ಬೆಂಗಳೂರು: ನೈಋತ್ಯ ಮುಂಗಾರು ಮಳೆಯಿಂದ ರಾಜ್ಯದ ಒಟ್ಟು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ರಾಜ್ಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ, 10 ದಿನಗಳಲ್ಲಿ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಬಿಡುಗಡೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇತ್ತೀಚೆಗೆ ಹಾನಿಗೊಂಡ 7.24 ಲಕ್ಷ ಹೆಕ್ಟೇರ್ ಬೆಳೆಗಳಿಗೆ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, 10 ದಿನಗಳೊಳಗೆ ಈ ಪ್ರದೇಶಗಳಿಗೂ ಪರಿಹಾರ ಪಾವತಿ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ. “ರಾಜ್ಯ ಸರ್ಕಾರ ಸಂಪೂರ್ಣ ಪಾರದರ್ಶಕತೆಯೊಂದಿಗೆ, ಆಧಾರ್ ಜೋಡಣೆ ಇರುವ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪಾವತಿ ಮಾಡುತ್ತಿದೆ. ಅತಿವೃಷ್ಠಿ ಹಾಗೂ ಪ್ರವಾಹದಿಂದ ಹಾನಿಗೊಂಡ ಪ್ರದೇಶಗಳಿಗೆ ಸುಮಾರು 2,000 ಕೋಟಿ ರೂ. ಪಾವತಿಗೆ ಪ್ರಕ್ರಿಯೆ ಆರಂಭವಾಗಿದೆ. 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ,” ಎಂದು ಅವರು ಹೇಳಿದರು. 2025ರ ನೈಋತ್ಯ ಮುಂಗಾರದಲ್ಲಿ ಸೆಪ್ಟೆಂಬರ್ ಮೊದಲ ವಾರದ ಭಾರೀ ಮಳೆಯಿಂದ 5.29 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ…
Day: October 12, 2025
ಅಫ್ಘಾನಿಸ್ಥಾನ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿರ್ಬಂಧ; ಪ್ರಧಾನಿ ಮೌನವೇಕೆ ಎಂದ ಕಾಂಗ್ರೆಸ್
ಮಂಗಳೂರು (ಕರ್ನಾಟಕ): ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಪದ್ಮರಾಜ್ ಆರ್. ಪೂಜಾರಿ, ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ಭಾರತದಲ್ಲೂ ತಾಲಿಬಾನಿ ನೀತಿ ಅನುಸರಿಸಿದ್ದು ಖಂಡನೀಯ ಎಂದಿದ್ದಾರೆ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿಯವರು ಈಗ ತಾರತಮ್ಯ ಆಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ ಎಂದು ಪದ್ಮರಾಜ್ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ…
ಕಟ್ಟಡ ಕಾರ್ಮಿಕರ ಹೆಸರಲ್ಲಿ ಹಗಲುದರೋಡೆ; ಬಿಜೆಪಿ ಆರೋಪ
ಬೆಂಗಳೂರು: ಕಟ್ಟಡ ಕಾರ್ಮಿಕರ ಹೆಸರಲ್ಲಿ ಹಗಲುದರೋಡೆಗೆ ಇಳಿದಿರುವ ಸಚಿವ ಸಂತೋಷ್ ಲಾಡ್ ಅವರು ಮತ್ತೊಂದು ಲೂಟಿಗೆ ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಶ್ರಮಿಕ ವಸತಿಸಹಿತ ಶಾಲೆಗಳ ನಿರ್ಮಾಣ ಕಾಮಗಾರಿ ಟೆಂಡರ್‌ನಲ್ಲಿ, ಟೆಂಡರ್ ಕರೆಯುವ ಮುನ್ನವೇ ಗುತ್ತಿಗೆದಾರರು ಹಾಗೂ ಉಪ ಗುತ್ತಿಗೆದಾರರೂ ನಿಗದಿಯಾಗಿದ್ದಾರೆ. ನಾಲ್ಕು ಪ್ಯಾಕೇಜ್ ಗುತ್ತಿಗೆ ಪೈಕಿ ಮೂರು ಅನ್ಯರಾಜ್ಯದ ಗುತ್ತಿಗೆದಾರರ ಪಾಲಾಗಿದೆ ಎಂದು ಬಿಜೆಪಿ ದೂರಿದೆ. ಇರುವ ಸರ್ಕಾರಿ ಶಾಲೆಗಳೇ ಪ್ರಸ್ತುತ ಮುಚ್ಚುತ್ತಿರುವಾಗ ಅಂತಹ ಶಾಲೆಯೊಂದನ್ನು ಗುರುತಿಸಿ ಕಾರ್ಮಿಕ ಮಂಡಳಿ ವಸತಿ ಶಾಲೆ ಆರಂಭಿಸಬಹುದಿತ್ತು. ಆದರ ಬದಲು ಕಾರ್ಮಿಕ ಇಲಾಖೆ ಹೊಸದಾಗಿ 700-800 ಕೋಟಿ ರೂ. ವೆಚ್ಚ ಮಾಡುತ್ತಿರುವುದು, ಪ್ರಸ್ತುತ ನಡೆಯುತ್ತಿರುವ ಟೆಂಡರ್ ಪ್ರಕ್ರಿಯೆ ಗಮನಿಸುವಾಗ ಇದೊಂದು ಬಕಾಸುರ ಕಾರ್ಮಿಕ ಸಚಿವರ ಹೊಟ್ಟೆ ತುಂಬಿಸುವ ಯೋಜನೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಕಟ್ಟಡ ಕಾರ್ಮಿಕರ ಹೆಸರಲ್ಲಿ ಹಗಲುದರೋಡೆಗೆ…
‘ಕಾಂತಾರ: ಅಧ್ಯಾಯ 1’ ಚಿತ್ರಕ್ಕೆ 15–16 ಡ್ರಾಫ್ಟ್‌ಗಳ ಬಳಿಕ ಚಿತ್ರಕಥೆ ಲಾಕ್: ರಿಷಬ್ ಶೆಟ್ಟಿ
ಮುಂಬೈ: ತಮ್ಮ ಹೊಸ ಚಿತ್ರ ‘ಕಾಂತಾರ: ಅಧ್ಯಾಯ 1’ ವ್ಯಾಪಕ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುತ್ತಿರುವ ಸಂದರ್ಭದಲ್ಲಿ ನಟ-ನಿರ್ಮಾಪಕ ರಿಷಬ್ ಶೆಟ್ಟಿ ಚಿತ್ರಕಥೆಯನ್ನು ಅಂತಿಮಗೊಳಿಸಲು ತೆಗೆದುಕೊಂಡ ಡ್ರಾಫ್ಟ್‌ಗಳ ಸಂಖ್ಯೆಯನ್ನು ಬಹಿರಂಗಪಡಿಸಿದ್ದಾರೆ. ಬಾಂದ್ರಾ ವೆಸ್ಟ್‌ನಲ್ಲಿ ಯಶಸ್ಸು ಆಚರಿಸುತ್ತಾ ರಿಷಬ್ ಶೆಟ್ಟಿ ಸುದ್ದಿಸಂಸ್ಥೆ ಜೊತೆ ಮಾತನಾಡಿ, ಚಿತ್ರದಲ್ಲಿ ಪ್ರತಿಯೊಂದು ಥೀಮ್ ಮತ್ತು ನಿರೂಪಣೆಯನ್ನು ನೇರವಾಗಿ ಚಿತ್ರಕಥೆಯಲ್ಲಿ ಸಾಧಿಸಲು 15-16 ಡ್ರಾಫ್ಟ್‌ಗಳು ಬೇಕಾಗಿದ್ದವು ಎಂದು ತಿಳಿಸಿದ್ದಾರೆ. “ಮೊದಲ ಭಾಗದಲ್ಲಿ ನಾವು 3-4 ಡ್ರಾಫ್ಟ್‌ಗಳನ್ನು ಮಾತ್ರ ಬರೆದಿದ್ದೆವು ಮತ್ತು 3-4 ತಿಂಗಳಲ್ಲಿ ಶೂಟಿಂಗ್‌ಗೆ ಹೋಗಿದ್ದೆವು. ಆದರೆ ಹಿಂದಿನ ಭಾಗದ ಹಿನ್ನೆಲೆ ಕಥೆಯನ್ನು ಸೇರಿಸಲು ನಂತರ 15-16 ಡ್ರಾಫ್ಟ್‌ಗಳಿಗೆ ಅಗತ್ಯವಾಯಿತು. ಹೀಗಾಗಿ ಸಂಪೂರ್ಣ ಕಥೆಯನ್ನು ರೂಪಿಸಿಕೊಂಡು ಶೂಟಿಂಗ್ ಆರಂಭಿಸಲಾಯಿತು” ಎಂದವರು ವಿವರಿಸಿದ್ದಾರೆ.
ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಅಂಕುಶ ಹಾಕಿ; ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ
ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವನ್ನು ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ. ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಈ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ. ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ…
ಬಿಜೆಪಿ ಶಾಸಕನನ್ನು ಕರಿಟೋಪಿ ಎಂದ ಡಿಕೆಶಿ; RSS ಗಣವೇಶಕ್ಕೆ ಅಪಮಾನ
ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಮುನಿರತ್ನರನ್ನೇ ಆಹ್ವಾನಿಸದೆ, ಶಾಸಕರೊಂದಿಗೆ ಉಡಾಫೆಯಿಂದ ವರ್ತಿಸಿರುವುದು ಹಾಗೂ ಅವರು ಧರಿಸಿದ್ದ RSS ಗಣವೇಶವನ್ನು ಅಪಮಾನಿಸಿರುವುದು ಉದ್ಧಟತನದ ಪರಮಾವಧಿಯಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಈ ನಡೆ ಸರ್ವಾಧಿಕಾರಿತನವನ್ನು ಪ್ರತಿಬಿಂಬಿಸಿದೆ ಎಂದು ಪ್ರತಿಕ್ರಿಯಿಸಿರುವ ವಿಜಯೇಂದ್ರ ಅಧಿಕಾರ ಶಾಶ್ವತವಲ್ಲ, ಅದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನೀಡುವ ಭಿಕ್ಷೆ ಎಂಬ ಪರಿಜ್ಞಾನವಿಲ್ಲದೆ ನಡೆದುಕೊಳ್ಳುತ್ತಿರುವ ಅವರ ವರ್ತನೆ ಅತ್ಯಂತ ಖಂಡನೀಯ. ಅವರ ನಡೆ, ನುಡಿ, ವರ್ತನೆಯನ್ನು ಜನರು ಗಮನಿಸುತ್ತಿದ್ದಾರೆ, ತಕ್ಕ ಉತ್ತರದ ಪಾಠವನ್ನು ಇಷ್ಟರಲ್ಲೇ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ…