‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್; ಮಾರ್ಚ್ 19ರಂದು ತೆರೆಗೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು 2026ರ ಮಾರ್ಚ್ 19ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ ಎಂಬ ವದಂತಿಗಳಿಗೆ ತೆರೆ ಬೀಳಿಸಿದ್ದು, ಪ್ರಸಿದ್ಧ ಚಲನಚಿತ್ರ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ನಿರ್ಮಾಪಕರೊಂದಿಗೆ ಮಾತನಾಡಿದ ನಂತರ “ಚಿತ್ರವು ನಿಗದಿತ ವೇಳಾಪಟ್ಟಿಯಂತೆ ಸಾಗುತ್ತಿದೆ” ಎಂದು ದೃಢಪಡಿಸಿದ್ದಾರೆ. ತರಣ್ ಆದರ್ಶ್ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದು, “ವದಂತಿಗಳನ್ನು ನಿಲ್ಲಿಸಿ! ಯಶ್ ಅವರ ಮುಂದಿನ ಚಿತ್ರ ‘ಟಾಕ್ಸಿಕ್’ ವಿಳಂಬವಾಗಿಲ್ಲ ಅಥವಾ ಮುಂದೂಡಲ್ಪಟ್ಟಿಲ್ಲ. ಬಿಡುಗಡೆ ದಿನಾಂಕ — ಮಾರ್ಚ್ 19, 2026 — ಸ್ಥಿರವಾಗಿದೆ. ಯುಗಾದಿ, ಗುಡಿ ಪಾಡ್ವಾ ಮತ್ತು ಈದ್ ಹಬ್ಬದ ವಾರಾಂತ್ಯಕ್ಕೆ ಇದು ಪರಿಪೂರ್ಣ ಸಮಯ. ಮುಂಬೈನಲ್ಲಿ ಯಶ್ ‘ರಾಮಾಯಣ’ ಚಿತ್ರೀಕರಣ ಮಾಡುತ್ತಿದ್ದ…

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್‌ಬಾಗ್‌ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್‌ಬಾಗ್‌ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್‌ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್‌ಬಾಗ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು. ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ…

ಈ ಬಾರಿ 70 ಮಂದಿಗೆ ರಾಜ್ಯೋತ್ಸವ ಪುರಸ್ಕಾರ; ಗಣ್ಯರ ಪಟ್ಟಿ ಹೀಗಿದೆ

ಬೆಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗೈದ 70 ಮಂದಿ ಗಣ್ಯರು ಈ ಬಾರಿಗೆ ಗೌರವಕ್ಕೆ ಭಾಜನರಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ಸಾಹಿತ್ಯ, ಸಂಗೀತ, ಜಾನಪದ, ವೈದ್ಯಕೀಯ, ಶಿಕ್ಷಣ, ಕ್ರೀಡೆ, ಮಾಧ್ಯಮ, ಸಮಾಜಸೇವೆ ಸೇರಿದಂತೆ ವಿವಿಧ ರಂಗಗಳಲ್ಲಿ ಈ ಎಲ್ಲರೂ ಸಲ್ಲಿಸಿದ ಅನನ್ಯ ಸೇವೆಯು ಇತರರಿಗೆ ಸ್ಪೂರ್ತಿಯಾಗಲಿ ಎಂದು ಶುಭ ಹಾರೈಸಿದ್ದಾರೆ. 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ನಾಡಿನ‌ ಎಲ್ಲಾ ಗಣ್ಯ ಮಹನೀಯರಿಗೆ ಅಭಿನಂದನೆಗಳು. ಸಾಹಿತ್ಯ, ಸಂಗೀತ, ಜಾನಪದ, ವೈದ್ಯಕೀಯ, ಶಿಕ್ಷಣ, ಕ್ರೀಡೆ, ಮಾಧ್ಯಮ, ಸಮಾಜಸೇವೆ ಸೇರಿದಂತೆ ವಿವಿಧ ರಂಗಗಳಲ್ಲಿ ಈ ಎಲ್ಲರೂ ಸಲ್ಲಿಸಿದ ಅನನ್ಯ ಸೇವೆಯು ಇತರರಿಗೆ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ. pic.twitter.com/yoM3YHF6rj — Siddaramaiah (@siddaramaiah) October 30, 2025

‘ಕಸ ಸುರಿಯುವ ಹಬ್ಬ’ ಬಗ್ಗೆ ಜನಾಕ್ರೋಶ; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿರುದ್ಧ ಹಿಡಿಶಾಪ

ಬೆಂಗಳೂರು: ಒಂದಿಲ್ಲೊಂದು ವಿಚಾರಗಳಿಂದ ವಿವಾದದ ಕೇಂದ್ರಬಿಂದುವಾಗುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಬೆಂಗಳೂರಿನ ಕಸ ಅವಾಂತರದಿಂದಾಗಿ ನಾಗರಿಕರ ಗುರಿಯಾಗಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಎಚ್ಚರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ಕೈಗೊಂಡಿರುವ “ಕಸ ಸುರಿಯುವ ಹಬ್ಬ” ನಾಗರಿಕರ ಸಹನೆಯನ್ನು ಕೆಡಿಸುವಂತಿದೆ. ಈ ಕುರಿತಂತೆ ಸಾರ್ವಜನಿಕ ವಲಯದದಲ್ಲಿ ಆಕ್ರೋಶ ಸ್ಫೋಟಗೊಂಡಿದೆ. Good work at BSWML Basavanagudi Constituency Bengaluru West city corporation (Zone:-2) 155 Hanumantha Nagar As per BSWML CEO sir direction “ಕಸ ಸುರಿಯುವ ಹಬ್ಬ conducted in the presence of ward Marshalls JHIs pks supervisor pks auto supervisor & local residents are involved pic.twitter.com/hP3TAvAs7i — Save BASAVANAGUDI Heritage (@SaveBasavangudi) October 30, 2025 ರಾಜಧಾನಿ ಬೆಂಗಳೂರಿನಲ್ಲಿ ಕೆಲವರು ಎಲ್ಲೆಂದರಲ್ಲಿ…

ಪ್ರಧಾನಿಯನ್ನು ರಾಹುಲ್ ಗಾಂಧಿ ಅಪಮಾನಿಸಿದ್ದಕ್ಕೆ ಬಿಹಾರ ಜನರು ಉತ್ತರ ಕೊಡಲಿದ್ದಾರೆ: ಅಮಿತ್ ಶಾ

ಪಟ್ನಾ: ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹಾಗೂ ಛಥಿ ಮೈಯಾ ದೇವಿಯನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಗೃಹ ಸಚಿವ ಅಮಿತ್ ಶಾ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. “ಬಿಹಾರದ ಜನರು ನವೆಂಬರ್ 6 ಮತ್ತು 11ರಂದು ನಡೆಯುವ ಚುನಾವಣೆಯಲ್ಲಿ ರಾಹುಲ್ ಗಾಂಧಿ ಹಾಗೂ ಮಹಾಮೈತ್ರಿಕೂಟಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ,” ಎಂದು ಶಾ ಹೇಳಿದರು. ಲಖಿಸರೈನಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಸಿನ್ಹಾ ಪರ ರ್ಯಾಲಿಯಲ್ಲಿ ಮಾತನಾಡಿದ ಶಾ, “ರಾಹುಲ್ ಗಾಂಧಿ, ನೀವು ಪ್ರಧಾನಿ ಮೋದಿಯವರ ತಾಯಿಯನ್ನು, ಈಗ ಛಥಿ ಮೈಯಾ ಅವರನ್ನೂ ಅವಮಾನಿಸಿದ್ದೀರಿ. ಬಿಹಾರದ ಈ ಭೂಮಿ ಅದಕ್ಕೆ ಮೌನವಾಗುವುದಿಲ್ಲ,” ಎಂದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ ಛತ್ ಪೂಜೆಯ ವೇಳೆ ಮೋದಿಯವರ ‘ಯಮುನಾ ಸ್ನಾನ’ ಕುರಿತು ವ್ಯಂಗ್ಯವಾಡಿದ್ದರು. “ಅಲ್ಲಿ ಯಮುನಾ ಇರಲಿಲ್ಲ, ಮೋದಿ ಶುದ್ಧ ನೀರಿನ ಕೊಳದಲ್ಲಿ ಮಾತ್ರ ಸ್ನಾನ ಮಾಡಿದರು,” ಎಂದು…

ಗ್ರಾಹಕರ ಹಿತಕ್ಕಾಗಿ ತೂಕ–ಅಳತೆ ಪರಿಶೀಲನೆ ಬಿಗಿಗೊಳಿಸಿದ ಕೇಂದ್ರ

ನವದೆಹಲಿ: ಗ್ರಾಹಕ ವ್ಯವಹಾರಗಳ ಇಲಾಖೆ ಕಾನೂನು ಮಾಪನಶಾಸ್ತ್ರ (ಸರ್ಕಾರ ಅನುಮೋದಿತ ಪರೀಕ್ಷಾ ಕೇಂದ್ರ) ನಿಯಮಗಳು, 2013ಕ್ಕೆ ಮಹತ್ವದ ತಿದ್ದುಪಡಿ ಮಾಡಿದೆ. ಈ ತಿದ್ದುಪಡಿಗಳು ದೇಶದ ತೂಕ ಮತ್ತು ಅಳತೆಗಳ ಪರಿಶೀಲನಾ ಮೂಲಸೌಕರ್ಯವನ್ನು ವಿಸ್ತರಿಸುವತ್ತ, ವ್ಯಾಪಾರದಲ್ಲಿ ಪಾರದರ್ಶಕತೆ, ನಿಖರತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿವೆ ಎಂದು ಗುರುವಾರ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆ ತಿಳಿಸಿದೆ. ಹೊಸ ನಿಯಮಗಳು ಗ್ರಾಹಕರ ಹಿತಾಸಕ್ತಿಯನ್ನು ಬಲಪಡಿಸುವುದು, ವ್ಯವಹಾರ ಮಾಡಲು ಸುಗಮ ವಾತಾವರಣ ಸೃಷ್ಟಿಸುವುದು ಹಾಗೂ ಭಾರತದ ಪರಿಶೀಲನಾ ವ್ಯವಸ್ಥೆಯನ್ನು ಅಂತರರಾಷ್ಟ್ರೀಯ ಮಟ್ಟದ ಉತ್ತಮ ಅಭ್ಯಾಸಗಳೊಂದಿಗೆ ಜೋಡಿಸುವ ಗುರಿ ಹೊಂದಿವೆ. ತಿದ್ದುಪಡಿ ನಿಯಮಗಳ ಪ್ರಕಾರ, ಸರ್ಕಾರಿ ಅನುಮೋದಿತ ಪರೀಕ್ಷಾ ಕೇಂದ್ರಗಳ (GATC) ವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ನೀರಿನ ಮೀಟರ್‌ಗಳು, ಶಕ್ತಿ ಮೀಟರ್‌ಗಳು, ಗ್ಯಾಸ್ ಮೀಟರ್‌ಗಳು, ಕ್ಲಿನಿಕಲ್ ಥರ್ಮಾಮೀಟರ್‌ಗಳು, ತೇವಾಂಶ ಮೀಟರ್‌ಗಳು, ಫ್ಲೋ ಮೀಟರ್‌ಗಳು, ಸ್ಪಿಗ್ಮೋಮನೋಮೀಟರ್‌ಗಳು ಮತ್ತು ಸ್ವಯಂಚಾಲಿತವಲ್ಲದ ತೂಕದ ಉಪಕರಣಗಳು ಸೇರಿದಂತೆ 18…

RSS ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಓ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ಕೆಎಸ್‌ಎಟಿ ತಡೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅಸ್ತಿತ್ವದಲ್ಲಿಲ್ಲದ ಕಾನೂನು ಅಸ್ತ್ರ ಪ್ರಯೋಗಿಸಲು ಪ್ರಯತ್ನಿಸುತ್ತಿರುವ ಸರ್ಕಾರಕ್ಕೆ ಮತ್ತೆ ಮತ್ತೆ ಮುಜುಗರದ ಸನ್ನಿವೇಶ ಎದುರಾಗುತ್ತಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ (ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ) ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯಿಸಿದ್ದು, ‘ರಾಯಚೂರಿನ ಲಿಂಗಸೂಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪಿಡಿಒ ಪ್ರವೀಣ್‌ಕುಮಾರ್ ಅವರನ್ನು ಅಮಾನತುಗೊಳಿಸಿರುವುದನ್ನು ನನ್ನ ಕಾನೂನು ಕಚೇರಿಯು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಮುಂದೆ ಪ್ರಶ್ನಿಸಿತ್ತು. ರಾಜಕೀಯ ಒತ್ತಡದಿಂದ ಯಾಂತ್ರಿಕವಾಗಿ ಜಾರಿಯಾಗಿದ್ದ ಅಮಾನತು ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ’ ಎಂದು…

‘ಯಾವುದೇ ಜಾತಿಗಳಿಗೂ ರೋಸ್ಟರ್’ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು’: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಚರ್ಚೆ ನಡೆದಿದೆ. ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದವರು ತಿಳಿಸಿದರು. ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ…

ಸ್ಪೀಕರ್ ವಿರುದ್ಧ ಭ್ರಷ್ಟಾಚಾರ ಆರೋಪ; ಬಿಜೆಪಿ ನಾಯಕರ ಹೈಡ್ರಾಮಾ ಎಂದ ಕಾಂಗ್ರೆಸ್ ನಾಯಕ ಮನೋರಾಜ್

ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್‌ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು ಇಲಾಖೆಯ ತಿರಸ್ಕಾರದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯಪ್ರವೇಶದಿಂದ ಅನುಮತಿ ಪಡೆದು ದುಪ್ಪಟ್ಟು ದರದಲ್ಲಿ ಖರೀದಿ ನಡೆಸಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿ ಮಾಡಿರುವ ಆರೋಪ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ವಿಚಾರದಲ್ಲಿ ಕರಾವಳಿಯ ಬಿಜೆಪಿ ನಾಯಕರೂ ಯು.ಟಿ.ಖಾದರ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.  ಈ ಬೆಳವಣಿಗೆ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಹಿರಿಯ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರೂ ಆದ ಮನೋರಾಜ್ ರಾಜೀವ್, ಬಿಜೆಪಿ ನಾಯಕರ ವೈಫಲ್ಯಗಳನ್ನು ಮುಂದಿಟ್ಟು ಪ್ರತಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಿಜೆಪಿ…

ಹಿಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆ ಇಲ್ಲ: ಚಲುವರಾಯಸ್ವಾಮಿ

ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗು 5 ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು. ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವರು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ…