ಹಲವು ಸಂಸದರಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಚೆನ್ನೈ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಸಂಸದರು ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಭಾನುವಾರ ಸಂಜೆ ತಾಂತ್ರಿಕ ದೋಷ ಉಂಟಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಿರುವನಂತಪುರಂನಿಂದ ದೆಹಲಿಗೆ ಹೊರಟಿದ್ದ AI 2455 ವಿಮಾನದಲ್ಲಿ ಹವಾಮಾನ ವೈಪರೀತ್ಯದ ಜೊತೆಗೆ ತಾಂತ್ರಿಕ ಸಮಸ್ಯೆಯೂ ಕಾಣಿಸಿಕೊಂಡ ಕಾರಣ, ಪೈಲಟ್ ತಕ್ಷಣ ತುರ್ತು ಲ್ಯಾಂಡಿಂಗ್ ನಿರ್ಧರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಕೆ.ಸಿ. ವೇಣುಗೋಪಾಲ್, “ನಾನು, ಅನೇಕ ಸಂಸದರು ಹಾಗೂ ನೂರಾರು ಪ್ರಯಾಣಿಕರನ್ನು ಒಳಗೊಂಡು ತಿರುವನಂತಪುರಂನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಇಂದು ದೊಡ್ಡ ದುರಂತದಿಂದ ತೀರಾ ಸ್ವಲ್ಪದರಲ್ಲೇ ಪಾರಾಗಿದೆ” ಎಂದು ಹೇಳಿದ್ದಾರೆ.

ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡಿ,ಕಲಾಗ್ರಾಮವಾಗಿ ಅಭಿವೃದ್ಧಿಪಡಿಸಿ; ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡುವುದಲ್ಲದೇ, ಅದನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾಗ್ರಾಮವಾಗಿ ಅಭಿವೃದ್ಧಿಪಡಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ಅವ್ರಿಗೆ ಪಾತ್ರ ಬರೆದಿದ್ದಾರೆ. ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರುನಾಡಿನ ಮನೆಮನಗಳೂ ಮಾತನಾಡುತ್ತವೆ.‌ ಎಲ್ಲರ‌ ಮನೆಮಾತಾದ ಅಂತಹ ಅದ್ಭುತ ನಟಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದ, ಅವರ ಸಮಾಧಿಸ್ಥಳವನ್ನು ಉಳಿಸಿಕೊಳ್ಳಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ ಎಂದವರು ಪಾತ್ರದಲ್ಲಿ ಹೇಳಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ ಎಂದಿದ್ದಾರೆ. ಆ ನಿಟ್ಟಿನಲ್ಲಿ, ಡಾ. ವಿಷ್ಣುವರ್ಧನ್ ಅವರ…