ತೆಲುಗು ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತ

ಹೈದರಾಬಾದ್: ಟಾಲಿವುಡ್​ ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತವಾಗಿದೆ. ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸೋಮವಾರ ನಟ ವಿಜಯ್ ದೇವರಕೊಂಡ ಅವರ ಕಾರು, ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಮರಳುತ್ತಿದ್ದಾಗ ಅವರಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ ಎನ್ನಲಾಗಿದ್ದು, ನಟನಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ; ನವೆಂಬರ್ 6 ಮತ್ತು 11 ರಂದು ಮತದಾನ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಮತದಾನ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ ಎಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು. 243 ಕ್ಷೇತ್ರಗಳ ಪೈಕಿ, 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಹಾಗೂ 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತಗಳ ಎಣಿಕೆ ನಡೆಯಲಿದೆ ಎಂದವರು ವಿವರಿಸಿದ್ದಾರೆ.

‘ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂ ನಿಲುವೇ ನನ್ನ ನಿಲುವು’: ಸಿದ್ದರಾಮಯ್ಯ

ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸೋಮಣ್ಣ ಮಾತಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದರು. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ಮಂಗಳವಾರ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ…