ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು ವಲಯ ವತಿಯಿಂದ ಅಕ್ಟೊಬರ್ 12, ಭಾನುವಾರದಂದು ನಡೆಯಲಿರುವ ಬ್ರಹ್ಮಶ್ರೀ ನಿಲಯ ಉದ್ಘಾಟನೆ ಹಿನ್ನೆಲೆಯಲ್ಲಿ, ಪ್ರತಿಭಾವಂತ ಸಾಧಕರಿಗೆ ಸನ್ಮಾನ, ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 31 ರಂದು ಬಿಡುಗಡೆ ಮಾಡಲಾಯಿತು. ಮಂಗಳೂರು ಸಮೀಪದ ಹೂ ಹಾಕುವ ಕಲ್ಲು ಸನ್ನಿಧಿಯಲ್ಲಿ ಸಮಾರಂಭ ನೆರವೇರಿತು. ಸುಮಾರು 13 ವರ್ಷಗಳಿಂದ ಟಾರ್ಪಲ್ ಇನ್ ಹೊದಿಕೆಯ ಮನೆಯಲ್ಲಿ ಜೀವನ ನಡೆಸುತ್ತಿದ್ದ ಕಡುಕುಟುಂಬದ ಸಂಸಾರಕ್ಕೆ ಬಿಲ್ಲವ ವೇದಿಕೆ ಒಂದು ಸುಸಜ್ಜಿತ ಮನೆಯನ್ನು ನಿರ್ಮಾಣ ಮಾಡಿ ಕೊಟ್ಟಿತ್ತು. ಈ ಮನೆಯ ಹಸ್ತಾಂತರ ಕಾರ್ಯಕ್ರಮ ಕೂಡಾ12.10.2025 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದಂತಹ ಬಿಕೆ ಹರಿಪ್ರಸಾದ್, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ ಹಾಗೂ ವಿಧಾನಸಭಾಧ್ಯಕ್ಷ ಯುಟಿ ಖಾದರ್, ಶ್ರೀ ಕ್ಷೇತ್ರ ಕುದ್ರೋಳಿಯ…