ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮುಂಗಾರು ಮಳೆಯ ಅಬ್ಬರ. ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿರುಗಾಳಿಯೊಡನೆ ಮಳೆ ಸುರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜನತೆಗೆ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಅಲ್ಲದೆ, ಪ್ರವಾಹಕ್ಕೆ ಸಾದರವಾದ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆ ನಿರೀಕ್ಷೆಯಿದೆ. ಆದರೆ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆಯಿರುವುದರಿಂದ ಅಲ್ಲಿ ಸಹ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಹವಾಮಾನ ವೈಪರಿತ್ಯದಿಂದಾಗಿ ಜನಜೀವನಕ್ಕೆ ಅಡ್ಡಿಯುಂಟಾಗುವ ಸಾಧ್ಯತೆ ಇದ್ದು, ರೈತರು ಹಾಗೂ ಪ್ರವಾಸಿಗರಿಗೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.
Day: July 3, 2025
ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು
ಫರಿದಾಬಾದ್: ವ್ಯಾಯಾಮದ ವೇಳೆ ಹೃದಯಾಘಾತವಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೃತ ವ್ಯಕ್ತಿಯನ್ನು ಫರಿದಾಬಾದ್‌ನ ಸೆಕ್ಟರ್-3 ರ ರಾಜಾ ನಹರ್ ಸಿಂಗ್ ಕಾಲೋನಿಯ ನಿವಾಸಿ ಪಂಕಜ್ ಎಂದು ಗುರುತಿಸಲಾಗಿದೆ. ಅವರು ಕಳೆದ ಐದು ತಿಂಗಳಿಂದ ತಮ್ಮ ಸ್ನೇಹಿತ ರೋಹಿತ್ ಜೊತೆಗೆ ಸೆಕ್ಟರ್-9 ರ ಶ್ರೋಟಾ ವೆಲ್‌ನೆಸ್ ಜಿಮ್‌ಗೆ ನಿಯಮಿತವಾಗಿ ಹೋಗುತ್ತಿದ್ದವರು. ಮಂಗಳವಾರ ಬೆಳಿಗ್ಗೆ ಸುಮಾರು 10:30ಕ್ಕೆ ಪಂಕಜ್ ಹಾಗೂ ರೋಹಿತ್ ಜಿಮ್‌ಗೆ ಹಾಜರಾಗಿದ್ದು, ವ್ಯಾಯಾಮ ಆರಂಭಕ್ಕೂ ಮುನ್ನ ಪಂಕಜ್ ಕಪ್ಪು ಕಾಫಿ ಸೇವಿಸಿದ್ದರು ಎಂದು ರೋಹಿತ್ ತಿಳಿಸಿದ್ದಾರೆ. ಕೇವಲ ಎರಡು ನಿಮಿಷಗಳ ವ್ಯಾಯಾಮದ ನಂತರ ಅವರು ಕುಸಿದುಬಿದ್ದರು.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.