ಹೊರಗುತ್ತಿಗೆ ನೌಕರರಿಗೆ ನಗದು ರಹಿತ ಚಿಕಿತ್ಸೆ: ರಾಜ್ಯ ಸರ್ಕಾರದ ಹೊಸ ಯೋಜನೆಗೆ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಸೇವೆ ನೀಡುತ್ತಿರುವ ಸುಮಾರು 3 ಲಕ್ಷಕ್ಕೂ ಅಧಿಕ ನೌಕರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರ್ಕಾರ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ – ಖಾಯಂ ಅಲ್ಲದ ಸಿಬ್ಬಂದಿಗೆ (KASS–NPE)’ಯನ್ನು ಅನುಮೋದಿಸಿದೆ. 2025–26ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದ ಈ ಯೋಜನೆಗೆ ಸಂಬಂಧಪಟ್ಟಂತೆ ಸರಕಾರವು ಈಚೆಗೆ ಆದೇಶ ಹೊರಡಿಸಿದ್ದು, ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ (AB-ArK) ಯೋಜನೆಯ ಸ್ವರೂಪದಲ್ಲಿಯೇ ಹೊಸ ಯೋಜನೆ ಜಾರಿಗೆ ಬರುತ್ತದೆ. ಯೋಜನೆಯ ಅಂಶಗಳು ಹೀಗಿವೆ: ಮಾಸಿಕ ಆದಾಯ ₹21,000ರೊಳಗಿನ ನೌಕರರು ತಿಂಗಳಿಗೆ ₹100 ವಂತಿಕೆ ಪಾವತಿಸಿದರೆ, ಸರ್ಕಾರವೂ ₹100 ಸೇರಿಸಿ ವಾರ್ಷಿಕ ವೆಚ್ಚದ ಅರ್ಧವನ್ನು ಭರಿಸುತ್ತದೆ. ₹21,000ಕ್ಕಿಂತ ಹೆಚ್ಚು ಆದಾಯವಿರುವ ಸಿಬ್ಬಂದಿಗೆ ಸರ್ಕಾರ ₹60 ಕೊಡುಗೆ ನೀಡುತ್ತಿದ್ದು, ಸಿಬ್ಬಂದಿ ₹140 ಪಾವತಿಸಬೇಕಾಗುತ್ತದೆ. ಇದು…

ಗೃಹ ಸಚಿವ ಜಮೀರ್ ರಾಜೀನಾಮೆಗೆ ಸಿ.ಟಿ. ರವಿ ಆಗ್ರಹ

ಬೆಂಗಳೂರು: “ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಇವೆರಡೂ ಒಂದು ನಾಣ್ಯದ ಎರಡು ಮುಖಗಳು” ಎಂಬ ಗಂಭೀರ ಆರೋಪವನ್ನು ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮಾಡಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸ್ಕ್ಯಾನ್ ಮಾಡುವ ಅಗತ್ಯವಿಲ್ಲ; ಕಣ್ಣಿಗೆ ಕಾಣುವಷ್ಟು ಸ್ಪಷ್ಟವಾಗಿದೆ. ಕಾಂಗ್ರೆಸ್ ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಅಳಲು ತೋಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು. ಸಿ.ಟಿ. ರವಿ ಅವರು, ಉದ್ಯಮಿಗಳು ಹಾಗೂ ಸಾಮಾನ್ಯ ನಾಗರಿಕರು ಎದುರಿಸುತ್ತಿರುವ ಲಂಚದ ಅನುಭವದ ವಿವರಗಳನ್ನೂ ಉದಾಹರಿಸಿದರು. “ಬಿಲ್ಡಿಂಗ್ ಪ್ಲಾನ್ ಮಂಜೂರಿಗೆ ಪ್ರತಿ ಅಡಿಗೆ 100 ರೂ. ಲಂಚ ನೀಡಬೇಕಾಗುತ್ತಿದೆ. ಭೂ ಬದಲಾವಣೆಗೆ ಎಕರೆಗೂ 25 ಲಕ್ಷ ರೂ. ಲಂಚ ಕೇಳಲಾಗುತ್ತಿದೆ. ಎಲ್ಲ ಇಲಾಖೆಗಳಲ್ಲಿ ಲಂಚದ ಬೇಡಿಕೆ ನಡೆಯುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಅನುದಾನ ಪಡೆಯಲು ಅಡ್ವಾನ್ಸ್…

ಭಾರೀ ಮಳೆಗೆ ರಾಜ್ಯದ 3 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕನ್ನಡ, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ತೀವ್ರಗೊಂಡಿದೆ. ಹವಾಮಾನ ಇಲಾಖೆ ಬುಧವಾರವೂ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಉಂಟಾಗುವ ತೊಂದರೆಗಳನ್ನು ಮನಗಂಡು ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ (ಜೂನ್‌ 25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತುರ್ತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಭಾಗದ ಸಾರ್ವಜನಿಕರು ಹಾಗೂ ಪಾಲಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತದಿಂದ ಮನವಿ ಮಾಡಲಾಗಿದೆ.  

ವಸತಿ ಲಂಚಾವತಾರ; ಯಾವುದೇ ತನಿಖೆಗೆ ಸಿದ್ದ ಎಂದ ಜಮೀರ್

ಬೆಂಗಳೂರು: ಬಡವರಿಗೆ ಮನೆ ಹಂಚಿಕೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತು ಸಮಗ್ರ ತನಿಖೆ ನಡೆಯಲಿ ಎಂದಿದ್ದಾರೆ. ಹಣ ಪಡೆದು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಆರೋಪವನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ನಾಯಕರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ನಡುವೆ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಮನೆ ಹಂಚಿಕೆ ಮಾಡಲು ಹಣ ತೆಗೆದುಕೊಳ್ಳುತ್ತಿರುವ ಬಗ್ಗೆ ಯಾವುದಾದರೂ ದಾಖಲೆ ಇದೆಯೇ? ಹಣಕ್ಕೆ ಬೇಡಿಕೆ ಇಟ್ಟವರು ಯಾರು ಎಂದು ಬಿ.ಆರ್. ಪಾಟೀಲ್ ನನಗೆ ಹೇಳಲಿ ಎಂದು ಸವಾಲು ಹಾಕಿದ್ದಾರೆ. ಲಂಚ ಪಡೆದವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ,…

ರಾಜ್ಯದ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವ್ರು ರಾಷ್ಟ್ರಪತಿಯನ್ನು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ. ಬಿಲ್‌ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ. ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23%…