ಬೆಂಗಳೂರು : ರಾಜ್ಯ ಕರಾವಳಿಯಲ್ಲಿ ಈ ವಾರ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ. ಸೆಪ್ಟೆಂಬರ್ 24ರಿಂದ 27ರ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳ ಬಗ್ಗೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
Month: September 2025
ಬಿಜೆಪಿ ಹೋರಾಟಕ್ಕೆ ಸಂದ ಜಯ: ‘ಕ್ರೈಸ್ತ ಜಾತಿಯ ಜೊತೆಗೆ ಹಿಂದೂ ಜಾತಿ’ ವಿವಾದಕ್ಕೆ ತೆರೆ
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ಕ್ರೈಸ್ತ ಎಸ್‍ಸಿ ಜಾತಿಗಳನ್ನು ಜಾತಿ ಗಣತಿ ಪಟ್ಟಿಯಲ್ಲಿ ಮರೆಮಾಚಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಕ್ರೈಸ್ತ ಜಾತಿಯ ಜೊತೆಗೆ ಹಿಂದೂ ಜಾತಿಯ ಹೆಸರುಗಳನ್ನು ನಮೂದಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿತ್ತು. ಈ ಸಂಬಂಧ ಬಿಜೆಪಿ ನಾಯಕರು ರಾಜ್ಯಪಾಲರಿಗೂ ದೂರು ನೀಡಿತ್ತು. ಇದೀಗ ಈ ತಪ್ಪನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರಿಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ, ಇದು ತಮ್ಮ ಪಕ್ಷದ ಹೋರಾಟಕ್ಕೆ ಸಂದ ಜಯವಾಗಿದೆ ಎಂದಿದೆ. ಮತಾಂತರಕ್ಕೆ ಪರೋಕ್ಷವಾಗಿ ಕುಮ್ಮಕ್ಕು ಕೊಡುವ ಈ ಪ್ರಯತ್ನದ ವಿರುದ್ಧ ಧ್ವನಿ ಎತ್ತಿದ ಎಲ್ಲಾ ಸಮಾಜಗಳ ಮಠಾಧೀಶರು, ಪ್ರಮುಖರು ಮತ್ತು ರಾಜಕೀಯ ನಾಯಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ತಡವಾಗಿಯಾದರೂ ಸಮಯೋಚಿತ ನಿರ್ಧಾರ ಕೈಗೊಂಡ ಆಯೋಗಕ್ಕೆ ಕೃತಜ್ಞತೆಗಳು ಎಂದಿದೆ. ಹಿಂದುಳಿದ ವರ್ಗಗಳ ಆಯೋಗವು…
ಸೆ 26 ರಿಂದ 5 ದಿನಗಳ ಕಾಲ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ
ಬೆಂಗಳೂರು: ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಕೆಆರ್ ಎಸ್ ನಲ್ಲಿ ಸೆಪ್ಟೆಂಬರ್ 26 ರಿಂದ ಆಯೋಜನೆಯಾಗಿದೆ. ಶುಕ್ರವಾರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವರಿ ಸಚಿವ ಎನ್. ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ, ಕೃಷಿ ಸಚಿವರು…
‘ಪುಸ್ತಕಗೂಡು’ ಅಭಿಯಾನ; ಪ್ರಾಯೋಗಿಕ ಪ್ರಯತ್ನ ಯಶಸ್ಸು
ಬೆಂಗಳೂರು: ರಾಜ್ಯದ ಗ್ರಾಮೀಣ ಜನರಲ್ಲಿ ಅಕ್ಷರದ ಪ್ರೀತಿ ಬೆಳೆಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಜಾರಿಗೆ ತಂದ ‘ಪುಸ್ತಕಗೂಡು’ ಅಭಿಯಾನವು ಯಶಸ್ವಿಯಾಗಿ ಮುಂದುವರೆಯುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಲು ಬಸ್ ನಿಲ್ದಾಣ, ಮಾರುಕಟ್ಟೆ ಮುಂತಾದ ಜನದಟ್ಟಣೆ ಹೆಚ್ಚಿರುವ ಪ್ರದೇಶದಲ್ಲಿ ಪುಸ್ತಕಗಳನ್ನು ಶೇಖರಿಸಿ ಇಡುವುದರಿಂದ ಸಾಮಾನ್ಯವಾಗಿ ಸಾರ್ವಜನಿಕರಲ್ಲಿ ಓದುವ ತವಕ ಹೆಚ್ಚುತ್ತದೆ. ಇದೀಗ ಕಲಬುರಗಿ ಜಿಲ್ಲೆ, ಚಿತ್ತಾಪೂರ ತಾಲ್ಲೂಕಿನ ದಿಗ್ಗಾಂವ ಗ್ರಾಮ ಪಂಚಾಯತಿಯ ಬಸ್ ನಿಲ್ದಾಣದಲ್ಲಿ ಸುಂದರ ಮತ್ತು ಸುಸಜ್ಜಿತ ‘ಪುಸ್ತಕ ಗೂಡು’ ಸ್ಥಾಪನೆಯಾಗಿದೆ. ಈಗಾಗಲೇ ರಾಜ್ಯದ ಗ್ರಾಮೀಣ ಗ್ರಂಥಾಲಯಗಳನ್ನು ಡಿಜಿಟಲ್ ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿದ್ದು, ಗ್ರಾಮೀಣರ ಬೌದ್ಧಿಕ ವಿಕಸನಕ್ಕೆ ಅಗಾಧ ಕೊಡುಗೆ ನೀಡುತ್ತಿದೆ. ಇದಕ್ಕೆ ಪೂರಕವಾಗಿ ‘ಪುಸ್ತಕಗೂಡು’ ಯೋಜನೆ ಜನಸಾಮಾನ್ಯರಲ್ಲಿ ಓದಿನ ಅಭಿರುಚಿ ಬೆಳೆಸುತ್ತಿದೆ. ಯುವಜನತೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಅಗತ್ಯವಾದ ಸೂಕ್ತ ಸವಲತ್ತುಗಳನ್ನು…
ಮಂಗಳೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೈಭವದ ಚಾಲನೆ
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ಸಿಕ್ಕಿದೆ. ಮೈಸೂರು ವೈಭವದಂತೆಯೇ ನಾಡಿನ ಗಮನಸೆಳೆದಿರುವ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಈ ಅಡ್ಡೂರು ದಸರಾ ನೆರವೇರುತ್ತಿದೆ. ಈ ಮಹಾವೈಭವಕ್ಕೆ ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ ಶೈಲಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ನವಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು, ದಸರಾವು ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರು ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದರು. ಮಂಗಳೂರು ದಸರಾ ಮೈಸೂರ ದಸರಾದಷ್ಟೇ ಪ್ರಸಿದ್ಧಿ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ಹಾಗೂ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್, ಯೂನಿಯನ್…
ಭಾರತೀಯ ಬಾಹ್ಯಾಕಾಶ, ಸಾರಿಗೆ ಮತ್ತು ಶುದ್ಧ ಇಂಧನ ಭವಿಷ್ಯದಲ್ಲಿ ಹೈಡ್ರೋಜನ್ ಪ್ರಮುಖ ಪಾತ್ರ: ಇಸ್ರೋ ಅಧ್ಯಕ್ಷ
ಬೆಂಗಳೂರು: ಭಾರತದ ಬಾಹ್ಯಾಕಾಶ ಮಿಷನ್‌ಗಳು, ಸಾರಿಗೆ ಮತ್ತು ಶುದ್ಧ ಇಂಧನ ಭವಿಷ್ಯದಲ್ಲಿ ಹೈಡ್ರೋಜನ್ ಪ್ರಮುಖ ಮತ್ತು ಪರಿವರ್ತನಾತ್ಮಕ ಪಾತ್ರ ವಹಿಸಲಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಹೇಳಿದರು. ಅವರು ಅಲಯನ್ಸ್ ವಿಶ್ವವಿದ್ಯಾಲಯ ಮತ್ತು ಐಐಎಸ್‌ಸಿ ಸಂಯುಕ್ತ ಆಯೋಜನೆಯ ಹೈಡ್ರೋಜನ್ ಇಂಧನ ತಂತ್ರಜ್ಞಾನಗಳು ಮತ್ತು ಭವಿಷ್ಯದ ಪ್ರವೃತ್ತಿಗಳು ರಾಷ್ಟ್ರೀಯ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಡಾ. ನಾರಾಯಣನ್ ಅವರು ಜಿಎಸ್ಎಲ್‌ವಿ ಮಾರ್ಕ್–III ರಾಕೆಟ್‌ನಲ್ಲಿ ಲಿಕ್ವಿಡ್ ಹೈಡ್ರೋಜನ್ ಉಪಯೋಗಿಸಿರುವ ಕ್ರಯೋಜೆನಿಕ್ ತಂತ್ರಜ್ಞಾನದಲ್ಲಿ ಭಾರತ ಸಾಧಿಸಿದ್ದ ಪ್ರಗತಿಯನ್ನು ಉದಾಹರಿಸಿದ್ರು. ಕಳೆದ ವರ್ಷ ಬಾಹ್ಯಾಕಾಶದಲ್ಲಿ 100-ವಾಟ್ ಹೈಡ್ರೋಜನ್ ಇಂಧನಕೋಶ ಪ್ರದರ್ಶಿಸಿ, ಈಗ 20 ಕೆಡಬ್ಲ್ಯೂ ಆವೃತ್ತಿಯ ಪರೀಕ್ಷೆಗಳು ನಡೆಯುತ್ತಿವೆ ಎಂಬ ಮಾಹಿತಿ ನೀಡಿದರು. ಸಾರಿಗೆ ಕ್ಷೇತ್ರದಲ್ಲಿಓ ಹೈಡ್ರೋಜನ್ ಬಸ್‌ಗಳು ಹಾಗೂ ಇಂಧನಕೋಶಗಳ ಬಳಕೆ ಗುರುತಿಸಿಕೊಂಡಿದ್ದು, 2025ರ ಜೂನ್‌ನಲ್ಲಿ ಐದು ಹೈಡ್ರೋಜನ್ ಬಸ್‌ಗಳು ವಾಣಿಜ್ಯ ಸೇವೆಗೆ ಸೇರಿವೆ ಎಂದರು. ಹೈಡ್ರೋಜನ್ ಸುರಕ್ಷತೆಯ…
ಸಿಎಂ ಸಿದ್ದರಾಮಯ್ಯನವರು ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ಬಿಜೆಪಿ ಆಕ್ಷೇಪ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ ವೇದಿಕೆ ಸೃಷ್ಟಿಸಿದ್ದಾರೆ. ಒಕ್ಕಲಿಗ, ದಲಿತ, ವಿಶ್ವಕರ್ಮರನ್ನು ಕ್ರೈಸ್ತ ಧರ್ಮಕ್ಕೆ ಸೇರಿಸಲು 52 ಹೊಸ ಜಾತಿಗಳನ್ನು ಸೃಷ್ಟಿ ಮಾಡಲಾಗಿದೆ. ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಕಡಿಮೆ ಅಥವಾ ಹೆಚ್ಚು ಎಂದು ತೋರಿಸಬಹುದು. ಮುಸ್ಲಿಮರು ಹಾಗೂ ಕ್ರೈಸ್ತರಲ್ಲಿ ಅನೇಕ ಜಾತಿಗಳಿದ್ದು, ಅದನ್ನು ಬಹಿರಂಗ ಮಾಡುತ್ತಿಲ್ಲ. ಆದರೆ ಹಿಂದೂಗಳಲ್ಲಿ ತಾರತಮ್ಯ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಮಸೀದಿಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ, ಮಹಿಳೆಯರಿಗೆ ಬುರ್ಕಾ ಧರಿಸಬೇಕು. ಹೀಗೆ ಎಲ್ಲ ಧರ್ಮಗಳಲ್ಲಿ ತಾರತಮ್ಯ ಇದೆ ಎಂದರು. ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಅತ್ಯಧಿಕ, ನಂತರ ಒಕ್ಕಲಿಗರ ಸಂಖ್ಯೆ ಇದೆ. ಸಿಎಂ ಸಿದ್ದರಾಮಯ್ಯ ಈ ಪ್ರಮಾಣವನ್ನೇ…
ಪೂಜಾ ಶುಲ್ಕ ವಿವಾದ; ಧರ್ಮದ ಹೆಸರಲ್ಲಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಬಿಜೆಪಿ ಯತ್ನ ಎಂದ ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಪೂಜೆ, ಸೇವಾ ದರ ಹೆಚ್ಚಳ ಮಾಡಲಾಗಿದೆ ಎಂಬ ವಿಚಾರ ರಾಜಕೀಯ ಪಕ್ಷಗಳ ಕಾರಣವಾಗಿದೆ. ಈ ವಿಚಾರದಲ್ಲಿ, ಪ್ರತಿಪಕ್ಷ ಬಿಜೆಪಿಯು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ಹೊರಕಿದೆ. ಇದಕ್ಕೆ ತಿರುಗೇಟು ನೀಡಿರುವ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ದೇಗುಲಗಳ ವಿಚಾರದಲ್ಲಿನ ಬಿಜೆಪಿ ನಾಯಕರ ಟೀಕೆಯು ಅವರ ಬೌದ್ಧಿಕ ಅಧಃಪತನದ ಪರಾಮಾವಧಿಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಧರ್ಮದ ಹೆಸರಲ್ಲಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಹತಾಶ ಪ್ರಯತ್ನ ಬಿಜೆಪಿ ನಾಯಕರದ್ದು ಎಂದು ಸಚಿವರು ಆರೋಪಿಸಿದ್ದಾರೆ. ಧರ್ಮ ರಕ್ಷಣೆಗಾಗಿಯೇ ಅಧಿಕಾರಕ್ಕೆ ಬಂದವರು ನಾವು ಎನ್ನುವ ‘ನಕಲಿ ಧರ್ಮರಕ್ಷಕ’ ಬಿಜೆಪಿ ಸರ್ಕಾರದವರು 2019-2023 ಅವಧಿಯಲ್ಲಿ 24 ಹಿಂದೂ ದೇವಾಲಯಗಳ ಪೂಜಾ ಸೇವಾ ಶುಲ್ಕವನ್ನು ಏರಿಕೆ ಮಾಡಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೂಜಾ ಶುಲ್ಕ ಹೆಚ್ಚಳವಾಗಿದ್ದ ದೇವಾಲಯಗಳ ಪಟ್ಟಿಯನ್ನು ರಾಮಲಿಂಗಾ ರೆಡ್ಡಿ ಬಹಿರಂಗಪಡಿಸಿದ್ದಾರೆ. ಶ್ರೀ ವೀರಭದ್ರ ಸ್ವಾಮಿ ದೇವಾಲಯ,…
ಬೆಂಗಳೂರು: ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಾಮಗಾರಿಯಿಂದಾಗಿ ಬೆಂಗಳೂರು ನಗರದ ರಸ್ತೆಗಳು ಹಾಳಾಗಿದ್ದು ಸಾರ್ವಜನಿಕರ ಆಕ್ರೋಶ ಸ್ಫೋಟಗೊಂಡಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ಸರಣಿ ವರದಿಗಳು ಬಿತ್ತರವಾಗುತ್ತಿದ್ದಂತೆಯೇ ಎಚ್ಛೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಸೂಚನೆಗಳನ್ನು ನೀಡಿದ್ದಾರೆ. ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ ಎಂದಿರುವ ಸಿಎಂ, ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು…
ಧನುಷ್ ‘ಇಡ್ಲಿ ಕಡೈ’ ಟ್ರೇಲರ್; ಪ್ರೇಕ್ಷಕರ ಮನಗೆದ್ದ ಹೃದಯಸ್ಪರ್ಶಿ ಕಥೆ
ಚೆನ್ನೈ: ನಿರ್ದೇಶಕ ಮತ್ತು ನಟ ಧನುಷ್ ಅವರ ಮುಂದಿನ ಆಕ್ಷನ್-ಡ್ರಾಮಾ ಸಿನಿಮಾ ‘ಇಡ್ಲಿ ಕಡೈ’ ಚಿತ್ರದ ಟ್ರೇಲರ್ ಅಭಿಮಾನಿಗಳ ಮನಗೆದ್ದಿದೆ. ಟ್ರೈಲರ್’ಗೆ ಸಕತ್ ಲೈಕ್ಸ್ ಸಿಕ್ಕಿದೆ. ಟ್ರೇಲರ್ ಮುರುಗನ್ ಪಾತ್ರದ ಧನುಷ್ ಹೃದಯಸ್ಪರ್ಶಿ ಕಥೆಯನ್ನು ತೋರಿಸುತ್ತಿದೆ. ಅವರ ತಂದೆ ರಾಜ್‌ಕಿರಣ್ ಹಳ್ಳಿಯಲ್ಲಿ ಒಂದು ಸಣ್ಣ ಇಡ್ಲಿ ಅಂಗಡಿಯನ್ನು ಪ್ರೀತಿ ಮತ್ತು ಉತ್ಸಾಹದಿಂದ ನಡೆಸುತ್ತಿದ್ದಾರೆ. ಹದಿಹರೆಯ ಮುರುಗನ್ ಯಂತ್ರವನ್ನು ಖರೀದಿಸಲು ಒತ್ತಾಯಿಸಿದಾಗ, ತಂದೆ ಹೇಳುತ್ತಾರೆ: “ಯಂತ್ರ ಏನು ಮಾಡಬಹುದು ಆದರೆ ಮಾನವ ಹೃದಯದ ಸ್ಪರ್ಶ ಇಲ್ಲ. ಅದು ನಮ್ಮ ಮನಸ್ಸಿನಲ್ಲಿ ಬರಬೇಕು.” ಈ ಸಂದೇಶ ಮುರುಗನ್ ಜೀವನದ ತತ್ವವಾಗಿ ಪಾಲಿಸುತ್ತಾನೆ. ಮುರುಗನ್ ದೊಡ್ಡ ಕಂಪನಿಯಲ್ಲಿ ಉದ್ಯೋಗಿಯಾಗಿ ಲಾಭವನ್ನು ಹೆಚ್ಚಿಸುತ್ತಿದ್ದರೂ, ತಮ್ಮ ಅಂಗಡಿಗೆ ಹಿಂತಿರುಗಲು ನಿರ್ಧರಿಸುತ್ತಾನೆ. ಆದರೆ, ಈ ನಿರ್ಧಾರವು ಕಂಪನಿ ಮೇನೇಜರ್ ಅರುಣ್ ವಿಜಯ್‌ಗೆ ಇಷ್ಟವಾಗುವುದಿಲ್ಲ. ಅನಂತರ ಏನಾಗುತ್ತದೆ ಎಂಬುದು ಚಿತ್ರದ ಕೇಂದ್ರ ಕಥಾಸಾರಾಂಶ. ಧನುಷ್ ಸ್ವತಃ ಈ…