ಬೆಂಗಳೂರು, ಆ. 9: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ. ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ ಮಾಡಿಸಿರುವುದಕ್ಕೆ ಈ ಅವಕಾಶ ದೊರಕಿದೆ ಎಂದು ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ. ಸರಸ್ವತಿ ಅವರ ಪತಿ ಹಸೆ ಚಿತ್ತಾರ ಕಲಾವಿರ ಈಶ್ವರ ನಾಯ್ಕ ಹಸುವಂತೆ ಅವರಿಗೆ ಪ್ರಸಕ್ತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿತ್ತು. ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸ್ವಸಹಾಯ…
Day: August 9, 2025
ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಭವ್ಯ ಕ್ರೀಡಾ ಸಂಕೀರ್ಣ ನಿರ್ಮಾಣ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜಧಾನಿಯಲ್ಲಿ ಮತ್ತೊಂದು ಭವ್ಯ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುಂದಾಗಿದೆ. ಬೊಮ್ಮಸಂದ್ರದ ಸೂರ್ಯನಗರ ಸಮೀಪ 100 ಎಕರೆ ಪ್ರದೇಶದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸೌಲಭ್ಯಗಳು ಲಭ್ಯವಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಕರ್ನಾಟಕ ವಸತಿ ಮಂಡಳಿಯ (KHB) ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಒಳಾಂಗಣ ಮತ್ತು ಹೊರಾಂಗಣ ತಲಾ ಎಂಟು ಕ್ರೀಡೆಗಳ ಮೈದಾನ, ಅತ್ಯಾಧುನಿಕ ಜಿಮ್, ತರಬೇತಿ ಕೇಂದ್ರ, ಈಜುಕೊಳ, ಅತಿಥಿ ಗೃಹ, ಹಾಸ್ಟೆಲ್‌ಗಳು, ತ್ರೀ-ಸ್ಟಾರ್ ಹಾಗೂ ಫೈವ್-ಸ್ಟಾರ್ ಹೋಟೆಲ್‌ಗಳು, ಮತ್ತು ಅಂತರರಾಷ್ಟ್ರೀಯ ಕಾರ್ಯಕ್ರಮಗಳಿಗೆ ಸಮಾವೇಶ ಸಭಾಂಗಣ—all in one ಸಂಕೀರ್ಣ ರೂಪ ಪಡೆಯಲಿದೆ. ನಿರ್ಮಾಣಗೊಳ್ಳುವ ಕ್ರಿಕೆಟ್ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡದಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. ಒಟ್ಟು ₹1,650…