ಐಟಿಐ ಕೌಶಲ್ಯ ಅಭಿವೃದ್ಧಿ, ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಸರ್ಕಾರ ಒಪ್ಪಂದ

ಬೆಂಗಳೂರು: ರಾಜ್ಯಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ವಿದ್ಯಾರ್ಥಿಗಳಿಗೆ ಉದ್ಯಮ-ಸಂಬಂಧಿತ ಉದ್ಯೋಗ ಕೌಶಲ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾದ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳಲಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಶೈಕ್ಷಣಿಕ ಮತ್ತು ಕೈಗಾರಿಕಾ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದರು. ಐಟಿಐ ವಿದ್ಯಾರ್ಥಿಗಳಿಗೆ ಬಜಾಜ್ ಉತ್ಪಾದನಾ ವ್ಯವಸ್ಥೆಗಳು (ಬಿಎಂಎಸ್) ಅನ್ನು ಜಾರಿಗೆ ತರುವ ಪ್ರಸ್ತಾಪದ ಕುರಿತು ಪ್ರಮುಖವಾಗಿ ಚರ್ಚಿಸಿ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಯಿತು. ಕರ್ನಾಟಕವು 272 ಸರ್ಕಾರಿ, 192 ಅನುದಾನಿತ ಮತ್ತು 853 ಖಾಸಗಿ ಐಟಿಐಗಳನ್ನು ಹೊಂದಿದ್ದರೂ, ಹೆಚ್ಚಿನ ಪ್ರಮಾಣದ ಪದವೀಧರರು ಇನ್ನೂ ಉದ್ಯೋಗ ಹುಡುಕುತ್ತಿದ್ದಾರೆ. ಇಂತಹ ಸಹಯೋಗಗಳ ಉದ್ಯೋಗ ಸಮಸ್ಯೆ ನಿವಾರಿಸಬಹುದು ಎಂದು ಡಾ. ಪಾಟೀಲ್ ಗಮನ ಸೆಳೆದರು.…

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಡಿಜಿಟಲ್ ಕ್ರಾಂತಿಗೆ ಅಡ್ಡಿ: ಸಿ.ಟಿ.ರವಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುವ ಮೂಲಕ ಡಿಜಿಟಲ್ ಇಂಡಿಯಾ ಅನ್ನು ಹಿಮ್ಮೆಟ್ಟಿಸುವುದಕ್ಕೆ ಷಡ್ಯಂತ್ರ ಮಾಡಿದೆ ಎಂಬ ಅನುಮಾನ ಉಂಟಾಗುತ್ತಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಐ ಪಾವತಿಯಲ್ಲಿ ಜಾಗತಿಕ ದಾಖಲೆ ಬರೆದಿದೆ. ಆದರೆ ಕಾಂಗ್ರೆಸ್ ಸರ್ಕಾರದವರು ಜನರಿಗೆ ಆತಂಕ ಮತ್ತು ಭಯದ ವಾತಾವರಣ ನಿರ್ಮಿಸಿದ್ದಾರೆ. ಅಂದರೆ ಕೇಂದ್ರದ ಸರ್ಕಾರದ ಡಿಜಿಟಲ್ ವಹಿವಾಟು ಯೋಜನೆಯ ಪ್ರಯತ್ನಕ್ಕೆ ಭಯ ನಿರ್ಮಾಣ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ನೋಟಿಸ್ ಪರಿಣಾಮದಿಂದ ಸಣ್ಣ ವ್ಯಾಪಾರಿಗಳು ಭಯಗೊಂಡು ಯುಪಿಐ ಪಾವತಿ ಇಲ್ಲ; ನಗದು ಮಾತ್ರ ಎಂದು ಬೋರ್ಡ್ ಹಾಕಿದ್ದಾರೆ. ಭಯಪಡಿಸಿದ ಪರಿಣಾಮ ಮಧ್ಯವರ್ತಿಗಳು ಮತ್ತು ಕೆಲವು ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಿರುವ ದೂರು…