ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು. ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದಾನೆ. ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ…
Day: July 22, 2025
ಶಿವಕಾಶಿಯ ಪಟಾಕಿ ಘಟಕದಲ್ಲಿ ಸ್ಫೋಟ: ಮೂವರು ಕಾರ್ಮಿಕರು ದುರ್ಮರಣ
ಚೆನ್ನೈ: ತಮಿಳುನಾಡಿನ ಶಿವಕಾಶಿ ಬಳಿಯ ಆಂಡಿಯಾಪುರಂನಲ್ಲಿರುವ ಖಾಸಗಿ ಪಟಾಕಿ ಉತ್ಪಾದನಾ ಘಟಕದಲ್ಲಿ ಸೋಮವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಸ್ಫೋಟದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟಾಕಿ ಘಟಕದಲ್ಲಿ ಕಾರ್ಮಿಕರು ದಿನನಿತ್ಯದ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಸ್ಫೋಟ ಸಂಭವಿಸಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ಒಂದು ಕೋಣೆಯಲ್ಲಿ ಸಂಗ್ರಹಿಸಲಾದ ಪಟಾಕಿಗಳು ಇದ್ದಕ್ಕಿದ್ದಂತೆ ಹೊತ್ತಿಕೊಂಡವು, ಸ್ಫೋಟಗಳ ಸರಣಿ ಪ್ರತಿಕ್ರಿಯೆಯನ್ನು ಉಂಟುಮಾಡಿತು. ಕಿವುಡಗೊಳಿಸುವ ಶಬ್ದವು ನೂರಾರು ಮೀಟರ್ ದೂರದಲ್ಲಿ ಕೇಳಿಬಂದಿತು, ಇದು ಸ್ಥಳೀಯ ನಿವಾಸಿಗಳಲ್ಲಿ ಭಯಭೀತಿಯನ್ನು ಉಂಟುಮಾಡಿತು. ಶಿವಕಾಶಿ ಮತ್ತು ಹತ್ತಿರದ ಪ್ರದೇಶಗಳಿಂದ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಸ್ಥಳೀಯ ವರದಿಗಳ ಪ್ರಕಾರ, ಸ್ಫೋಟ ಸಂಭವಿಸಿದಾಗ ಮೂವರು ಮೃತ ಕಾರ್ಮಿಕರು ಕಾರ್ಖಾನೆಯೊಳಗೆ ಸಿಲುಕಿಕೊಂಡಿದ್ದರು ಮತ್ತು ಅವರನ್ನು ಸಕಾಲದಲ್ಲಿ ರಕ್ಷಿಸಲಾಗಲಿಲ್ಲ. ಸ್ಫೋಟದ ಕಾರಣವನ್ನು…
ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಎನ್ ಚಲುವರಾಯಸ್ವಾಮಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಎಸ್ ನ ಕಾವೇರಿ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಇದು ಉತ್ತಮ ಸಮಯವಾಗಿದ್ದು, ತಾಲ್ಲೂಕುಗಳ ಕೊನೆಯ ಭಾಗದಲ್ಲಿರುವ ಕೆರೆಗಳಿಗೆ ನೀರು ತುಂಬುವಂತೆ ನೋಡಿಕೊಳ್ಳಿ ಎಂದರು. ಕೆ.ಆರ್.ಎಸ್ ಜಲಾಶಯ ತುಂಬಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ ಸಂಘಟನೆಗಳಿಂದ ಕೃಷಿ ಪದ್ಧತಿಗೆ ನೀರು ಸಿಗುತ್ತಿಲ್ಲ ಎಂಬ ದೂರು ಬಾರದಂತೆ ನೋಡಿಕೊಂಡು ಎಚ್ಚರಿಕೆಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು. ಕೆರೆಗಳಿಂದ ಹೂಳು ತೆಗೆಯುವ ಕೆಲಸ ಹಾಗೂ ಕೆರೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಇಲ್ಲ. ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅನುದಾನ ಪಡೆದು ಕೆರೆಗಳ ನಿರ್ವಹಣೆಯ ಕಾಮಗಾರಿಗಳನ್ನು ನಡೆಸಿ ಎಂದರು. ರೈತರ ಪರವಾಗಿ…