ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನ ಹತ್ಯೆಯಾಗಿದೆ. ಭದ್ರತಾ ಇಲಾಖೆಗಳ ಪ್ರಕಾರ, ಮೃತ ಉಗ್ರನು ನಿಷೇಧಿತ ಲಷ್ಕರ್-ಎ-ತೊಯ್ಬಾ ಸಂಘಟನೆಯ ಶಾಖೆಯಾದ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ನೊಂದಿಗೆ ಸಂಪರ್ಕ ಹೊಂದಿದ್ದ. ಇತ್ತೀಚೆಗಿನ ಪಹಲ್ಗಾಮ್ ದಾಳಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ‘ಅಖಾಲ್ ಆಪರೇಷನ್’ ಎಂಬ ಹೆಸರಿನಲ್ಲಿ ಈ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನಿಬ್ಬರು ಉಗ್ರರು ಅಡಗಿರುವ ಶಂಕೆ ಹಿನ್ನೆಲೆ, ಅರಣ್ಯ ಪ್ರದೇಶದ ಸಂಪೂರ್ಣ ಮುತ್ತಿಗೆ ಹಾಕಲಾಗಿದೆ ಎಂದು ಚಿನಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದೆ.
Day: August 2, 2025
ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು
ಕಾರವಾರ: ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ನಟ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದ ಚಂದ್ರಶೇಖರ್ ಸಿದ್ದಿ ಗುರುವಾರ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಸಮೀಪದ ವಜ್ರಳ್ಳಿ ಗ್ರಾಮದ ಚಿಮನಳ್ಳಿಮೂಲದ ಚಂದ್ರಶೇಖರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಪತಿ ಮನೆಗೆ ಬಾರದಿದ್ದಾಗ, ಪತ್ನಿ ಹುಡುಕಾಡಿದ್ದು, ಆವೇಳೆ ಆತ್ಮಹತ್ಯೆ ವಿಚಾರ ಗೊತ್ತಾಯಿತು ಎನ್ನಲಾಗಿದೆ. ಕಳೆದ 2-3 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಸಿದ್ದಿಗೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.