ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಸಂಸ್ಥೆ, ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಏಕಕಾಲಿಕ ದಾಳಿ ನಡೆಸಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಮತ್ತು ಚಿತ್ರದುರ್ಗ ಸೇರಿದಂತೆ ಐದು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮತ್ತು ಆಸ್ತಿಗಳ ಮೇಲೆ ತನಿಖಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಎಂ. ಆಂಜನೇಯಮೂರ್ತಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದ ಮನೆ, ಜಕ್ಕೂರು ಕಾಂಪ್ಲೆಕ್ಸ್, ತುಮಕೂರು, ಮಧುಗಿರಿ ಹಾಗೂ ಗೌರಿಬಿದನೂರಿನ ಕಚೇರಿಗಳಲ್ಲೂ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಟಿಹೆಚ್‌ಒ ಡಾ. ವೆಂಕಟೇಶ್ ಅವರ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ನಿವಾಸ ಮತ್ತು ಕ್ಲಿನಿಕ್‌ಗಳಲ್ಲಿ ದಾಳಿ ನಡೆದಿದೆ. ಹಾಸನ ಜಿಲ್ಲೆ ತೋಟಗಾರಿಕೆ ಇಲಾಖೆಯ ಸಹಾಯಕ…
Day: July 29, 2025
ಕೇರಳ ಮೂಲದ ನಿಮಿಷ ಪ್ರಿಯಾಗೆ ಬಿಗ್ ರಿಲೀಫ್; ಗಲ್ಲು ಶಿಕ್ಷೆ ರದ್ದುಪಡಿಸಿದ ಯಮನ್
ಸನಾ: ಯಮನ್ ದೇಶದಲ್ಲಿ ಗಲ್ಲು ಶಿಕ್ಷೆಗೆ ಎದುರಿಸಬೇಕಿದ್ದ ಕೇರಳ ಮೂಲದ ನಿಮಿಷ ಪ್ರಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ. ಗಲ್ಲು ಶಿಕ್ಷೆಯನ್ನು ಅಧಿಕೃತವಾಗಿರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಯಿಂದ ತಿಳುದುಬಂದಿದೆ. ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಅಂತಿಮ ಸಭೆಯ ನಂತರ ಈ ಸುದ್ದಿ ಹೊರಬಿದ್ದಿದೆ. ಜು.16ಕ್ಕೆ ಗಲ್ಲುಶಿಕ್ಷೆ ಎದುರಿಸಬೇಕಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ. ಈ ಹಿಂದೆ ತಾತ್ಕಾಲಿಕವಾಗಿ ಮುಂದೂಡಿದ್ದ ಮರಣದಂಡನೆಯನ್ನು ಇದೀಗ ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ತಿಳಿಸಿದೆ.