ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ…

ವಿಚ್ಛೇದಿತ ಪತ್ನಿಗೆ 4 ಲಕ್ಷ ರೂ. ಜೀವನಾಂಶ: ಮೊಹಮ್ಮದ್ ಶಮಿಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ನವದೆಹಲಿ: ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರು ತಮ್ಮ ವಿಚ್ಛೇದಿತ ಪತ್ನಿ ಹಸಿನ್ ಜಹಾನ್ ಅವರಿಗೆ ತಿಂಗಳಿಗೆ 1.5 ಲಕ್ಷ ರೂ. ಮಧ್ಯಂತರ ಜೀವನಾಂಶ ಮತ್ತು ತಮ್ಮ ಅಪ್ರಾಪ್ತ ಮಗಳ ಆರೈಕೆ ಮತ್ತು ವೆಚ್ಚಕ್ಕಾಗಿ 2.5 ಲಕ್ಷ ರೂ. ಪಾವತಿಸುವಂತೆ ಮಂಗಳವಾರ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಮೊಹಮ್ಮದ್ ಶಮಿ ಅವರು ಹಸಿನ್ ಜಹಾನ್ ಅವರಿಗೆ ತಿಂಗಳಿಗೆ 50 ಸಾವಿರ ರೂ. ಮತ್ತು ತಮ್ಮ ಮಗಳಿಗೆ 80 ಸಾವಿರ ರೂ. ಮಧ್ಯಂತರ ಆರ್ಥಿಕ ಪರಿಹಾರವಾಗಿ ನೀಡಬೇಕೆಂದು ಆದೇಶಿಸಿದ್ದ ಅಲಿಪೋರ್ ಸೆಷನ್ಸ್ ನ್ಯಾಯಾಧೀಶರ ತೀರ್ಪನ್ನು ಪ್ರಶ್ನಿಸಿ ಹಸಿನ್ ಜಹಾನ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರ ಪೀಠ ವಿಚಾರಣೆ ನಡೆಸುತ್ತಿದೆ. ಹಸಿನ್ ಜಹಾನ್ ಸಲ್ಲಿಸಿದ ಮೇಲ್ಮನವಿಯಲ್ಲಿ, ಅಲಿಪೋರ್‌ನ ಸೆಷನ್ಸ್ ನ್ಯಾಯಾಧೀಶರು ‘ಅಸಮರ್ಪಕ ಮತ್ತು ಸಾಕಷ್ಟಿಲ್ಲದ’ ಮಧ್ಯಂತರ ಪರಿಹಾರವನ್ನು ನೀಡಿದ್ದಾರೆ ಎಂದು ವಾದಿಸಲಾಗಿದೆ. ಆದರೆ ಅವರ ಮಾಸಿಕ ಆದಾಯವು…