ಸಾವಿನಲ್ಲೂ ಮಾನವೀಯತೆ; ಪ್ರಯಾಣಿಕರ ಜೀವ ಉಳಿಸಿ ಕೊನೆಯುಸಿರೆಳೆದ KSRTC ಚಾಲಕ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ ರಾಜೀವ್ ಬೀರಸಾಲ ಎಂಬವರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. 56 ವರ್ಷ ವಯಸ್ಸಿನ ರಾಜೀವ್ ಬೀರಸಾಲ ಅವರು KSRTC ಬಸ್ಸಿನಲ್ಲಿ ಚಾಲಕ- ಕಂ-ನಿರ್ವಾಹಕ ಹುದ್ದೆಯಲ್ಲಿದ್ದರು. ಇವರು ಹರಿಹರ ಘಟಕದ ‘ರಾಜಹಂಸ’ ಬಸ್ಸಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಗಳೂರು – ದಾವಣಗೆರೆ ಮಾರ್ಗದಲ್ಲಿ ಕಾರ್ಯಚರಣೆಯಲ್ಲಿದ್ದಾಗ ನೆಲಮಂಗಲ ಟೋಲ್ ಹತ್ತಿರ ವಾಹನ ಚಾಲನೆ ಮಾಡುತ್ತಿದ್ದಾಗ ರಾಜೀವ್ ಬೀರಸಾಲ ಅವರಿಗೆ ಹೃದಯಾಘಾತವಾಗಿದೆ. ಆದರೂ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ಪಕ್ಕಕ್ಕೆ ನಿಲ್ಲಿಸಿ, ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ಪ್ರಯಾಣಿಕರ ಜೀವದ ಬಗ್ಗೆ ಕಾಳಜಿ ತೋರಿದ ಈ ಚಾಲಕ ನೆಲಮಂಗಲ ಆಸ್ಪತ್ರೆಯಲ್ಲಿ ಮರಣ ಕೊನೆಯುಸಿರೆಳೆದಿದ್ದಾರೆ. ಚಾಲಕನ ಅಕಾಲಿಕ ನಿಧಾನ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತ ಚಾಲಕರ ಆತ್ಮಕ್ಕೆ ಶಾಂತಿ ಕೋರಿರುವ ಅವರು,…

ನೆಫ್ರೋ ಸಂಸ್ಥೆಗೆ NABH ಮಾನ್ಯತೆ; ಈ ಗರಿಮೆ ಪಡೆದ ಕರ್ನಾಟಕದ ಎರಡನೇ ಸರ್ಕಾರಿ ಆಸ್ಪತ್ರೆ

ಬೆಂಗಳೂರು: ಮೂತ್ರಶಾಸ್ತ್ರ ವಿಭಾಗದಲ್ಲಿ ಅತ್ಯಾಧುನಿಕ ಸೇವೆ ಒದಗಿಸುತ್ತಿರುವ ಸರ್ಕಾರದ ಸೂಪರ್‌ ಸ್ಪೆಷಾಲಿಟಿ ನೆಫ್ರೋ-ಮೂತ್ರ ಶಾಸ್ತ್ರ ಸಂಸ್ಥೆ (INU) ಮತ್ತೊಂದು ಮೈಲುಗಲ್ಲು ದಾಟಿದೆ. ಆಸ್ಪತ್ರೆಗಳು ಮತ್ತು ಆರೋಗ್ಯ ಸೇವೆ ಒದಗಿಸುವವರಿಗೆ ರಾಷ್ಟ್ರೀಯ ಮಾನ್ಯತಾ ಮಂಡಳಿಯ (NABH) ಮಾನ್ಯತೆಯನ್ನು ಪಡೆಯುವ ಮೂಲಕ ನೆಫ್ರೋ ಸಂಸ್ಥೆಯು ವಿಶೇಷ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಂತರ ಈ ಸ್ಥಾನಮಾನ ಪಡೆದ ಎರಡನೇ ಸಂಸ್ಥೆಯಾಗಿದೆ. ನೆಫ್ರೋ ಸಂಸ್ಥೆಗೆ NABH ಮಾನ್ಯತೆ ಸಿಕ್ಕಿರುವ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಮಾನ್ಯತೆ ಪಡೆದ ಆಸ್ಪತ್ರೆಗಳು ರೋಗಿಗಳ ಸುರಕ್ಷತೆ ಮತ್ತು ಆರೈಕೆಯಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸುತ್ತದೆ. ಆರೋಗ್ಯ ಆರೈಕೆ ಗುಣಮಟ್ಟ ಸೊಸೈಟಿ (ISQua) ಸೇರಿದಂತೆ ಹಲವು ಅಂತರರಾಷ್ಟ್ರೀಯ ಸಂಸ್ಥೆಗಳು ನೀಡುವ ಗುಣಮಟ್ಟದ ಸರ್ಟಿಫಿಕೇಟ್‌ ಪಡೆದುಕೊಂಡಿದೆ. ರೋಗಿಯ ಸುರಕ್ಷತೆ, ಆರೈಕೆಯ ಗುಣಮಟ್ಟ, ಸೋಂಕು…

ಉತ್ತರಾಖಂಡದಲ್ಲಿ ಮಳೆ ಆರ್ಭಟ: 13 ಸಾವು

ಶಿಮ್ಲಾ: ಉತ್ತರಾಖಂಡದಲ್ಲಿ ನಿರಂತರ ಮಳೆ ಮತ್ತು ಸರಣಿ ಮೇಘಸ್ಫೋಟಗಳಿಂದ ಭೀಕರ ನಾಶ ಸಂಭವಿಸಿದೆ. ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. 16 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರದಿಂದ ನಿರಂತರ ಮಳೆಯಾಗುತ್ತಿದ್ದು, ಭಾರೀ ಮಳೆಗೆ ರಸ್ತೆ, ಸೇತುವೆ, ಮನೆಗಳು ಕೊಚ್ಚಿಕೊಂಡು ಹೋಗಿದೆ. ನದಿಗಳು ಭೋರ್ಗರೆಯುತ್ತಾ ಪ್ರವಾಹದ ರೂಪ ಪಡೆದಿವೆ. ಪ್ರಾಥಮಿಕ ಅಂದಾಜು ಪ್ರಕಾರ ಸಾವಿನ ಸಂಖ್ಯೆ 25 ಕ್ಕೆ ಏರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸಹಸ್ರಧಾರ ಮತ್ತು ಮಾಲ್ದೇವ್ತಾ ಭೀಕರವಾಗಿ ದುರಂತಕ್ಕೀಡಾಗಿವೆ. ರಿಸ್ಪಾನಾ, ಬಿಂದಾಲ್ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮನೆಗಳು ಅವಶೇಷಗಳಿಂದ ತುಂಬಿ ಹೋಗಿದ್ದು, ನೂರಾರು ಅಂಗಡಿಗಳು ಮತ್ತು ಹೋಟೆಲ್‌ಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಪಾಸಣಾ ವರದಿಗೆ ಲಂಚ; ವೈದ್ಯರ ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಆದೇಶ ಹೊರಡಿಸಿದ್ದಾರೆ. ‌ಲಂಚ ಸ್ವೀಕಾರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಬಿಐ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ ಎಂದು ವರದಿ ಮಾಡಿದೆ. ಈ ಕುರಿತು ಸಿಬಿಐ…

15 ದಿನಗಳಲ್ಲಿ 1.5 ಕೋಟಿ ಮನೆಗಳ ಸಮೀಕ್ಷೆ ಸಾಧ್ಯವೇ? ಜಾತಿಗಣತಿ ಬಗ್ಗೆ ಅನುಮಾನ

ಬೆಂಗಳೂರು: ಕರ್ನಾಟಕದಾದ್ಯಂತ ಮನೆ ಮನೆಗೆ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕಾರ್ಯವನ್ನು ವಹಿಸಲಾಗಿರುವ ಹಿಂದುಳಿದ ವರ್ಗಗಳ ಆಯೋಗಕ್ಕೆ ಎಲ್ಲಾ ಸಮುದಾಯಗಳ ಗಣತಿಯನ್ನು ಕೈಗೊಳ್ಳುವ ಅಧಿಕಾರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಪ್ರಮುಖ ನಾಯಕರ ಸಭೆಯ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ದೇಶಾದ್ಯಂತ ಅಧಿಕೃತವಾಗಿ ಜಾತಿ ಗಣತಿಯನ್ನು ಕೈಗೊಳ್ಳುವುದಾಗಿ ಕೇಂದ್ರವು ಈಗಾಗಲೇ ಘೋಷಿಸಿದೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯು ರಾಜ್ಯದ ಜನರನ್ನು ವಂಚಿಸುತ್ತಿದೆ. ಅವರು 15 ದಿನಗಳಲ್ಲಿ 1.5 ಕೋಟಿ ಮನೆಗಳನ್ನು ಸಮೀಕ್ಷೆ ಮಾಡುವ ಗುರಿಯನ್ನು ಹೊಂದಿದ್ದಾರೆ ಮತ್ತು ಪ್ರತಿ ಮನೆಯು 60 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. ಇದಕ್ಕೆ ಉತ್ತರಿಸಲು ಎಷ್ಟು ಸಮಯ ಬೇಕಾಗುತ್ತದೆ? ಇದು ಅಸಾಧ್ಯವಾದ ಕೆಲಸ ಎಂದರು. ರಾಜ್ಯ ಸರ್ಕಾರವು ಜಾತಿ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ಹಿಂದುಳಿದ ವರ್ಗ ಆಯೋಗಕ್ಕೆ ನೀಡಿದೆ. ಆಯೋಗವು…

ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

ನವದೆಹಲಿ: ಬೆಂಬಲಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು‌ ಮಾತನಾಡಿದರು. ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾ ಬೆಲೆಗಳು ಕನಿಷ್ಠ ಬೆಂಬಲ ಬೆಲೆಗಿಂತ (MSP) ಕಡಿಮೆ ಇದೆ. ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಸಂಗ್ರಹಿಸಲು ಅನುಮೋದನೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದರು. ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಬೆಂಬಲ ಮತ್ತು ಸಹಕಾರ ನೀಡುತ್ತಿರುವ…

ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆ

ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್‌ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ ದಿನ 6 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗಿ ಕೆಎಂಎಫ್‌ಗೆ ತಲುಪುತ್ತಿದೆ. 3 ಸಾವಿರಕ್ಕೂ ಅಧಿಕ ರೈತರು ಹಾಗೂ ಕಾರ್ಮಿಕರು ಕೃಷಿಯನ್ನು ನಂಬಿಕೊಂಡಿದ್ದಾರೆ. ಇಷ್ಟು ಫಲವತ್ತಾದ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ಸೈಟುಗಳನ್ನು ನೀಡಲಾಗುತ್ತಿದೆ ಎಂದರು. ಹೌಸಿಂಗ್‌ ಬೋರ್ಡ್‌ನಿಂದ 560 ಎಕರೆ ಜಮೀನು ಸ್ವಾಧೀನಕ್ಕೆ ಪಡೆದು ಸೈಟುಗಳನ್ನು ನಿರ್ಮಿಸಿದೆ. ಆದರೂ ಇಲ್ಲಿ ಯಾರೂ ಮನೆಗಳನ್ನು…

ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು; ಹೈಕೋರ್ಟ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧು ಎಂದು ಘೋಷಿಸಿದೆ. ಮಹತ್ವದ ತೀರ್ಪು ಪ್ರಕಟಿಸಿರುವ ಹೈಕೋರ್ಟ್, ಮತಗಳ ಮರು ಎಣಿಕೆ ಮಾಡುವಂತೆ ನಿರ್ದೇಶನ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಂಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಅವರ ವಿರುದ್ಧ ಕೇವಲ 248 ಮತಗಳ ಅಂತರದಿಂದ ಗೆದ್ದಿದ್ದರು. ಹೀಗಾಗಿ ಮತ ಎಣಿಕೆ ವೇಳೆ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿದ್ದರು. ಈ ಸಂಬಂಧದ ತಕರಾರು ಕುರಿತಂತೆ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅವರ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ ಎಂಬ ಆರೋಪವನ್ನೂ ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ…

ಸಮೀಕ್ಷೆಯ ನೆಪದಲ್ಲಿ ಜಾತಿ-ಉಪ ಜಾತಿ ಹೆಸರಲ್ಲಿ ಸಮಾಜ ಒಡೆಯುವ ನೀಚತನ; ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯ ಬ್ಯಾನರ್ ಅಡಿಯಲ್ಲಿ ಬಿಜೆಪಿ ಆಯೋಜಿಸಿದ್ದ ದುಂಡುಮೇಜು ಸಭೆಯಲ್ಲಿ, ಜಾತಿ ಜನಗಣತಿ (ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ) ಕುರಿತು ಏಳು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಜೊತೆಗೆ ಪ್ರಭಾಕರ್ ಕೋರೆ, ವಿಜಯ್ ಸಂಕೇಶ್ವರ್ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಂಡಿದ್ದರು. ಸಭೆಯ ನಿರ್ಣಯ ಪ್ರಕಾರ, ಮತಾಂತರಗೊಂಡವರಿಗೆ ಮೀಸಲು ನೀಡಲಾದ ಉಪಜಾತಿ ಸಂಕೇತಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಲಿಂಗಾಯತ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಸೇರಿ ಒಟ್ಟು 47 ಉಪಜಾತಿಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಲಾಯಿತು. “ಈ ಉಪಜಾತಿಗಳನ್ನು…

ಜಾತಿ ಕದನ: ರಾಜಭವನ ಅಂಗಳಕ್ಕೆ ಜಿಗಿದ ಕಮಲ ನಿಯೋಗ

ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯ ಬ್ಯಾನರ್ ಅಡಿಯಲ್ಲಿ ಬಿಜೆಪಿ ಆಯೋಜಿಸಿದ್ದ ದುಂಡುಮೇಜು ಸಭೆಯಲ್ಲಿ, ಜಾತಿ ಜನಗಣತಿ (ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ) ಕುರಿತು ಏಳು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಜೊತೆಗೆ ಪ್ರಭಾಕರ್ ಕೋರೆ, ವಿಜಯ್ ಸಂಕೇಶ್ವರ್ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಂಡಿದ್ದರು. ಸಭೆಯ ನಿರ್ಣಯ ಪ್ರಕಾರ, ಮತಾಂತರಗೊಂಡವರಿಗೆ ಮೀಸಲು ನೀಡಲಾದ ಉಪಜಾತಿ ಸಂಕೇತಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಲಿಂಗಾಯತ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಸೇರಿ ಒಟ್ಟು 47 ಉಪಜಾತಿಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಲಾಯಿತು. “ಈ ಉಪಜಾತಿಗಳನ್ನು…