ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸಾವಿರಾರು ಟನ್ ಕಬ್ಬಿಣದ ಅದಿರನ್ನು ಬಂದರಿನಿಂದ ಕಳವು ಮಾಡಿ ಅಕ್ರಮವಾಗಿ ಸಾಗಿಸಲಾಗಿತ್ತು ಎಂಬುದು ಆರೋಪ ಬಗ್ಗೆ ಇಡಿ ಕೂಡಾ ಇಸಿಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ವಿಚಾರಣೆಗೆ ಹಾಜರಾಗುವಂತೆ ಸೈಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಮಂಗಳವಾರ ಶಾಂತಿನಗರ ಕಚೇರಿಗೆ ಹಾಜರಾದ ಸೈಲ್ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.
Day: September 10, 2025
ಕುಡ್ಲದ ‘ಪಾತಕ ಲೋಕ’ ಮಟ್ಟಹಾಕಿದ್ದ ಪೋಲೀಸ್ ಕಥೆ ಅಂದು.. ಆ ಪಾತಕ ಜಗತ್ತಿನ ಜೊತೆ ಇದೀಗ ಹೊಸತೊಂದು ಸಿನಿ ಕಥೆಯ ಝಲಕ್
ತುಳುನಾಡಿನ ಭೂಗತ ಇತಿಹಾಸ ಕರಾವಳಿಗಷ್ಟೇ ಸೀಮಿತವಲ್ಲ. ಮುಂಬೈ ಸಹಿತ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚಾಚಿಕೊಂಡದ್ದು ಕರಾಳ ಸತ್ಯ. ಅದರಲ್ಲೂ ಮಂಗಳೂರು ಸುತ್ತಮುತ್ತಲ ಪಾತಕ ಸಾಮ್ರಾಜ್ಯದ ಘಟನಾವಳಿಗಳು ರೋಮಾಂಚನ. ಪ್ರತಿಯೊಂದು ಕೃತ್ಯವೂ ಕರಾಳತೆಯ ಸನ್ನಿವೇಶವನ್ನು ಹುಟ್ಟುಹಾಕಿತ್ತು. ಆದರೆ ಖಡಕ್ ಪೋಲೀಸ್ ಅಧಿಕಾರಿಗಳ ಖದರ್ ಕುಡ್ಲದ ಕೆಲವು ಪುಂಡರ ಗ್ಯಾಂಗನ್ನು ಮಟ್ಟ ಹಾಕಿತ್ತು. ಇದೀಗ ಆ ಭೂಗತ ಜಗತ್ತು ಮತ್ತು ಖಾಕಿ ಖಾದರ್ ಸನ್ನಿವೇಶಗಳನ್ನು ನೆನಪಿಸುವ ಕಥೆಯು ಬೆಳ್ಳಿತೆರೆಯಲ್ಲಿ ಪ್ರತಿಧ್ವನಿಸಲಿದೆ. ಏನಿದು ಕಥಾಹಂದರ? ಕುಡ್ಲದ ಪಾತಕ ಲೋಕವನ್ನು ಸಿಡಿಗುಂಡಿನ ಚಂಡಮದ್ದಳೆ ಎಂಬುದಾಗಿ ಹೆಸರಾಂತ ಪತ್ರಕರ್ತ ರವಿಬೆಳಗೆರೆ ಬಣ್ಣಿಸಿದ್ದರು. ಕುಡ್ಲ ಅಂದರೆ ತುಳುನಾಡಿನ ರಾಜಧಾನಿ. ಈ ತುಳುನಾಡು ಒಂದು ಕಾಲದಲ್ಲಿ ಪಾತಕ ಲೋಕದ ಹೆಡ್ ಕ್ವಾಟ್ರಾಸ್! ಏಳು ಕಡಲಾಚೆ ಕುಳಿತು ಭೂಗತ ಜಗತ್ತನ್ನು ಆಳಿದವರೆಲ್ಲ ಇಲ್ಲಿಂದಲೇ ಫೀಲ್ಡ್ ಗೆ ಎಂಟ್ರಿ ಕೊಟ್ಟವರು. ಎಕ್ಕೂರು, ಎಮ್ಮೆಕೆರೆ, ಬೋಳಾರ, ಮಠದ ಕಣಿ, ಬಳ್ಳಾಲ್ ಬಾಗ್, ಬರ್ಕೆ,…
ಕೇಂದ್ರದಿಂದ ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ ಗಿಫ್ಟ್ ಎಂದ ಬಿಜೆಪಿಗೆ ಟಾಂಗ್.. ಬಸ್ ಕೊಡುಗೆಯ ಇತಿಹಾಸ ತೆರೆದಿಟ್ಟ ಕಾಂಗ್ರೆಸ್
ಬೆಂಗಳೂರು: ಎಲೆಕ್ಟ್ರಿಕ್ ಬಸ್ಸುಗಳನ್ನು ಖಾಸಗಿಯವರಿಂದ ಬಾಡಿಗೆಗೆ ಪಡೆದು ಸಾರಿಗೆ ಸಂಸ್ಥೆಗಳಿಗೆ ನೀಡಿರುವುದನ್ನು ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ/ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ? ಒಂದಷ್ಟಾದರೂ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಿ, ನಿಮ್ಮ ಮಾಹಿತಿಗಾಗಿ ಓದಿಕೊಳ್ಳಿ ಎಂದು ಕಾಂಗ್ರೆಸ್ ಪಕ್ಷ ಟಾಂಗ್ ಕೊಟ್ಟಿದೆ. PM e-Drive / PM e-Seva ಯೋಜನೆಗಳಡಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ 5250 ಎಲೆಕ್ಟ್ರಿಕ್ ಬಸ್ಸುಗಳನ್ನು ಕೇಂದ್ರ ಸರ್ಕಾರ ಖರೀದಿಸಿ ನೀಡಿದೆ ಎಂಬ ಭ್ರಮೆಯಲ್ಲಿ ತಪ್ಪು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ ವಾಸ್ತವ ಸತ್ಯ ಏನೆಂದರೆ, ವಿನಿಮ್ಮ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸಲು ಖಾಸಗಿ ಕಂಪನಿಗಳಿಗೆ ಅಂದರೆ ಒಲೆಕ್ಟ್ರಾ, ಜೆ.ಬಿ.ಎಂ, ಟಾಟಾ, ಸ್ವಿಪ್ಟ್ ಮೊಬಿಲಿಟಿ ಅವರಿಗೆ ಅನುದಾನ ನೀಡಿ, ಖಾಸಗಿಯವರು ಸಾರಿಗೆ ಸಂಸ್ಥೆಗಳಿಗೆ ಆ ಬಸ್ಸುಗಳನ್ನು ಬಾಡಿಗೆಗೆ/ಲೀಸ್ ಆಧಾರದಲ್ಲಿ…
ಮಂಡ್ಯ ಜಿಲ್ಲೆಯಲ್ಲಿ ಕೋಮು ಗಲಭೆ ಮರುಕಳಿಸದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸಚಿವರ ಸೂಚನೆ
ಮಂಡ್ಯ: ಕೋಮು ಗಲಭೆ ಚಿಕ್ಕದಾಗಿರಲಿ ದೊಡ್ಡದಾಗಿರಲಿ ಅದು ಜಿಲ್ಲೆಗೆ ಕಳಂಕ. ಅಧಿಕಾರಿಗಳು ಜಿಲ್ಲೆಯಲ್ಲಿ ಕೋಮು ಗಲಭೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು. ಮದ್ದೂರು ತಾಲ್ಲೂಕಿನಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬುಧವಾರ ಮದ್ದೂರು ತಾಲ್ಲೂಕಿನಲ್ಲಿ ನಡೆಯಲಿರುವ ಸಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಶಾಂತಿಯುತವಾಗಿ ಭಾಗವಹಿಸಬೇಕು ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದರು. ಪೊಲೀಸ್ ಇಲಾಖೆ ವತಿಯಿಂದ ದೊಡ್ಡ, ದೊಡ್ಡ ಗಲಭೆಗಳನ್ನು ನಿಯಂತ್ರಿಸಲಾಗಿದೆ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಲಾಗಿದೆ. ಮದ್ದೂರು ತಾಲ್ಲೂಕಿನಲ್ಲಿ ನಡೆದಿರುವ ಗಲಭೆಗೆ ಕಾರಣವಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಶಾಂತಿ ಕದಡುವ ಕಿಡಿಗೇಡಿಗಳು ನಿಮ್ಮ ಸುತ್ತ ಮುತ್ತಲೇ ಇರುತ್ತಾರೆ. ಸಾರ್ವಜನಿಕರು ಹಾಗೂ ಮುಖಂಡರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಕಿವಿಮಾತು ಹೇಳಿದರು. ಹಿಂದೂ, ಮುಸ್ಲಿಂ ಸಮುದಾಯದವರು ಸಮಾಜದಲ್ಲಿ ಒಟ್ಟಿಗೆ ಬಾಳಬೇಕು, ಕೆಲವು ಕಿಡಿಗೇಡಿಗಳು ನಡೆಸುವ…
ನೇಪಾಳ ಹಿಂಸಾಚಾರ; ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನ
ಕಠ್ಮಂಡು: ನೇಪಾಳದಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನವಾಗಿದ್ದಾರೆ. ಸಾಮಾಜಿಕ ಜಾಲತಾಣದ ಮೇಲಿನ ನಿಷೇಧ ಖಂಡಿಸಿ ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈ ಪ್ರತಿಭಟನೆ ಹಿಂಸಾರೂಪ ತಳೆದಿದೆ. ಪ್ರತಿಭಟನೆಗೆ ಬೆಚ್ಚಿದ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಈ ನಡುವೆ ನೇಪಾಳದ ಪ್ರಧಾನಿಯ ಬಂಗಲೆಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಈ ವೇಳೆ, ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಸಜೀವ ದಹನವಾಗಿದ್ದಾರೆ. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ.