ತುಮಕೂರು: ಮುಂದಿನ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. “ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ದೇವರೇ ಬಂದು ಹೇಳಿದರೂ ನಾನು ಕೇಳುವುದಿಲ್ಲ” ಎಂದು ಶನಿವಾರ ಅವರು ತುಮಕೂರಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲು ಮಾರ್ಗಕ್ಕೆ ಸಂಬಂಧಿಸಿದ ಸಮೀಕ್ಷೆ ಪೂರ್ಣಗೊಂಡಿದ್ದು, ಡಿಪಿಆರ್ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದರು. ಎನ್‌ಹೆಚ್-4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೆಐಡಿಬಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ಅವರು ತಿಳಿಸಿದ್ದಾರೆ.