ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಆರಂಭಿಸಿದ ಸಹಿ ಅಭಿಯಾನವನ್ನು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು “ಅನುಚಿತ, ಅಸಂವಿಧಾನಿಕ” ಎಂದು ಟೀಕಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಸಂಸದೀಯ ವ್ಯವಸ್ಥೆ” ಎಂಬ ವಿಷಯದ ಕುರಿತಂತೆ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಉಪರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಾರಂಭವಾದ ಸಹಿ ಅಭಿಯಾನವು ಸಂಪೂರ್ಣವಾಗಿ ರಾಜಕೀಯ ವಿಷಯವಾಗಿದ್ದು, ನಿವೃತ್ತ ನ್ಯಾಯಾಧೀಶರ ನಡೆ ದೇಶಕ್ಕೆ ತಪ್ಪು ಸಂದೇಶ ನೀಡುತ್ತದೆ ಎಂದು ರಿಜಿಜು ಅಭಿಪ್ರಾಯಪಟ್ಟರು. “ಅವರು ಹುದ್ದೆಯಲ್ಲಿ ಇದ್ದಾಗಲೂ ಸೈದ್ಧಾಂತಿಕವಾಗಿ ಪಕ್ಷಪಾತ ಹೊಂದಿದ್ದಿರಬಹುದು” ಎಂದು ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದನ್ನು ಖಂಡಿಸಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ…
Month: August 2025
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ರೂಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ತಿಳಿಸಿದ್ದಾರೆ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿರುವ ಡಾ. ಎಸ್. ರಾಮಚಂದ್ರ ಆಡಿಟೋರಿಯಂನಲ್ಲಿ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಆಯೋಜಿಸಿದ ಡೆಂಟಿಸ್ಟ್ ಶೃಂಗಸಭೆ-2025 ರಲ್ಲಿ ಸಚಿವರು ಭಾಷಣ ಮಾಡಿದರು. ದಂತವೈದ್ಯಕೀಯ ಎನ್ನುವುದು ಅತ್ಯಂತ ಸೂಕ್ಷ್ಮ ಮತ್ತು ನಿಖರತೆ ಹೆಚ್ಚು ಕೋರುವ ವಿಷಯವಾಗಿದೆ. ದಂತ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಹಲ್ಲು ನೋವು ಬಂದರೆ ಅದನ್ನು ತಡೆದುಕೊಳ್ಳಲು ಸಾಧ್ಯವಿಲ್ಲ.…
ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತಿಯಾದ ಬಳಿಕ ಡಿಜಿಪಿ ಹಾಗೂ ಐಜಿಪಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು. ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಡಾ. ಸಲೀಂ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ತಕ್ಷಣ ನಿಯಮಿತ ಡಿಜಿಪಿ ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್‌ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ
ಬೆಂಗಳೂರು,: ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. ಮತಗಳ್ಳತನ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ ಎಂದು ತಿಳಿದುಬಂದಿದೆ. ಸಿ.ಎಂ.ಇಬ್ರಾಹಿಂ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿಸಿದ್ದೇನೆಂದು ಹೇಳಿದ್ದಾರೆ. ಈ ಬಗ್ಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್ ಒಬ್ಬಂಟಿಯಾಗಿ ಬಿಹಾರ ಚುನಾವಣೆಗೆ ಹೋದರೆ, ಸಿಎಂ ಸಿದ್ದರಾಮಯ್ಯ ತಂಡ ಬೇರೆ ಕಡೆ ಚುನಾವಣೆಗೆ ಹೋಗಿದೆ. ಡಿ.ಕೆ.ಶಿವಕುಮಾರ್ ಬಂಡೆಯಂತೆ ಆಗುತ್ತಿದ್ದಾರೆ. ಇವರು…
ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಡಾ. ಶರಣಪ್ರಕಾಶ್ ಪಾಟೀಲ್
ಕೊಚ್ಚಿ: ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು, ಕಲಿಕೆ ಮತ್ತು ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ತಿಳಿಸಿದ್ದಾರೆ. ಕೇರಳ ಸರ್ಕಾರ ಶುಕ್ರವಾರ ಆಯೋಜಿಸಿದ್ದ ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಡಾ. ಪಾಟೀಲ್ ಭಾಷಣ ಮಾಡಿದರು. ಪ್ರತಿಯೊಬ್ಬ ಉದ್ಯಮಿ, ಸಾಧಕ ಮತ್ತು ನಾಯಕ ಯಶಸ್ಸನ್ನು ಕಾಣುವ ಮೊದಲು ವೈಫಲ್ಯವನ್ನು ಕಂಡಿದ್ದಾರೆ. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದರು. “ವೈಫಲ್ಯವು ಅಂತ್ಯವಲ್ಲ – ಇದು ಯಶಸ್ಸಿನ ಮೆಟ್ಟಿಲು. ಸರ್ಕಾರಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳು ನೀತಿಗಳು ಮತ್ತು ವಿಧಾನಗಳನ್ನು ರೂಪಿಸುತ್ತದೆ, ಆದರೆ ನಿಜವಾದ ಬದಲಾವಣೆಯು, ವಿಭಿನ್ನವಾಗಿ ಕನಸು…
“ಕಾಂಗ್ರೆಸ್ ರಾಜಕೀಯ ತೀರಾ ಕೆಳಮಟ್ಟಕ್ಕೆ ಇಳಿದಿದೆ” – ಪ್ರಧಾನಿ ತಾಯಿಯ ‘ನಿಂದನೆ’ಗೆ ಶಾ, ನಡ್ಡಾ ಕಿಡಿ
ನವದೆಹಲಿ: ಬಿಹಾರದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದಿವಂಗತ ತಾಯಿಯ ವಿರುದ್ಧ ಅವಾಚ್ಯ ಶಬ್ದ ಬಳಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಆರ್‌ಜೆಡಿ ನಾಯಕರ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುರುವಾರ ಎಕ್ಸ್‌ನಲ್ಲಿ ಬಿಡುಗಡೆ ಮಾಡಿದ ವೀಡಿಯೋ ಸಂದೇಶದಲ್ಲಿ, “ಪ್ರಧಾನಿ ಮೋದಿ ಅವರ ತಾಯಿಯ ವಿರುದ್ಧ ಆರ್‌ಜೆಡಿ–ಕಾಂಗ್ರೆಸ್ ಜಂಟಿ ವೇದಿಕೆಯಿಂದ ನಿಂದನೆ ನಡೆಯಿರುವುದು ಖಂಡನೀಯ. ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಕ್ಷಮೆಯಾಚಿಸಲೇಬೇಕು” ಎಂದು ಆಗ್ರಹಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ತೀವ್ರ ಕಿಡಿಕಾರಿದ್ದು, “ಕಾಂಗ್ರೆಸ್ ರಾಜಕೀಯ ಅಸಭ್ಯತೆಯ ಎಲ್ಲಾ ಮಿತಿಗಳನ್ನು ದಾಟಿದೆ. ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಕಾಂಗ್ರೆಸ್ ತೀರಾ ಕೆಳಮಟ್ಟಕ್ಕೆ ಇಳಿದಿದೆ. ಬಡ ತಾಯಿಯ ಮಗ ಪ್ರಧಾನಿಯಾಗಿ ದೇಶವನ್ನು 11 ವರ್ಷಗಳಿಂದ ಮುನ್ನಡೆಸುತ್ತಿರುವುದನ್ನು ಕಾಂಗ್ರೆಸ್ ಸಹಿಸಲಾರದು” ಎಂದು ಆರೋಪಿಸಿದರು. “ಬಿಹಾರದ ದರ್ಭಂಗಾದಲ್ಲಿ ಪ್ರಧಾನಿಯವರ ತಾಯಿಯ…
ಜಮ್ಮು-ಕಾಶ್ಮೀರದ ಉರಿಯಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ, ಒಳನುಸುಳುವಿಕೆ ಪ್ರಯತ್ನ ವಿಫಲ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ಗುರುವಾರ ವಿಫಲಗೊಳಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಗುರೆಜ್ ಸೆಕ್ಟರ್‌ನ ನೌಶೆಹ್ರಾ ನಾರ್ಡ್ ಬಳಿ ಒಳನುಸುಳುವಿಕೆ ಪ್ರಯತ್ನದ ಸಮಯದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ
ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ. ರಾಜ್ಯದ 3 ಸಾವಿರಕ್ಕಿಂತಲೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ವಹಿಸಲಾಗಿದೆ. ಮುಜರಾಯಿ ವ್ಯಾಪ್ತಿಯಲ್ಲಿ ಇದ್ದ ಮಾತ್ರಕ್ಕೆ ಹಿಂದೂ ದೇವಸ್ಥಾನಗಳು ಹಿಂದೂಗಳ ಆಸ್ತಿಯಲ್ಲವೇ? ಈ ಮೂಲಕ ರಾಜ್ಯದ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ಸಿಗರೇ, ಹಿಂದೂಗಳ…
ಧನುಷ್ ‘ಇಡ್ಲಿ ಕಡೈ’ಯಿಂದ ‘ಎಂಜಾಮಿ ತಂದಾನೆ’ ಕೃತಜ್ಞತಾ ಗೀತೆ ಬಿಡುಗಡೆ
ಚೆನ್ನೈ: ನಟ-ನಿರ್ದೇಶಕ ಧನುಷ್ ಅವರ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ಇಡ್ಲಿ ಕಡೈ’ ಚಿತ್ರದ ತಂಡ ಬುಧವಾರ ಗಣೇಶ ಚತುರ್ಥಿಯ ಹಬ್ಬದ ಸಂದರ್ಭಕ್ಕೆ ದೇವರಿಗೆ ಕೃತಜ್ಞತೆ ಸಲ್ಲಿಸುವ ‘ಎಂಜಾಮಿ ತಂದಾನೆ’ ಎಂಬ ಗೀತೆಯನ್ನು ಬಿಡುಗಡೆ ಮಾಡಿದೆ. ಧನುಷ್ ತಮ್ಮ X ಖಾತೆಯಲ್ಲಿ “ಇಡ್ಲಿ ಕಡೈನ ಎಂಜಾಮಿ ತಂದಾನೆ” ಎಂದು ಬರೆದು, ಸಿಂಗಲ್‌ನ ಲಿಂಕ್ ಹಂಚಿಕೊಂಡಿದ್ದಾರೆ. ಧನುಷ್ ಅವರ ಸಾಹಿತ್ಯಕ್ಕೆ ಜಿ.ವಿ. ಪ್ರಕಾಶ್ ಸಂಗೀತ ನೀಡಿದ್ದಾರೆ. ಧನುಷ್, ಅರಿವು ಹಾಗೂ ಸುಭಾಷಿಣಿ ಈ ಹಾಡಿಗೆ ಕಂಠದಾನ ಮಾಡಿದ್ದಾರೆ. ಜನಪದ ಶೈಲಿಯಲ್ಲಿರುವ ಈ ಗೀತೆ ನಾಯಕನ ದೇವರ ಮೇಲಿನ ಕೃತಜ್ಞತೆಯ ಅಭಿವ್ಯಕ್ತಿ. ಈ ವರ್ಷದ ಏಪ್ರಿಲ್‌ನಲ್ಲಿ ಬ್ಯಾಂಕಾಕ್‌ನಲ್ಲಿ ಪ್ರಮುಖ ದೃಶ್ಯಗಳ ಚಿತ್ರೀಕರಣ ಪೂರ್ಣಗೊಂಡಿತ್ತು. ಆರಂಭದಲ್ಲಿ ಏಪ್ರಿಲ್ 10ಕ್ಕೆ ಬಿಡುಗಡೆಯ ದಿನಾಂಕ ನಿಗದಿಪಡಿಸಿದ್ದರೂ, ಈಗ ಅಕ್ಟೋಬರ್ 1ಕ್ಕೆ ಮುಂದೂಡಲಾಗಿದೆ. ಅರುಣ್ ವಿಜಯ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದು, ಶಾಲಿನಿ ಪಾಂಡೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಾರೆ. ಧನುಷ್…
ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್
ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಬಾಲಿವುಡ್ ನಟರು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರು ಜಾಹೀರಾತು ಮಾಡಿದ ಕಾರಿನಲ್ಲಿ ಉತ್ಪಾದನಾ ದೋಷವಿದೆ ಎಂದು ವಕೀಲ ಕೀರ್ತಿ ಸಿಂಗ್ ಆರೋಪಿಸಿದ್ದಾರೆ. 2022ರಲ್ಲಿ 23.97 ಲಕ್ಷ ರೂ.ಗೆ ಕಾರು ಖರೀದಿಸಿದ ಸಿಂಗ್, 51 ಸಾವಿರ ರೂ. ಮುಂಗಡ ಪಾವತಿಸಿ, 10 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು. ಡೀಲರ್‌ಶಿಪ್ “ಕಾರು ತೊಂದರೆ-ಮುಕ್ತ”ವಾಗಿರುತ್ತದೆ ಎಂದು ಭರವಸೆ ನೀಡಿದ್ದರೂ, ಕೆಲವೇ ತಿಂಗಳಲ್ಲಿ ಹಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡವು ಎಂದು ಅವರು ದೂರು ನೀಡಿದ್ದಾರೆ. “ಓವರ್‌ಟೇಕ್ ಮಾಡುವಾಗ ಕಾರು ಸರಿಯಾಗಿ ವೇಗ ಪಡೆಯುವುದಿಲ್ಲ. ಆರ್‌ಪಿಎಂ ಮಾತ್ರ ಹೆಚ್ಚಾಗುತ್ತದೆ. ಹೆಚ್ಚಿನ ವೇಗದಲ್ಲಿ ಕಾರು ಕಂಪಿಸಿ ಅಸಾಮಾನ್ಯ ಶಬ್ದ ಮಾಡುತ್ತದೆ. ದೂರಮಾಪಕದಲ್ಲಿ ಪದೇ ಪದೇ ಎಚ್ಚರಿಕೆ ಸಂದೇಶ ಬರುತ್ತದೆ,” ಎಂದು ಸಿಂಗ್ ಪೊಲೀಸರಿಗೆ ತಿಳಿಸಿದ್ದಾರೆ. ಡೀಲರ್‌ಶಿಪ್‌ಗೆ ವಿಚಾರಿಸಿದಾಗ, ದೋಷವನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಕಂಪನಿ…