ರಾಜಧಾನಿ ಬೆಂಗಳೂರಿನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ರಾಜ್ಯ ಸರ್ಕಾರ ಬುಧವಾರದಿಂದಲೇ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಜಾರಿಗೆ ಬರುವಂತೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ಇನ್ನು ಮುಂದೆ ಬಿಬಿಎಂಪಿ ಬದಲು ಜಿಬಿಎ ನಗರದ ಆಡಳಿತವನ್ನು ನೋಡಿಕೊಳ್ಳಲಿದೆ. ಜಿಬಿಎ ಅಡಿಯಲ್ಲಿ . ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಹೆಸರುಗಳಲ್ಲಿ ಐದು ಹೊಸ ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಪ್ರಸ್ತುತ ಬಿಬಿಎಂಪಿಯ 198 ವಾರ್ಡ್‌ಗಳನ್ನು ಈ ಐದು ಪಾಲಿಕೆಗಳ ನಡುವೆ ಹಂಚಿಕೆ ಮಾಡಲಾಗಿದೆ. ಪ್ರತಿಯೊಂದು ಪಾಲಿಕೆಗೆ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ರಚಿಸಲಾಗಿದೆ. ‘ಜಿಬಿಎ’ಗೆ ಸಿಎಂ ಸಿದ್ದರಾಮಯ್ಯ ಜಿಬಿಎ ಅಧ್ಯಕ್ಷರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬೆಂಗಳೂರಿನ ಮೂವರು ಸಂಸದರು, ಹಾಗೂ ನಗರದ ಶಾಸಕರನ್ನು ಒಳಗೊಂಡಂತೆ 73 ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು: ಬೆಂಗಳೂರು…
Month: September 2025
ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ
ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಉನ್ನತ ಗೌರವ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಚಿತ್ರೋದ್ಯಮದ ಗಣ್ಯರು ಒತ್ತಾಯಿಸಿದ್ದಾರೆ. ಮಂಗಳವಾರ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಅಲ್ಲದೇ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು, ಅವರು ವಾಸಿಸುತ್ತಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆ ಕೂಡ ಮನವಿ ಮಾಡಲಾಯಿತು. ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ… pic.twitter.com/n6sLjmSm0Z — Siddaramaiah (@siddaramaiah) September 2,…
ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ
ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು ವಲಯ ವತಿಯಿಂದ ಅಕ್ಟೊಬರ್ 12, ಭಾನುವಾರದಂದು ನಡೆಯಲಿರುವ ಬ್ರಹ್ಮಶ್ರೀ ನಿಲಯ ಉದ್ಘಾಟನೆ ಹಿನ್ನೆಲೆಯಲ್ಲಿ, ಪ್ರತಿಭಾವಂತ ಸಾಧಕರಿಗೆ ಸನ್ಮಾನ, ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 31 ರಂದು ಬಿಡುಗಡೆ ಮಾಡಲಾಯಿತು. ಮಂಗಳೂರು ಸಮೀಪದ ಹೂ ಹಾಕುವ ಕಲ್ಲು ಸನ್ನಿಧಿಯಲ್ಲಿ ಸಮಾರಂಭ ನೆರವೇರಿತು. ಸುಮಾರು 13 ವರ್ಷಗಳಿಂದ ಟಾರ್ಪಲ್ ಇನ್ ಹೊದಿಕೆಯ ಮನೆಯಲ್ಲಿ ಜೀವನ ನಡೆಸುತ್ತಿದ್ದ ಕಡುಕುಟುಂಬದ ಸಂಸಾರಕ್ಕೆ ಬಿಲ್ಲವ ವೇದಿಕೆ ಒಂದು ಸುಸಜ್ಜಿತ ಮನೆಯನ್ನು ನಿರ್ಮಾಣ ಮಾಡಿ ಕೊಟ್ಟಿತ್ತು. ಈ ಮನೆಯ ಹಸ್ತಾಂತರ ಕಾರ್ಯಕ್ರಮ ಕೂಡಾ12.10.2025 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದಂತಹ ಬಿಕೆ ಹರಿಪ್ರಸಾದ್, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ ಹಾಗೂ ವಿಧಾನಸಭಾಧ್ಯಕ್ಷ ಯುಟಿ ಖಾದರ್, ಶ್ರೀ ಕ್ಷೇತ್ರ ಕುದ್ರೋಳಿಯ…
