ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆ ರಾಜಕೀಯ ಪಕ್ಷಗಳ ಜಂಘಿಕುಸ್ತಿಗೆ ಕಾರಣಾವಾಗಿದೆ. ಇದೀಗ ಈ ಜಟಾಪಟಿ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ. ಕರ್ನಾಟಕ ಸರ್ಕಾರದ ಒಬಿಸಿ ಸಮೀಕ್ಷೆಯನ್ನು ವಿರೋಧಿಸಿದ್ದಕ್ಕಾಗಿ ಮತ್ತು ಒಬಿಸಿ ಮೀಸಲಾತಿ ಬಗ್ಗೆ ಬಿಜೆಪಿಯ ಸ್ಪಷ್ಟ ನಿಲುವನ್ನು ಸ್ಪಷ್ಟಪಡಿಸಲು ಕೋರಿ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರ ನಡೆ ಬಗ್ಗೆ ಈ ಪತ್ರದಲ್ಲಿ ರಮೇಶ್ ಬಾಬು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಮತ್ತು ಹಿಂದುಳಿದ ವರ್ಗಗಳ ಹಿತಾಸಕ್ತಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಾಂವಿಧಾನಿಕ ನಿಬಂಧನೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ಅನುಗುಣವಾಗಿ ಕರ್ನಾಟಕದಲ್ಲಿ ಒಬಿಸಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಕಲ್ಯಾಣ ನೀತಿಗಳನ್ನು ರೂಪಿಸಲು ಮತ್ತು ಮೀಸಲಾತಿ…
Month: September 2025
60% ಕಮಿಷನ್ ಆರೋಪ; ಸಿದ್ದುಗೆ ಬಿಜೆಪಿ ಗುದ್ದು
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಬಗ್ಗೆ ಅಭಿಯಾನ ನಡೆಸಿ ಗೆದ್ದು ಬಂದ ಸಿದ್ದರಾಮಯ್ಯ ಅವರಿಗೆ ಇದೀಗ ತಾವು ಬಿಟ್ಟ ಬಾಣವೇ ತಿರುಗಿ ಬಂದಂತಾಗಿದೆ. ಗುತ್ತಿಗೆದಾರರು ಬರೆದಿರುವ ಪತ್ರವನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಬಗ್ಗೆ ಅಭಿಯಾನ ಆರಂಭಿಸಿದಂತಿದೆ. ಈ ಕುರಿತಂತೆ ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಮುಖ್ಯಮಂತ್ರಿ @siddaramaiah ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಕಳ್ಳಾಟ ಭರ್ಜರಿಯಾಗಿ ನಡೆಯುತ್ತಿದೆ. ಗುತ್ತಿಗೆದಾರರ ಸಂಘವೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದು 60% ಕಮಿಷನ್ ಆರೋಪವನ್ನು ಅಧಿಕೃತಗೊಳಿಸಿದೆ. ಈ ಹಿಂದೆ ವಿಪಕ್ಷದಲ್ಲಿದ್ದಾಗ ಸುಳ್ಳು ಆರೋಪ ಮಾಡಿ Pay-CM ಅಭಿಯಾನ ನಡೆಸಿದ್ದ @INCKarnataka ನಾಯಕರಿಗೆ ಅದೇ… pic.twitter.com/SI51KVXzKn — BJP Karnataka (@BJP4Karnataka) September 30, 2025 ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್…
‘ವಿ.ಕೆ.ಮಲ್ಹೋತ್ರಾ ನಿಧಾನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ: ಹಿರಿಯ ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಲ್ಹೋತ್ರಾ (93) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಜನರ ಸಮಸ್ಯೆಗಳ ಬಗ್ಗೆ ಆಳವಾದ ಅರಿವು ಹೊಂದಿದ ಅತ್ಯುತ್ತಮ ನಾಯಕ” ಎಂದು ಅವರನ್ನು ಬಣ್ಣಿಸಿದ್ದಾರೆ. 1931ರ ಡಿಸೆಂಬರ್‌ನಲ್ಲಿ ಲಾಹೋರ್‌ನಲ್ಲಿ ಜನಿಸಿದ ಮಲ್ಹೋತ್ರಾ, ಮಂಗಳವಾರ ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಧಾನಿ ಮೋದಿ ‘X’ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, “ಮಲ್ಹೋತ್ರಾ ಜೀ ಅವರು ದೆಹಲಿಯಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಸತ್ತಿನಲ್ಲಿನ ಅವರ ಹಸ್ತಕ್ಷೇಪಗಳನ್ನು ಮರೆಯಲು ಸಾಧ್ಯವಿಲ್ಲ. ಅವರ ಅಗಲಿಕೆ ನೋವು ತಂದಿದೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು” ಎಂದು ಬರೆದಿದ್ದಾರೆ.
ಹಿರಿಯ ಬಿಜೆಪಿ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ಅಸ್ತಂಗತ
ನವದೆಹಲಿ: ದೆಹಲಿ ರಾಜಕಾರಣದಲ್ಲಿ ದೀರ್ಘ ಕಾಲ ಪ್ರಮುಖ ಪಾತ್ರವಹಿಸಿದ್ದ ಹಿರಿಯ ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಲ್ಹೋತ್ರಾ ಅವರು ಮಂಗಳವಾರ ಬೆಳಿಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು ಎಂದು ಆಸ್ಪತ್ರೆ ತಿಳಿಸಿದೆ. 1931ರ ಡಿಸೆಂಬರ್‌ನಲ್ಲಿ ಲಾಹೋರ್‌ನಲ್ಲಿ ಜನಿಸಿದ ಮಲ್ಹೋತ್ರಾ, ದೆಹಲಿಯಿಂದ ಐದು ಬಾರಿ ಸಂಸದರಾಗಿದ್ದರೆ, ಎರಡು ಬಾರಿ ಶಾಸಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಜನಸಂಘದ ದೆಹಲಿ ಘಟಕದ ಅಧ್ಯಕ್ಷರಾಗಿ (1972–75) ಮತ್ತು ಬಳಿಕ ಎರಡು ಅವಧಿಗಳವರೆಗೆ ಬಿಜೆಪಿ ದೆಹಲಿ ಘಟಕದ ಅಧ್ಯಕ್ಷರಾಗಿ (1977–80, 1980–84) ಪಕ್ಷದ ವಿಸ್ತರಣೆಗೆ ಶ್ರಮಿಸಿದ್ದರು. “93 ವರ್ಷ ವಯಸ್ಸಿನ ಪ್ರೊ. ವಿಜಯ್ ಕುಮಾರ್ ಮಲ್ಹೋತ್ರಾ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದ್ದು, ಸೆಪ್ಟೆಂಬರ್ 30, 2025ರ ಬೆಳಿಗ್ಗೆ ಅವರು ನಿಧನರಾದರು,” ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಸಂತಾಪ ಸೂಚಿಸಿ, “ಮಲ್ಹೋತ್ರಾ ಅವರ…
ಉತ್ತರ ಕರ್ನಾಟಕಕ್ಕೆ 3,000 ಕೋಟಿ ರೂ. ಪ್ರವಾಹ ಪರಿಹಾರ ಬಿಡುಗಡೆಗೆ ಪ್ರತಿಪಕ್ಷ ಆಗ್ರಹ
ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕಕ್ಕೆ ಸರ್ಕಾರ 3,000 ಕೋಟಿ ರೂ. ಪ್ರವಾಹ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ…
ಕುದ್ರೋಳಿಯಲ್ಲಿ ಚಿಣ್ಣರ ಕಲರವ; ಜನರ ಚಿತ್ತ ಸೆಳೆದ ಕಿನ್ನಿಪಿಲಿ ಸ್ಪರ್ಧೆ
ಮಂಗಳೂರು: ಕರಾವಳಿ ದಸರಾದ ಕೇಂದ್ರ ಸ್ಥಾನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಭಾನುವಾರ ಪುಟಾಣಿಗಳ ಜಗತ್ತಾಗಿ ಮಾರ್ಪಟ್ಟಿತ್ತು. ಚಿಣ್ಣರ ಕಲರವ ಮಂಗಳೂರು ದಸರಾದ ಆಕರ್ಷಣೆಯನ್ನು ನೂರ್ಮಡಿಗೊಳಿಸಿತು. ಹೌದು ಪುಟಾಣಿಗಳ ಸಂತೋಷ, ಕ್ರೀಡೆ, ನಗು, ಕಲಾ ಕೌಶಲಗಳಿಗೆ ವೇದಿಕೆ ಸೃಷ್ಟಿಸುವ ಉದ್ದೇಶದಿಂದ ಹಲವು ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಗುಚ್ಛ ಮಕ್ಕಳ ದಸರಾ-2025ರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಹಸ್ರಾರು ಪುಟಾಣಿಗಳು ಸಾಕ್ಷಿಯಾಗಿದರು. ಕುದ್ರೋಳಿ ಕ್ಷೇತ್ರದ ದ್ವಾರದಿಂದ ವೇದಿಕೆ ತನಕ ಪುಟಾಣಿಗಳ ಮೆರವಣಿಗೆ ಈ ಕಾರ್ಯಕ್ರಮಕ್ಕೆ ಆಕರ್ಷಣೆ ತುಂಬಿತು. ಪುಣಿಗಳಿಗಾಗಿ ಬಿರುವೆರ್ ಕುಡ್ಲ ಪ್ರಾಯೋಜಕತ್ವದಲ್ಲಿ ಕಿನ್ನಿಪಿಲಿ ಸ್ಪರ್ಧೆ, ಭವಾನಿ ಶಿಪ್ಪಿಂಗ್ಸ್ ಪ್ರಾಯೋಜಕತ್ವದಲ್ಲಿ ಭಕ್ತಿಗೀತೆ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದ್ದು, ಸಹಸ್ರಾರು ಪುಟಾಣಿಗಳು ಪಾಲ್ಗೊಂಡರು. ಸಾಮಾಜಿಕ ಜಾಲತಾಣ ತಾರೆ, ಸ್ಮಾರ್ಟ್ ಕಿಡ್ ಖ್ಯಾತಿಯ ಅಗ್ನಿವ್ ಮಕ್ಕಳ ದಸರಾ ಉದ್ಘಾಟಿಸಿದರು. ಡಾ.ಸುಶ್ಮಾ ಅಕ್ಕರಾಜು, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.,…
ಮಂಗಳೂರು ದಸರಾಕ್ಕೆ ‘ಮ್ಯಾರಥಾನ್’ ರಂಗು; 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ-2025’ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್ ಬ್ಯಾಂಕ್ ವತಿಯಿಂದ ಭಾನುವಾರ ಮೂರನೇ ಆವೃತ್ತಿಯ ರಾಜ್ಯಮಟ್ಟದ ಮಂಗಳೂರು ದಸರಾ ಮ್ಯಾರಥಾನ್-2025 ಸ್ಪರ್ಧೆ ಗಮನಸೆಳೆಯಿತು. ಮ್ಯಾರಥಾನ್ ನಲ್ಲಿ ಚಿಣ್ಣರಿಂದ ವೃದ್ಧರವರೆಗೂ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಕೇರಳ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. 21 ಕೆ ರನ್, 10ಕೆ ರನ್, 5ಕೆ ರನ್, 2ಕೆ ಸ್ಯಾರಿ ರನ್ ಆಯೋಜಿಸಲಾಗಿತ್ತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ 10 ಸಾವಿರ ರೂ., 10 ಕಿ.ಮೀ. ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ., ತೃತೀಯ 5 ಸಾವಿರ ರೂ. 5 ಕಿ.ಮೀ.ನಲ್ಲಿ ಪ್ರಥಮ 5 ಸಾವಿರ…
ಜಾತಿ ಸಮೀಕ್ಷೆಯಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ: ಬಿಜೆಪಿ ನಾಯಕರ ಸಲಹೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು. ಮುಂದಿನ ಬಜೆಟ್ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ…
“ಜಾತಿ ಗಣತಿ ಬಹಿಷ್ಕರಿಸಿ”; ರಾಜ್ಯದ ಜನತೆಗೆ ಬಿಜೆಪಿ ಕರೆ
ಬೆಂಗಳೂರು: ಜಾತಿ ಸಮೀಕ್ಷೆ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಜಾತಿ ಗಣತಿಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ. ಜಾತಿಗಣತಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರದ ಕಾರ್ಯಕ್ರಮ ಬಗ್ಗೆ ಕಾಟು ಟೀಕೆ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯ ಸರ್ಕಾರದ ಮೇಲೆ ನನಗೆ ನಂಬಿಕೆಯಿಲ್ಲ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹಾಗಾಗಿ, ಜಾತಿಗಣತಿ ಬಹಿಷ್ಕರಿಸಿ ಎಂದು ಜನತೆಗೆ ಕರೆ ನೀಡಿದರು. ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ. ನನ್ನ ಮಾಹಿತಿ ಸುರಕ್ಷಿತವಾಗಿರುತ್ತೆ ಅನ್ನೋ ನಂಬಿಕೆ ಇಲ್ಲ ಎಂದಿರುವ ತೇಜಸ್ವಿ ಸೂರ್ಯ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ ಜೊತೆಗೆ, ಜಾತಿ ಜಾತಿ ಮಧ್ಯೆ ಗಲಾಟೆ ತರಲು ಇದನ್ನು ಮಾಡುತ್ತಿದ್ದಾರೆ. ಹಾಗಾಗಿ ಇದರಲ್ಲಿ ಪಾಲ್ಗೊಳ್ಳಬೇಡಿ ಎಂದು ಕರೆ ನೀಡಿದ್ದಾರೆ. ಹಿಂದೆ ಲಾಲು ಪ್ರಸಾದ್ ಯಾದವ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರಂತಹ ನಾಯಕರು ಮಾಡಿದ…
ಕರೂರ್ ಕಾಲ್ತುಳಿತ: ಟಿವಿಕೆ ಜಿಲ್ಲಾ ಕಾರ್ಯದರ್ಶಿ ವಿರುದ್ಧ ಪ್ರಕರಣ
ಕರೂರ್: ನಟ-ರಾಜಕಾರಣಿ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಕರೂರ್ ಪಟ್ಟಣ ಪೊಲೀಸರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ. ಮಥಿಯಜಗನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶನಿವಾರ ನಡೆದ ಈ ದುರಂತದಲ್ಲಿ 39 ಜನರು ಸಾವನ್ನಪ್ಪಿದ್ದು, 83 ಜನರು ಗಾಯಗೊಂಡಿದ್ದಾರೆ. ಜನಸಂದಣಿ ನಿಯಂತ್ರಣ ಮತ್ತು ಭದ್ರತಾ ಮಾನದಂಡಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ ನಾಲ್ಕು ವಿಭಾಗಗಳಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳು ಇನ್ನೂ ಇತರರ ಲೋಪಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. “ತನಿಖೆ ಮುಂದುವರಿಯುತ್ತಿದೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು,” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಬೆಳಗ್ಗಿನಿಂದಲೇ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಿಸಿಲಿನಲ್ಲಿ ನಿಂತಿದ್ದವರಿಗೆ ಆಹಾರ–ನೀರು ಒದಗಿಸಲ್ಪಟ್ಟರೂ, ಸಂಜೆ ವಿಜಯ್ ಆಗಮಿಸುವ ಸುದ್ದಿ ಹರಿದಂತೆ ಜನದಟ್ಟಣೆ ಹೆಚ್ಚಿತು. ಅಬ್ಬರದ ಗುಂಪಿನಲ್ಲಿ…