ಕೊಚ್ಚಿ: ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು, ಕಲಿಕೆ ಮತ್ತು ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ತಿಳಿಸಿದ್ದಾರೆ. ಕೇರಳ ಸರ್ಕಾರ ಶುಕ್ರವಾರ ಆಯೋಜಿಸಿದ್ದ ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಡಾ. ಪಾಟೀಲ್ ಭಾಷಣ ಮಾಡಿದರು. ಪ್ರತಿಯೊಬ್ಬ ಉದ್ಯಮಿ, ಸಾಧಕ ಮತ್ತು ನಾಯಕ ಯಶಸ್ಸನ್ನು ಕಾಣುವ ಮೊದಲು ವೈಫಲ್ಯವನ್ನು ಕಂಡಿದ್ದಾರೆ. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದರು. “ವೈಫಲ್ಯವು ಅಂತ್ಯವಲ್ಲ – ಇದು ಯಶಸ್ಸಿನ ಮೆಟ್ಟಿಲು. ಸರ್ಕಾರಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳು ನೀತಿಗಳು ಮತ್ತು ವಿಧಾನಗಳನ್ನು ರೂಪಿಸುತ್ತದೆ, ಆದರೆ ನಿಜವಾದ ಬದಲಾವಣೆಯು, ವಿಭಿನ್ನವಾಗಿ ಕನಸು…