ಕೇಂದ್ರದ ಜೊತೆ ಮಾತನಾಡಿ ರಾಜ್ಯಕ್ಕೆ ಗೊಬ್ಬರ ಕೊಡಿಸಿ; ಸಂಸದರಿಗೆ ಸಿಎಂ ಆಗ್ರಹ

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದ್ದಾರೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದವರು ಹೇಳಿದ್ದಾರೆ. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿಎಂ,. ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದುಹೇಳಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ…

ಆಪರೇಷನ್ ಸಿಂಧೂರ್ ಯಶಸ್ವಿ: 9 ಉಗ್ರ ನೆಲೆಗಳ ನಾಶ, 100 ಭಯೋತ್ಪಾದಕರ ಹತ್ಯೆಯಾಗಿದೆ ಎಂದ ಕೇಂದ್ರ

ನವದೆಹಲಿ: ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ 9 ಉಗ್ರ ನೆಲೆಗಳನ್ನು ನಾಶಪಡಿಸಿ, 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸೋಮವಾರ ಚರ್ಚೆಯಲ್ಲಿ ಭಾಗವಹಿಸಿದ ಸಚಿವರು, ಈ ಕಾರ್ಯಾಚರಣೆ ದೇಶದ ಭದ್ರತಾ ವ್ಯವಸ್ಥೆಯ ಶಕ್ತಿ ಹಾಗೂ ತಾಕತ್ತನ್ನು ಮತ್ತೊಮ್ಮೆ ಪ್ರತಿಪಾದಿಸಿದೆ ಎಂದು ಹೇಳಿದರು. “ಪಾಕಿಸ್ತಾನವು ಯಾವುದೇ ಗುರಿಯನ್ನು ಹೊಡೆಯಲು ವಿಫಲವಾಯಿತು. ನಮ್ಮ ಯಾವುದೇ ನಿರ್ಣಾಯಕ ಆಸ್ತಿಗೆ ಹಾನಿಯಾಗಿಲ್ಲ. ನಮ್ಮ ಭದ್ರತಾ ವ್ಯವಸ್ಥೆ ಅಜೇಯವಾಗಿತ್ತು,” ಎಂದು ತಿಳಿಸಿದರು. ಭಾರತವು ತನ್ನ ರಾಜಕೀಯ ಹಾಗೂ ಸೈನಿಕ ಗುರಿಗಳನ್ನು ಸಂಪೂರ್ಣ ಸಾಧಿಸಿದ ಬಳಿಕವೇ ಕಾರ್ಯಾಚರಣೆ ವಿರಾಮಗೊಂಡಿತು. ಯಾವುದೇ ಬಾಹ್ಯ ಒತ್ತಡದ ಅಡಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ,” ಎಂದು ಸ್ಪಷ್ಟಪಡಿಸಿದರು. ಮೇ 10ರಂದು ಭಾರೀ ಹೊಡೆತ ಅನುಭವಿಸಿದ ನಂತರ ಪಾಕಿಸ್ತಾನ ಭಾರತದ ಡಿಜಿಎಂಒ ಅವರನ್ನು ಸಂಪರ್ಕಿಸಿ ಕಾರ್ಯಾಚರಣೆಗೆ ವಿರಾಮ ಕೇಳಿದ ಕಾರಣದಪ್ಪಟ್ಟೇ ಕಾರ್ಯಾಚರಣೆ…

ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರತಿಭಟನಾ ಅಖಾಡಲ್ಲೇ ಧುಮುಕಿರುವ ರಾಜ್ಯದ ಆಶಾ ಕಾರ್ಯಕರ್ತೆಯರು, ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ತಯಾರಿ ನಡೆಸಿದ್ದಾರೆ. ಕಳೆದ ವರ್ಷದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸತತ ಪ್ರತಿಭಟನೆ ನಡೆಸಿರುವ ಆಶಾ ಕಾರ್ಯಕರ್ತೆಯರು, ಬೆಂಗಳೂರಿನಲ್ಲೂ ಭಾರೀ ಹೋರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ ನುಡಿದಂತೆ ನಡೆದಿಲ್ಲ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಇತ್ತೀಚಿಗೆ ರಾಜ್ಯದ ಹಲವೆಡೆ ಸರಣಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಾಕಾರ್ಯಕರ್ತೆಯರು ಇದೀಗ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ತಯಾರಿ ನಡೆಸಿದ್ದಾರೆ. ಆಶಾಗಳ ಬೇಡಿಕೆಗಳು: ಮುಖ್ಯಮಂತ್ರಿಗಳು ಘೋಷಿಸಿರುವ ರಾಜ್ಯದ ಗೌರವಧನ…

ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

ಮೈಸೂರು: ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ ಬಗ್ಗೆ ಅಶೋಕ್ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿದರು. ಜೆಡಿಎಸ್‌ನಿಂದ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್‌ನಲ್ಲೇ ಇದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದಲೇ ಖರ್ಗೆ ಸಿಎಂ ಆಗದಿರುವ ಬಗ್ಗೆ ಹೇಳಿದ್ದಾರೆ. ಈಗಲಾದರೂ ನನ್ನನ್ನು ಸಿಎಂ ಮಾಡಿ ಋಣ ತೀರಿಸಿ ಎಂದು ಅವರು ಹೇಳಿದ್ದಾರೆ. ಸಚಿವ ರಾಜಣ್ಣ ಈಗಾಗಲೇ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಖರ್ಗೆಯವರಯು ಸರಿಯಾದ ಸಮಯಕ್ಕೆ ಮಾವಿನ ಹಣ್ಣಿಗೆ ಕಲ್ಲು ಹೊಡೆದಿದ್ದಾರೆ. ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದರು. ಎಸ್‌.ಎಂ.ಕೃಷ್ಣ ನಿಧನಾನಂತರ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡುತ್ತಿದ್ದಾರೆ. ಎಸ್‌.ಎಂ.ಕೃಷ್ಣ ಐಟಿ ಬಿಟಿಗೆ ನೀಡಿದ ಕೊಡುಗೆಯಿಂದಲೇ ಇಷ್ಟು ಆದಾಯ ರಾಜ್ಯಕ್ಕೆ ಬರುತ್ತಿದೆ. ನಾನು ಜ್ಯೋತಿಷ್ಯ ಹೇಳಲ್ಲ. ಆದರೆ ಖಚಿತವಾಗಿ…

ಡ್ರಗ್‌ ಮಾಫಿಯಾವು ಸಿಎಂ ಸಿದ್ದರಾಮಯ್ಯನವರ ಕೊಡುಗೆ? ಏನಿದು ಬಿಜೆಪಿ ಆರೋಪ?

ಮೈಸೂರು: ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿದೆ. ಇವರನ್ನು ಯತೀಂದ್ರ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಹೋಲಿಸಿದ್ದಾರೆ. ಮೈಸೂರಿನಲ್ಲಿ ಮಾದಕ ವಸ್ತುಗಳ ಫ್ಯಾಕ್ಟರಿಯೇ ಇರುವಾಗ ಗೃಹ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು. ಸರ್ಕಾರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ. ಇದಕ್ಕೆ ಮಾಲೀಕ ಯಾರು? ಜಮೀನು ಕೊಟ್ಟವರು ಯಾರು? ನೂರಾರು ಕೋಟಿಯ ದಂಧೆಗೆ ಅವಕಾಶ ನೀಡಿದವರು ಯಾರು? ಎಂದು ಪ್ರಶ್ನಿಸಿರುವ ಅಶೋಕ್, ಸರ್ಕಾರ ಈ ವಿಚಾರದಲ್ಲಿ ಮೈ ಮರೆತಿದೆ. ಇದೇ ಸಿದ್ದರಾಮಯ್ಯನವರ ಕೊಡುಗೆ ಎಂದರು.

ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ. 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ…