ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್. ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ ಪುಟಾಣಿಗಳು ಮುದ್ದು ಶಾರದೆ, ನವದುರ್ಗೆಯರಾಗಿ ಶೋಭಿಸಿದರು. ಉದ್ಘಾಟನೆ: ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಟ್ರಸ್ಟಿ ಕೃತಿನ್ ಧೀರಜ್ ಅಮೀನ್, ಅಭಿವೃದ್ಧಿ ಸಮಿತಿ ಸದಸ್ಯ ವಾಸುದೇವ ಕೋಟ್ಯಾನ್ , ಪಿ.ಕೆ. ಪೂಜಾರಿ…

ಮಂಗಳೂರು ದಸರಾ: ಸಾಂಸ್ಕೃತಿಕ ಸಮ್ಮಿಲನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಅಂಗವಾಗಿ ಮಂಗಳವಾರ ಮೂಡಬಿದಿರೆಯ ಆಳ್ವಾಸ್ ಪ್ರತಿಷ್ಠಾನದ ವತಿಯಿಂದ ನಡೆದ ಸಾಂಸ್ಕೃತಿಕ  ವೈಭವ ಕಾರ್ಯಕ್ರಮ ನೆರೆದ ಕಲಾಪ್ರೇಮಿಗಳನ್ನು ಮೂಕವಿಸ್ಮಿತರನ್ನಾಗಿಸಿತು. ಆಳ್ವಾಸ್ ಕಾಲೇಜಿನ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭೆಯನ್ನು ಅನಾವರಣಗೊಳಿಸಿದರು. ಪ್ರಾಥಮಿಕದಿಂದ ಕಾಲೇಜಿನ 40 ವಿದ್ಯಾರ್ಥಿಗಳ ತಂಡ, ವೇದಿಕೆಯಲ್ಲಿ ನಿರ್ಮಿಸಿದ 2 ಮಲ್ಲಕಂಬದಲ್ಲಿ ನಡೆಸಿದ ಕಸರತ್ತುಗಳು, ವೇದಿಕೆ ಎರಡು ಬದಿಯಲ್ಲಿ ಹಾಕಿದ್ದ ರೋಪ್‌ನಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಮಾಡಿದ ಸಾಹಸಗಳು ಪ್ರೇಕ್ಷಕರನ್ನು ರೋಮಾಂಚನಗೊಳಿಸಿತ್ತು. ವಿದ್ಯಾರ್ಥಿಗಳಿಂದ ಕಥಕ್ ಪಶ್ಚಿಮ ಬಂಗಾಲದ ಪುರುಲಿಯಾ ಸಿಂಹದ ಬೇಟೆ ನೃತ್ಯ, ಕ್ಲಾಸಿಕ್ ಹಾಗೂ ಮಾರ್ಷಲ್ ಆರ್ಟ್ಸ್ ಸಮ್ಮಿಲನಗೊಂಡಿರೊ ಮಣಿಪುರ ಸ್ಟಿಕ್ ಡ್ಯಾನ್ಸ್​ಗಳು, ಗುಜರಾತಿನ ದಾಂಡಿಯಾ ನತ್ಯ, ನವರಂಗ್ ಕಥಕ್ ಪ್ರದರ್ಶನ, ಡೊಲ್ಲುಕುಣಿತ ತಡರಾತ್ರಿವರೆಗೂ ಮನಮೋಹಕವಾಗಿ ಮೂಡಿಬಂತು. ಈ ಸಂದರ್ಭ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರನ್ನು ಗೌರವಿಸಲಾಯಿತು.

ರಾಜೀವ್ ಗಾಂಧಿ ವಿವಿಗೆ ಇದೆ 1500 ಕ್ಕೂ ಹೆಚ್ಚು ಅಂಗಸಂಸ್ಥೆಗಳು, ಕಾಲೇಜುಗಳು

ಬೆಂಗಳೂರು: ವೈದ್ಯಕೀಯ ಕಲಿಕೆ ಎಂದರೆ ಕೇವಲ ವೈದ್ಯರು, ನರ್ಸ್‌ಗಳು, ಔಷಧ ಶಾಸ್ತ್ರಜ್ಞರು ಅಥವಾ ಸಂಶೋಧಕರನ್ನು ತಯಾರಿಸುವುದಲ್ಲ. ಜ್ಞಾನದೊಂದಿಗೆ ಕರುಣೆ, ಮಾನವೀಯತೆ ಹಾಗೂ ವೃತ್ತಿಪರತೆಯನ್ನೂ ಹೊಂದಿರುವ ಹೊಸ ತಲೆಮಾರನ್ನು ರೂಪಿಸಬೇಕಾಗಿದೆ ವೈದ್ಯಕೀಯ ಶಿಕ್ಷಣ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಪ್ರತಿಪಾದಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಸಚಿವರು, ವೈದ್ಯಕೀಯ ಕ್ಷೇತ್ರದಲ್ಲಿರುವವರು ತಾಂತ್ರಿಕ ಕೌಶಲ್ಯದ ಜೊತೆಗೆ ಸಂವಹನ ಕೌಶಲ್ಯ ಹಾಗೂ ಮನವೀಯತೆಯನ್ನೂ ಬೆಳೆಸಿಕೊಳ್ಳಬೇಕು. ವೈದ್ಯರಾದವರು ರೋಗಿಗಳೊಂದಿಗೆ ಹೇಗೆ ನಡೆದುಕೊಳ್ಳುತ್ತಾರೆ, ಹೇಗೆ ವ್ಯವಹರಿಸುತ್ತಾರೆ ಎನ್ನುವುದೂ ಮುಖ್ಯ. ವೃತ್ತಿಯ ಜೊತೆಗೆ ಸೇವೆಗೂ ಅವಕಾಶವಿರುವ ಕ್ಷೇತ್ರ ಎಂದರೆ ವೈದ್ಯಕೀಯ ಕ್ಷೇತ್ರ. ಈ ಕ್ಷೇತ್ರದಲ್ಲಿರುವ ಶಿಕ್ಷಕರು ವೃತ್ತಿಯ ಜೊತೆಗೆ ಸೇವಾ ಮನೋಭಾವವನ್ನೂ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು. ವೈದ್ಯಕೀಯ ಶಿಕ್ಷಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ…