ತಪಾಸಣಾ ವರದಿಗೆ ಲಂಚ; ವೈದ್ಯರ ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಆದೇಶ ಹೊರಡಿಸಿದ್ದಾರೆ. ‌ಲಂಚ ಸ್ವೀಕಾರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಬಿಐ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ ಎಂದು ವರದಿ ಮಾಡಿದೆ. ಈ ಕುರಿತು ಸಿಬಿಐ…

ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

ನವದೆಹಲಿ: ಬೆಂಬಲಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು‌ ಮಾತನಾಡಿದರು. ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾ ಬೆಲೆಗಳು ಕನಿಷ್ಠ ಬೆಂಬಲ ಬೆಲೆಗಿಂತ (MSP) ಕಡಿಮೆ ಇದೆ. ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಸಂಗ್ರಹಿಸಲು ಅನುಮೋದನೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದರು. ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಬೆಂಬಲ ಮತ್ತು ಸಹಕಾರ ನೀಡುತ್ತಿರುವ…

ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆ

ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್‌ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ ದಿನ 6 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗಿ ಕೆಎಂಎಫ್‌ಗೆ ತಲುಪುತ್ತಿದೆ. 3 ಸಾವಿರಕ್ಕೂ ಅಧಿಕ ರೈತರು ಹಾಗೂ ಕಾರ್ಮಿಕರು ಕೃಷಿಯನ್ನು ನಂಬಿಕೊಂಡಿದ್ದಾರೆ. ಇಷ್ಟು ಫಲವತ್ತಾದ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ಸೈಟುಗಳನ್ನು ನೀಡಲಾಗುತ್ತಿದೆ ಎಂದರು. ಹೌಸಿಂಗ್‌ ಬೋರ್ಡ್‌ನಿಂದ 560 ಎಕರೆ ಜಮೀನು ಸ್ವಾಧೀನಕ್ಕೆ ಪಡೆದು ಸೈಟುಗಳನ್ನು ನಿರ್ಮಿಸಿದೆ. ಆದರೂ ಇಲ್ಲಿ ಯಾರೂ ಮನೆಗಳನ್ನು…

ಸಮೀಕ್ಷೆಯ ನೆಪದಲ್ಲಿ ಜಾತಿ-ಉಪ ಜಾತಿ ಹೆಸರಲ್ಲಿ ಸಮಾಜ ಒಡೆಯುವ ನೀಚತನ; ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯ ಬ್ಯಾನರ್ ಅಡಿಯಲ್ಲಿ ಬಿಜೆಪಿ ಆಯೋಜಿಸಿದ್ದ ದುಂಡುಮೇಜು ಸಭೆಯಲ್ಲಿ, ಜಾತಿ ಜನಗಣತಿ (ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ) ಕುರಿತು ಏಳು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಜೊತೆಗೆ ಪ್ರಭಾಕರ್ ಕೋರೆ, ವಿಜಯ್ ಸಂಕೇಶ್ವರ್ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಂಡಿದ್ದರು. ಸಭೆಯ ನಿರ್ಣಯ ಪ್ರಕಾರ, ಮತಾಂತರಗೊಂಡವರಿಗೆ ಮೀಸಲು ನೀಡಲಾದ ಉಪಜಾತಿ ಸಂಕೇತಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಲಿಂಗಾಯತ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಸೇರಿ ಒಟ್ಟು 47 ಉಪಜಾತಿಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಲಾಯಿತು. “ಈ ಉಪಜಾತಿಗಳನ್ನು…

ಜಾತಿ ಕದನ: ರಾಜಭವನ ಅಂಗಳಕ್ಕೆ ಜಿಗಿದ ಕಮಲ ನಿಯೋಗ