ಬೆಂಗಳೂರು: ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದ್ದು, ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರ ಬರೆದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಗುರುವಾರ ಮಾಹಿತಿ ನೀಡಿದರು. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಟಿ.ಎನ್. ಜವರಾಯಿ ಗೌಡ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ (ಜಿಬಿಎ) ಮೇ 15ರಿಂದ ಜಾರಿಗೆ ಬಂತು. ಜುಲೈ 19ರಂದು ಐದು ನಿಗಮಗಳನ್ನು ರಚಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 18ರವರೆಗೆ ಅವಕಾಶ ನೀಡಿದ್ದೇವೆ. ಕೆಲವು ಪ್ರದೇಶಗಳನ್ನು ಸೇರಿಸಲಾಗಿದ್ದು, ಇನ್ನೂ ಕೆಲವು ಪ್ರದೇಶಗಳನ್ನು ನಂತರ ಸೇರಿಸಲಾಗುವುದು. ವಾರ್ಡ್‌ಗಳ ವಿಂಗಡಣೆ ನವೆಂಬರ್ 1ರೊಳಗೆ ಪೂರ್ಣಗೊಳ್ಳಲಿದೆ. ಇದರ ಜವಾಬ್ದಾರಿ ಬಿಬಿಎಂಪಿ ಆಯುಕ್ತರ ನೇತೃತ್ವದ ವಿಶೇಷ ತಂಡಕ್ಕೆ ನೀಡಲಾಗಿದೆ. ಈ ಸಂಬಂಧ ನಾವು ನ್ಯಾಯಾಲಯಕ್ಕೂ ಅಫಿಡವಿಟ್ ಸಲ್ಲಿಸಿದ್ದೇವೆ” ಎಂದರು. ಸದಸ್ಯರೊಬ್ಬರು ತಕ್ಷಣ ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ…
Month: August 2025
ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.
ಬೆಂಗಳೂರು: ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಒಡಂಬಡಿಕೆ ನಂತರ ಮಾತನಾಡಿದ ಸಚಿವರು, ಬೆಳೆ ಮಾಹಿತಿ, ಹವಾಮಾನ ಮಾಹಿತಿ, FRUITS ದತ್ತಾಂಶ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಪ್ರಮುಖ ಕೃಷಿ ಮಾಹಿತಿಗಳನ್ನ ಸಮಗ್ರಗೊಳಿಸಿ, ವಿಶ್ಲೇಷಿಸಿ, ರೈತರಿಗೆ ನಿಖರ ಮತ್ತು ತಂತ್ರಜ್ಞಾನ ಆಧಾರಿತ ಸಲಹಾ ಸೇವೆಗಳನ್ನ ಒದಗಿಸಲು…
ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್
ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿ 39 ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಈಗಾಗಲೇ 6 ಗೇಟ್‌ಗಳ ಅಳವಡಿಕೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರಡಿ ಪ್ರಸ್ತಾಪವಾದ ತುಂಗಭದ್ರಾ ಜಲಾಶಯದ ಸಮಸ್ಯೆಗಳ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, “ಜಲಾಶಯ ಬೋರ್ಡ್ 1633 ಅಡಿ ಬದಲಿಗೆ 1626 ಅಡಿ ಮಟ್ಟದಲ್ಲಿ ನೀರು ಸಂಗ್ರಹಿಸಲು ಸೂಚಿಸಿದೆ. ತಾಂತ್ರಿಕ ತೊಂದರೆಯಿಂದಾಗಿ ಈ ಬಾರಿ ರೈತರಿಗೆ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ” ಎಂದರು. ರೈತರ ಹಿತವನ್ನು ಕಾಪಾಡುವ ಬದ್ಧತೆಯನ್ನು ಸರ್ಕಾರ ಪುನರುಚ್ಚರಿಸಿದ ಡಿ.ಕೆ.ಶಿವಕುಮಾರ್, ಕುಡಿಯುವ ನೀರು ಹಾಗೂ ಕೈಗಾರಿಕೆಗಳಿಗೆ ನೀರಿನ ಪೂರೈಕೆಗೆ ಆದ್ಯತೆ ನೀಡಲಾಗುವುದಾಗಿ ತಿಳಿಸಿದರು. ಜೊತೆಗೆ, ದುರಸ್ತಿ ಕಾಮಗಾರಿಗಳು ಹಾಗೂ ಸಿಬ್ಬಂದಿ ಕೊರತೆ ನಿವಾರಣೆಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ; ಟ್ರಾಫಿಕ್ ದಂಡ ಪಾವತಿಗೆ ಶೇ.50 ರಿಯಾಯಿತಿ
ಬೆಂಗಳೂರು: ರಾಜ್ಯ ಸರ್ಕಾರವು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದ ದಂಡ ಪಾವತಿಗೆ ಮತ್ತೊಮ್ಮೆ ಶೇ.50ರಷ್ಟು ರಿಯಾಯಿತಿ ನೀಡುವಂತೆ ಆದೇಶ ಹೊರಡಿಸಿದೆ. ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ. 2023ರ ಫೆಬ್ರವರಿ 11ರೊಳಗೆ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ. ಅನೇಕ ವರ್ಷಗಳಿಂದ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡವರಿಗೆ ಈ ಅವಕಾಶ ದೊರಕಲಿದೆ. 2023ರ ಫೆಬ್ರವರಿ 12ರ ನಂತರ ದಾಖಲಾಗಿರುವ ಪ್ರಕರಣಗಳಿಗೆ ಮುಂದಿನ ವರ್ಷ ಇದೇ ರೀತಿಯ ರಿಯಾಯಿತಿ ನೀಡುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ. ಸಂಚಾರಿ ಇ- ಚಲನ್ ನಲ್ಲಿ ದಾಖಲಾಗಿರುವ ದಂಡ ಪ್ರಕರಣಗಳ, ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಆದೇಶ. ಪೊಲೀಸ್ ಇಲಾಖೆಯ ಸಂಚಾರಿ ಇ…
ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ
ಉಡುಪಿ: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೊಳಪಡಿಸಿ ಆದೇಶಿಸಿದೆ. ಬ್ರಹ್ಮಾವರ ಪೊಲೀಸರು ಗುರುವಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ್ದರು. ಗುರುವಾರ ಬೆಳಗ್ಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆದೊಯ್ದ ಪೊಲೀಸರು ಬ್ರಹ್ಮಾವರದಲಿರುವ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಮಹೇಶ್ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೇ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಈ ಸಂಬಂಧ ಅಗಸ್ಟ್ 23ರಂದು ನಡೆಯಲಿದೆ.
ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಬಲಿಯಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾಟದಿಂದ ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಮಾಹಿತಿ ಹಂಚಿಕೊಂಡ ಸಿಎಂ, “ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ಸರ್ಕಾರ ಈಗಾಗಲೇ ಕಠಿಣ ಕಾನೂನು ಜಾರಿಗೆ ತಂದಿದೆ. ಅದರ ಬಳಿಕ ಇಂತಹ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ” ಎಂದು ಹೇಳಿದರು. ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು… pic.twitter.com/x5mq0ph80D — Siddaramaiah (@siddaramaiah) August 21, 2025
ಉಪರಾಷ್ಟ್ರಪತಿ ಚುನಾವಣೆಗೆ ಇಬ್ಬರು ಹಿರಿಯ ಐಎಎಸ್ ವೀಕ್ಷಕರು
ನವದೆಹಲಿ: ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯ ವೇಳೆ ಚುನಾವಣೆ ಪ್ರಕ್ರಿಯೆ ಪಾರದರ್ಶಕವಾಗಿ ಸಾಗುವಂತೆ ನೋಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಿದೆ. ಸಂವಿಧಾನದ 324ನೇ ವಿಧಿಯ ಅಡಿಯಲ್ಲಿ ನೀಡಿರುವ ಅಧಿಕಾರವನ್ನು ಬಳಸಿಕೊಂಡು ಈ ನೇಮಕಾತಿ ಮಾಡಲಾಗಿದೆ ಎಂದು ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಆಗಸ್ಟ್ 7ರಂದು ಅಧಿಸೂಚನೆ ಹೊರಡಿಸಲಾದ ವೇಳಾಪಟ್ಟಿಯ ಪ್ರಕಾರ, ಉಪರಾಷ್ಟ್ರಪತಿ ಸ್ಥಾನಕ್ಕೆ ಮತದಾನ ಹಾಗೂ ಎಣಿಕೆ ಕಾರ್ಯಗಳು ಸೆಪ್ಟೆಂಬರ್ 9ರಂದು ಸಂಸತ್ತಿನ ಆವರಣದಲ್ಲೇ ನಡೆಯಲಿವೆ. ಪ್ರಸ್ತುತ ಉಪಾಧ್ಯಕ್ಷರ ಅವಧಿ ಶೀಘ್ರದಲ್ಲೇ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಘೋಷಿಸಲಾಗಿದೆ. ವೀಕ್ಷಕರಾಗಿ ನೇಮಕಗೊಂಡಿರುವ ಅಧಿಕಾರಿಗಳು: ಸುಶೀಲ್‌ಕುಮಾರ್ ಲೋಹಾನಿ, ಐಎಎಸ್ (ಒಡಿಶಾ ಕೇಡರ್, 1995 ಬ್ಯಾಚ್) – ಪ್ರಸ್ತುತ ಪಂಚಾಯತ್ ರಾಜ್ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ; ಡಿ. ಆನಂದನ್, ಐಎಎಸ್ (ಸಿಕ್ಕಿಂ ಕೇಡರ್, 2000 ಬ್ಯಾಚ್) – ಪ್ರಸ್ತುತ ಹಣಕಾಸು ಸಚಿವಾಲಯದ…
ಮಣ್ಣಿನ ಗಣಪನೆ ಪೂಜಿಸಿ, ವಿಸರ್ಜಿಸಿರಿ : ಸಚಿವ ಖಂಡ್ರೆ
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣಪ ಮೂರ್ತಿ ಬಳಕೆಗೆ ಅವಕಾಶ ನೀಡಲಾಗುವುದಿಲ್ಲ. ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಸಮಿತಿಗಳಿಂದ ಪಿಓಪಿ ಗಣಪ ಮೂರ್ತಿ ಬಳಸುವುದಿಲ್ಲವೆಂದು ಮುಚ್ಚಳಿಕೆ ಪಡೆದುಕೊಳ್ಳುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಶ್ರದ್ಧಾ ಭಕ್ತಿಯಿಂದ ಆಚರಿಸುವ ಹಬ್ಬವು ಪರಿಸರಕ್ಕೆ ಹಾಗೂ ಜಲಚರಗಳಿಗೆ ಮಾರಕವಾಗಬಾರದು. ಪಿಓಪಿ ಮೂರ್ತಿಗಳು ನೀರಲ್ಲಿ ಕರಗದೇ, ವಿಷಕಾರಿ ಅಂಶ ಸೇರಿಸುತ್ತವೆ. ಮಣ್ಣಿನ ಗಣಪ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸಬೇಕು” ಎಂದು ಮನವಿ ಮಾಡಿದರು. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪ ಮೂರ್ತಿಗಳ ಪೂಜೆ ನಡೆಯುತ್ತಿದೆ. “ಅಲ್ಲಿ ಸಾಧ್ಯವಾಗುತ್ತಿರುವುದು ಉಳಿದ ಜಿಲ್ಲೆಗಳಲ್ಲಿ ಏಕೆ ಸಾಧ್ಯವಾಗಬಾರದು? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ ಹಾಗೂ…
ಪ್ರಧಾನ ಮಂತ್ರಿ ವಿಕ್ಷಿತ್ ಭಾರತ್ ರೋಜ್‌ಗಾರ್ ಯೋಜನಾ ಪೋರ್ಟಲ್ ಕಾರ್ಯಾರಂಭ
ನವದೆಹಲಿ: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದ ವಿಕ್ಷಿತ್ ಭಾರತ್ ರೋಜ್‌ಗಾರ್ ಯೋಜನೆಗಾಗಿ ಮೀಸಲಾದ ಪೋರ್ಟಲ್ ಸೋಮವಾರದಿಂದ ಕಾರ್ಯಾರಂಭ ಮಾಡಿದೆ. ಸುಮಾರು 1 ಲಕ್ಷ ಕೋಟಿ ರೂ.ಗಳ ವೆಚ್ಚದ ಈ ಯೋಜನೆ, ಆಗಸ್ಟ್ 1, 2025 ರಿಂದ ಜುಲೈ 31, 2027ರ ವರೆಗೆ ಎರಡು ವರ್ಷಗಳ ಅವಧಿಯಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳ ಸೃಷ್ಟಿಗೆ ಪ್ರೋತ್ಸಾಹ ನೀಡುವ ಗುರಿ ಹೊಂದಿದೆ. ಉದ್ಯೋಗ ಸೃಷ್ಟಿ, ಉದ್ಯೋಗಾವಕಾಶ ವಿಸ್ತರಣೆ ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಉದ್ಯೋಗದಾತರು ಇದೀಗ ಪೋರ್ಟಲ್‌ನಲ್ಲಿ ಒಂದು ಬಾರಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಎಲ್ಲಾ ಮೊದಲ ಬಾರಿಗೆ ಉದ್ಯೋಗ ಪಡೆಯುವವರು UMANG ಆಪ್‌ನಲ್ಲಿ ಲಭ್ಯವಿರುವ ಫೇಸ್ ಅಥೆಂಟಿಕೇಶನ್ ಟೆಕ್ನಾಲಜಿ (FAT) ಮೂಲಕ ಸಾರ್ವತ್ರಿಕ ಖಾತೆ ಸಂಖ್ಯೆ (UAN) ಪಡೆಯಬೇಕು. ಯೋಜನೆಯಡಿಯಲ್ಲಿ.. ಹೊಸ ಉದ್ಯೋಗಿಗಳಿಗೆ ಎರಡು ಕಂತುಗಳಲ್ಲಿ…
ಬಾಹ್ಯಾಕಾಶ ಯಾನಿ ಶುಭಾಂಶು ಶುಕ್ಲಾ ಅವರಿಗೆ ಮೋದಿ ಪ್ರೀತಿ–ಆಶೀರ್ವಾದ
ಲಖನೌ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾರತೀಯರು ನಡೆಸಿದ ಮೊದಲ ಯಶಸ್ವಿ ಕಾರ್ಯಾಚರಣೆಯ ನಂತರ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಇದು ಭಾರತೀಯ ಗಗನಯಾತ್ರಿಯೊಬ್ಬರ ಮೊದಲ ಕಾರ್ಯಾಚರಣೆಯಾಗಿದ್ದು, ಐತಿಹಾಸಿಕ ಕ್ಷಣವಾಗಿ ಗುರುತಿಸಿಕೊಂಡಿದೆ. ಸಭೆಯ ವೇಳೆ ಶುಭಾಂಶು ಅವರು ತಮ್ಮ ಕಾರ್ಯಾಚರಣೆಯ ಅನುಭವ ಹಂಚಿಕೊಂಡು, ಬಾಹ್ಯಾಕಾಶದಲ್ಲಿ ತಮ್ಮೊಂದಿಗೆ ಕೊಂಡೊಯ್ದ ತ್ರಿವರ್ಣ ಧ್ವಜವನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಿದರು. ಶುಭಾಂಶು ಅವರ ತಂದೆ ಶಂಭು ದಯಾಳ್ ಶುಕ್ಲಾ, “ಪ್ರಧಾನಿ ಮೋದಿ ನನ್ನ ಮಗನಿಗೆ ಪ್ರೀತಿ ಮತ್ತು ಆಶೀರ್ವಾದ ನೀಡಿದ್ದಾರೆ. ಅದು ನಮ್ಮ ಕುಟುಂಬಕ್ಕೆ ಭಾವನಾತ್ಮಕ ಕ್ಷಣವಾಗಿತ್ತು” ಎಂದರು. ತಾಯಿ ಆಶಾ ಶುಕ್ಲಾ ಅವರು, “ಇದು ಐತಿಹಾಸಿಕ ಹಾಗೂ ಹೆಮ್ಮೆಯ ಕ್ಷಣ” ಎಂದು ಸಂತೋಷ ವ್ಯಕ್ತಪಡಿಸಿದರು. ಶುಭಾಂಶು ಲಖ್ನೋಗೆ ಬರುವ ಸಂದರ್ಭದಲ್ಲಿ ವಿಶೇಷ ಸ್ವಾಗತಕ್ಕೆ ಸಿದ್ಧತೆ ನಡೆಯುತ್ತಿದ್ದು, ಅವರ ಸಮಯಾವಕಾಶಕ್ಕೆ ಅನುಗುಣವಾಗಿ ಕಾರ್ಯಕ್ರಮ…