋಗನಿರೋಧಕ ಪ್ರತಿಕ್ರಿಯೆಗಳನ್ನು ಮೂಲಭೂತವಾಗಿ ಪುನರುತ್ಪಾದಿಸಬಹುದು, ದಶಕಗಳ ನಂತರ ಖಿನ್ನತೆ, ದ್ವಿಧ್ರುವಿ ಅಸ್ವಸ್ಥತೆ ಮತ್ತು ಇತರ ಮನೋವೈದ್ಯಕೀಯ ಸ್ಥಿತಿಗಳಿಗೆ ದುರ್ಬಲತೆಯನ್ನು ಸೃಷ್ಟಿಸುತ್ತದೆ” ಎಂದು ಅವರು ಗಮನಸೆಳೆದಿದ್ದಾರೆ. ಬಾಲ್ಯದ ಆಘಾತಕ್ಕೆ ಸಂಬಂಧಿಸಿದ ನಿರ್ದಿಷ್ಟ ಉರಿಯೂತದ ಗುರುತುಗಳನ್ನು ಗುರುತಿಸುವ…
ಮುಂದಿನ 2-3 ದಿನ ಭಾರೀ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ
ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಮಧ್ಯಪ್ರದೇಶ, ಛತ್ತೀಸ್ಗಢ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಅಸ್ಸಾಂನಾದ್ಯಂತ ಹಲವಾರು ಜಿಲ್ಲೆಗಳಿಗೆ ಮುಂದಿನ 2-3 ದಿನಗಳ ಕಾಲ ಭಾರೀಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚು ಮತ್ತು ಗಂಟೆಗೆ 60 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಮಧ್ಯಪ್ರದೇಶದ ಧಾರ್, ಬರ್ವಾನಿ, ಖಾರ್ಗೋನ್, ದಿಂಡೋರಿ, ಮಾಂಡ್ಲಾ ಮತ್ತು ಬಾಲಘಾಟ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಛತ್ತೀಸ್ಗಢದಲ್ಲಿಯೂ ಸಹ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ, ಮುಂಗೇಲಿ, ಕಬೀರ್ಧಾಮ್, ಬೆಮೆತಾರಾ, ರಾಯ್ಪುರ, ದುರ್ಗ್, ರಾಜನಂದಗಾಂವ್, ಬಲೋಡ್, ಕಾಂಕೇರ್ ಮತ್ತು ನಾರಾಯಣಪುರಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದ ಕೆಲವು ಭಾಗಗಳು, ವಿಶೇಷವಾಗಿ ಗೊಂಡಿಯಾ, ಭಂಡಾರ, ಚಂದ್ರಾಪುರ, ವಾರ್ಧಾ ಮತ್ತು ನಾಂದೇಡ್ಗಳು ಇದೇ ರೀತಿಯ ಎಚ್ಚರಿಕೆಗಳನ್ನು ನೀಡಿವೆ. ದಕ್ಷಿಣದಲ್ಲಿ, ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ ಮತ್ತು ರಾಮನಗರ…
ಮತ್ತೆ ಜಾತಿ ಗಣತಿ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ವ್ಯರ್ಥ? ವಿಜಯೇಂದ್ರ ಪ್ರಶ್ನೆ
ಬೆಂಗಳೂರು: ರಾಜ್ಯ ರಾಜಕಾರಣ ಇದೀಗ ಮತ್ತೆ ಜಾತಿ ಗಣತಿ ಜಟಾಪಟಿಗೆ ಸಾಕ್ಷಿಯಾಗುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ. ಬೆಂಗಳೂರಿನ ದುರಂತದ ಕಾಲ್ತುಳಿತದ 11 ಅಮಾಯಕರ ಸಾವುಗಳಿಗೆ ರಾಜ್ಯವಷ್ಟೇ ಅಲ್ಲ ದೇಶವೇ… https://t.co/ym4xJMrHB2 — Vijayendra Yediyurappa (@BYVijayendra) June 10, 2025 ಬೆಂಗಳೂರಿನ…
ಜಾತಿ ಜನಗಣತಿ ದತ್ತಾಂಶ 10 ವರ್ಷ ಹಳೆಯದಾಗಿದ್ದರಿಂದ ಮರು ಗಣತಿ: ಡಿಕೆಶಿ ಸ್ಪಷ್ಟನೆ
ಬೆಂಗಳೂರು: ಮರು ಜಾತಿಗಣತಿಯ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸುವಂತೆ ವರಿಷ್ಠರು ಸಲಹೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ. ಯಾವ ವರ್ಗದವರಿಂದಲೂ ಸಣ್ಣ ಅಪಸ್ವರ ಬಾರದಂತೆ, ಯಾರಿಗೂ ಅನ್ಯಾಯ ಆಗದಂತೆ ಅವಕಾಶವನ್ನು ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಕೆಶಿ ತಿಳಿಸಿದ್ದಾರೆ. ಸರ್ವರಿಗೂ ನ್ಯಾಯ- ನಮ್ಮ ಧ್ಯೇಯ ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸುವಂತೆ ವರಿಷ್ಠರು ಸಲಹೆ ನೀಡಿದ್ದಾರೆ. ಹೀಗಾಗಿ ಯಾವ ವರ್ಗದವರಿಂದಲೂ ಸಣ್ಣ ಅಪಸ್ವರ ಬಾರದಂತೆ, ಯಾರಿಗೂ ಅನ್ಯಾಯ ಆಗದಂತೆ ಅವಕಾಶವನ್ನು ನೀಡಲು… pic.twitter.com/FKODscfzOY — DK Shivakumar (@DKShivakumar) June 10,…