ಹನೂರು: ಪಟ್ಟಣ ಪಂಚಾಯ್ತಿಯ 15ನೇ ಹಣಕಾಸು ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದುಕೊಂಡಿರುವ ಹಣವನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮುಮ್ತಾಜ್ ಬಾನು ತಿಳಿಸಿದ್ದಾರೆ. ಮಮ್ತಾಜ್ ಬಾನು ರವರ ಅಧ್ಯಕ್ಷತೆಯಲ್ಲಿ ನಡೆದ ಹನೂರು ಪಟ್ಟಣ ಪಂಚಾಯಿತಿ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಪಟ್ಟಣ ಪಂಚಾಯಿತಿಯ 15ನೇ ಹಣಕಾಸು ಯೋಜನೆಯ ಎಸ್ ಎಫ್ ಸಿ ಯೋಜನೆಯಡಿ ಪೂರ್ಣಗೊಂಡಿರುವ ಕಾಮಗಾರಿಗಳ ಪೈಕಿ 10.62 ಲಕ್ಷ, 15ನೇ ಹಣಕಾಸು ಯೋಜನೆ ನಿರ್ಬಂಧಿತ ಅನುದಾನ 18.03 ಲಕ್ಷ ಒಟ್ಟಾರೆ 28.05 ಲಕ್ಷ ಹಣ ಉಳಿತಾಯವಾಗಿದೆ ಎಂದರು. ಈ ಪೈಕಿ ರಸ್ತೆ ಚರಂಡಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ 10.62 ಲಕ್ಷ, ಪೈಪ್ಲೈನ್ ಅಥವಾ ಬೋರ್ವೆಲ್ ಕೊರೆಸಲು 18.03 ಲಕ್ಷ ಅನುದಾನದ ಲಭ್ಯತೆ ಇದೆ. ಯಾವ ವಾರ್ಡ್ ಗಳಲ್ಲಿ ಇದುವರೆಗೂ ಮೂಲಭೂತ ಸೌಕರ್ಯ ಹಾಗೂ ಕುಡಿಯುವ…
Day: July 19, 2025
ಟ್ರೇಲರ್ ಬಿಡುಗಡೆ ವೇಳೆ ಜಾಕಿ ಶ್ರಾಫ್‌ಗೆ ಟೈಗರ್ ಶ್ರಾಫ್ ಅಚ್ಚರಿ
ಟ್ರೇಲರ್ ಬಿಡುಗಡೆ ವೇಳೆ ಜಾಕಿ ಶ್ರಾಫ್‌ಗೆ ಟೈಗರ್ ಶ್ರಾಫ್ ಅಚ್ಚರಿಮುಂಬೈ: ಸುನೀಲ್ ಶೆಟ್ಟಿ ಜೊತೆ ನಟನೆಯ ‘ಹಂಟರ್ 2 – ಟೂಟೇಗಾ ನಹಿ ತೋಡೇಗಾ’ ವೆಬ್‌ಸೀರೀಸ್‌ನ ಟ್ರೇಲರ್ ಬಿಡುಗಡೆಯ ಸಂದರ್ಭದಲ್ಲಿ ಹಿರಿಯ ನಟ ಜಾಕಿ ಶ್ರಾಫ್‌ಗೆ ಪುತ್ರ ಟೈಗರ್ ಶ್ರಾಫ್ ಭಾವುಕರಾಗಿ ಅಚ್ಚರಿಯ ಸನ್ನಿವೇಶ ಸೃಷ್ಟಿಸಿದರು. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಜಾಕಿ ಶ್ರಾಫ್ ಮತ್ತು ಸುನೀಲ್ ಶೆಟ್ಟಿ ಮಾಧ್ಯಮಗಳ ಜೊತೆ ಸಂಭಾಷಣೆಗೆ ಸಿದ್ಧರಾಗುತ್ತಿದ್ದಾಗ, ವೇದಿಕೆಗೆ ಹಠಾತ್‌ನೆ ಟೈಗರ್ ಹಾಜರಾದರು. ಇಬ್ಬರೂ ಹಿರಿಯ ನಟರು ಕ್ಷಣಮಾತ್ರ ಅಚ್ಚರಿ ಮತ್ತು ಕುತೂಹಲಕ್ಕೆ ಕಾರಣರಾದರು. ಟ್ರೇಲರ್ ವೀಕ್ಷಿಸಿದ ಬಳಿಕ ‘ತಂದೆ ಜಾಕಿ ಹಾಗೂ ಸುನೀಲ್ ಶೆಟ್ಟಿ ಜೊತೆ ಒಂದು ಚಿತ್ರದಲ್ಲಿ ಕಾಣಿಸಿಕೊಳ್ಳುವ ಆಸೆಯಿದೆಯೆ?’ ಎಂಬ ಪ್ರಶ್ನೆಗೆ ಟೈಗರ್ ಶ್ರದ್ಧೆಯಿಂದ, “ಮೇರಿ ಔಕಾತ್ ನಹಿ (ನನಗೆ ಅದರ ಮಟ್ಟ ಇಲ್ಲ)” ಎಂದು ಉತ್ತರಿಸಿದರು. ‘ಅವರು ನಿರ್ದೇಶಕರಾಗಲಿ, ನಿರ್ಮಾಪಕರಾಗಲಿ ಅಥವಾ ಮನೆಯವರು ಆಗಲಿ, ಎಲ್ಲರೊಂದಿಗೆ…
ಏರ್ ಇಂಡಿಯಾ ದುರಂತದ ಸಂತ್ರಸ್ತರ ನೆರವಿಗಾಗಿ 500 ಕೋಟಿ ರೂ.ಗಳ ಟ್ರಸ್ಟ್ ಸ್ಥಾಪಿಸಿದ ಟಾಟಾ ಸನ್ಸ್
ಮುಂಬೈ: ಜೂನ್ 12 ರಂದು ಅಹಮದಾಬಾದ್‌ನಲ್ಲಿ 260 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ವಿಮಾನ AI-171 ರ ದುರಂತ ಅಪಘಾತದ ಬಲಿಪಶುಗಳಿಗೆ ಸಮರ್ಪಿತವಾದ 500 ಕೋಟಿ ರೂ.ಗಳ ಸಾರ್ವಜನಿಕ ದತ್ತಿ ಟ್ರಸ್ಟ್‌ನ ನೋಂದಣಿಯನ್ನು ಟಾಟಾ ಸನ್ಸ್ ಶುಕ್ರವಾರ ಔಪಚಾರಿಕವಾಗಿ ಪೂರ್ಣಗೊಳಿಸಿದೆ. ಟ್ರಸ್ಟ್ ಅನ್ನು ‘AI-171 ಸ್ಮಾರಕ ಮತ್ತು ಕಲ್ಯಾಣ ಟ್ರಸ್ಟ್’ ಎಂದು ಕರೆಯಲಾಗುವುದು ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ. ಇದು ಮೃತರ ಅವಲಂಬಿತರು/ಸಂಬಂಧಿಗಳಿಗೆ, ಗಾಯಗೊಂಡವರಿಗೆ ಮತ್ತು ಅಪಘಾತದಿಂದ ನೇರವಾಗಿ ಅಥವಾ ಮೇಲಾಧಾರವಾಗಿ ಪರಿಣಾಮ ಬೀರುವ ಇತರ ಎಲ್ಲರಿಗೂ ತಕ್ಷಣದ ಮತ್ತು ನಿರಂತರ ಸೇವೆ ಒದಗಿಸುತ್ತದೆ ಎಂದು ಭರವಸೆ ನೀಡಿದೆ. “ಅಪಘಾತದ ನಂತರ ಅಮೂಲ್ಯವಾದ ಸಾಂಸ್ಥಿಕ ಬೆಂಬಲ ಮತ್ತು ಸೇವೆಯನ್ನು ಒದಗಿಸಿದ ಮೊದಲ ಪ್ರತಿಕ್ರಿಯೆ ನೀಡುವವರು, ವೈದ್ಯಕೀಯ ಮತ್ತು ವಿಪತ್ತು ಪರಿಹಾರ ವೃತ್ತಿಪರರು, ಸಾಮಾಜಿಕ ಕಾರ್ಯಕರ್ತರು ಮತ್ತು ಸರ್ಕಾರಿ ಸಿಬ್ಬಂದಿ ಅನುಭವಿಸಿದ ಯಾವುದೇ ಆಘಾತ ಅಥವಾ ಸಂಕಷ್ಟವನ್ನು…
ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ; ಪ್ರಮುಖ ಮಸೂದೆಗಳಿಗೆ ತಯಾರಿ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ ನ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವರು. ಈ ಬಾರಿ ಅಧಿವೇಶನವು ರಾಜಕೀಯವಾಗಿ ತೀವ್ರ ಚರ್ಚೆಗೆ ಕಾರಣವಾಗುವ ಸಾಧ್ಯತೆ ಹೊಂದಿದ್ದು, ಸರ್ಕಾರದ ನಿರ್ಧಾನಗಳನ್ನು ಗುರಿಯಾಗಿಸಿ ವಿಪಕ್ಷಗಳು ಉಗ್ರ ರಣತಂತ್ರ ರೂಪಿಸುತ್ತಿವೆ. ಐಪಿಎಲ್ ವಿಜಯೋತ್ಸವ ಸಂದರ್ಭ ನಡೆದ ಕಾಲ್ತುಳಿತ ಪ್ರಕರಣ, ನೂತನ ಜಾತಿ ಗಣತಿ ಕುರಿತ ಸರ್ಕಾರದ ನಿರ್ಧಾರ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಸಮೀಕ್ಷೆಯಲ್ಲಿನ ಅಸಮಾನತೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ದಪ್ಪ ಧ್ವನಿ ಎತ್ತಲಿವೆ. ಪ್ರಮುಖ ಮಸೂದೆಗಳ ಮಂಡನೆ ನಿರೀಕ್ಷೆ ಅಧಿವೇಶನದಲ್ಲಿ…
ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ 50 ಕೋಟಿ, ಬಿಜೆಪಿ-ಜೆಡಿಎಸ್ ಕ್ಷೇತ್ರಕ್ಕೆ 25 ಕೋಟಿ ಅನುದಾನ; ಪ್ರತಿಪಕ್ಷ ಆಕ್ರೋಶ
ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂಬ ಸಿಎಂ ನಡೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂದು ಹೇಳಿದ್ದಾರೆ. ಈ ರೀತಿ ತಾರತಮ್ಯ ಮಾಡಿ, ಕೇಂದ್ರದ ಮೇಲೆ ತಾರತಮ್ಯದ ಆರೋಪ ಹೊರಿಸುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡಬೇಕು. ಇದರಿಂದ ಸಮಾನ ಅಭಿವೃದ್ಧಿ ಸಾಧ್ಯ ಎಂದರು. ಬೆಂಗಳೂರಿನಲ್ಲಿ ಗಟ್ಟಿಯಾದ ಕಲ್ಲು ಇರುವುದರಿಂದ ಸುರಂಗ ಮಾಡುವುದು ಕಷ್ಟ. ಅದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಬಹುದಿತ್ತು. ಮೊದಲು ಮೇಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ಸಾಕು. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ…
ಕಾಲ್ತುಳಿತ ಪ್ರಕರಣ, ಸರ್ಕಾರದ ಪಾತ್ರವಿದ್ದರೂ ನುಣುಚಿಕೊಳ್ಳಲು ಯತ್ನ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳುತ್ತಲೇ ಇದ್ದಿದ್ದರಿಂದ ಯಾವಾಗಲೂ ಸರ್ಕಾರವನ್ನು ಅಸ್ಥಿರತೆ ಕಾಡುತ್ತಿದೆ. ಈ ಸಮಾವೇಶದಿಂದ ಜನರಿಗೆ ಯಾವುದೇ ಉಪಯೋಗವಿಲ್ಲ. ವಾಲ್ಮೀಕಿ ನಿಗಮದಲ್ಲಿ ಹಗರಣ, 2,500 ರೈತರ ಆತ್ಮಹತ್ಯೆ 1200 ನವಜಾತ ಶಿಶುಗಳ ಸಾವು, ಬಾಣಂತಿಯರ ಸಾವು, ಹತ್ತಕ್ಕೂ ಅಧಿಕ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಆತ್ಮಹತ್ಯೆ, ಆರ್‌ಸಿಬಿ ಸಂಭ್ರಮಾಚರಣೆ ವೇಳೆ 11 ಸಾವು, ಇಂತಹ ಘಟನೆಗಳನ್ನು ಸಂಭ್ರಮಿಸಲು ಸಮಾವೇಶ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. ಆರ್‌ಸಿಬಿ ಕಾರ್ಯಕ್ರಮ ಸರ್ಕಾರದ ವತಿಯಿಂದ ನಡೆದಿಲ್ಲ ಎಂದು ಬಿಂಬಿಸಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದರು. ಸಿಐಡಿ ಹಾಗೂ ನ್ಯಾ.ಡಿಕುನ್ಹ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಸರ್ಕಾರದ ಪಾತ್ರದ…
‘ಆರ್‌ಎಸ್‌ಎಸ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಆಗಲಿಲ್ಲ’; ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ
ಬೆಂಗಳೂರು: ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ ಮತ್ತು ದೇಶದ ಯುವ ಜನತೆ ಸೋಲಿಸಲು ಕಟ್ಟಿಬದ್ಧವಾಗಿ ನಿಂತು ಹೋರಾಟ ಮುನ್ನಡೆಸುತ್ತದೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರೆಸ್ಸೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಸೈದ್ಧಾಂತಿಕವಾಗಿ ಯಾವತ್ತೂ ರಾಜಿ ಮಾಡಿಕೊಳ್ಳಬಾರದು. ರಾಜಿ ಮಾಡಿಕೊಂಡವರು ರಾಜಕೀಯವಾಗಿ ಉಳಿಯುವುದಿಲ್ಲ, ಬೆಳೆಯುವುದಿಲ್ಲ ಎಂದ ಅವರು, ಬಿಜೆಪಿ ಪಕ್ಷಕ್ಕೆ ಭಾರತೀಯ ಸಮಾಜಕ್ಕೆ ಪೂರಕವಾದ ಸಿದ್ಧಾಂತವೇ ಇಲ್ಲ. ಸಮಾಜವನ್ನು ವಿಭಜಿಸುವ ಸಿದ್ಧಾಂತ ಬಿಜೆಪಿಯದ್ದು. ಜೆಡಿಎಸ್ ರಾಜ್ಯದ ಕೆಲವೇ…
‘ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ’ ಸಿದ್ದರಾಮಯ್ಯ ವಿಷಾದ
ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದರು. ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ…
ಎಸ್ಸೆಸ್ಸೆಲ್ಸಿ ಪಿಯು ಫಲಿತಾಂಶ ಸುಧಾರಣೆಗಾಗಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗೆ ಟಾಸ್ಕ್
ರಾಯಚೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ರಾಯಚೂರು ಜಿಲ್ಲೆಯು ಪ್ರತಿ ಬಾರಿ ಕಳಪೆ ಸಾಧನೆ ತೋರುತ್ತಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ವಿಶೇಷವಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರು ಇದರ ಜವಾಬ್ದಾರಿ ಪಡೆದುಕೊಂಡು ಫಲಿತಾಂಶ ಸುಧಾರಣೆಗಾಗಿ ಸರ್ಕಾರಿ ಶಾಲೆಗಳಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಯೋಚಿಸಿ ಸುವ್ಯವಸ್ಥಿತ ಕಾರ್ಯದ ಯೋಜನೆ ಎಂದು ಸಚಿವರು ತಿಳಿಸಿದರು. ಫಲಿತಾಂಶ ಸುಧಾರಣೆಗೆ…
ಹಣಕಾಸಿನ ವಂಚನೆ, ಸಹಕಾರದ ಕೊರತೆ: ನೇಪಾಳದಲ್ಲಿ ಟೆಲಿಗ್ರಾಮ್ ನಿಷೇಧ
ಕಠ್ಮಂಡು: ಆರ್ಥಿಕ ವಂಚನೆ ಹಾಗೂ ಕಾನೂನು ಜಾರಿಗೆ ಸಹಕಾರ ನೀಡದ ಕಾರಣ ಮುಂದಿಟ್ಟುಕೊಂಡು ನೇಪಾಳ ದೂರಸಂಪರ್ಕ ಪ್ರಾಧಿಕಾರ (ಎನ್‌ಟಿಎ) ದೇಶದ ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರಿಗೆ ‘ಟೆಲಿಗ್ರಾಮ್’ ಸಂದೇಶಾಪ್ಲಿಕೇಶನ್‌ನ್ನು ತಕ್ಷಣವೇ ನಿರ್ಬಂಧಿಸಲು ಶುಕ್ರವಾರ ಆದೇಶ ಹೊರಡಿಸಿದೆ. ಇದು ದೇಶದ ಪೊಲೀಸ್ ಸೈಬರ್ ಬ್ಯೂರೋ ನೀಡಿದ ನಿರಂತರ ಎಚ್ಚರಿಕೆಗಳಿಗೆ ಪ್ರತಿಕ್ರಿಯೆಯಾಗಿ ಬಂದ ನಿರ್ಧಾರವಾಗಿದೆ. ‘ಟೆಲಿಗ್ರಾಮ್’ ಆನ್‌ಲೈನ್ ವಂಚನೆ, ನಕಲಿ ಉದ್ಯೋಗ ಆಹ್ವಾನಗಳು, ಕ್ರಿಪ್ಟೋಕರೆನ್ಸಿ ಹಗರಣ ಹಾಗೂ ಹಣ ವರ್ಗಾವಣೆಗಾಗಿ ವೇದಿಕೆಯಾಗಿ ಬಳಸಲಾಗುತ್ತಿದೆ ಎಂಬ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸೈಬರ್ ಅಪರಾಧಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳುವಂತೆ ಪ್ರಧಾನ ಮಂತ್ರಿ ಕಚೇರಿಯು ದೂರಸಂಪರ್ಕ ಹಾಗೂ ಐಟಿ ಸಚಿವಾಲಯಕ್ಕೆ ಪತ್ರ ಬರೆದಿತ್ತು. ನಂತರ ಸಚಿವಾಲಯ ಎನ್‌ಟಿಎಗೆ ‘ಟೆಲಿಗ್ರಾಮ್’ ನಿರ್ಬಂಧಿಸಲು ತುರ್ತು ಸೂಚನೆ ನೀಡಿತು. ಕಾನೂನು ಜಾರಿಗೆ ಸಂಬಂಧಿಸಿದ ವಿಚಾರಗಳಲ್ಲಿ ‘ಟೆಲಿಗ್ರಾಮ್’ ಸಹಕರಿಸಲು ನಿರಾಕರಿಸುತ್ತಿರುವುದು ನಿಷೇಧದ ಮತ್ತೊಂದು ಪ್ರಮುಖ…