ನವದೆಹಲಿ: ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ರೈತರಿಗೆ ಬೇಕಾದ ರಸಗೊಬ್ಬರಗಳನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೀಡಲಾಗಿದ್ದು, ಸರಿಯಾದ ಕ್ರಮದಲ್ಲಿ ಬಳಸಬೇಕಿದೆ. ಇನ್ನೂ ರಸಗೊಬ್ಬರದ ಬೇಡಿಕೆ ಹೆಚ್ಚಿದ್ದು, ಅಗತ್ಯ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಸರಬರಾಜು ಮಾಡುವಂತೆ ಕೋರಿ ಸೋಮವಾರ ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಶ್ರೀ ಜೆಪಿ ನಡ್ಡಾ ರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ರೈತರ ಬೆನ್ನೆಲುಬಾಗಿ ನಿಂತಿದ್ದು, ಎಂತಹದ್ದೇ ಸಮಯದಲ್ಲೂ ರೈತರ ಹಿತ ಕಾಪಾಡುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದಿರುವ ಜೋಶಿ, ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ…
Month: July 2025
ದಿಯೋಘರ್‌ನಲ್ಲಿ ಬಸ್-ಟ್ರಕ್ ಡಿಕ್ಕಿ: 18 ಕನ್ವಾರಿಯರು ಸಾವು
ರಾಂಚಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಜಮುನಿಯಾ ಗ್ರಾಮದ ಬಳಿ ಮಂಗಳವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿನೆಂಟು ಕನ್ವಾರಿಯರು ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ. ಬಾಬಾ ಬೈದ್ಯನಾಥ ಧಾಮ ದೇವಾಲಯದಲ್ಲಿ ಪವಿತ್ರ ನೀರನ್ನು ಅರ್ಪಿಸಲು ಸಾವಿರಾರು ಭಕ್ತರು ಪ್ರಯಾಣಿಸುವ ಶ್ರಾವಣಿ ಮೇಳದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ದಿಯೋಘರ್ ಸಂಸದ ನಿಶಿಕಾಂತ್ ದುಬೆ ಈ ಕುರಿತು X ನಲ್ಲಿ ಪೋಸ್ಟ್ ಹಾಕಿದ್ದಾರೆ. “ನನ್ನ ಲೋಕಸಭಾ ಕ್ಷೇತ್ರವಾದ ದಿಯೋಘರ್‌ನಲ್ಲಿ, ಶ್ರಾವಣ ಮಾಸದ ಕನ್ವಾರಿಯ ಯಾತ್ರೆಯ ಸಮಯದಲ್ಲಿ, ಬಸ್ ಮತ್ತು ಟ್ರಕ್ ಅಪಘಾತದಿಂದಾಗಿ 18 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಬಾಬಾ ಬೈದ್ಯನಾಥ ಜಿ ಅವರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಹೇಳಿದ್ದಾರೆ. ದಿಯೋಘರ್‌ನ ಮೋಹನಪುರ ಬ್ಲಾಕ್‌ನಲ್ಲಿರುವ ಅಪಘಾತ ಸ್ಥಳವು ಉತ್ತರಕ್ಕೆ ಹರಿಯುವ ಜಮುನಿಯಾ ನದಿಯ ದಡದಲ್ಲಿ, ಪ್ರಸಿದ್ಧ ಶಿವ-ಪಾರ್ವತಿ ದೇವಾಲಯದ ಬಳಿ ಇದೆ. ಬಾಬಾ…
ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಅಷ್ಲೀಲಾ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಈ ಬಗ್ಗೆ ನಟಿ ರಮ್ಯಾ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿ, ಅಸಭ್ಯ ಸಂದೇಶಗಳನ್ನು ಕಳಿಸಲಾಗಿದೆ. ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ಕೋರಿ ರಮ್ಯಾ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಈ ಮೂಲಕ ಅವರು, ಹೆಣ್ಣುಮಕ್ಕಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲವಾಗಿ ನಿಂದಿಸುವವರ ವಿರುದ್ಧ ಅವರು ಸಮರಾ ಸಾರಿದ್ದಾರೆ. ‘ಸೆಲೆಬ್ರಿಟಿಯಾದ ನಮಗೆ ಟ್ರೋಲ್ ಇದ್ದೇ ಇರುತ್ತದೆ. ಆದರೆ ಈ ಮಟ್ಟಕ್ಕೆ ನನಗೆ ಯಾವಾಗಲೂ ಅನುಭವ ಆಗಿರಲಿಲ್ಲ’ ಎಂದಿರುವ ನಟಿ ರಮ್ಯಾ, ರೇಣುಕಾಸ್ವಾಮಿ…
ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಸಂಸ್ಥೆ, ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಏಕಕಾಲಿಕ ದಾಳಿ ನಡೆಸಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಮತ್ತು ಚಿತ್ರದುರ್ಗ ಸೇರಿದಂತೆ ಐದು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮತ್ತು ಆಸ್ತಿಗಳ ಮೇಲೆ ತನಿಖಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಎಂ. ಆಂಜನೇಯಮೂರ್ತಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದ ಮನೆ, ಜಕ್ಕೂರು ಕಾಂಪ್ಲೆಕ್ಸ್, ತುಮಕೂರು, ಮಧುಗಿರಿ ಹಾಗೂ ಗೌರಿಬಿದನೂರಿನ ಕಚೇರಿಗಳಲ್ಲೂ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಟಿಹೆಚ್‌ಒ ಡಾ. ವೆಂಕಟೇಶ್ ಅವರ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ನಿವಾಸ ಮತ್ತು ಕ್ಲಿನಿಕ್‌ಗಳಲ್ಲಿ ದಾಳಿ ನಡೆದಿದೆ. ಹಾಸನ ಜಿಲ್ಲೆ ತೋಟಗಾರಿಕೆ ಇಲಾಖೆಯ ಸಹಾಯಕ…
ಕೇರಳ ಮೂಲದ ನಿಮಿಷ ಪ್ರಿಯಾಗೆ ಬಿಗ್ ರಿಲೀಫ್; ಗಲ್ಲು ಶಿಕ್ಷೆ ರದ್ದುಪಡಿಸಿದ ಯಮನ್
ಸನಾ: ಯಮನ್ ದೇಶದಲ್ಲಿ ಗಲ್ಲು ಶಿಕ್ಷೆಗೆ ಎದುರಿಸಬೇಕಿದ್ದ ಕೇರಳ ಮೂಲದ ನಿಮಿಷ ಪ್ರಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ. ಗಲ್ಲು ಶಿಕ್ಷೆಯನ್ನು ಅಧಿಕೃತವಾಗಿರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಯಿಂದ ತಿಳುದುಬಂದಿದೆ. ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಅಂತಿಮ ಸಭೆಯ ನಂತರ ಈ ಸುದ್ದಿ ಹೊರಬಿದ್ದಿದೆ. ಜು.16ಕ್ಕೆ ಗಲ್ಲುಶಿಕ್ಷೆ ಎದುರಿಸಬೇಕಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ. ಈ ಹಿಂದೆ ತಾತ್ಕಾಲಿಕವಾಗಿ ಮುಂದೂಡಿದ್ದ ಮರಣದಂಡನೆಯನ್ನು ಇದೀಗ ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ತಿಳಿಸಿದೆ.
ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಅಮನಾತಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೀಗ ಅದೇ ಸರ್ಕಾರ ಈ ಪೊಲೀಸ್ ಅಧಿಕಾರಿಗಳ ಅಮಾನತನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದ ಸರ್ಕಾರ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಈ.ಎಸ್.ಐ. ಬಾಲಕೃಷ್ಣ ಹಾಗೂ ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಅದರ ಬೆನ್ನಲ್ಲೇ. ಸೋಮವಾರ ಐಪಿಎಸ್ ಅಧಿಕಾರಿಗಳಾದ ಬಿ.ದಯಾನಂದ್ ಸಹಿತ ಪೊಲೀಸ್…
ಕೇಂದ್ರದ ಜೊತೆ ಮಾತನಾಡಿ ರಾಜ್ಯಕ್ಕೆ ಗೊಬ್ಬರ ಕೊಡಿಸಿ; ಸಂಸದರಿಗೆ ಸಿಎಂ ಆಗ್ರಹ
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದ್ದಾರೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದವರು ಹೇಳಿದ್ದಾರೆ. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿಎಂ,. ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದುಹೇಳಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು. ಹಾಲು ಉತ್ಪಾದಕರ ಸಂಘದ…
ಆಪರೇಷನ್ ಸಿಂಧೂರ್ ಯಶಸ್ವಿ: 9 ಉಗ್ರ ನೆಲೆಗಳ ನಾಶ, 100 ಭಯೋತ್ಪಾದಕರ ಹತ್ಯೆಯಾಗಿದೆ ಎಂದ ಕೇಂದ್ರ
ನವದೆಹಲಿ: ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ 9 ಉಗ್ರ ನೆಲೆಗಳನ್ನು ನಾಶಪಡಿಸಿ, 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸೋಮವಾರ ಚರ್ಚೆಯಲ್ಲಿ ಭಾಗವಹಿಸಿದ ಸಚಿವರು, ಈ ಕಾರ್ಯಾಚರಣೆ ದೇಶದ ಭದ್ರತಾ ವ್ಯವಸ್ಥೆಯ ಶಕ್ತಿ ಹಾಗೂ ತಾಕತ್ತನ್ನು ಮತ್ತೊಮ್ಮೆ ಪ್ರತಿಪಾದಿಸಿದೆ ಎಂದು ಹೇಳಿದರು. “ಪಾಕಿಸ್ತಾನವು ಯಾವುದೇ ಗುರಿಯನ್ನು ಹೊಡೆಯಲು ವಿಫಲವಾಯಿತು. ನಮ್ಮ ಯಾವುದೇ ನಿರ್ಣಾಯಕ ಆಸ್ತಿಗೆ ಹಾನಿಯಾಗಿಲ್ಲ. ನಮ್ಮ ಭದ್ರತಾ ವ್ಯವಸ್ಥೆ ಅಜೇಯವಾಗಿತ್ತು,” ಎಂದು ತಿಳಿಸಿದರು. ಭಾರತವು ತನ್ನ ರಾಜಕೀಯ ಹಾಗೂ ಸೈನಿಕ ಗುರಿಗಳನ್ನು ಸಂಪೂರ್ಣ ಸಾಧಿಸಿದ ಬಳಿಕವೇ ಕಾರ್ಯಾಚರಣೆ ವಿರಾಮಗೊಂಡಿತು. ಯಾವುದೇ ಬಾಹ್ಯ ಒತ್ತಡದ ಅಡಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ,” ಎಂದು ಸ್ಪಷ್ಟಪಡಿಸಿದರು. ಮೇ 10ರಂದು ಭಾರೀ ಹೊಡೆತ ಅನುಭವಿಸಿದ ನಂತರ ಪಾಕಿಸ್ತಾನ ಭಾರತದ ಡಿಜಿಎಂಒ ಅವರನ್ನು ಸಂಪರ್ಕಿಸಿ ಕಾರ್ಯಾಚರಣೆಗೆ ವಿರಾಮ ಕೇಳಿದ ಕಾರಣದಪ್ಪಟ್ಟೇ ಕಾರ್ಯಾಚರಣೆ…
ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ
ಬೆಂಗಳೂರು: ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರತಿಭಟನಾ ಅಖಾಡಲ್ಲೇ ಧುಮುಕಿರುವ ರಾಜ್ಯದ ಆಶಾ ಕಾರ್ಯಕರ್ತೆಯರು, ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ತಯಾರಿ ನಡೆಸಿದ್ದಾರೆ. ಕಳೆದ ವರ್ಷದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸತತ ಪ್ರತಿಭಟನೆ ನಡೆಸಿರುವ ಆಶಾ ಕಾರ್ಯಕರ್ತೆಯರು, ಬೆಂಗಳೂರಿನಲ್ಲೂ ಭಾರೀ ಹೋರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ ನುಡಿದಂತೆ ನಡೆದಿಲ್ಲ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಇತ್ತೀಚಿಗೆ ರಾಜ್ಯದ ಹಲವೆಡೆ ಸರಣಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಾಕಾರ್ಯಕರ್ತೆಯರು ಇದೀಗ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ತಯಾರಿ ನಡೆಸಿದ್ದಾರೆ. ಆಶಾಗಳ ಬೇಡಿಕೆಗಳು: ಮುಖ್ಯಮಂತ್ರಿಗಳು ಘೋಷಿಸಿರುವ ರಾಜ್ಯದ ಗೌರವಧನ…
ಅಕ್ಟೋಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ
ಮೈಸೂರು: ಅಕ್ಟೋಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ ಬಗ್ಗೆ ಅಶೋಕ್ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿದರು. ಜೆಡಿಎಸ್‌ನಿಂದ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್‌ನಲ್ಲೇ ಇದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದಲೇ ಖರ್ಗೆ ಸಿಎಂ ಆಗದಿರುವ ಬಗ್ಗೆ ಹೇಳಿದ್ದಾರೆ. ಈಗಲಾದರೂ ನನ್ನನ್ನು ಸಿಎಂ ಮಾಡಿ ಋಣ ತೀರಿಸಿ ಎಂದು ಅವರು ಹೇಳಿದ್ದಾರೆ. ಸಚಿವ ರಾಜಣ್ಣ ಈಗಾಗಲೇ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಖರ್ಗೆಯವರಯು ಸರಿಯಾದ ಸಮಯಕ್ಕೆ ಮಾವಿನ ಹಣ್ಣಿಗೆ ಕಲ್ಲು ಹೊಡೆದಿದ್ದಾರೆ. ಅಕ್ಟೋಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದರು. ಎಸ್.ಎಂ.ಕೃಷ್ಣ ನಿಧನಾನಂತರ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡುತ್ತಿದ್ದಾರೆ. ಎಸ್.ಎಂ.ಕೃಷ್ಣ ಐಟಿ ಬಿಟಿಗೆ ನೀಡಿದ ಕೊಡುಗೆಯಿಂದಲೇ ಇಷ್ಟು ಆದಾಯ ರಾಜ್ಯಕ್ಕೆ ಬರುತ್ತಿದೆ. ನಾನು ಜ್ಯೋತಿಷ್ಯ ಹೇಳಲ್ಲ. ಆದರೆ ಖಚಿತವಾಗಿ…
