ನವದೆಹಲಿ: ಗಂಭೀರ ಆರೋಪಗಳಡಿ ಸತತ 30 ದಿನಗಳ ಕಾಲ ಬಂಧನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ವಿರೋಧ ಪಕ್ಷಗಳು ಹೊರ ಹಾಕಿರುವ ಟೀಕೆಗಳನ್ನು ಅವರು ತಿರಸ್ಕರಿಸಿದ್ದಾರೆ. ಬಿಹಾರದ ಗಯಾದಲ್ಲಿ ಶುಕ್ರವಾರ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ವಿರೋಧ ಪಕ್ಷದ ನಾಯಕರು ಈ ಮಸೂದೆಗಳಿಗೆ ಏಕೆ ಹೆದರುತ್ತಾರೆ ಎಂಬುದು ಜನತೆಗೆ ತಿಳಿದಿದೆ” ಎಂದರು. ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಎನ್‌ಡಿಎ ಸರ್ಕಾರ ಈ ಮಸೂದೆಗಳನ್ನು ತಂದಿದೆ, ಇದರಲ್ಲಿ ದೇಶದ ಪ್ರಧಾನಿಯೂ ಸೇರಿದ್ದಾರೆ. “ಮುಖ್ಯಮಂತ್ರಿಗಳು, ಸಚಿವರು ಹಾಗೂ ಪ್ರಧಾನಿ ಬಂಧಿತರಾದರೆ 30 ದಿನಗಳಲ್ಲಿ ಜಾಮೀನು ಪಡೆಯಬೇಕು. ಇಲ್ಲದಿದ್ದರೆ 31ನೇ ದಿನ ರಾಜೀನಾಮೆ ನೀಡಲೇಬೇಕು” ಎಂದು ಅವರು ಸ್ಪಷ್ಟಪಡಿಸಿದರು. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಉಲ್ಲೇಖಿಸಿ, “ಜೈಲಿನಿಂದಲೇ ಫೈಲ್‌ಗಳಿಗೆ ಸಹಿ ಹಾಕಿ, ಸರ್ಕಾರಿ ಆದೇಶ ಹೊರಡಿಸಲಾಗುತ್ತಿದೆ.…
Day: August 22, 2025
ಸಂಸತ್ ಭವನ ನುಗ್ಗಲು ಯತ್ನಿಸಿದ ಅನಾಮಿಕನ ಸೆರೆ
ನವದೆಹಲಿ: ದೇಶದ ಅತೀ ಭದ್ರಿತ ಪ್ರದೇಶವೆಂದು ಪರಿಗಣಿಸಲ್ಪಡುವ ಸಂಸತ್ ಸಂಕೀರ್ಣದಲ್ಲಿ ಶುಕ್ರವಾರ ಬೆಳಗ್ಗೆ ದೊಡ್ಡ ಭದ್ರತಾ ಉಲ್ಲಂಘನೆ ನಡೆದಿದೆ. ರೈಲ್‌ಭವನ ಕಡೆಯಿಂದ ಮರ ಹತ್ತಿ ಗೋಡೆ ದಾಟಿದ ವ್ಯಕ್ತಿಯೊಬ್ಬರು ಹೊಸ ಸಂಸತ್ ಕಟ್ಟಡದ ಗರುಡ ಗೇಟ್‌ವರೆಗೆ ತಲುಪಿದ್ದಾರೆ. ಬೆಳಿಗ್ಗೆ 6.30ರ ಸುಮಾರಿಗೆ ನಡೆದ ಈ ಘಟನೆ ಬಳಿಕ ಭದ್ರತಾ ಸಿಬ್ಬಂದಿ ಆತನನ್ನು ತಕ್ಷಣವೇ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನ ಗುರುತು, ಉದ್ದೇಶ ಹಾಗೂ ಬಹುಹಂತದ ಭದ್ರತೆಯನ್ನು ಹೇಗೆ ದಾಟಿದರು ಎಂಬುದರ ಕುರಿತು ವಿಚಾರಣೆ ಮುಂದುವರಿದಿದೆ. ಘಟನೆಯ ಸಂಪೂರ್ಣ ಅನುಕ್ರಮವನ್ನು ತಿಳಿದುಕೊಳ್ಳಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಸತ್ತಿನ ಮಳೆಗಾಲದ ಅಧಿವೇಶನ ಮುಗಿದ ಕೇವಲ ಒಂದು ದಿನದ ನಂತರ ನಡೆದಿದೆ. ಜುಲೈ 21ರಂದು ಪ್ರಾರಂಭವಾದ ಅಧಿವೇಶನ 21 ಕಾರ್ಯದಿನಗಳ ಬಳಿಕ ಗುರುವಾರ ಅಂತ್ಯಗೊಂಡಿತ್ತು. ಇಂತಹ ಘಟನೆಗಳ ಹಿಂದೆ ಉದಾಹರಣೆಗಳೂ ಇವೆ. ಕಳೆದ…
ರಾಜ್ಯದಲ್ಲಿ ಮಸಾಜ್, ಸ್ಪಾ ನಿಯಂತ್ರಣಕ್ಕೆ ಸೂಕ್ತ ಕಾಯ್ದೆ ಜಾರಿಗೆ ವಕೀಲರ ಆಗ್ರಹ
ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ ಸೂಕ್ತ ಕಾಯ್ದೆ ಜಾರಿಗೆ ತರಬೇಕೆಂದು ವಕೀಲರ ಸಮೂಹ ಆಗ್ರಹಿಸಿದೆ. ರಾಜ್ಯದಲ್ಲಿ Spa ಕೇಂದ್ರಗಳ ಮೇಲೆ ಪೊಲೀಸರು ಆಗಾಗ್ಗೆ ದಾಳಿ ನಡೆಸುತ್ತಿರುವ ಸನ್ನಿವೇಶಗಳು ಮರುಕಳಿಸುತ್ತಿವೆ. ಮಸಾಜ್ ಹಾಗೂ ಸ್ಪಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕಾನೂನೇ ಇಲ್ಲದಿರುವಾಗ ಅಕ್ರಮ ಎಂಬ ವ್ಯಾಖ್ಯಾನವೂ ಇರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಪೊಲೀಸರು ಮಸಾಜ್ ಹಾಗೂ ಸ್ಪಾ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆಗಳೂ ಅನೈತಿಕವಾಗುತ್ತದೆ ಎಂಬುದು ಕಾನೂನು ತಜ್ಞರ ಅಭಿಪ್ರಾಯ. ಈ ವಿಚಾರದಲ್ಲಿ ರಾಜ್ಯದ ನ್ಯಾಯಾಂಗ ಕ್ಷೇತ್ರದ ಪರಿಣಿತರು ಇಟ್ಟಿರುವ ಹೆಜ್ಜೆ ಗಮನಸೆಳೆದಿದೆ. ಈ ಸಂಬಂಧ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮನೋರಾಜ್ ರಾಜೀವ್ ನೇತೃತ್ವದಲ್ಲಿ ಮಂಗಳೂರಿನ ವಕೀಲರ ತಂಡವು ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷ ನಾಯಕರಿಗೆ ಮನವಿ ಸಲ್ಲಿಸಿ, ಮಸಾಜ್ ಹಾಗೂ ಸ್ಪಾ…
ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ
ಬೆಂಗಳೂರು: ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದ್ದು, ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರ ಬರೆದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಗುರುವಾರ ಮಾಹಿತಿ ನೀಡಿದರು. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಟಿ.ಎನ್. ಜವರಾಯಿ ಗೌಡ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ (ಜಿಬಿಎ) ಮೇ 15ರಿಂದ ಜಾರಿಗೆ ಬಂತು. ಜುಲೈ 19ರಂದು ಐದು ನಿಗಮಗಳನ್ನು ರಚಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 18ರವರೆಗೆ ಅವಕಾಶ ನೀಡಿದ್ದೇವೆ. ಕೆಲವು ಪ್ರದೇಶಗಳನ್ನು ಸೇರಿಸಲಾಗಿದ್ದು, ಇನ್ನೂ ಕೆಲವು ಪ್ರದೇಶಗಳನ್ನು ನಂತರ ಸೇರಿಸಲಾಗುವುದು. ವಾರ್ಡ್‌ಗಳ ವಿಂಗಡಣೆ ನವೆಂಬರ್ 1ರೊಳಗೆ ಪೂರ್ಣಗೊಳ್ಳಲಿದೆ. ಇದರ ಜವಾಬ್ದಾರಿ ಬಿಬಿಎಂಪಿ ಆಯುಕ್ತರ ನೇತೃತ್ವದ ವಿಶೇಷ ತಂಡಕ್ಕೆ ನೀಡಲಾಗಿದೆ. ಈ ಸಂಬಂಧ ನಾವು ನ್ಯಾಯಾಲಯಕ್ಕೂ ಅಫಿಡವಿಟ್ ಸಲ್ಲಿಸಿದ್ದೇವೆ” ಎಂದರು. ಸದಸ್ಯರೊಬ್ಬರು ತಕ್ಷಣ ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ…
ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.
ಬೆಂಗಳೂರು: ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಒಡಂಬಡಿಕೆ ನಂತರ ಮಾತನಾಡಿದ ಸಚಿವರು, ಬೆಳೆ ಮಾಹಿತಿ, ಹವಾಮಾನ ಮಾಹಿತಿ, FRUITS ದತ್ತಾಂಶ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಪ್ರಮುಖ ಕೃಷಿ ಮಾಹಿತಿಗಳನ್ನ ಸಮಗ್ರಗೊಳಿಸಿ, ವಿಶ್ಲೇಷಿಸಿ, ರೈತರಿಗೆ ನಿಖರ ಮತ್ತು ತಂತ್ರಜ್ಞಾನ ಆಧಾರಿತ ಸಲಹಾ ಸೇವೆಗಳನ್ನ ಒದಗಿಸಲು…