ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಸಮರ್ಥನೆ: ಕೇಂದ್ರಕ್ಕೆ ರಾಜ್ಯದ ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. “ಜನೌಷಧಿ ಕೇಂದ್ರಗಳಿಗೆ ಸರಬರಾಜು ಆಗುವ ದರದಲ್ಲಿಯೇ ಔಷಧಿಗಳನ್ನು ರಾಜ್ಯ ಆರೋಗ್ಯ ಇಲಾಖೆಗೆ ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಇದು ಉಚಿತ ಔಷಧ ವಿತರಣೆಗೆ ನೆರವಾಗುತ್ತದೆ” ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ. ಜನೌಷಧಿ ಯೋಜನೆಯಡಿ ಕಡಿಮೆ ದರದ ಔಷಧಿ ಲಭ್ಯವಿದೆ ಎಂಬುದನ್ನು ಅಂಗೀಕರಿಸಿರುವ ಸರ್ಕಾರ, ಸಾರ್ವಜನಿಕರಿಗೆ ಗುಣಮಟ್ಟದ ಔಷಧಿಗಳನ್ನು ಉಚಿತವಾಗಿ ನೀಡಲು ಬದ್ಧವಿದೆ ಎಂದು ವಿವರಿಸಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,417 ಜನೌಷಧಿ ಕೇಂದ್ರಗಳಲ್ಲಿ ಕೇವಲ 184 ಮಾತ್ರ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇದ್ದು, ಉಳಿದವು ಹೊರಗಿರುವುದಾಗಿ ಸಚಿವರು ಹೇಳಿದ್ದಾರೆ. “ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ನಿಯಮಿತವಾಗಿ ಪೂರೈಸಲಾಗುತ್ತಿದೆ. ತುರ್ತು ಅವಶ್ಯಕತೆಗಳಿಗೆ ಸ್ಥಳೀಯ ಖರೀದಿಗೂ…

ಮದ್ಯ ಚಟ ತ್ಯಜಿಸಲು ನಾಟಿ ಔಷಧ ಸೇವನೆ: ಮೂವರು ದುರ್ಮರಣ

ಕಲಬುರಗಿ: ಮದ್ಯ ಸೇವನೆಯ ಚಟ ತೊರೆಯಲು ನಾಟಿ ಔಷಧ ಸೇವಿಸಿದ ಮೂವರು ಮೃತಪಟ್ಟ ಘಟನೆ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಸೇಡಂ ಸಮೀಪದ ಬುರಗಪಲ್ಲಿ ಗ್ರಾಮದ ಲಕ್ಷ್ಮಿ ನರಸಿಂಹಲು ಬಟಗೇರಾ (55), ಮದಕಲ್ ಗ್ರಾಮದ ನಾಗೇಶ (32) ಹಾಗೂ ಗಣೇಶ ರಾಠೋಡ್ (30) ಎಂಬವರು ನಾಟಿ ಔಷಧ ಸೇವಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಔಷಧ ಸೇವಿಸಿದ್ದ ಲಿಂಗಪ್ಪ ಎಂಬವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಮಡಾಪುರದ ಫಕೀರಪ್ಪ ಸಾಯಪ್ಪ ಎಂಬವರು ಕುಡಿತದ ಚಟ ಬಿಡಿಸಲು ನಾಟಿ ಔಷಧ ನೀಡುತ್ತಿದ್ದವರು ಎನ್ನಲಾಗಿದ್ದು, ಈ ಔಷಧವನ್ನೇ ಈ ವ್ಯಕ್ತಿಗಳು ಸೇವಿಸಿದ್ದರೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೆಟ್ರೋ ಬಗ್ಗೆ ‘ಅರ್ಧ ಸತ್ಯ’ ಹರಡುವುದನ್ನು ನಿಲ್ಲಿಸಿ; BJP ನಾಯಕರಿಗೆ ರಾಮಲಿಂಗಾ ‌ರೆಡ್ಡಿ ತರಾಟೆ

ಬೆಂಗಳೂರು: BJPಯ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರುಗಳಿಗೆ ,ಪ್ರಮುಖ‌ ಮುಖಂಡರುಗಳಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಮ್ಮಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ‌ರೆಡ್ಡಿ ಟೀಕಿಸಿದ್ದಾರೆ. 2006 ರಲ್ಲಿ ಶ್ರೀ ಮನಮೋಹನ್ ಸಿಂಗ್ ರವರು ಮಾನ್ಯ ಪ್ರಧಾನ ಮಂತ್ರಿಗಳಾಗಿದ್ದಾಗ, ರಾಜ್ಯದಲ್ಲಿ ಶ್ರೀ ಧರ್ಮಸಿಂಗ್ ಮಾನ್ಯ ಮುಖ್ಯಮಂತ್ರಿಗಳಾಗಿದ್ದಾಗ , ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದಾಗ ಎಂ.ಜಿ‌‌ ರಸ್ತೆಯಲ್ಲಿ ನಮ್ಮ ಮೆಟ್ರೋಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು ಎಂದು ಗಮನಸೆಳೆದಿರುವ ರಾಮಲಿಂಗಾ ‌ರೆಡ್ಡಿ, ‘ನಮ್ಮ ಮೆಟ್ರೋ’ ಜನರದ್ದು – ಯಾವ ಪಕ್ಷದ ಸ್ವತ್ತು ಅಲ್ಲ! ಎಂಬುದು ನಮ್ಮ ಭಾವನೆಯಾಗಿತ್ತು. ಆದರೆ ಬಿ.ಜೆ.ಪಿ‌ ಅವರಿಗೆ ಜನಾಸಕ್ತಿಗಿಂತ, ಪ್ರಚಾರಸಕ್ತಿ ಹೆಚ್ಚು ಎಂಬುದು ಗೊತ್ತಾಗುತ್ತಿದೆ ಎಂದು ವ್ಯಾಖ್ಯಾನಿಸಿದ್ದಾರೆ. ಕರ್ನಾಟಕ ಸರ್ಕಾರ ಸರಳ ಪಾಲುದಾರ ಅಲ್ಲ — ಅನೇಕ ಸಂದರ್ಭಗಳಲ್ಲಿ ಅದು ಹೆಚ್ಚಿನ ಹಣವನ್ನು…

ಅಮೆರಿಕ ದ್ವಿಗುಣ ಸುಂಕ: ಭಾರತ ತೀವ್ರ ಅಸಮಾಧಾನ

ನವದೆಹಲಿ: ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಅಮೆರಿಕಕ್ಕೆ ಸಾಗುವ ವಸ್ತುಗಳ ಮೇಲೆ ಶೇ.25ರಷ್ಟು ಹೆಚ್ಚುವರಿ ಸುಂಕ ವಿಧಿಸಿರುವ ಅಮೆರಿಕದ ಕ್ರಮಕ್ಕೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಕುರಿತು ಆದೇಶಕ್ಕೆ ಸಹಿ ಹಾಕಿದ್ದು, ರಷ್ಯಾ ಸಂಬಂಧಿತ ನೀತಿಗಳ ಪ್ರತಿಕ್ರಿಯೆಯಾಗಿ ಭಾರತದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಭಾರತಕ್ಕೆ ಈಗಾಗಲೇ ಶೇ.25ರಷ್ಟು ಪ್ರತಿ ತೆರಿಗೆ ವಿಧಿಸಲಾಗಿತ್ತು. ಅಮೇರಿಕಾದ ಹಠಮಾರಿ ಧೋರಣೆಯನ್ನು ಭಾರತ ವಿದೇಶಾಂಗ ಸಚಿವಾಲಯ ಖಂಡಿಸಿದೆ. ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯೆ ನೀಡಿ, ಅಮೆರಿಕ ನಿರ್ಧಾರ ಹಿನ್ನೆಲೆಯಲ್ಲಿ ಭಾರತ ತನ್ನ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಂದೇಶ ರವಾನಿಸಿದ್ದಾರೆ. “ಈ ಕ್ರಮಗಳು ಅನ್ಯಾಯಮಯ ಹಾಗೂ ಅಸಮಂಜಸ. ಇಂತಹ ದಂಡಾತ್ಮಕ ನೀತಿಗಳು ಜಾಗತಿಕ ವ್ಯಾಪಾರ ಧೋರಣೆಗೆ ವಿರುದ್ಧ” ಎಂದು ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.