ಮೈಸೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮೈಸೂರಿನಲ್ಲಿ ದಾರುಣ ಘಟನೆ ಸಂಭವಿಸಿದೆ. ಕಾಲುವೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲಾಗಿ ಮೃತಪಟ್ಟಿದ್ದಾರೆ. ಸಾಲಿಗ್ರಾಮ ಪಟ್ಟಣದ ಚಾಮರಾಜ ಎಡದಂಡೆ ಕಾಲುವೆಯಲ್ಲಿ ಈ ಘಟನೆ ಸಂಭವಿಸಿದ್ದು, ಮೃತರು ಕೆ.ಆರ್. ಪೇಟೆಯ ನವೋದಯ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಭಾನುವಾರ ಮಧ್ಯಾಹ್ನ ಸ್ನಾನಕ್ಕಾಗಿ ಕಾಲುವೆಗೆ ತೆರಳಿದ ಮಕ್ಕಳು ಸಂಜೆಗೂ ಮನೆಗೆ ಮರಳದ ಕಾರಣ ಕುಟುಂಬದವರು ಹುಡುಕಾಟ ನಡೆಸಿದರು. ಹುಡುಕಾಟದ ವೇಳೆ ಕಾಲುವೆದಂಡೆಯಲ್ಲಿ ಮಕ್ಕಳ ಬಟ್ಟೆ ಹಾಗೂ ಚಪ್ಪಲಿಗಳು ಪತ್ತೆಯಾಗಿದ್ದವು. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬ ಬಾಲಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
Day: October 21, 2025
ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷ; ಹಮಾಸ್ ವಿರುದ್ಧ ಇಸ್ರೇಲ್ ಸೇಡು
ಗಾಜಾ: ಪಶ್ಚಿಮ ದಂಡೆಯಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗಿದ್ದು, ಇಸ್ರೇಲ್–ಪ್ಯಾಲೆಸ್ಟೀನ್ ನಡುವಿನ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿದೆ. ರಫಾದಲ್ಲಿ ಇಬ್ಬರು ಇಸ್ರೇಲಿ ಸೈನಿಕರು ಹತ್ಯೆಯಾದ ನಂತರ, ಇಸ್ರೇಲ್ ಸೇನೆ ಹಮಾಸ್ ನೆಲೆಗಳ ಮೇಲೆ ತೀವ್ರ ವಾಯುದಾಳಿ ನಡೆಸಿದೆ. ಈ ದಾಳಿಗಳಲ್ಲಿ ಕನಿಷ್ಠ 45 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ವಾರಗಳ ಹಿಂದಷ್ಟೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಜಾರಿಗೆ ಬಂದಿದ್ದರೂ, ರಫಾದ ಘಟನೆ ನಂತರ ಪರಿಸ್ಥಿತಿ ಮತ್ತೆ ಪ್ರಕ್ಷುಬ್ಧಗೊಂಡಿದೆ. ಭಾನುವಾರ ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) ಗಾಜಾದಲ್ಲಿ ಸರಣಿ ವಾಯುದಾಳಿಗಳನ್ನು ನಡೆಸಿದ್ದು, ಹಲವು ಕಟ್ಟಡಗಳು ಧ್ವಂಸಗೊಂಡಿವೆ. ಸ್ಥಳೀಯ ಮೂಲಗಳ ಪ್ರಕಾರ, ಸಾವನ್ನಪ್ಪಿದವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಹಲವು ಪ್ಯಾಲೆಸ್ಟೀನಿಯರು ಇದ್ದಾರೆ. ಇಸ್ರೇಲಿ ಸೈನ್ಯವು ಹಮಾಸ್ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಡಜನ್ಗಟ್ಟಲೆ ದಾಳಿಗಳನ್ನು ನಡೆಸಿದೆಯೆಂದು ಹೇಳಿದೆ. ಆದರೆ, ಪ್ಯಾಲೆಸ್ಟೀನ್ ಮೂಲಗಳು ಈ ದಾಳಿಗಳು ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಿಕೊಂಡಿವೆ…
ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಸಿಎಂ ಸ್ಪಷ್ಟನೆ
ಮಂಗಳೂರು: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ‘ಅಶೋಕ ಜನ – ಮನ 2025’ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ, ಆಶಿಕ್ ರೈ ಅವರ ಜನಪರ ಸೇವೆಯನ್ನು ಕೊಡಾಡಿದರು. ಈ ಸಂದರ್ಭದಲ್ಲಿ RSS ನಿಷೇಧ ಕುರಿತ ಬಿಜೆಪಿ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದರು. ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು…