ಬೆಂಗಳೂರು: ನಕಲಿ ಸಹಿ ಮಾಡಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಬ್ಬರನ್ನು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಆಡಳಿತ ಮಂಡಳಿ ಅಮಾನತು ಮಾಡಿದೆ. ನಿಗಮದ ಸಿಬ್ಬಂದಿಯೊಬ್ಬರು ನಕಲಿ ಸಹಿ ಮಾಡಿ ವಂಚನೆ ಮಾಡಿರುವ ವಿಷಯವು ಸಾರಿಗೆ ಹಾಗೂ ಮುಜರಾಯಿ ಸಚಿವರ ಗಮನಕ್ಕೆ ಬಂದ ಕೂಡಲೇ ವಿಚಾರಣೆ ನಡೆಸಲು ಸೂಚಿಸಿ ಸೂಕ್ತ ಶಿಸ್ತಿನ ಕ್ರಮ ತೆಗದುಕೊಳ್ಳಲು ನಿರ್ದೇಶಿಸಿದ್ದು, ಅದರಂತೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಯಲ್ಲಿ ಇಂದು ಸದರಿಯವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. KSRTC ಕೇಂದ್ರ ಕಚೇರಿಯ ಲೆಕ್ಕಪತ್ರ ವಿಭಾಗದ ಕಿ-ಸ-ಕಂ-ಡಾ-ಎ-ಆಪರೇಟರ್ ರಿಚರ್ಡ್ ಜೆಎಂಬವರು, ಸಂಸ್ಥೆಯ ಸಿಬ್ಬಂದಿಯಾದ ನಾಗರಾಜಪ್ಪ, ಸಹಾಯಕ ಕುಶಲಕರ್ಮಿ, ಶಿವಮೊಗ್ಗ ಘಟಕ ರವರನ್ನು ಅವರ ಕೋರಿಕೆಯಂತೆ ದಾವಣಗೆರೆ ವಿಭಾಗಕ್ಕೆ ವರ್ಗಾವಣೆ ಮಾಡಿಸುವುದಾಗಿ ನಂಬಿಸಿ ಅವರಿಂದ, ವಜಾಗೊಂಡ ಚಾಲಕರಾದ ನಾಗರಾಜ ಎನ್.ಎ ರವರನ್ನು ಪುನರ್ ನೇಮಕ ಮಾಡಿಸುವುದಾಗಿ ಮತ್ತು ಅವರ ಸ್ನೇಹಿತ ಕುಂದಾಪುರ…
Day: July 24, 2025
ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ; ಬೆಳ್ಳಿ ಪ್ರತಿ ಕೆಜಿಗೆ ದಾಖಲೆಯ ₹1.15 ಲಕ್ಷ
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ವಿದ್ಯಮಾನಗಳ ನಡುವೆಯೂ ದೇಶೀಯವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಬುಧವಾರ ಹೊಸ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿವೆ. 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1 ಲಕ್ಷ ರೂಪಾಯಿ ಗಡಿಯನ್ನು ದಾಟಿದೆ. ಬೆಳ್ಳಿ ದರವೂ ಪ್ರತಿ ಕೆಜಿಗೆ ದಾಖಲೆಯ ₹1.15 ಲಕ್ಷ ದಾಟಿದೆ. ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಷನ್ (IBJA) ಬಿಡುಗಡೆ ಮಾಡಿರುವ ದರಪಟ್ಟಿಯ ಪ್ರಕಾರ, 24 ಕ್ಯಾರೆಟ್ ಚಿನ್ನದ ಬೆಲೆ ಮಂಗಳವಾರದ ₹99,508ರಿಂದ ₹1,00,533ಕ್ಕೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ದರವೂ ₹91,149ರಿಂದ ₹92,088ಕ್ಕೆ ಏರಿಕೆಯಾಗಿದ್ದು, 18 ಕ್ಯಾರೆಟ್ ಚಿನ್ನದ ದರ ₹74,631ರಿಂದ ₹75,400ಕ್ಕೆ ಜಿಗಿದಿದೆ. ಒಂದೇ ದಿನದಲ್ಲಿ ಬೆಳ್ಳಿ ದರ ₹1,357ರಷ್ಟು ಏರಿಕೆಯಾಗಿದ್ದು, ಮಂಗಳವಾರದ ₹1,14,493ರಿಂದ ₹1,15,850ಕ್ಕೆ ತಲುಪಿದೆ. ಈ ವರ್ಷ ಜನವರಿಯಿಂದ ಈವರೆಗೂ ಬೆಳ್ಳಿ ದರ ಶೇ.34ರಷ್ಟು ಏರಿಕೆಯಾಗಿದೆ. ಜನವರಿಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ₹86,055…
ಸೆ.22ರಿಂದ ರಾಜ್ಯದಲ್ಲಿ ಹೊಸ ಜಾತಿ ಜನಗಣತಿ; 15 ದಿನಗಳಲ್ಲಿ ಪೂರ್ಣಗೊಳಿಸಲು ಸರ್ಕಾರ ಸಿದ್ಧತೆ
ಬೆಂಗಳೂರು: ರಾಜ್ಯದಲ್ಲಿ ನೂತನ ಜಾತಿ ಜನಗಣತಿ ಕಾರ್ಯವನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರೊಳಗೆ ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. “ಸಮೀಕ್ಷೆಯು ವೈಜ್ಞಾನಿಕ, ಪಾರದರ್ಶಕವಾಗಿರಬೇಕು. ಪ್ರಶ್ನೆಗಳ ಅಂತಿಮ ಆಯ್ಕೆಗೆ ತಜ್ಞರ ಸಮಿತಿಯ ಸಲಹೆ ಪಡೆಯಬೇಕು. ಈ ಬಾರಿ 1.65 ಲಕ್ಷ ಗಣತಿದಾರರ ಅಗತ್ಯವಿದ್ದು, ಶಿಕ್ಷಕರ ಜೊತೆಗೆ ಇತರೆ ಇಲಾಖೆಗಳ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುವುದು,” ಎಂದು ಸಿಎಂ ಸಭೆಯಲ್ಲಿ ಸೂಚಿಸಿದರು. ಅಕ್ಟೋಬರ್ ಅಂತ್ಯದೊಳಗೆ ಸಮೀಕ್ಷೆಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆಯಿದ್ದು, ತರಬೇತಿ ಸೇರಿದಂತೆ ಎಲ್ಲ ಪೂರ್ವಸಿದ್ಧತೆಗಳನ್ನು ತಕ್ಷಣ ಆರಂಭಿಸಲು ಸೂಚಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ನೀಡಿದ ಪ್ರಸ್ತಾವನೆಯನ್ವಯ, ಈ ಬಾರಿ ರಾಜ್ಯದ ಎಲ್ಲ…
4 ವರ್ಷಗಳಲ್ಲಿ 1,90,333 ಕೋ.ರೂ. ಮೊತ್ತದ 237 ರೈಲ್ವೆ ಯೋಜನೆಗಳಿಗೆ ಕೇಂದ್ರ ಅಸ್ತು
ನವದೆಹಲಿ: ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಮತ್ತು ಪ್ರಸ್ತುತ ಹಣಕಾಸು ವರ್ಷದಲ್ಲಿ (FY26) ಇಲ್ಲಿಯವರೆಗೆ ಭಾರತೀಯ ರೈಲ್ವೆಯಾದ್ಯಂತ ಒಟ್ಟು 9,703 ಕಿ.ಮೀ ಉದ್ದದ ಒಟ್ಟು 237 ಯೋಜನೆಗಳಿಗೆ (40 ಹೊಸ ಮಾರ್ಗಗಳು, 17 ಗೇಜ್ ಪರಿವರ್ತನೆ ಮತ್ತು 180 ದ್ವಿಗುಣಗೊಳಿಸುವಿಕೆ) ಸುಮಾರು 1,90,333 ಕೋಟಿ ರೂ. ವೆಚ್ಚವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ಮೂರು ವರ್ಷಗಳಲ್ಲಿ (2022-23, 2023-24, 2024-25) ಮತ್ತು ಪ್ರಸ್ತುತ ಹಣಕಾಸು ವರ್ಷ 26 ರಲ್ಲಿ, ಭಾರತೀಯ ರೈಲ್ವೆಯಾದ್ಯಂತ ಒಟ್ಟು 61,462 ಕಿ.ಮೀ ಉದ್ದದ 892 ಸಮೀಕ್ಷೆಗಳನ್ನು (267 ಹೊಸ ಮಾರ್ಗಗಳು, 11 ಗೇಜ್ ಪರಿವರ್ತನೆ ಮತ್ತು 614 ದ್ವಿಗುಣಗೊಳಿಸುವಿಕೆ) ಮಂಜೂರು ಮಾಡಲಾಗಿದೆ ಎಂದು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಲೋಕಸಭೆಗೆ ಬುಧವಾರ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. 2009-2014 ರಿಂದ, ಒಟ್ಟು ಹಳಿಗಳು 7,599 ಕಿ.ಮೀ (ದಿನಕ್ಕೆ 4.2 ಕಿ.ಮೀ)…
ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ
ಬೆಂಗಳೂರು: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್‌ನAತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್‌ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ. ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು. ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್‌ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್‌ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್‌ಗೆ ವಿಸ್ತರಿಸಲಾಗಿದೆ. ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ…
ಮಲೆನಾಡು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರವಾಗಲಿರುವ ಶಿವಮೊಗ್ಗ
ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಬುಧವಾರ ವಿಕಾಸ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಸಚಿವರು ಪರಿಶೀಲನೆ ನಡೆಸಿದರು. ಶಿವಮೊಗ್ಗ ನಗರವನ್ನು ಪೂರ್ಣ ಪ್ರಮಾಣದ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಇದೇ ಸಂದರ್ಭದಲ್ಲಿ ಸಚಿವರು ನಿರ್ಧರಿಸಿದರು. ಈ ಕೇಂದ್ರವು ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರ ಸಂಪೂರ್ಣ ಆರೋಗ್ಯ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಸಂಸ್ಥೆಗಳ ಸಮೂಹವನ್ನು ಒಳಗೊಂಡಿರುತ್ತದೆ.…